ವಿಧಾನ ಸೌಧದ 2ನೇ ಮಹಡಿಯಲ್ಲಿ ಬಿಯರ್ ಬಾಟಲ್ ಪತ್ತೆ..!

ಬೆಂಗಳೂರು : ರಾಜ್ಯದ ಶಕ್ತಿ ಕೇಂದ್ರವೆನಿಸಿಕೊಂಡಿರುವ ವಿಧಾನಸೌಧದೊಳಗೆ ಎಣ್ಣೆ ಪಾರ್ಟಿ ನಡೆಯುತ್ತಿತ್ತಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಎರಡು ಬಿಯರ್‌ ಬಾಟಲಿಗಳು ವಿಧಾನಸೌಧದ ಒಳಗೆ ಪತ್ತೆಯಾಗಿರುವುದೇ ಈ ಅನುಮಾನ ಬರಲು ಕಾರಣವಾಗಿದೆ. ವಿಧಾನಸೌಧದ 2ನೇ ಮಹಡಿಯಲ್ಲಿರುವ ರೂಂ ನಂಬರ್‌ 208ರ ಪಕ್ಕದ ನೀರಿನ ಟ್ಯಾಂಕ್‍ನ ಸಿಂಕ್ ಬಳಿ ಬಾಟಲ್ ಪತ್ತೆಯಾಗಿದ್ದು, ರಾತ್ರಿಯ ವೇಳೆಯಲ್ಲಿ ಪಾರ್ಟಿ ನಡೆಸಿರುವ ಕುರಿತು … Continued

ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

ಮಂಗಳೂರು: ರಾಜ್ಯಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದಿಂದ ಇಂದು (ಸೋಮವಾರ) ವಿಧಿವಶರಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ಫರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಆಸ್ಕರ್ ಫರ್ನಾಂಡಿಸ್ ಜುಲೈ 18ರಂದು ಯೋಗ ಮಾಡುತ್ತಿದ್ದಾಗ ಮನೆಯಲ್ಲಿಯೇ ಜಾರಿ ಬಿದ್ದಿದ್ದರು. ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತೆರಳಿದಾಗ ತಲೆಗೆ … Continued

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ :ನಾಲ್ವರು ಆರೋಪಿಗಳು ವಶಕ್ಕೆ

ಯಾದಗಿ: ಶಹಾಪುರ ನಗರ ಹೊರವಲಯದಲ್ಲಿ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಅಮಾನೀಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ 8-9 ತಿಂಗಳ ಹಿಂದೆ ಶಹಾಪುರ ನಗರ ಹೊರವಲಯದಲ್ಲಿ ನಡೆದಿದೆ ಎನ್ನಲಾದ ಈ ಕೃತ್ಯದ ವಿಡಿಯೊ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ … Continued

ಬೆಲೆ ಏರಿಕೆ, ಇಂಧನ ದರ ಹೆಚ್ಚಳ ಖಂಡಿಸಿ ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ಹೊರಟ ಕಾಂಗ್ರೆಸ್‌ ನಾಯಕರು..!

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದಾರೆ. ಮೊದಲ ದಿನವೇ ಅವರಿಗೆ ಕಾಂಗ್ರೆಸ್‌ ಮತ್ತು ರೈತರಿಂದ ಪ್ರತಿಭಟನೆ ಎದುರಿಸುವಂತಾಗಿದೆ. ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಹಾಗೂ ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ಸಿಲಿಂಡರ್‌ ದರ ಏರಿಕೆ ಖಂಡಿಸಿ ಕಾಂಗ್ರೆಸ್ (Congress) ನಾಯಕರು ಎತ್ತಿನಗಾಡಿ … Continued

ಕರ್ನಾಟಕದಲ್ಲಿ ಮೂರು ದಿನ ಮಳೆ; ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, … Continued

ರಸ್ತೆಯಲ್ಲಿ ಮಹಿಳೆ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡನ ಬಂಧನ

ಧಾರವಾಡ: ರಸ್ತೆಯಲ್ಲಿಯೇ ಮಹಿಳೆ ಕೈಹಿಡಿದು ಎಳೆದಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯನ್ನ ಎಳೆದಾಡಿದ್ದ ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ‌ನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಧಾರವಾಡ ನಗರದ ಸತ್ತೂರ ಬಡಾವಣೆಯಲ್ಲಿ ಸತ್ತೂರಿನ ಬಡಾವಣೆಯಲ್ಲಿ ಶ್ರೀಕಾಂತ ಜಮನಾಳ‌ ಮಹಿಳೆಯ ಕೈಹಿಡಿದು ಎಳೆದಾಡಿ ದರ್ಪ ಮೆರೆದಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಮಹಿಳೆ ವಿದ್ಯಾಗಿರಿ ಪೊಲೀಸ್ ಠಾಣೆಗೆ ದೂರು … Continued

ಕೆಎಸ್‌ಎಫ್‌ಎ ಫುಟ್ಬಾಲ್ ಕ್ರೀಡಾಂಗಣದಲ್ಲಿ ಮಾರಕಾಸ್ತ್ರಗಳಿಂದ ರೌಡಿ ಶೀಟರ್‌ ಹತ್ಯೆ

ಬೆಂಗಳೂರು: ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಅರವಿಂದ್ (30) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭಾನುವಾರ ಕೊಲೆ ಮಾಡಿದ್ದಾರೆ. ಠಾಣೆ ವ್ಯಾಪ್ತಿಯ ಕೆಎಸ್‌ಎಫ್‌ಎ ಫುಟ್ಬಾಲ್ ಕ್ರೀಡಾಂಗಣದ ಎದುರಿನ ಬಿಬಿಎಂಪಿ ಮೈದಾನದಲ್ಲಿ ಅರವಿಂದ್, ಸ್ನೇಹಿತರ ಜೊತೆ ಫುಟ್ಬಾಲ್ ಆಡುತ್ತಿದ್ದರು. ಮಧ್ಯಾಹ್ನ 4 ಗಂಟೆ ಸುಮಾರಿಗೆ ಸ್ಥಳಕ್ಕೆ ಬಂದಿದ್ದ ನಾಲ್ವರು ದುಷ್ಕರ್ಮಿಗಳು, ಅರವಿಂದ್ ಮೇಲೆ ಹಲ್ಲೆಗೆ ಯತ್ನಿಸಿದ್ದರು’ ಎಂದು … Continued

ರಾಜ್ಯದಲ್ಲಿ ಭಾನುವಾರ 803 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 803 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 29,61,735 ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ 17 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ರಜ್ಯದಲ್ಲಿ 37,504 ಜನ ಸೋಂಕಿತರು ಮೃತಪಟ್ಟಿದ್ದಾರೆ . ರಾಜ್ಯದಲ್ಲಿ ಇಂದು 802 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,07,548 ಜನ ಗುಣಮುಖರಾಗಿದ್ದಾರೆ. … Continued

ಜೀಪ್‌ – ಕ್ಯಾಂಟರ್‌ ನಡುವೆ ಭೀಕರ ಅಪಘಾತ : ಮೃತರ ಸಂಖ್ಯೆ 8ಕ್ಕೆ ಏರಿಕೆ, 8 ಮಂದಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ:  ಬರೋಬ್ಬರಿ 17 ಮಂದಿ ಪ್ರಯಾಣಿಸುತ್ತಿದ್ದ ಜೀಪ್ ಗೆ ಯಮ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮೃತರ ಸಂಖ್ಯೆ 8 ಕ್ಕೆ ಏರಿದೆ. 8 ಮಂದಿ ಆಸ್ಪತ್ರೆಯಲ್ಲಿ  ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಓರ್ವ ಬಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರಿನಾಯನಕನಹಳ್ಳಿ ಗೇಟ್ ಬಳಿ ಅಪಘಾತ ನಡೆದಿದ್ದು, ಭಾನುವಾರ ಮಧ್ಯಾಹ್ನ … Continued

120 ನೂತನ ಉಚಿತ ಆಂಬುಲೆನ್ಸ್‌ ಲೋಕಾರ್ಪಣೆ ಮಾಡಿದ ಸಿಎಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜನಸಾಂದ್ರತೆ ಹೆಚ್ಚಿರುವ ಕಾರಣ, ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ಆರೋಗ್ಯ ಸೇವೆಗಳನ್ನು ಒಂದೇ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಹೇಳಿದ್ದಾರೆ. ವಿಧಾನ ಸೌಧದ ಪೂರ್ವದ್ವಾರದ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಡೆದ 108 … Continued