ಸೂಪರ್‌ ಸ್ಟಾರ್‌ ರಜನೀಕಾಂತಗೆ ಕ್ಯಾರೋಟಿಡ್ ಎಂಡಾರೆಕ್ಟಮಿ ಚಿಕಿತ್ಸೆ

ಚೆನ್ನೈ : ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದು ಸೂಪರ್‌ ಸ್ಟಾರ್‌ ರಜನೀಕಾಂತ ಅಕ್ಟೋಬರ್ 29, ಶುಕ್ರವಾರದಂದು ಶೀರ್ಷಧಮನಿ ರಿವಾಸ್ಕುಲಲೈಸೇಶನ್‌ (carotid artery revascularization) ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಚೆನ್ನೈನ ಕಾವೇರಿ ಆಸ್ಪತ್ರೆ ತಿಳಿಸಿದೆ. ಕೆಲವು ದಿನಗಳ ನಂತರ ರಜನಿಕಾಂತ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಆಸ್ಪತ್ರೆಯು ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ರಜನಿಕಾಂತ್ … Continued

ಅರುಣಾಚಲ ಪ್ರದೇಶದ ಚೀನಾ ಗಡಿಯಲ್ಲಿ ಸಂಪೂರ್ಣ ಕಪ್ಪುಬಣ್ಣಕ್ಕೆ ತಿರುಗಿದ ನದಿ; ಲಕ್ಷಾಂತರ ಮೀನುಗಳು ಸಾವು

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ನದಿಯೇ ಪೂರ್ತಿ ಕಪ್ಪುಬಣ್ಣಕ್ಕೆ ತಿರುಗಿದ್ದು ಆತಂಕಕ್ಕೆ ಕಾರಣವಾಗಿದೆ. ಇದು ಕಪ್ಪು ಬಣ್ಣಕ್ಕೆ ತಿರುಗುತ್ತಿದ್ದಂತೆ ಲಕ್ಷಾಂತರ ಮೀನುಗಳು ಮೃತಪಟ್ಟಿವೆ. ಈ ನದಿಯಲ್ಲಿ ಮೀನು ಹಿಡಿದು ತಿನ್ನಬೇಡಿ.. ನದಿ ನೀರು ಕುಡಿಯಬೇಡಿ ಎಂದು ಸ್ಥಳೀಯರಿಗೆ ಅಧಿಕಾರಿಗಳು ಸೂಚಿಸಿದ್ದಾರೆ. ಈ ನದಿ ನೀರು ಹೀಗಾಗಲು ಇದರಲ್ಲಿ ಭಾರೀ ಪ್ರಮಾಣದ ವಿಷಯುಕ್ತ ಅಂಶ ಕರಗಿದ್ದು (ಟಿಡಿಎಸ್​) ಕಾರಣ … Continued

ಮೊದಲ ಬಾರಿಗೆ ಪೋಪ್ ಫ್ರಾನ್ಸಿಸ್ ಭೇಟಿ ಮಾಡಿದ ಪ್ರಧಾನಿ ಮೋದಿ: 20 ನಿಮಿಷ ನಿಗದಿಯಾದ ಮಾತುಕತೆ 1 ಗಂಟೆ ವಿಸ್ತರಣೆ..!

ನವದೆಹಲಿ: ಜಿ-20 ಶೃಂಗಸಭೆಗಾಗಿ ರೋಮ್ ಭೇಟಿಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದರು. ಪೋಪ್ ಫ್ರಾನ್ಸಿಸ್ ಅವರೊಂದಿಗೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದೆ. ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವುದು ಮತ್ತು ಬಡತನವನ್ನು ತೊಡೆದುಹಾಕುವುದು ಸೇರಿದಂತೆ ಜನಜೀವನವನ್ನು ಉತ್ತಮಗೊಳಿಸುವ ಗುರಿಯನ್ನು ಹೊಂದಿರುವ ವ್ಯಾಪಕ ವಿಷಯಗಳ ಕುರಿತು ಪ್ರಧಾನಿ ಮೋದಿ ಮತ್ತು … Continued

ಡ್ರಗ್ಸ್‌ ಪ್ರಕರಣ: ಇಂದು ಜೈಲಿನಿಂದ ಬಿಡುಗಡೆಯಾದ ಆರ್ಯನ್​ ಖಾನ್

ಮುಂಬೈ: ಮುಂಬೈ ಕ್ರೂಸ್‌ ಡ್ರಗ್ಸ್​ ಪ್ರಕರಣದಲ್ಲಿ ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದು ಜೈಲು ಸೇರಿದ್ದ ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್​ ಖಾನ್​ ಜಾಮೀನು ಪಡೆದು ಇಂದು (ಶನಿವಾರ( ಹೊರಬಂದಿದ್ದಾರೆ. ಬಾಂಬೆ ಹೈಕೋರ್ಟ್​ ಗುರುವಾರವೇ (ಅ.28) ಆರ್ಯನ್‌​ ಖಾನಗೆ​ ಪುತ್ರನಿಗೆ ಜಾಮೀನು ನೀಡಿತ್ತು. ಅದಕ್ಕೆ ಸಂಬಂಧಿಸಿದಂತೆ ಜೈಲಿನ ಕೆಲವು ಪ್ರಕ್ರಿಯೆಗಳು ಇಂದು ಮುಗಿದ ನಂತರ … Continued

ಭಾರತದಲ್ಲಿ 14,313 ಹೊಸ ಕೋವಿಡ್ ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,313 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ನಿನ್ನೆಗಿಂತ ಶೇಕಡಾ 0.2 ರಷ್ಟು ಇಳಿಕೆಯಾಗಿದೆ. ಏತನ್ಮಧ್ಯೆ, ಭಾರತದ ಒಟ್ಟು ಸಂಖ್ಯೆ 3,42,60,470ಕ್ಕೆ ತಲುಪಿದೆ. ಇದೇ ಸಮಯದಲ್ಲಿ ದೇಶವು 549 ಹೊಸ ಸಾವುಗಳನ್ನು ವರದಿ ಮಾಡಿದ್ದು, ಒಟ್ಟು ವರದಿಯಾದ ಸಾವಿನ ಸಂಖ್ಯೆಯನ್ನು 4,57,740 ಕ್ಕೆ ತರುತ್ತದೆ. ಕಳೆದ 24 ಗಂಟೆಗಳಲ್ಲಿ ಒಟ್ಟು … Continued

ಇದೆಂಥ ಶಿಕ್ಷೆ.. ಬಾಲ್ಕನಿಯಲ್ಲಿ ಆರು ವರ್ಷದ ಮಗುವನ್ನು ತಲೆಕೆಳಗಾಗಿ ನೇತು ಹಾಕಿದ ಶಾಲೆ ಪ್ರಾಂಶುಪಾಲ..! ವೀಕ್ಷಿಸಿ

ಲಕ್ನೋ: ಗೋಲ್ ಗಪ್ಪಾಸ್ ತಿಂದಿದ್ದಕ್ಕಾಗಿ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರು ಆರು ವರ್ಷದ ವಿದ್ಯಾರ್ಥಿಯನ್ನು ಕಟ್ಟಡದ ಮೊದಲ ಮಹಡಿಯಿಂದ ತಲೆಕೆಳಗಾಗಿ ನೇತಾಡಿಸಿ ಶೀಕ್ಷೆ ನೀಡಿದ ವಿಡಿಯೋ ವೈರಲ್‌ ಆದ ನಂತರ ಅವರನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುರುವಾರ ಸಂಭವಿಸಿದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ … Continued

ಇಟಲಿಯಲ್ಲಿ ಪ್ರಧಾನಿ ಮೋದಿಗೆ ಸಂಸ್ಕೃತ ಮಂತ್ರ ಪಠಿಸಿ ಸ್ವಾಗತ

ನವದೆಹಲಿ: ಜಿ-20 ಶೃಂಗಸಭೆ ಮತ್ತು 26ನೇ ಕಾನ್ಫರೆನ್ಸ್ ಆಫ್ ಪಾರ್ಟೀಸ್‌ನಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಟಲಿಯನ್ನು ತಲುಪಿದ್ದಾರೆ. ಅಲ್ಲಿ ಅವರಿಗೆ ಸಂಸ್ಕೃತ ಮಂತ್ರಗಳನ್ನು ಪಠಿಸುವ ಮೂಲಕ ಅವರ ಅಭಿಮಾನಿಗಳು ಸ್ವಾಗತ ಕೋರಿದ್ದಾರೆ. ವಿಶೇಷ ವಿಮಾನದ ಮೂಲಕ ಇಟಲಿಗೆ ತೆರಳಿರುವ ಪ್ರಧಾನಿ ಮೋದಿ, ರೋಮ್‌ನಲ್ಲಿ ನಡೆಯಲಿರುವ 16ನೇ ಜಿ-20 ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಟಲಿ … Continued

ಮೋದಿ ಸರ್‌ನೇಮ್‌ ಕುರಿತು ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಪ್ರಕರಣ: ರಾಹುಲ್‌ ಕೋರ್ಟ್‌ಗೆ ಹಾಜರ್‌

ನವದೆಹಲಿ: 2019ರ ಚುನಾವಣಾ ರ‍್ಯಾಲಿ ಸಂದರ್ಭದಲ್ಲಿ ಮೋದಿ ಸರ್​ನೇಮ್​ ಕುರಿತಾಗಿ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸೂರತ್​ನ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾದರು. ರಾಹುಲ್​ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಇವರ ವಿರುದ್ಧ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ಮಾನನಷ್ಟ ಪ್ರಕರಣ ದಾಖಲು ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಸೂರತ್​ನ ಮ್ಯಾಜಿಸ್ಟ್ರೇಟ್ … Continued

ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಗೆ ಜಾಮೀನು ಸಿಕ್ಕರೂ ಇಂದು ಬಿಡುಗಡೆ ಇಲ್ಲ

ಮುಂಬೈ: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್​ ಖಾನ್​ ಅವರಿಗೆ ಗುರುವಾರ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದರೂ ಶುಕ್ರವಾರ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ಆರ್ಯನ್ ಖಾನ್ ಮತ್ತೊಂದು ರಾತ್ರಿ ಜೈಲಿನಲ್ಲಿಯೇ ಕಳೆಯಬೇಕಾಗಿದೆ. ಆರ್ಥರ್ ರೋಡ್ ಜೈಲಿನ ಅಧಿಕಾರಿಗಳ … Continued

ಬದುಕಿನ ಪಯಣ ಮುಗಿಸಿದ ಎಲ್ಲರ ಪ್ರೀತಿಯ ಅಪ್ಪು.. ಬಾಲದಲ್ಲೇ ನಟನೆಗೆ ರಾಷ್ಟ್ರ ಪ್ರಶಸ್ತಿ..ಸಿನೆಮಾ ಸಂಭಾವನೆ ಒಂದು ಭಾಗ ಅನಾಥಾಶ್ರಮ, ಗೋಶಾಲೆಗಳಿಗೆ

ಬೆಂಗಳೂರು: ಸ್ಯಾಂಡಲ್​ವುಡ್​ನ ಪವರ್​ ಸ್ಟಾರ್ ಎಂದು ಕರೆಸಿಕೊಳ್ಳುವ ನಟ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳಿಗೆ ಪ್ರೀತಿಯ ಅಪ್ಪು. 46 ವರ್ಷದ ನಟನಿಗೆ ಇಂದು ಬೆಳಿಗ್ಗೆ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆ ನೋವು ಕಾಣಿಸಿಕೊಂಡಿತ್ತು. ಬೆಳಿಗ್ಗೆ 11:30ಕ್ಕೆ ಪುನೀತ್​ ಅವರಿಗೆ ಹೃದಯಾಘಾತವಾಗಿದ್ದು, ಮೊದಲು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿ ಇಸಿಜಿ ಮಾಡಿದ ನಂತರ ಅವರನ್ನು ತಕ್ಷಣವೇ … Continued