ವಾಯುಭಾರ ಕುಸಿತ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೆಲ ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಆಗಸ್ಟ್‌ 14ರಿಂದ ಒಂದು ವಾರದ ವರೆಗೆ ಭಾರಿ ಮಳೆ ಬೀಳಲಿದೆ ಎಂದು ಭಾರತೀಯ … Continued

ಕಾರವಾರ : ಶಾಸಕ ಸತೀಶ ಸೈಲ್ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ: ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದ್ದು, ಸದಾಶಿವಗಡದಲ್ಲಿರುವ ಅವರ ಮನೆ ಮೇಲೆ ಇಂದು ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ನಾಲ್ಕು ಕಾರುಗಳಲ್ಲಿ ಬಂದಿರುವ ಇ.ಡಿ.ಅಧಿಕಾರಿಗಳ ತಂಡವು … Continued

ಚಾಮರಾಜನಗರ : ಎರಡು ಹುಲಿ ಮರಿಗಳ ಮೃತದೇಹ ಪತ್ತೆ

ಚಾಮರಾಜನಗರ : ಐದು ಹುಲಿಗಳಿಗೆ ವಿಷಪ್ರಾಶನ ಮಾಡಿ ಹತ್ಯೆ ಮಾಡಿದ ಪ್ರಕರಣ ಜನಮಾನಸದಿಂದ ಮಾಸುವ ಮುನ್ನ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಎರಡು ಹುಲಿಮರಿಗಳು ಮೃತಪಟ್ಟ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿವೆ. ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳು ಮೃತಪಟ್ಟಿರುವುದು ಕಂಡುಬಂದಿದೆ. … Continued

ಅಂಕೋಲಾ | ಆಯತಪ್ಪಿ ಬಾವಿಗೆ ಬಿದ್ದು ಯುವತಿ ಸಾವು

ಅಂಕೋಲಾ: ತಂದೆ ತೆಂಗಿನಮರ ಹತ್ತಿದ ಸಂದರ್ಭದಲ್ಲಿ ಸಹಾಯ ಮಾಡಲು ಹೋದ ಮಗಳು ತೋಟದ ಬಾವಿಗೆ ಬಿದ್ದು ಮೃತ ಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಚನಗಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಅಚವೆ ಚನಗಾರ ನಿವಾಸಿ ವೀಣಾ  ಗೌಡ(30) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಇವರು ತೋಟದಲ್ಲಿ ತೆಂಗಿನಕಾಯಿ ತೆಗೆಯುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ … Continued

ಬಂಡೀಪುರ | ಸೆಲ್ಫಿ ತೆಗೆಯುವ ವೇಳೆ ಕಾಡಾನೆ ದಾಳಿ, ಅದೃಷ್ಟವಶಾತ್‌ ಪ್ರಾಣ ಉಳಿದ ವ್ಯಕ್ತಿಗೆ ಅರಣ್ಯ ಇಲಾಖೆ 25 ಸಾವಿರ ರೂ. ದಂಡ…!

ಮೈಸೂರು: ಬಂಡೀಪುರ ಅರಣ್ಯದೊಳಗೆ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಗೆ ಸಿಲುಕಿ ಅದೃಷ್ಟವಶಾತ್‌ ಪಾರಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಅರಣ್ಯ ಇಲಾಖೆ ಆತನಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದುಹೋಗಿರುವ ಕೆಕ್ಕನಹಳ್ಳ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಕಾಡಾನೆ ಬಸವರಾಜ … Continued

ನನ್ನ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ…’: ಮಾಜಿ ಸಚಿವ ಕೆ.ಎನ್. ರಾಜಣ್ಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಕೆ.ಎನ್. ರಾಜಣ್ಣ ಅವರು, ತಮನ್ನು ಸಂಪುಟದಿಂದ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ. ಮತ ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ನಂತರ ಹೈಕಮಾಂಡ್‌ ಸೂಚನೆ ಮೇರೆಗೆ ಕೆ.ಎನ್. ರಾಜಣ್ಣ ತಲೆ ದಂಡವಾಗಿದ್ದು, … Continued

ಸಚಿವ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಎನ್‌.ರಾಜಣ್ಣ ವಜಾಗೊಳಿಸಿದ್ದರ ಹಿಂದಿನ ಕಾರಣಗಳೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಷ್ಠಾವಂತರೆಂದು ಪರಿಗಣಿಸಲ್ಪಟ್ಟ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಹೈಕಮಾಂಡ್‌ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಡೆದ “ಮತ ಕಳ್ಳತನ”ಕ್ಕೆ ಕರ್ನಾಟಕದಲ್ಲಿ ತಮ್ಮದೇ ಪಕ್ಷದ ಸರ್ಕಾರವನ್ನು ದೂಷಿಸಿದ ಆರೋಪದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾದ ನಂತರ ಹೈಕಮಾಂಡ್‌ ಸೂಚನೆಯ ಮೇರೆಗೆ ಅವರನ್ನು … Continued

ವಿಜಯಪುರ ಮಹಾನಗರ ಪಾಲಿಕೆ ಇದೇ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ

ವಿಜಯಪುರ: ಗುಮ್ಮಟ ನಗರ ಎಂದೇ ಖ್ಯಾತಿ ಪಡೆದ ವಿಜಯಪುರ ಮಹಾನಗರ ಪಾಲಿಕೆ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಸೇರಿದೆ. ಬಿಜೆಪಿ ಸದಸ್ಯರಾದ ಎಂ.ಎಸ್. ಕರಡಿ ಮೇಯರ್ ಹಾಗೂ ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಜನವರಿ, ಫೆಬ್ರುವರಿಯಲ್ಲಿ ನಡೆದ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮೇಯರ್ ಹಾಗೂ ಉಪ ಮೇಯರ್ … Continued

ಯಲ್ಲಾಪುರ | ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು, ಒಬ್ಬನ ಶವ ಪತ್ತೆ

ಯಲ್ಲಾಪುರ : ಬೇಡ್ತಿ ನದಿಗೆ ಮೀನು ಹಿಡಿಯಲು ಹೋದಾಗ ಮೀನು ಹಿಡಿದು ವಾಪಸು ಬರುತ್ತಿರುವಾಗ ಕವಲಗಿ ಹಳ್ಳದಲ್ಲಿ ಒಮ್ಮೆಲೆ ನೀರು ಹೆಚ್ಚಾಗಿ ಇಬ್ಬರು ಕೊಚ್ಚಿ ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾದನಸರದ ಬಳಿ ನಡೆದಿದ್ದು, ಸೋಮವಾರ ಒಬ್ಬನ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. 8 ಮಂದಿ ಸೇರಿ ಕವಲಗಿ ಹಳ್ಳ ದಾಟಿ … Continued

ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ದಿಢೀರ್‌ ರಾಜೀನಾಮೆ..!

ಬೆಂಗಳೂರು: ಮತಗಳ್ಳತನ ಆರೋಪದ ವಿರುದ್ಧ ಕಾಂಗ್ರೆಸ್‌ ನಿಲುವಿನ ವಿರುದ್ಧ ಹೇಳಿಕೆ ನೀಡಿದ್ದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ. ಇಡೀ ಕಾಂಗ್ರೆಸ್‌‍ ಪಕ್ಷವೇ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಚುನಾವನಾ ಆಯೋಗದ ವಿರುದ್ಧವಾಗಿ ಹೋರಾಟ ನಡೆಸಿದರೆ, ಸಚಿವ ಕೆ.ಎನ್‌.ರಾಜಣ್ಣ ವ್ಯತಿರಿಕ್ತ ಹೇಳಿಕೆ … Continued