ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್​ ಖಾನ್​ಗೆ ಕೊನೆಗೂ ಜಾಮೀನು, ಶಾರುಖ್​ ಕುಟುಂಬಕ್ಕೆ ರಿಲೀಫ್​

ಮುಂಬೈ:ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಆದೇಶದ ಆಪರೇಟಿವ್ ಭಾಗವು ನಾಳೆ ಬೆಳಿಗ್ಗೆ … Continued

ಮಹಿಳೆ, ನವಜಾತ ಶಿಶು ರಕ್ಷಿಸಲು ವಾಪಸ್‌ ಬಂದ ರೈಲು…! ರೈಲ್ವೆ ಕಾರ್ಯಕ್ಕೆ ಭಾರೀ ಪ್ರಶಂಸೆ…

ಟಾಟಾನಗರ (ಜಾರ್ಖಂಡ್): ರೈಲು ಹೊರಟ ಕೆಲವೇ ಕ್ಷಣಗಳಲ್ಲಿ ರೈಲಿನಲ್ಲಿದ್ದ ಗರ್ಭಿಣಿಯೊಬ್ಬಳಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಮಹಿಳೆ ಮತ್ತು ವಜಾತ ಶಿಶು ಕಾಪಾಡಿದ  ಘಟನೆ ಜಾರ್ಖಂಡ್‌ನ ಟಾಟಾನಗರದಲ್ಲಿ ನಡೆದಿದೆ. ಈ ಕಾರ್ಯಕ್ಕೆ ರೈಲ್ವೆ ಇಲಾಖೆಗೆ ಬಾರೀ ಪ್ರಶಂಸೆ ವ್ಯಕ್ತವಾಗಿದೆ. ಗರ್ಭಿಣಿ ಮಹಿಳೆಗೆ ಹೆರಿಗೆ ಇನ್ನೂ ದಿನಗಳು ಇದ್ದುದರಿಂದ ಅವಳು ರೈಲು ಪ್ರಯಾಣ ಮಾಡಲು ನಿರ್ಧರಿಸಿದ್ದಳು. ರಾಣು … Continued

ಆರ್ಯನ್ ಖಾನ್ ಡ್ರಗ್ ಪ್ರಕರಣ: ಶಾರುಖ್ ಖಾನ್ ಮ್ಯಾನೇಜರ್, ಇತರರ ಕರೆ ಡೇಟಾ ದಾಖಲೆ ಪಡೆಯಲು ತನಗೆ 5 ಲಕ್ಷ ರೂಪಾಯಿ ಆಫರ್‌: ಪೊಲೀಸರಿಗೆ ತಿಳಿಸಿದ ಎಥಿಕಲ್ ಹ್ಯಾಕರ್

ಮುಂಬೈ: ಮುಂಬೈ ಕ್ರೂಸ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗ ಆರ್ಯನ್‌ ಖಾನ್‌ ಡ್ರಗ್ಸ್‌ಗೆ ಸಂಬಂಧಿಸಿದಂತೆ ಇತರರಿಗೆ ಮೊಬೈಲ್‌ನಲ್ಲಿ ಕಳುಹಿಸಿರುವ ಸಂದೇಶಗಳನ್ನು ಅಳಿಸಿಹಾಕಲು ಎಥಿಕಲ್ ಹ್ಯಾಕರ್ ಒಬ್ಬರಿಗೆ ಲಂಚ ನೀಡಿರುವುದಾಗಿ ಆರೋಪ ಕೇಳಿಬಂದಿದೆ. ಅಕ್ಟೋಬರ್ 27 ರಂದು, ಶಾರುಖ್ ಖಾನ್ ಅವರ … Continued

ನೀಟ್‌’ ಫಲಿತಾಂಶ ಪ್ರಕಟಿಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ 2021ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. “ನಾವು ಹೈಕೋರ್ಟ್ ತೀರ್ಪಿಗೆ ತಡೆ ನೀಡುತ್ತೇವೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಫಲಿತಾಂಶವನ್ನು ಪ್ರಕಟಿಸಬಹುದು” ಎಂದು ಎನ್‌ಟಿಎ ಪರವಾಗಿ ವಾದಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ … Continued

ಯೂ ಟ್ಯೂಬ್​​ ವಿಡಿಯೊ ನೋಡಿಕೊಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ…!; ತಂದೆ-ತಾಯಿಗೆ ಮಗಳು ಗರ್ಭಿಣಿಯಾಗಿದ್ದೇ ಗೊತ್ತಿಲ್ಲ..!

ತಿರುವನಂತಪುರಂ: 17 ವರ್ಷದ ಹುಡುಗಿ ಯೂ ಟ್ಯೂಬ್​​ನಲ್ಲಿ ವಿಡಿಯೋ ನೋಡಿ, ಮಗುವಿಗೆ ಜನನ ನೀಡಿದ ಘಟನೆ ಕೇರಳದಲ್ಲಿ ನಡೆದ ಬಗ್ಗೆ ವರದಿಯಾಗಿದೆ…! ವಿಶೇಷವೆಂದರೆ ಮಗಳು ಗರ್ಭಿಣಿ ಎಂಬುದು ತಂದೆ-ತಾಯಿಯವರಿಗೇ ಗೊತ್ತಿರಲಿಲ್ಲ. ಈಕೆ ತನ್ನ ಕೋಣೆಯನ್ನು ಲಾಕ್‌​​ ಮಾಡಿಕೊಂಡು, ಯೂಟ್ಯೂಬ್‌ನಲ್ಲಿ ಮಗುವನ್ನು ಹೆರುವ ವಿಧಾನವನ್ನು ನೋಡುತ್ತಿದ್ದಳಂತೆ. ಅದನ್ನು ನೋಡಿ ನೋಡಿ ಅವಳು ಮಗುವನ್ನು ಹೆತ್ತಿದ್ದಾಳೆ. ಹಾಗೆಯೇ, ಹೆರಿಗೆಯಾದ … Continued

ಖಾಸಗಿ ಫೋಟೋ ಲೀಕ್​ ಮಾಡುವುದಾಗಿ ಬೆದರಿಕೆ; ಸಚಿವ ನವಾಬ್‌ ಮಲ್ಲಿಕ್‌ ವಿರುದ್ಧ ಮಹಿಳಾ ಆಯೋಗಕ್ಕೆ ಪತ್ರ ಬರೆದ ಸಮೀರ್ ವಾಂಖೇಡೆ ಸಹೋದರಿ

ಮುಂಬೈ : ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ತನ್ನನ್ನು ಆನ್‌ಲೈನ್‌ನಲ್ಲಿ ಹಿಂಬಾಲಿಸುತ್ತಿದ್ದಾರೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮುಂಬೈ ಘಟಕದ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರ ಸಹೋದರಿ ಯಾಸ್ಮಿನ್ ವಾಂಖೇಡೆ ಬುಧವಾರ ಆರೋಪಿಸಿದ್ದಾರೆ. ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಅವರು, ದೂರು ದಾಖಲಿಸುವಂತೆ ಮನವಿ … Continued

ಭಾರತದಲ್ಲಿ 16,000 ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ದಾಖಲು, ನಿನ್ನೆಗಿಂತ 20% ರಷ್ಟು ಹೆಚ್ಚಳ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,156 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಭಾರತವು ನಿನ್ನೆಗಿಂತ ಶೇಕಡಾ 20 ರಷ್ಟು ಏರಿಕೆ ಕಂಡಿದೆ. ದೇಶದ ಒಟ್ಟು ಪ್ರಕರಣ ಈಗ 3,42,31,809 ಆಗಿದೆ. ದೇಶವು 733 ಹೊಸ ಸಾವುಗಳನ್ನು ವರದಿ ಮಾಡಿದೆ, ಒಟ್ಟು ವರದಿಯಾದ ಸಾವಿನ ಸಂಖ್ಯೆಯನ್ನು 4,56,386 ಕ್ಕೆ ತರುತ್ತದೆ. ಕಳೆದ 24 ಗಂಟೆಗಳಲ್ಲಿ ಒಟ್ಟು … Continued

ಏರ್ ಇಂಡಿಯಾದ ಎಲ್ಲ ಬಾಕಿ ಚುಕ್ತಾ ಮಾಡುವಂತೆ ಹಣಕಾಸು ಸಚಿವಾಲಯದಿಂದ ಕೇಂದ್ರ ಸರ್ಕಾರದ ಇಲಾಖೆಗಳಿಗೆ ಸೂಚನೆ

ನವದೆಹಲಿ: ಏರ್​ ಇಂಡಿಯಾದ ಎಲ್ಲ ಬಾಕಿಯನ್ನೂ ತಕ್ಷಣ ಚುಕ್ತಾ ಮಾಡಬೇಕು ಎಂದು ಕೇಂದ್ರ ಹಣಕಾಸು ಇಲಾಖೆಯು ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಬುಧವಾರ ಸೂಚಿಸಿದೆ. ಮುಂದಿನ ಆದೇಶದವರೆಗೆ ಕೇಂದ್ರ ಸರ್ಕಾರದ ಎಲ್ಲ ಅಧಿಕಾರಿಗಳೂ ಏರ್​ ಇಂಡಿಯಾದ ಟಿಕೆಟ್​ಗಳನ್ನು ಹಣ ತೆತ್ತು ಖರೀದಿಸಬೇಕು ಎಂದು ಸೂಚನೆ ನೀಡಿದೆ. ಏರ್​ ಇಂಡಿಯಾ ಟಾಟಾ ಸನ್ಸ್​ಗೆ ಮಾರಾಟವಾದ ನಂತರ ಕೇಂದ್ರ … Continued

ಸಚಿವ ನವಾಬ್‌ ಮಲಿಕ್‌ ಟೀಕೆಗಳು ಎನ್‌ಸಿಬಿ-ವಾಂಖೇಡೆ ಸ್ಥೈರ್ಯಗೆಡಿಸುವ ಸಾಧ್ಯತೆ ಎಂದು ಬಾಂಬೆ ಹೈಕೋರ್ಟ್‌ನಲ್ಲಿ ಪಿಐಎಲ್

ಮುಂಬೈ: ಮಾದಕವಸ್ತು ನಿಯಂತ್ರಣ ದಳ ಮತ್ತು ಅದರ ವಲಯ ನಿರ್ದೇಶಕ ಸಮೀರ್‌ ವಾಂಖೇಡೆ ಹಾಗೂ ಅವರ ಕುಟುಂಬಸ್ಥರ ಸ್ಥೈರ್ಯಗೆಡಿಸುವಂತಹ ಯಾವುದೇ ಹೇಳಿಕೆಗಳನ್ನು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ನವಾಬ್ ಮಲಿಕ್ ಅವರು ನೀಡದಂತೆ ನಿರ್ಬಂಧಿಸಲು ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದು ಬಾಂಬೆ ಹೈಕೋರ್ಟ್‌ನಲ್ಲಿ ದಾಖಲಾಗಿದೆ. ಉದ್ಯಮಿ ಹಾಗೂ ಮೌಲಾನಾ ಆಗಿರುವ ಮುಂಬೈ ನಿವಾಸಿಯೊಬ್ಬರು ಈ … Continued

ಭಾರತದಿಂದ 5000-ಕಿಮೀ ವ್ಯಾಪ್ತಿ ಪರಮಾಣು ಸಾಮರ್ಥ್ಯದ ಅಗ್ನಿ-5 ಬ್ಯಾಲಿಸ್ಟಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ

ನವದೆಹಲಿ: ಭಾರತ ಬುಧವಾರ ಒಡಿಶಾ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಮೇಲ್ಮೈಯಿಂದ ಮೇಲ್ಮೈಗೆ ಹಾರುವ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5 ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ರಾತ್ರಿ 7.50ಕ್ಕೆ ಪರೀಕ್ಷಾರ್ಥ ಉಡಾವಣೆ ಮಾಡಲಾಯಿತು. ಮೂರು-ಹಂತದ ಘನ-ಇಂಧನ ಎಂಜಿನ್ ಅನ್ನು ಬಳಸುವ ಕ್ಷಿಪಣಿಯು 5,000-ಕಿಮೀ ವ್ಯಾಪ್ತಿಯವರೆಗಿನ ಗುರಿಗಳನ್ನು ಅತ್ಯಂತ ಹೆಚ್ಚಿನ ನಿಖರತೆಯೊಂದಿಗೆ ತಲುಪಿ ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದೆ. ರಕ್ಷಣಾ … Continued