ಹುಣಸೂರು: ಸಾಕಾನೆ ಶಿಬಿರದಲ್ಲಿದ್ದ ಹೆಣ್ಣಾನೆ ಸಾವು

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹುಣಸೂರು ವನ್ಯಜೀವಿ ವಲಯದ ಸಾಕಾನೆ ಶಿಬಿರದಲ್ಲಿ ಜೆಮಿನಿ ಸರ್ಕಸ್ ಕಂಪನಿಯಿಂದ ವಶಪಡಿಸಿಕೊಂಡ ೪ ಆನೆಗಳಲ್ಲಿ ಒಂದಾದ ಹೆಣ್ಣು ಆನೆಯೊಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ೬೬ ವರ್ಷ ಪ್ರಾಯದ ಹೆಣ್ಣಾನೆಯನ್ನು ಪುನರ್ವಸತಿಗೊಂಡ ದೊಡ್ಡಹರವೆ ಸಾಕಾನೆ ಶಿಬಿರದಲ್ಲಿ ಅರಣ್ಯ ರಕ್ಷಣಾ ಕಾರ್ಯಕ್ಕೆ ಬಳಸಿಕೊಂಡು ಪಾಲನೆ ಮಾಡಲಾಗುತ್ತಿತ್ತು. ಕಳೆದ ೨ ತಿಂಗಳಿಂದ … Continued

ಅಕ್ಟೋಬರ್ ತಿಂಗಳಲ್ಲಿ ಸಾಲುಸಾಲು ಹಬ್ಬದ ರಜೆಗಳು: ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಹೆಚ್ಚುವರಿ 700ಕ್ಕೂ ಅಧಿಕ ಬಸ್‌ಗಳ ಸಂಚಾರ

ಹುಬ್ಬಳ್ಳಿ: ಅಕ್ಟೋಬರ್ ತಿಂಗಳಲ್ಲಿ ಸಾಲು ಸಾಲು ಹಬ್ಬದ ರಜೆಗಳು ಬಂದಿರುವುದರಿಂದ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ. 14-10-2021 ರಂದು ಮಹಾನವಮಿ, 15-10-2021 ರಂದು ವಿಜಯದಶಮಿ, 17-10-2021 ರಂದು ಈದ-ಮಿಲಾದ್ ಹಾಗೂ 20-10-2021 ರಂದು ಮಹರ್ಷಿ ವಾಲ್ಮೀಕಿ ಜಯಂತಿ ಹೀಗೆ ಸಾಲು ಸಾಲು ರಜೆಗಳಿರುವುದರಿಂದ ಹಬ್ಬದ ರಜೆಗಳ … Continued

ಬೆಳಗಾವಿ: ನಾಳೆ ಅತ್ಯಾಧುನಿಕ ಇ-ಗ್ರಂಥಾಲಯ, ವಿಕಲಚೇತನರಿಗಾಗಿ ವಿಶೇಷ ಉದ್ಯಾನವನ ಲೋಕಾರ್ಪಣೆ ಮಾಡಲಿರುವ ಸಿಎಂ

ಬೆಳಗಾವಿ : ನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರ 2.5 ರೂ. ಕೋಟಿ ವೆಚ್ಚದಲ್ಲಿ ಇ- ಗ್ರಂಥಾಲಯ ಗ್ರಂಥಾಲಯ ನಿರ್ಮಾಣ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆಪ್ಟೆಂಬರ್‌ 26 (september 26) ಭಾನುವಾರ ಉದ್ಘಾಟಿಸಲಿದ್ದಾರೆ. ನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರವಿರುವ … Continued

ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ನಾಲ್ಕು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕೆಲವು ದಿನಗಳಿಂದ ಕೊಂಚ ರಾಜ್ಯದ ಹಲವೆಡೆ ಬಿಡುವು ನೀಡಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, ಮುಂದಿನ ಕೆಲ ದಿನ ಮಳೆಯಾಗುವ(Rainfall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ. ವಿಶೇಷವಾಗಿ, ಕರಾವಳಿ(Coastal Karnataka) ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ, … Continued

ವಲಸೆ ಕಾರ್ಮಿಕರ ಅನುಕೂಲಕ್ಕೆಂದು 7 ಕಡೆ ವಸತಿ ರಹಿತರ ಆಶ್ರಯ ಕೇಂದ್ರ ನಿರ್ಮಾಣ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಅವಳಿ ನಗರದಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಅಡಿ ಏಳು ನಗರ ವಸತಿ ರಹಿತರ ಆಶ್ರಯ ಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದ ಹೊಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಗರ ವಸತಿ ರಹಿತರ ಆಶ್ರಯ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ … Continued

ಕರ್ನಾಟಕದಲ್ಲಿ ಸೋಂಕು ಇಳಿಕೆ, ಆದರೆ ಸಾವಿನ‌ ಸಂಖ್ಯೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೋರೊನಾ ಸೋಂಕು ಇಳಿಕೆಯಾಗಿದ್ದು ಆದರೆ ಸಾವಿನ ಸಂಖ್ಯೆಯಲ್ಲಿ ‌ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು (ಶುಕ್ರವಾರ) ಹೊಸದಾಗಿ 789 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 23 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 1050 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,306 ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continued

ಸರಕು-ಸೇವೆಗಳ ಬೇಡಿಕೆ ಹೆಚ್ಚಿಸಲು ಗುಣಮಟ್ಟದ ರಫ್ತು ಅತ್ಯವಶ್ಯ: ವಸಂತ ಲದ್ವಾ

ಹುಬ್ಬಳ್ಳಿ: ಕೇವಲ ರಾಜ್ಯ ಮತ್ತು ದೇಶದಲ್ಲಿ ವ್ಯಾಪಾರ ಮಾಡುವುದರಿಂದ ಅಭಿವೃದ್ಧಿಯಾಗುವುದು ಕಷ್ಟ. ಗುಣಮಟ್ಟದ ರಫ್ತು ಕೈಗೊಳ್ಳುವುದರ ಮೂಲಕ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸರಕು ಮತ್ತು ಸೇವೆಗಳ ಬೇಡಿಕೆ ಹೆಚ್ಚಿಸಿಕೊಳ್ಳುವುದು ಇಂದಿನ ವ್ಯಾಪಾರದಲ್ಲಿ ಅವಶ್ಯಕವಾಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ವಸಂತ ಲದ್ವಾ ಹೇಳಿದರು. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸಭಾಂಗಣದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ, … Continued

ಮುಂದಿನ ವರ್ಷದ ನವೆಂಬರ್ 2ರಿಂದ ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ; ಸಚಿವ ನಿರಾಣಿ

ಬೆಂಗಳೂರು: 2022ರ ನವೆಂಬರ್ 2ರಿಂದ ನವೆಂಬರ್ ತಿಂಗಳ 2ರಿಂದ 4ರ ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನಸಭೆಯಲ್ಲಿ ಇಂದು (ಶುಕ್ರವಾರ)ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಪ್ರಿಯಾಂಕ ಖರ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳಿಗೆ … Continued

ಕರ್ನಾಟಕದಲ್ಲಿ ‘ಚಿತ್ರಮಂದಿರ ಶೇ.100 ಭರ್ತಿಗೆ ಗ್ರೀನ್‌ ಸಿಗ್ನಲ್‌, 6ರಿಂದ12ನೇ ತರಗತಿಗೆ 100 % ಹಾಜರಾತಿಗೆ ಅವಕಾಶ

ಬೆಂಗಳೂರು: ತೀವ್ರ ಬೇಡಿಕೆ ಹಾಗೂ ಒತ್ತಡದ ಹಿನ್ನೆಲೆ ಕೊನೆಗೂ ರಾಜ್ಯದಲ್ಲಿ ಚಿತ್ರಮಂದಿರಗಳ 100 % ಸೀಟು ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಅಕ್ಟೋಬರ್ 1ರಿಂದ ಚಿತ್ರಮಂದಿರಗಳಲ್ಲಿ ಸಂಪೂರ್ಣ ಸೀಟು ಭರ್ತಿಗೆ ಅವಕಾಶ ಕಲ್ಪಿಸಿದೆ,ಆದರೆ ಕೆಲವೊಂದು ಮಾರ್ಗಸೂಚಿಗಳನ್ನು ಸೂಚಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ ಶೇ.0.66 ಇದೆ. ಅಕ್ಟೋಬರ್ 1ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ … Continued

ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಭಾರತದ ಸೇತುವೆ ಮನುಷ್ಯ ಗಿರೀಶ್ ಭಾರದ್ವಾಜ್ ಆಯ್ಕೆ

ಉಡುಪಿ ಜಿಲ್ಲೆಯ ಕೋಟಾದ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ, ಈ ವರ್ಷದ ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿಗಾಗಿ ಭಾರತದ ಸೇತುವೆ ಪುರುಷ ಗಿರೀಶ್ ಭಾರದ್ವಾಜ್  ಸುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಗ್ರಾಮೀಣ ಸಂಪರ್ಕಕ್ಕಾಗಿ ಭಾರತದಾದ್ಯಂತ 140 ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿದ ಕೀರ್ತಿ ಶ್ರೀ ಭಾರದ್ವಾಜ್ ಅವರಿಗೆ ಸಲ್ಲುತ್ತದೆ. ಅಕ್ಟೋಬರ್ 10 ರಂದು ಕೋಟ … Continued