ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ ಪ್ರಧಾನಿ: ಶಿವಸೇನೆ ಆರೋಪ

ಮುಂಬೈ: ಕೃಷಿ ಕಾನೂನುಗಳನ್ನು ಖಂಡಿಸಿ ಹೋರಾಟ ನಡೆಸುತ್ತಿರುವ ರೈತರಿಗೆ ಪ್ರಧಾನಿ “ಆಂದೋಲನಜೀವಿಗಳುʼ ಎಂದು ಕರೆದಿರುವುವುದು ದೇಶದ ಸ್ವಾತಂತ್ರ್ಯ ಹೋರಾಟ ಮಾಡಿದವರಿಗೂ ಮಾಡಿದ ಅವಮಾನ ಎಂದು ಶಿವಸೇನೆ ಆರೋಪ ಮಾಡಿದೆ. ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ, ಪ್ರಧಾನಿ ಮೋದಿ ಅವರು ದೇಶದ ಆಂದೋಲನಗಳನ್ನು ಗೇಲಿ ಮಾಡಿದ್ದಾರೆ. ಬಿಜೆಪಿ ತುರ್ತು ಪರಿಸ್ಥಿತಿಯಿಂದ ಅಯೋಧ್ಯೆ ಚಳುವಳಿಯವರೆಗೆ, ಹಣದುಬ್ಬರದಿಂದ ಕಾಶ್ಮೀರದಿಂದ ಆರ್ಟಿಕಲ್-370 … Continued

ರೈತರ ಹೋರಾಟಕ್ಕೆ ಮಹಾತ್ಮ ಗಾಂಧಿ ಮೊಮ್ಮಗಳು ತಾರಾ ಭಟ್ಟಾಚಾರ್ಜಿ ಬೆಂಬಲ

ಗಾಜಿಯಾಬಾದ್‌: ಮಹಾತ್ಮಾ ಗಾಂಧಿ ಮೊಮ್ಮಗಳು ತಾರಾ ಭಟ್ಟಾಚಾರ್ಜಿ ಕೇಂದ್ರ ಸರಕಾರದ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಗಾಜಿಯಾಬಾದ್‌ನಲ್ಲಿ ರೈತರು ನಡೆಸುತ್ತಿರುವ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ಅವರು, ಶಾಂತಿಯುತವಾಗಿ ಹೋರಾಟ ನಡೆಸುವಂತೆ ರೈತರಿಗೆ ಕರೆ ನೀಡಿದರು. ನಾನು ಯಾವುದೇ ರಾಜಕೀಯ ಪಕ್ಷದ ಪರವಾಗಿ ಇಲ್ಲಿಗೆ ಬಂದಿಲ್ಲ. ರೈತರು … Continued

ಉತ್ತರಾಖಂಡ ದುರಂತ: ೪೧ ಶವಗಳ ಪತ್ತೆ

ಉತ್ತರಾಖಂಡದ ಚಮೋಲಿಯಲ್ಲಿ ಹಿಮಬಂಡೆ ಕುಸಿದು ಉಂಟಾದ ಪ್ರವಾಹ ದುರಂತದಲ್ಲಿ ಈವರೆಗೆ ೪೧ ಶವಗಳನ್ನು ಹೊರತೆಗೆಯಲಾಗಿದೆ. ರವಿವಾರ ಮಧ್ಯಾಹ್ನದ ವೇಳೆಗೆ ೪೧ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯ ತೀವ್ರಗೊಳಿಸಲಾಗಿದೆ. ಫೆ.೭ರಂದು ಹಿಮಬಂಡೆ ಕುಸಿದು ಪ್ರವಾಹ ಉಂಟಾಗಿತ್ತು. ಪ್ರವಾಹದಿಂದಾಗಿ ಋಷಿಗಂಗಾ ವಿದ್ಯುತ್‌ ಯೋಜನೆ ಕಾಮಗಾರಿ ಹಾನಿಗೊಳಗಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಸುರಂಗದಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಣೆ ಮಾಡುವ … Continued

ಮೋದಿ ಲೂಟಿಕೋರ; ರಾಹುಲ್‌ ಗಾಂಧಿ ಆರೋಪ

ಕೊರೊನಾ ಸಂಕಷ್ಟದ ಸಮಯದಲ್ಲಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಿದ ಪ್ರಧಾನಿ ಮೋದಿ ಕಾರ್ಪೋರೇಟ್‌ಗಳತ್ತ ಗಮನ ಹರಿಸಿ ತಮ್ಮ ಇಬ್ಬರು ಸ್ನೇಹಿತರ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ನೇರ ಆರೋಪ ಮಾಡಿದ್ದಾರೆ. ಕೊವಿಡ್‌-೧೯ ಸಂದರ್ಭದಲ್ಲಿ ಮೋದಿ ಸಾರ್ವಜನಿಕರ ಹಣವನ್ನು ಲೂಟಿಗೈದಿದ್ದಾರೆ ಎಂದರು. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಆಸ್ಸಾಂ ರಾಜ್ಯವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದು, … Continued

ಟೂಲ್‌ಕಿಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಯುವತಿ ಬಂಧನ

ನೂತನ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ಪ್ರತಿಭಟನೆಯ “ಟೂಲ್ ಕಿಟ್‌ʼ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ೨೧ ವರ್ಷದ ಪರಿಸರ ಕಾರ್ಯಕರ್ತೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ನ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಫ್ರೈಡೇಸ್‌ ಫಾರ್‌ ಫ್ಯೂಚರ್‌ ಸಂಸ್ಥೆಯ ಸಂಸ್ಥಾಪಕರಲ್ಲೊಬ್ಬರಾದ ದಿಶಾ ರವಿ ಬಂಧಿತ ಯುವತಿ. ಇವರು ಟೂಲ್‌ಕಿಟ್‌ ಅನ್ನು ಸಂಪಾದಿಸಿದ್ದಲ್ಲದೇ ಅದನ್ನು … Continued

ಕೆನಡಾಕ್ಕೆ ಭಾರತದಿಂದ ೫ ಲಕ್ಷ ಕೊರೊನಾ ಲಸಿಕೆ ಪೂರೈಕೆ

ನವದೆಹಲಿ: ಪ್ರಧಾನಿ ಜಸ್ಟಿನ್‌ ಟ್ರುಡೊ ಅವರ ಕೋರಿಕೆ ಮೇರೆಗೆ ಫೆಬ್ರವರಿಯಲ್ಲಿ ೫ ಲಕ್ಷ ಕೊರೊನಾ ಲಸಿಕೆಗಳನ್ನು ಕೆನಡಾಕ್ಕೆ ಪೂರೈಸಲು ಭಾರತ ಒಪ್ಪಿಕೊಂಡಿದೆ. ಕೆನಡಾ ಮಾತ್ರವಲ್ಲದೇ ಕೋವಿಡ್ ಲಸಿಕೆಯನ್ನು ಬಾಂಗ್ಲಾದೇಶ, ನೇಪಾಳ, ಭೂತಾನ್ ಮತ್ತು ಇತರ ನೆರೆಯ ರಾಷ್ಟ್ರಗಳಿಗೆ ಪೂರೈಸಲು ಮೋದಿ ಸರ್ಕಾರ ನಿರ್ಧರಿಸಿದೆ. ಸರಬರಾಜು ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳ ಮಿಶ್ರಣವಾಗಿರುತ್ತದೆ. ಫೆಬ್ರವರಿ 10 ರಂದು … Continued

ರೈತರ ಪ್ರತಿಭಟನೆ ಮಧ್ಯೆ ಸಾರ್ವಜನಿಕ ಆಸ್ತಿಹಾನಿ ಮರುಪಡೆಯುವ ಹಕ್ಕು ಮಸೂದೆ ಶೀಘ್ರ ಜಾರಿಗೆ ತಯಾರಿ

ನವ ದೆಹಲಿ: ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಹರಿಯಾಣ ವ್ಯಾಪಕ ರೈತರ ಆಂದೋಲನಕ್ಕೆ ಸಾಕ್ಷಿಯಾಗುತ್ತಿದ್ದರೂ, ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಪ್ರತಿಭಟನಾಕಾರರಿಂದ ಸಾರ್ವಜನಿಕ ಆಸ್ತಿಗೆ ಹಾನಿಯನ್ನು ಮರುಪಡೆಯುವ ಹಕ್ಕು ಪಡೆಯುವ ಕಾನೂನನ್ನು ಶೀಘ್ರದಲ್ಲೇ ತರಲಾಗುವುದು ಎಂದು ಶನಿವಾರ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗಿನ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರೈತರ … Continued

ದೆಹಲಿ ಹಿಂಸಾಚಾರ: ಘಟನಾ ಸ್ಥಳಕ್ಕೆ ಆರೋಪಿಗಳು

ದೆಹಲಿ: ಗಣರಾಜ್ಯೋತ್ಸವದಂದು ಟ್ರಾಕ್ಟರ್‌ ರ್ಯಾಲಿ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ದೀಪ್‌ ಸಿಧು ಹಾಗೂ ಇಕ್ಬಾಲ್‌ ಸಿಂಗ್‌ ಅವರನ್ನು ದೆಹಲಿ ಪೊಲೀಸರು ಶನಿವಾರ ಘಟನಾ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಘಟನೆ ಕುರಿತು ತನಿಖೆ ನಡೆಸಲು ಕೆಂಪು ಕೋಟೆಗೆ ಇಬ್ಬರು ಆರೋಪಿಗಳನ್ನು ಕರೆದೊಯ್ದಿದ್ದಾರೆ. ಇಲ್ಲಿನ ಚಾಣಕ್ಯಪುರಿಯ ಅಪರಾಧ ದಳ ಕೇಂದ್ರ ಕಚೇರಿಯಿಂದ ತನಿಖೆ ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ಕೆಂಪು … Continued

ಸಿಎಎ ವಿರುದ್ಧ ಪ್ರತಿಭಟನೆ ಪ್ರಕರಣ: ದರ್ಗಾ ಮುಖ್ಯಸ್ಥನ ಬಂಧನ, ರಾಂಪುರ ಜಿಲ್ಲೆ ಉದ್ವಿಗ್ನ

ಲಕ್ನೋ: 2019ರ ಡಿಸೆಂಬರ್ 21ರಂದು ಜಿಲ್ಲೆಯಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಶನಿವಾರ ಪ್ರಸಿದ್ಧ ಹಫೀಜ್ ಷಾ ದರ್ಗಾ ಮುಖ್ಯಸ್ಥ ಶಾ ಫರ್ಹತ್ ಅಹ್ಮದ್ ಜಮಾಲಿ ಮತ್ತು ಇತರ ಮೂವರನ್ನು ಬಂಧಿಸಿದ ನಂತರ ರಾಂಪುರ್ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾಗಿದೆ. 2019 ರ ಡಿಸೆಂಬರ್ 21 ರಂದು ಪೌರತ್ವ … Continued

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ ೧೫ಕ್ಕೆ ಏರಿಕೆ

ತಮಿಳುನಾಡಿನ ವಿರುಧ್‌ನಗರ ಜಿಲ್ಲೆಯಲ್ಲಿ ನಡೆದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ೧೫ಕ್ಕೇರಿದೆ. 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ವಿರುಧ್‌ ನಗರ್ ಜಿಲ್ಲೆಯ ಸತ್ತೂರು ಬಳಿಯ ಅಚಂಕುಲಂನಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ 1:45ಕ್ಕೆ ಸ್ಫೋಟ ಸಂಭವಿಸಿತ್ತು. ಅಗ್ನಿಶಾಮಕ ದಳದ ಸುಮಾರು ೩೦ ಸಿಬ್ಬಂದಿ ಬೆಂಕಿ … Continued