ತಂದೆಯ ಶವದೊಂದಿಗೆ ಮೂರು ತಿಂಗಳಿಂದ ವಾಸಿಸುತ್ತಿದ್ದ ಮಗ..!

ಕೋಲ್ಕತ್ತಾ: 40 ವರ್ಷದ ವ್ಯಕ್ತಿಯೊಬ್ಬ ತಮ್ಮ ತಂದೆಯ ಅಸ್ಥಿಪಂಜರದೊಂದಿಗೆ ಸುಮಾರು ಮೂರು ತಿಂಗಳ ಕಾಲ ಕೋಲ್ಕತ್ತಾದ ತಮ್ಮ ನಿವಾಸದಲ್ಲಿ ವಾಸಿಸಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. 70 ವರ್ಷದ ತಂದೆ ಸ್ವಾಭಾವಿಕವಾಗಿ ಮೃತಪಟ್ಟಿದ್ದಾರೆಯೇ ಎಂದು ನಿರ್ಧರಿಸಲು ತನಿಖೆ ನಡೆಯುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮೃತರನ್ನು ಸಂಗ್ರಾಮ್ ಡೇ ಎಂದು … Continued

ಹೈದರಾಬಾದ್ ಮೃಗಾಲಯದಲ್ಲಿ ನಿಷೇಧಿತ ಪ್ರದೇಶದಲ್ಲಿ ಪ್ರವೇಶ: ಸಿಂಹದ ಅಪಾಯದಿಂದ ಪಾರು ಮಾಡಿದ ಸಿಬ್ಬಂದಿ| ವೀಕ್ಷಿಸಿ

ಹೈದರಾಬಾದ್‌: ಹೈದರಾಬಾದ್‌ನ ನೆಹರು ಝೂಲಾಜಿಕಲ್ ಪಾರ್ಕ್‌ನಲ್ಲಿರುವ ಆಫ್ರಿಕನ್ ಸಿಂಹ ಇರುವ ಕಂದಕ ಪ್ರದೇಶದಲ್ಲಿ ಅಲೆದಾಡುತ್ತಿದ್ದ 31 ವರ್ಷದ ವ್ಯಕ್ತಿಯನ್ನು ಮಂಗಳವಾರ ಮಧ್ಯಾಹ್ನ ಸಿಬ್ಬಂದಿ ರಕ್ಷಿಸಿದ್ದಾರೆ. ನಂತರ ಮೃಗಾಲಯದ ಅಧಿಕಾರಿಗಳು ಆ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿ ಆತನ ವಿರುದ್ಧ ದೂರು ದಾಖಲಿಸಿದ್ದಾರೆ. ವ್ಯಕ್ತಿಯನ್ನು ಜಿ. ಸಾಯಿ ಕುಮಾರ್ ಎಂದು ಗುರುತಿಸಲಾಗಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ … Continued

ಸಂಸತ್ತಿನ ಚಳಿಗಾಲದ ಅಧೀವೇಶನದಲ್ಲೇ ಕ್ರಿಪ್ಟೋಕರೆನ್ಸಿ ಮಸೂದೆ ಮಂಡನೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊರಡಿಸಲಿರುವ ಅಧಿಕೃತ ಡಿಜಿಟಲ್ ಕರೆನ್ಸಿಯ ರಚನೆಗೆ ಅನುಕೂಲವಾಗುವಂತೆ ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕ್ರಿಪ್ಟೋಕರೆನ್ಸಿ ಕುರಿತ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರವು ಪ್ರಸ್ತಾಪಿಸಿದೆ. “ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ಬಿಲ್, 2021 ರ ನಿಯಂತ್ರಣ” ಎಂಬ ಶೀರ್ಷಿಕೆಯ ಮಸೂದೆಯು ಸಂಸತ್ತಿನಲ್ಲಿ ಅಂಗೀಕಾರಕ್ಕಾಗಿ ಮಂಡನೆಯಾಗಲಿದೆ. ಸಂಸತ್ತಿನ ಬುಲೆಟಿನ್ ಪ್ರಕಾರ, … Continued

ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ಬಿಡುಗಡೆಗೆ 418.72 ಕೋಟಿ ರೂ ಹಣ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ನೆರೆ, ಪ್ರವಾಹದಿಂದ ಸಂತ್ರಸ್ತರಾದವರ ನೆರವಿಗೆ ಧಾವಿಸಿರುವ ಸರ್ಕಾರ, ಕೂಡಲೇ ತುರ್ತು ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಇದಕ್ಕಾಗಿ 418.72 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದು, ಮನೆ ಹಾನಿ ಪರಿಹಾರ ನೀಡುವಂತೆ ಎಸ್ ಡಿ ಆರ್ ಎಫ್ ನಿಧಿಯಿಂದ 418.72 ಕೋಟಿ ರೂಪಾಯಿ … Continued

ಟೀಂ ಇಂಡಿಯಾ ಆಟಗಾರರಿಗೆ ‘ಹಲಾಲ್ ಮಾಂಸ’ ಕಡ್ಡಾಯ ವಿವಾದ: ಸ್ಪಷ್ಟನೆ ನೀಡಿದ ಬಿಸಿಸಿಐ

ನವದೆಹಲಿ: ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ, ಆಟಗಾರರ ಡಯಟ್ ಚಾರ್ಟ್ ಕುರಿತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸುತ್ತೋಲೆಗೆ ಭಾರೀ ಟೀಕೆ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡುತ್ತಿರುವ ವೈರಲ್ ಸುತ್ತೋಲೆಯ ಪ್ರಕಾರ, ಟೀಮ್ ಇಂಡಿಯಾ ಆಟಗಾರರು ಗೋಮಾಂಸ ಮತ್ತು ಹಂದಿ ಮಾಂಸವನ್ನ ತಿನ್ನುವುದನ್ನ ತಪ್ಪಿಸಲು ‘ಹಲಾಲ್ … Continued

ಕೃಷಿ ಕಾನೂನು ರದ್ದುಗೊಳಿಸುವ ಮಸೂದೆ -2021ಕ್ಕೆ ನಾಳಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮತಿ..?

ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಭರವಸೆಯನ್ನು ಶೀಘ್ರವಾಗಿ ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎಂದು ರೈತರಿಗೆ ಸಂಕೇತವಾಗಿ, ಕೇಂದ್ರ ಸಚಿವ ಸಂಪುಟವು ನವೆಂಬರ್ 24 ರಂದು (ಬುಧವಾರ) ‘ದಿ ಫಾರ್ಮ್ ಲಾಸ್ ರಿಪೀಲ್ ಬಿಲ್, 2021’ ಅನ್ನು ಅನುಮೋದನೆ ಮಾಡಲಿದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು … Continued

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೆ.ಎಲ್ ರಾಹುಲ್ ಔಟ್‌

ಲಕ್ನೋ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಂ ಇಂಡಿಯಾದ ಆರಂಭಿಕ ಆಟಗಾರ ಕನ್ನಡಿಗ ಕೆ.ಎಲ್ ರಾಹುಲ್ ಹೊರ ಬಿದ್ದಿದ್ದಾರೆ. ರಾಹುಲ್ ಟೀಂ ಇಂಡಿಯಾದ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿತ್ತು. ಆದರೆ ಅಭ್ಯಾಸದ ವೇಳೆ ಎಡ ತೊಡೆಯ ಸ್ನಾಯು ಸೆಳೆತದಿಂದಾಗಿ ರಾಹುಲ್ ಅಭ್ಯಾಸದಿಂದ ಹೊರಗುಳಿದಿದ್ದು, ಚೇತರಿಸಿಕೊಳ್ಳದ ಹಿನ್ನೆಲೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯಿಂದ … Continued

ವೈರಲ್ ವಿಡಿಯೋ: ವಾರಾಣಸಿ ಘಾಟ್‌ನಲ್ಲಿ ಭಿಕ್ಷೆ ಬೇಡುವ ನಿರರ್ಗಳ ಇಂಗ್ಲಿಷ್ ಮಾತಾಡುವ ಮಹಿಳೆ, ಈಕೆ ಕಂಪ್ಯೂಟರ್ ಪದವಿಧರೆ…ಕತೆ ಕೇಳಿದ್ರೆ ಮನಕಲಕುತ್ತದೆ

ವಾರಾಣಸಿ: ವಾರಾಣಸಿಯ ಘಾಟ್‌ಗಳ ಮೇಲೆ ವಾಸಿಸುವ ಮಹಿಳೆಯೊಬ್ಬರು ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಸ್ವಾತಿ ಎಂದು ಗುರುತಿಸಲಾದ ಮಹಿಳೆ ವಾರಣಾಸಿಯ ಅಸ್ಸಿ ಘಾಟ್‌ನಲ್ಲಿ ಭಿಕ್ಷೆ ಬೇಡುತ್ತಿದ್ದಳು. ಈ ವಿಡಿಯೋವನ್ನು ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ವಿದ್ಯಾರ್ಥಿನಿ ಶಾರದಾ ಅವನೀಶ್ ತ್ರಿಪಾಠಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಕ್ಲಿಪ್‌ನಲ್ಲಿ ಸ್ವಾತಿ ತಾನು ದಕ್ಷಿಣ ಭಾರತದವಳು ಎಂದು … Continued

ಕಾಂಗ್ರೆಸ್ ನಾಯಕರಾದ ಕೀರ್ತಿ ಆಜಾದ್, ಅಶೋಕ್ ತನ್ವರ್ ಟಿಎಂಸಿಗೆ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ನಾಯಕರಾದ ಕೀರ್ತಿ ಆಜಾದ್ ಮತ್ತು ಅಶೋಕ್ ತನ್ವರ್ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಸೇರ್ಪಡೆಗೊಂಡಿದ್ದಾರೆ. ಆಜಾದ್ (62) ಅವರನ್ನು ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನವದೆಹಲಿಯ ಅವರ ಅಧಿಕೃತ ನಿವಾಸದಲ್ಲಿ ಟಿಎಂಸಿಗೆ ಸ್ವಾಗತಿಸಿದರು. ಟಿಎಂಸಿಗೆ ಸೇರ್ಪಡೆಗೊಂಡ ನಂತರ, ಕೀರ್ತಿ ಆಜಾದ್, ಬಿಜೆಪಿ ವಿಭಜಕ ರಾಜಕೀಯ ಮಾಡುತ್ತಿದೆ … Continued

ಸಂಸತ್ ಅಧಿವೇಶನ; ನವೆಂಬರ್‌ 28ರಂದು ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಭಾನುವಾರ (ನವೆಂಬರ್ 28) ಸರ್ವಪಕ್ಷ ಸಭೆ ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.. ನವೆಂಬರ್ ೨೯ ರಿಂದ ಡಿಸೆಂಬರ್ ೨೩ ತನಕ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದ್ದು ಸುಗಮ ಕಲಾಪ ನಡೆಯಲು ಸಹಕಾರ ನೀಡುವಂತೆ ಸರ್ವ ಪಕ್ಷಗಳ ನಾಯಕರಿಗೆ ಮೋದಿ … Continued