ಭ್ರಷ್ಟಾಚಾರ ಆರೋಪ: ಗಣಿ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತಿಗೆ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು- ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ  ಚಿತ್ರದುರ್ಗ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಬಿ.ಎಂ. ಲಿಂಗರಾಜು ಅವರನ್ನು ಅಮಾನತುಗೊಳಿಸಲು ಸರ್ಕಾರಕ್ಕೆ  ಪ್ರಸ್ತಾವನೆ  ಸಲ್ಲಿಸಲಾಗಿದೆ. ಈ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ 26-10-2016 ರಿಂದ 3-9-2018ರವರೆಗೆ ಹಿರಿಯ ಭೂವಿಜ್ಞಾನಿಯಾಗಿ  ಹೆಚ್ಚುವರಿ ಪ್ರಭಾರದಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದ ಲಿಂಗರಾಜು ಬಿ.ಎಂ. ಅವರ ಮೇಲೆ ವ್ಯಾಪಕವಾದ ಆರೋಪಗಳು ಕೇಳಿಬಂದಿದ್ದವು.ಕಲ್ಲು … Continued

ಆನ್‌ಲೈನ್‌ ಜೂಜು: ಸಚಿವ ಸಂಪುಟ ನಿರ್ಧಾರ ದಾಖಲಿಸಲು ಉಚ್ಚ ನ್ಯಾಯಾಲಯ ನಿರ್ದೇಶನ

ಆನ್‌ಲೈನ್‌ ಜೂಜು ನಿಯಂತ್ರಣದಲ್ಲಿ ಕರ್ನಾಟಕ ರಾಜ್ಯ ಸಚಿವ ಸಂಪುಟ ತೆಗೆದುಕೊಳ್ಳುವ ನಿರ್ಧಾರವನ್ನು ದಾಖಲಿಸುವಂತೆ ರಾಜ್ಯ ಸರಕಾರಕ್ಕೆ ಉಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ. ಆನ್‌ಲೈನ್‌ ಬೆಟ್ಟಿಂಗ್‌ ವಿಷಯವನ್ನು ಸಂಪುಟದ ಮುಂದೆ ಇಡಲಾಗಿದೆ. ಈ ದಿಸೆಯಲ್ಲಿ ಶೀಘ್ರವೇ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಸರಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಸೂಕ್ತ ನಿಯಮಾವಳಿ ರೂಪಿಸುವವರೆಗೆ ಆನ್‌ಲೈನ್‌ ಜೂಜು ರದ್ದುಗೊಳಿಸಬೇಕೆಂದು … Continued

ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಮುಖ ಆರೋಪಿ ಬಂಧನ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಥಮ ದರ್ಜೆ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಬೆಳಗಾವಿ ಮೂಲದ ಶಿವಲಿಂಗ ಪಾಟೀಲನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ. ಆರೋಪಿ ಶಿವಲಿಂಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್‌ ಸೆಂಟರ್‌ ನಡೆಸುತ್ತಿದ್ದ. ಕಳೆದ ವರ್ಷ ಸೆಂಟರ್‌ ಮುಚ್ಚಿದ್ದ. ಇನ್ನೊಬ್ಬ ಆರೋಪಿ … Continued

ರಾಮಮಂದಿರ ಕುರಿತು ಸಿದ್ದು ಹೇಳಿಕೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧ: ಸಿಎಂ ಯಡಿಯೂರಪ್ಪ

ರಾಮಮಂದಿರ ನಿರ್ಮಾಣ ಕುರಿತು ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ ಹೇಳಿಕೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿದ್ದು, ನ್ಯಾಯಾಲಯ ಅವರ ಮೇಲೆ ಕ್ರಮ ಜರುಗಿಸುವ ಸಾಧ್ಯತೆಯಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಹಿಂದೂಗಳು, ಮುಸಲ್ಮಾನರು ಹಾಗೂ ಕ್ರೈಸ್ತರು ಎಲ್ಲ ಧರ್ಮದವರು ರಾಮಮಂದಿರ ನಿರ್ಮಾಣಕ್ಕೆ ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. ಇದನ್ನು ಸಹಿಸದೇ ಕೆಲವರು ಅನಗತ್ಯ ಟೀಕೆ … Continued

ಕೊರೊನಾ: ಏಳು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ಬೆಂಗಳೂರು,  ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಒಂದೇ ಒಂದು ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಂದೇ ದಿನ 438 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ.  24 ಗಂಟೆಗಳಲ್ಲಿ 344 ಸೋಂಕಿತರು … Continued

ಅಭಿವ್ಯಕ್ತಿ ಸ್ವಾತಂತ್ರ್ಯ ದಮನ: ಸರ್ಕಾರದ ವಿರುದ್ಧ ಪ್ರತಿಭಟನೆ ಅನಿವಾರ್ಯ

ಬೆಂಗಳೂರು: ಮುಕ್ತ ಅಭಿಪ್ರಾಯಗಳು ಹಾಗೂ ಅನಿಸಿಕೆಗಳನ್ನು ಮಟ್ಟಹಾಕಲು ಸರಕಾರಗಳು ಪ್ರಯತ್ನಿಸುತ್ತಿದ್ದು, ಸರಕಾರಗಳ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಬೆಂಗಳೂರಿನ ಪರಿಸರ ಕಾರ್ಯಕರ್ತೆ ದಿಶಾ ರವಿ ಬಂಧನವನ್ನು ಖಂಡಿಸಿದ ಶಿವಕುಮಾರ, ಇದು ಇಡೀ ಯುವ ಸಮುದಾಯಕ್ಕೆ ಎಚ್ಚರಿಕೆಯ ಗಂಟೆ ಎಂದರು. ದಿಶಾ ರವಿ ಬಂಧನದಿಂದ … Continued

ಕಾಂಗ್ರೆಸ್‌ ಶಾಸಕರಾರೂ ಬಿಜೆಪಿಗೆ ಸೇರಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ಹಿಂದೆ ೧೦ ಜನ ಕಾಂಗ್ರೆಸ್‌ನಿಂದ ಬಿಜೆಪಿಗೆ ಬರುತ್ತಾರೆ ಎಂದು ಹೇಳುತ್ತಿದ್ದರು, ಈಗ ಐದು ಶಾಸಕರು ಬರಲಿದ್ದಾರೆ ಎಂದು ಹೇಳುತ್ತಿದ್ದಾರೆ. ಯಾವುದೇ ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರು … Continued

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ: ಸಿದ್ದರಾಮಯ್ಯ

ಸದ್ಯ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ವಿವಾದಿತವಾಗಿರುವುದರಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೇಳಲು ನನ್ನ ಬಳಿಯೂ ಬಂದಿದ್ದರು. ಆದರೆ ವಿವಾದಿತ ಮಂದಿರಕ್ಕೆ ಹಣ ಕೊಡುವುದಿಲ್ಲ ಎಂದು ಹೇಳಿ ಅವರನ್ನು ಹಿಂದೆ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಒಂದು ವೇಳೆ ಬೇರೆ … Continued

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ವರದಿ ನೀಡಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ

ಬೆಂಗಳೂರು: ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದಿಂದ ಹೋರಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದೆ. ಕರ್ನಾಟಕ ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗದಿಂದ ತಮ್ಮ ಜನಾಂಗವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಕೋರಿ ಮನವಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ. ರಾಜ್ಯದ ಪಂಚಮಸಾಲಿ ಜನಾಂಗದವರು … Continued

ಫೆ.22ರಿಂದ ಶಾಲೆಗಳಲ್ಲಿ ಪೂರ್ಣ ಪ್ರಮಾಣದ ತಗತಿ ಶುರು ಆದರೆ ಕೆಲಭಾಗದಲ್ಲಿ 6-7ನೇ ತರಗತಿ ಆರಂಭವಿಲ್ಲ

  ಬೆಂಗಳೂರು: ಕೋವಿಡ್​ ಮಾರ್ಗಸೂಚಿಯನ್ವಯ 9 ರಿಂದ ದ್ವಿತೀಯ ಪಿಯುಸಿ ವರೆಗೆ ತರಗತಿಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ, ಇದೀಗ ಉಳಿದ ತರಗತಿಗಳ ಆರಂಭಕ್ಕೆ ಅನಮತಿ ನೀಡಿದೆ. ಫೆ.22ರಿಂದ 6ರಿಂದ 8 ನೇ ತರಗತಿ ವರೆಗೆ ಪೂರ್ಣ ಪ್ರಮಾಣದಲ್ಲಿ ತರಗತಿ ಶುರುವಾಗಲಿದೆ. 1ರಿಂದ5 ನೇ ತರಗತಿ ವರೆಗೆ ವಿದ್ಯಾಗಮ ಪ್ರಾರಂಭವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.​ಸುರೇಶ್​ … Continued