ಪರಮ್ ಬೀರ್ ಸಿಂಗ್ ‘ಘೋಷಿತ ಅಪರಾಧಿ’ ಎಂದು ಘೋಷಿಸಲು ಮುಂಬೈ ನ್ಯಾಯಾಲಯ ಅನುಮತಿ

ಮುಂಬೈ: ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ‘ಘೋಷಿತ ಅಪರಾಧಿ’ ಎಂದು ಮುಂಬೈ ಕೋರ್ಟ್ ಬುಧವಾರ ಘೋಷಿಸಿದೆ. ತಲೆಮರೆಸಿಕೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ವಿರುದ್ಧ ಈಗಾಗಲೇ ಮೂರು ಬಾರಿ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದ್ದ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ ಈಗ ಪೊಲೀಸ್ ಅಧಿಕಾರಿ ಘೋಷಿತ … Continued

ಕನಸಿನಲ್ಲಿ ಕಾಣಿಸಿಕೊಳ್ಳುವ ದೆವ್ವಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ..!

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ದೆವ್ವಕ್ಕೆ ಹೆದರಿ ತಮ್ಮ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯ ಪೆರುಂಬಕ್ಕಂನ ಪ್ರಭಾಕರನ್ (33) ಅವರ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಶವವಾಗಿ ಪತ್ತೆಯಾದವರು ಎಂದು ಗುರುತಿಸಲಾಗಿದೆ. ಕಡಲೂರು ಸಶಸ್ತ್ರ ಪೊಲೀಸ್‌ನಲ್ಲಿ ಮೊದಲ ಕಾನ್‌ಸ್ಟೆಬಲ್ ಆಗಿ ಸೇವೆ ಸಲ್ಲಿಸಿದ ಪ್ರಭಾಕರನ್ … Continued

ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಐವರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರನ್ನು ಒಳಗೊಂಡ ಜಂಟಿ ಪಡೆ ಬುಧವಾರ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಪೊಂಬೆ ಮತ್ತು ಗೋಪಾಲ್ಪೋರಾ ಪ್ರದೇಶಗಳಲ್ಲಿ ಭಯೋತ್ಪಾದಕರನ್ನು ಕೊಲ್ಲಲಾಯಿತು.ಗೋಪಾಲ್‌ಪೋರಾ ಎನ್‌ಕೌಂಟರ್‌ನಲ್ಲಿ ಉಗ್ರಗಾಮಿ ಸಂಘಟನೆ ‘ದಿ … Continued

ಮುಂಬೈ: ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದತಿ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ರಾಹುಲ್ ಗಾಂಧಿ

ಮುಂಬೈ: ಬಿಜೆಪಿ ನಾಯಕರೊಬ್ಬರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ಖುದ್ದು ಹಾಜರಾಗುವಂತೆ ಮುಂಬೈ ನ್ಯಾಯಾಲಯವೊಂದು ನೀಡಿರುವ ಸಮನ್ಸ್ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬಿಜೆಪಿಯ ಮಹೇಶ್ ಹುಕುಮ್‌ಚಂದ್ ಶ್ರೀಶ್ರೀಮಲ್ ಅವರು ರಾಹುಲ್‌ ವಿರುದ್ಧ ಹೂಡಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ 2019ರ ಆಗಸ್ಟ್ 2ರಂದು ಗಿರ್ಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಚಾರಣೆ … Continued

ಸೌರವ್ ಗಂಗೂಲಿ ಐಸಿಸಿ ಪುರುಷರ ಕ್ರಿಕೆಟ್ ಸಮಿತಿ ನೂತನ ಅಧ್ಯಕ್ಷ

ಮುಂಬೈ : ಬಿಸಿಸಿಐ ಅಧ್ಯಕ್ಷ ಹಾಗೂ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಐಸಿಸಿ ಪುರುಷರ ಕ್ರಿಕೆಟ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಭಾರತ ತಂಡ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರ ನಂತರ ಗಂಗೂಲಿ ಐಸಿಸಿ ಪುರುಷರ ಕ್ರಿಕೆಟ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಿದ್ದಾರೆ. ಈ ಕುರಿತು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ … Continued

ಶಬರಿಮಲೆ ದರ್ಶನಕ್ಕೆ ಬರೋಬ್ಬರಿ 13 ಲಕ್ಷ ಭಕ್ತರಿಂದ ನೋಂದಣಿ

ಶಬರಿಮಲೆ : ಶಬರಿಮಲೆ ಶ್ರೀ ಅಯ್ಯಪ್ಪನ ದರ್ಶನಕ್ಕೆ ಮಂಡಲ ಮರಕವಿಳಕ್ಕು ಯಾತ್ರೆ ಆರಂಭಗೊಂಡಿದೆ. ಈ ಬಾರಿ ಅಯ್ಯಪ್ಪನ ದರ್ಶನಕ್ಕೆ ಬರೋಬ್ಬರಿ 13 ಲಕ್ಷ ಭಕ್ತರು ನೋಂದಣಿ ಮಾಡಿಕೊಂಡಿದ್ದಾರೆ. ಆದರೆ ಯಾತ್ರೆಗೆ ಮಳೆಯ ಭೀತಿ ಎದುರಾಗಿದ್ದು, ಈ ಬಗ್ಗೆ ಆತಂಕ ಬೇಡ ಎಂದು ಕೇರಳ ಸರ್ಕಾರ ಹೇಳಿದೆ. ಶಬರಿಮಲೆಯಲ್ಲಿ ಸಭೆ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳ … Continued

ಅಹಿಂಸೆಯಿಂದ ಮಾತ್ರ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂಬುದು ಸರಿಯಲ್ಲ, ಸಿಕ್ಕಿಲ್ಲ ಎಂಬುದೂ ಸರಿಯಲ್ಲ: ನೇತಾಜಿ ಪುತ್ರಿ ಅನಿತಾ ಬೋಸ್‌

ನವದೆಹಲಿ: ಅಹಿಂಸೆಯಿಂದ ಮಾತ್ರ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳುವುದು ಸರಿಯಲ್ಲ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನೇತೃತ್ವದ ಭಾರತೀಯ ರಾಷ್ಟ್ರೀಯ ಸೇನೆಯ ಪಾತ್ರವೂ ಸಾಕಷ್ಟಿದೆ, ಹಾಗೆಯೇ ಮಹಾತ್ಮಾ ಗಾಂಧಿ ಅವರ ಪಾತ್ರರವೂ ಸಾಕಷ್ಟಿದೆ ಎಂದು ನೇತಾಜಿ ಅವರ ಪುತ್ರಿ ಅನಿತಾ ಬೋಸ್ ಹೇಳಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ನಿಯಂತ್ರಿಸುವುದು ಕಷ್ಟ … Continued

ಇದು ಅಪರೂಪದಲ್ಲಿ ಅಪರೂಪದ ಘಟನೆ..:ಮುಂಬೈನಲ್ಲಿ ಚರಂಡಿಯಲ್ಲಿದ್ದ ನವಜಾತ ಶಿಶುವನ್ನು ರಕ್ಷಿಸಿದ ಬೆಕ್ಕುಗಳು..!

ಮುಂಬೈ: ಒಂದು ಅಪರೂಪದ ವಿದ್ಯಮಾನದಲ್ಲಿ ಮುಂಬೈನಲ್ಲಿ ಬೆಕ್ಕುಗಳು ನವಜಾತ ಶಿಶುವನ್ನು ಉಳಿಸಿದ ವಿಶಿಷ್ಟ ಘಟನೆ ವರದಿಯಾಗಿದೆ. ಮುಂಬೈನ ಪಂತ ನಗರದಲ್ಲಿ ನೀರು ಹರಿಯುವ ಚರಂಡಿಯಲ್ಲಿತ್ತು. ಬೆಕ್ಕುಗಳು ಮೊದಲು ಅವನನ್ನು ನೋಡಿದವು ಮತ್ತು ಈ ಬೆಕ್ಕುಗಳು ವಿಶಿಷ್ಟ ಧ್ವನಿಗಳನ್ನು ಹೊರಡಿಸುವ ಮೂಲಕ ಸುತ್ತಲಿನ ಜನರನ್ನು ಎಚ್ಚರಿಸಿದವು. ಈ ಬೆಕ್ಕುಗಳ ವಿಚಿತ್ರ ಧ್ವನಿ ಕೇಳಿದ ಜನರು ಕುತೂಹಲದಿಂದ ಅಲ್ಲಿಗೆ … Continued

ಲೈಂಗಿಕ ಕಿರುಕುಳ : ವಿದ್ಯಾರ್ಥಿನಿ ಆತ್ಮಹತ್ಯೆ, ಶಿಕ್ಷಕನ ಬಂಧನ

ಚೆನ್ನೈ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕೊಯಮತ್ತೂರಿನಲ್ಲಿ 31 ವರ್ಷದ ಭೌತಶಾಸ್ತ್ರ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರಿನ ಶಾಲೆಯಲ್ಲಿ ಭೌತಶಾಸ್ತ್ರದ ಶಿಕ್ಷಕರೊಬ್ಬರು 12ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಅದು ಅಲ್ಲದೇ ಬಾಲಕಿಯ ದೂರಿನ ಮೇರೆಗೆ … Continued

ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ಕೊಡು ಎನ್ನುವುದು ಭಿಕ್ಷೆ: ಮಹಾತ್ಮಾ ಗಾಂಧಿ ಲೇವಡಿ ಮಾಡಿದ ಕಂಗನಾ

ಮಂಗಳವಾರ ನಟಿ ಕಂಗನಾ ರಣಾವತ್ ಅವರು ಮತ್ತೊಮ್ಮೆ ವಿವಾದಿತ ಹೇಳಿಕೆ ನೀಡಿದ್ದಾರೆ. ಈಗ ಅವರು ರಾಷ್ಟ್ರಪತಿ ಮಹಾತ್ಮಾ ಗಾಂಧಿ ಅವರನ್ನು ಗುರಇಯಾಗಿಸಿಕೊಂಡಿದ್ದಾರೆ. ಸುಭಾಷ್ ಚಂದ್ರ ಬೋಸ್ ಮತ್ತು ಭಗತ್ ಸಿಂಗ್ ಅವರಿಗೆ ಮಹಾತ್ಮ ಗಾಂಧಿ ಅವರಿಂದ ಯಾವುದೇ ಬೆಂಬಲ ಸಿಗಲಿಲ್ಲ ಎಂದು ಹೇಳಿದ್ದಾರೆ ಮತ್ತು ಅಲ್ಲದೆ, ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ಕೊಡು ಎನ್ನುವುದು … Continued