ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ; ಕರ್ನಾಟಕದಲ್ಲಿ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

ಶಿವಮೊಗ್ಗ : ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರ ವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ … Continued

ಪುತ್ತೂರು | ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಜನದಟ್ಟಣೆ : 11 ಮಂದಿ ಅಸ್ವಸ್ಥ

ಮಂಗಳೂರು : ಸೋಮವಾರ ಪುತ್ತೂರಿನ ತಾಲೂಕು ಕ್ರೀಡಾಂಗಣದಲ್ಲಿ ನಡೆದ ‘ಅಶೋಕ ಜನಮನ 2025’ ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 11 ಜನರು ಅಸ್ವಸ್ಥಗೊಂಡ ವಿದ್ಯಮಾನ ನಡೆದಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೆಲವರು ಆಯಾಸ, ನಿರ್ಜಲೀಕರಣ ಮತ್ತು ಜನದಟ್ಟಣೆಯಿಂದ ಅಸ್ವಸ್ಥರಾದರು ಎಂದು ಹೇಳಲಾಗಿದೆ. ರೈ ಎಸ್ಟೇಟ್ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ … Continued

ಬೆಳಗಾವಿ : ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

ಬೆಳಗಾವಿ: ವಾಲ್ಮೀಕಿ ನಾಯಕ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಮೇಲೆ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ಮಾಜಿ ಸಂಸದ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ರಾಜಶೇಖರ ತಳವಾರ ಎಂಬುವರು … Continued

ಮೂರು ಬಸ್‌ಗಳ ನಡುವೆ ಡಿಕ್ಕಿ : ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಮೂರು ಬಸ್ಸುಗಳು ಡಿಕ್ಕೆ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ತು ಮಂದಿ ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಂಡ್ಯ ಜಿಲ್ಲೆಯ ಬಚನಹಳ್ಳಿ ಬಳಿ ಮೂರು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. … Continued

ಜಾತಿ ಗಣತಿ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (Caste census) ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ. ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಮೀಕ್ಷೆಯನ್ನು ಅ.31 ವರೆಗೂ ವಿಸ್ತರಣೆ ಮಾಡಲಾಗಿದೆ. ಆದರೆ, ಶಿಕ್ಷಕರನ್ನು ಬಳಕೆ … Continued

ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್‌ ಪಥಸಂಚಲ ; ಹೊಸದಾಗಿ ಅರ್ಜಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

ಕಲಬುರಗಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಮತ್ತು ವಿಜಯದಶಮಿ ಉತ್ಸವದ ಭಾಗವಾಗಿ ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್‌ 2ಕ್ಕೆ ಉದ್ದೇಶಿಸಿರುವ ಆರ್‌ಎಸ್‌ಎಸ್‌ ಪಥಸಂಚಲನ, ಸ್ಥಳ ಮತ್ತು ಸಮಯಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟವಾಗಿ ಕೈಗೊಂಡಿರುವ ನಿರ್ಣಯದ ವರದಿಯನ್ನು ಅಕ್ಟೋಬರ್‌ 24ಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಭಾನುವಾರ ನಿರ್ದೇಶಿಸಿದೆ. ಚಿತ್ತಾಪುರದಲ್ಲಿ … Continued

ವಾಯುಭಾರ ಕುಸಿತ : ಕರ್ನಾಟಕದ 23 ಜಿಲ್ಲೆಗಳಲ್ಲಿ 4-5 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ, ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾನುವಾರ (ಅಕ್ಟೋಬರ್‌ ೧೯) ಭಾರೀ ಮಳೆ/ಗುಡುಗು ಸಹಿತ … Continued

ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿಪಡೆಯಬೇಕೆಂದು ಇತ್ತೀಚೆಗೆ ಸಚಿವ ಸಂಪುಟವು ನಿರ್ಧಾರ ಕೈಗೊಂಡ ನಂತರ ಈಗ ರಾಜ್ಯ ಸರ್ಕಾರವು ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಶನಿವಾರ (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಆದೇಶ ಜಾರಿಯಾಗಲಿದೆ. ರಾಜ್ಯದ … Continued

ಅಂಕೋಲಾ | ವಡ್ಡಿ ಘಾಟ್ ತಿರುವಿನಲ್ಲಿ ಮೂರು ಪಲ್ಟಿ ಹೊಡೆದ ಬಸ್ …

ಅಂಕೋಲಾ: ಬಳ್ಳಾರಿಯಿಂದ ಕುಮಟಾ ಕಡೆಗೆ ಪ್ರಯಾಣಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉತ್ತರ ಕನ್ನಡ ಜಿಲ್ಲೆಯ ವಡ್ಡಿ ಘಾಟ್ ತಿರುವಿನಲ್ಲಿ ಮೂರು ಪಲ್ಟಿ ಹೊಡೆದು ಕಂದಕಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ ಚಾಲಕ ನಿರ್ವಾಹಕ ಸೇರಿ 49 ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕುಮಟಾ ಶಿರಸಿ ರಸ್ತೆಯು ಕಾಮಗಾರಿಯ … Continued

ಸವದತ್ತಿ: ವಿಚ್ಛೇದಿತ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ ಮಾಜಿ ಪತಿ

ಬೆಳಗಾವಿ: 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನಂತರ ವಿಚ್ಛೇದನ ಪಡೆದ ನಂತರವೂ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಮಾಜಿ ಪತಿ ಆಕೆಯನ್ನು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಜಿಲ್ಲೆಯ ಸವದತ್ತಿಯ ರಾಮಸೈಟಿನಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ಕೊಲೆಯಾಗಿದ್ದ ಬಸ್ ನಿರ್ವಾಹಕಿ ಕಾಶವ್ವ ಕರೀಕಟ್ಟಿ (34) ತನ್ನ ಮಾಜಿ ಪತಿಯಿಂದಲೇ ಕೊಲೆಯಾದವರು ಎಂದು … Continued