ಎಸ್‌ಟಿ ಮೀಸಲಿಗೆ ಆಗ್ರಹಿಸಿ ಫೆ.೧೯ರಂದು ಕುರುಬರ ಪ್ರತಿಭಟನೆ

ಪರಿಶಿಷ್ಟ ಪಂಗಡ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ ಕುರುಬರು ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ ಹಾಗೂ ಸಮಾವೇಶ ನಡೆಸಿದ ಕುರುಬರು ಫೆ.೧೯ರಂದು ಬೆಂಗಳೂರಿನ ಮೌರ್ಯ ಹೊಟೇಲ್‌ ವೃತ್ತದ ಮಹಾತ್ಮ ಗಾಂಧಿ ಮೂರ್ತಿ ಎದುರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಕುಲಶಾಸ್ತ್ರ ಅಧ್ಯಯನದ ವರದಿಯನ್ನು ಪರಾಮರ್ಷಿಸಿ ಕೂಡಲೇ ಕೂಡಲೇ ಕೇಂದ್ರ ಸರಕಾರಕ್ಕೆ ಶಿಫಾರಸು ಕಳಿಸಬೇಕು … Continued

ಬಿಪಿಎಲ್‌ ನಿಯಮಾವಳಿಯಲ್ಲಿ ಬದಲಾವಣೆ ಮಾಡಿಲ್ಲ: ಸಚಿವ ಉಮೇಶ ಕತ್ತಿ

ಬೆಂಗಳೂರು: ಸರಕಾರ ಬಿಪಿಎಲ್‌ ಕಾರ್ಡ್‌ ನಿಯಮಾವಳಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ಟಿವಿ, ಬೈಕ್‌, ಫ್ರಿಡ್ಜ್‌ ಇರುವವರ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುವುದು ಎಂಬ ಸಚಿವರ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದಾರೆ. ಹಿಂದಿನ ಸರಕಾರಗಳು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನು … Continued

ಸಿದ್ದರಾಮಯ್ಯ ದೆಹಲಿ ದೌಡ್:‌ ನಾಳೆ ರಾಹುಲ್‌ ಗಾಂಧಿ ಭೇಟಿ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದು, ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ದಿಢೀರ್‌ ಆಗಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತಿರುವುದು ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಂಗಳವಾರ ಬೆಳಗ್ಗೆ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ರಾಹುಲ್ ಗಾಂಧಿ … Continued

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈಗ ಕೃಷಿ ಇಲಾಖೆ ಹೊಸ ರಾಯಭಾರಿ

ಬೆಂಗಳೂರು: ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಸ್ಯಾಂಡಲ್‌ವುಡ್‌ ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಚಾರ ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಪ್ರಸಿದ್ಧ ನಟರಾದ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಲಾಗಿದೆ. ಅವರು ಯಾವುದೇ … Continued

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ ಚಾಲನೆ

ವಿಜಯಪುರ ಸಮೀಪದ ಮದಬಾವಿಯಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನಡೆಯಿತು. ಸಿಎಂ ಯಡಿಯೂರಪ್ಪ ವರ್ಚುವಲ್‌ ತಂತ್ರಜ್ಞಾನದ ಮೂಲಕ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿದರು. ಅವರು ಮಾತನಾಡಿ, ಐತಿಹಾಸಿಕ ಕೇಂದ್ರ, ತೋಟಗಾರಿಕೆ ಉತ್ಪನ್ನಗಳಿಗೆ ಪ್ರಸಿದ್ಧಿಗಳಿಸಿದ ವಿಜಯಪುರದಲ್ಲಿ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮ ಬೆಳವಣಿಗೆ ಹಾಗೂ ರಫ್ತು ಉತ್ತೇಜನಕ್ಕೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಮದಬಾವಿಯಲ್ಲಿ ೭೨೭ ಎಕರೆ … Continued

ಮೀಸಲಾತಿ ಹೋರಾಟ : ಕಾನೂನು ಚೌಕಟ್ಟಿನಲ್ಲಿ ಎಲ್ಲರಿಗೂ ಅವಕಾಶ

ದಾವಣಗೆರೆ:ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ನಡೆಸುತ್ತಿರು ಹೋರಾಟ ನ್ಯಾಯಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ರವಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಅವರಿಗೆ ಹೇಗೆ ಮೀಸಲಾತಿ ಕಲ್ಪಿಸಬೇಕು ಎನ್ನುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಅವರು ಭರವಸೆ ನೀಡಿದ್ದಾರೆ. ವೀರಶೈವ- ಲಿಂಗಾಯತ, ವಾಲ್ಮೀಕಿ, ಕುರುಬ ಸಮುದಾಯ ಸೇರಿದಂತೆ ಮೀಸಲಾತಿಗಾಗಿ ಹೋರಾಟ … Continued

ರಾಜಾಹುಲಿ, ಬೆಟ್ಟದ ಹುಲಿಯಾರೆಂದು ಜನ ತೀರ್ಮಾನ ಮಾಡ್ತಾರೆ: ಯತ್ನಾಳ

ತುಮಕೂರು: ಭವಿಷ್ಯದಲ್ಲಿ ಯಾರು ರಾಜಾಹುಲಿ ಆಗ್ತಾರೆ ಯಾರು ಬೆಟ್ಟದ ಹುಲಿ ಆಗ್ತಾರೆ ಎಂಬುದನ್ನು ರಾಜ್ಯದ ಜನರೇ ತೀರ್ಮಾನ ಮಾಡುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಹೇಳಿದ್ದಾರೆ. ರಾಜ್ಯದಲ್ಲಿ ಲೂಟಿ ಮಾಡಿರುವ ಹಣದಲ್ಲಿ ಎಲ್ಲರನ್ನೂ ಖರೀದಿಸಲಾಗುವುದಿಲ್ಲ. ಹಣದಿಂದ ಎಲ್ಲವನ್ನೂ ಖರೀದಿ ಮಾಡುವುದು ಸಾಧ್ಯವಿದ್ದರೆ ಟಾಟಾ, ಬಿರ್ಲಾರಂಥ ಉದ್ಯಮಿಗಳು ಈ ದೇಶದ ಪ್ರಧಾನಿಗಳು ಆಗಬೇಕಿತ್ತು. ರೈಲಿನಲ್ಲಿ ಚಹಾ … Continued

ಮೈತ್ರಿ ಸಹವಾಸ ಸಾಕಾಗಿದೆ: ಜೆಡಿಎಸ್‌ ಮುಖಂಡ ಬಂಡೆಪ್ಪ ಕಾಶಂಪೂರ

ಬೆಂಗಳೂರು: ಬೇರೆ ಪಕ್ಷದವರ ಜೊತೆ ಮೈತ್ರಿ ಸಾಕಾಗಿದೆ. ನಮಗೆ ಯಾರ ಸಹವಾಸವೂ ಬೇಡ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಮೈತ್ರಿ ಸಹವಾಸ ಬೇಡ ಎಂದು ವರಿಷ್ಠರಿಗೆ ಮನವಿ ಮಾಡಿದ ಅವರು, ನಮಗೆ ಯಾರ ಸಹವಾಸವೂ ಬೇಡ. ಮುಂದಿನ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ … Continued

ತುಳಿತಕ್ಕೊಳಗಾದವರಿಗೆ ಮೀಸಲಾತಿ ಸಿಗಲಿ: ಸುತ್ತೂರು ಶ್ರೀ

ಮೈಸೂರು: ಎಲ್ಲ ಸಮುದಾಯಗಳಲ್ಲಿಯೂ ತುಳಿತಕ್ಕೊಳಗಾದವರಿದ್ದು, ಅಂಥವರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕು ಎಂದು ಸುತ್ತೂರು ಶ್ರೀ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ರಾಜ್ಯದಲ್ಲಿ ಮೀಸಲಾತಿಗಾಗಿ ಹಲವು ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಸೌಲಭ್ಯ ವಂಚಿತರಿಗೆ ಸೌಲಭ್ಯ ಒದಗಿಸುವ ಕೆಲಸವನ್ನು ಸರಕಾರ ಸಮರ್ಪಕವಾಗಿ ಮಾಡಬೇಕು ಎಂದರು. ಒಂದು ಸಮುದಾಯದಲ್ಲಿ ನಾಲ್ಕಾರು ಜನರು ಸೌಲಭ್ಯ ಪಡೆದುಕೊಂಡಿದ್ದಾರೆಂದರೆ ಎಲ್ಲರೂ ಸೌಲಭ್ಯ ಪಡೆದುಕೊಂಡಂತಲ್ಲ. ತುಳಿತಕ್ಕೊಳಗಾದವರನ್ನು ಗುರುತಿಸಿ … Continued

ಸಂಘ ಪರಿವಾರ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದೆ: ಸಿದ್ದರಾಮಯ್ಯ ಆರೋಪ

ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂದು ಹೇಳುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ವಹಿಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೀಸಲಾತಿಯನ್ನು ನೇರವಾಗಿ ವಿರೋಧಿಸದ ಸಂಘ ಪರಿವಾರದ ಮುಖಂಡರು ಜಾತಿ ಜಾತಿಗಳ ಮಧ್ಯೆ ವಿವಾದ ಸೃಷ್ಟಿಸಿ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದ್ದಾರೆ. … Continued