ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ ಮೊಮ್ಮಗ ಸರ್ಕಾರಿ ಹುದ್ದೆಯಿಂದ ವಜಾ

ಶ್ರೀನಗರ: ಪ್ರತ್ಯೇಕತಾವಾದಿ ನಾಯಕ ಮತ್ತು ಹುರಿಯತ್ ಅಧ್ಯಕ್ಷ ಸಯ್ಯದ್ ಅಲಿ ಗಿಲಾನಿ ನಿಧನರಾದ ಒಂದು ತಿಂಗಳ ನಂತರ, ಅವರ ಮೊಮ್ಮಗ ಅನೀಸ್-ಉಲ್-ಇಸ್ಲಾಂ ಅವರನ್ನು ಶನಿವಾರ ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ. ಶೇರ್-ಇ-ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರ್(SKICC) ನಲ್ಲಿ ಸಂಶೋಧನಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಅನೀಸ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ಆಡಳಿತ ವಜಾಗೊಳಿಸಿದೆ. ದೋಡಾದ ಶಿಕ್ಷಕನನ್ನು ಕೂಡ ಸರ್ಕಾರ … Continued

12ನೇ ತರಗತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿ, ಒದ್ದ ಶಿಕ್ಷಕನ ಬಂಧನ

ಚೆನ್ನೈ: 12ನೇ ತರಗತಿ ವಿದ್ಯಾರ್ಥಿಗೆ ಥಳಿಸಿದ ಹಾಗೂ ಒದ್ದ ಇಲ್ಲಿನ ಕಡಲೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕನನ್ನು ಬಂಧಿಸಲಾಗಿದೆ. ಈ ಶಿಕ್ಷಕ ವಿದ್ಯಾರ್ಥಿಗೆ ಥಳಿಸಿದ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆದ ಬೆನ್ನಲ್ಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬಂಧಿತ ಶಿಕ್ಷಕನನ್ನು ಎಂ.ಸುಬ್ರಹ್ಮಣಿಯನ್​ (56) ಎಂದು ಗುರುತಿಸಲಾಗಿದೆ. ಚಿದಂಬರಂನಲ್ಲಿರುವ ನಂದನಾರ್​ … Continued

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಎಸ್ಪಿ, ಬಿಎಸ್ಪಿ ಜಿಲ್ಲಾಧ್ಯಕ್ಷರು ಸೇರಿ ಏಳು ಮಂದಿ ಬಂಧನ

ಲಕ್ನೋ: ಲಲಿತ್ ಪುರದಲ್ಲಿ 17 ವರ್ಷದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರು ಸೇರಿದಂತೆ ಇಲ್ಲಿಯವರೆಗೂ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಗರದ ವಿವಿಧ ಕಡೆಗಳಲ್ಲಿ ಐದು ವರ್ಷ ತಮ್ಮ ಮೇಲೆ ಅತ್ಯಾಚಾರವಾಗಿರುವುದಾಗಿ ಯುವತಿ ನೀಡಿದ ದೂರಿನ ಆಧಾರದ ಮೇಲೆ ಇವರನ್ನು … Continued

ಕೇರಳದಲ್ಲಿ ಭೀಕರ ಪ್ರವಾಹ; 18 ಜನರು ಸಾವು, ಅನೇಕರು ನಾಪತ್ತೆ, ಮುಳುಗಿದ ಬಸ್ಸಿನಿಂದ ಹೊರಬರಲು ಜನರ ಹರಸಾಹಸ.. ವಿಡಿಯೋ ವೀಕ್ಷಿಸಿ

ತಿರುವನಂತರಪುರಂ: ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಮತ್ತು ಭೂಕುಸಿತ ಉಂಟಾಗಿ ಕನಿಷ್ಠ 18 ಜನರು ಮೃತಪಟ್ಟಿದ್ದಾರೆ ಮತ್ತು ಹತ್ತಾರು ಮಂದಿ ನಾಪತ್ತೆಯಾಗಿದ್ದಾರೆ. 11 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF), ಎರಡು ಸೇನೆ ಮತ್ತು ಎರಡು ರಕ್ಷಣಾ ಸೇವಾ ದಳ (DSC) ತಂಡಗಳನ್ನು ಒಳಗೊಂಡಂತೆ ಕೇಂದ್ರ ಪಡೆಗಳನ್ನು ರಾಜ್ಯದ ದಕ್ಷಿಣ ಮತ್ತು ಮಧ್ಯ … Continued

ಮೊಬೈಲ್ ಕೊಡದ್ದಕ್ಕೆ ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ..!

ಮುಂಬೈ: ಕೆಲವು ಘಟನೆಗಳು ನಮ್ಮನ್ನು ಅಚ್ಚರಿಗೆ ತಳ್ಳುತ್ತವೆ. ಆ ರೀತಿಯ ವಿಚಿತ್ರವಾದ ಘಟನೆಯೊಂದು ಮಹಾರಾಷ್ಟ್ರದ ಭಾಂದರದ ಮಸಲ್​ನಲ್ಲಿ ಗಂಡ ತನ್ನ ಮೊಬೈಲ್​ ಅನ್ನು ವಾಪಸ್ ಕೊಡಲಿಲ್ಲ ಎಂಬ ಕೋಪಕ್ಕೆ ಹೆಂಡತಿ ತನ್ನ ಗಂಡನ ತುಟಿಯನ್ನೇ ಕತ್ತರಿಸಿದ್ದಾಳೆ! ಮಸಲ್​ನಲ್ಲಿ 40 ವರ್ಷದ ಖೇಮ್​ರಾಜ್ ಬಾಬೂರಾವ್ ಮುಲ್ ಎಂಬ ವ್ಯಕ್ತಿ ಭಾಂದರದಲ್ಲಿ ವಾಸವಾಗಿದ್ದರು. ತನ್ನ ಮೊಬೈಲ್ ಹಾಳಾಗಿದ್ದರಿಂದ ಮನೆಯಲ್ಲಿದ್ದಾಗ … Continued

ಕಾಶ್ಮೀರದಲ್ಲಿ ಬೀದಿ ವ್ಯಾಪಾರಿ, ಬಡಗಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಕಾಶ್ಮೀರದಲ್ಲಿ ಇಬ್ಬರು ಬೀದಿ ವ್ಯಾಪಾರಿಗಳಿಗೆ ಗುಂಡಿಕ್ಕಿದ ಭಯೋತ್ಪಾದಕರು: ಒಬ್ಬ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ ಶ್ರೀನಗರ: ಕಣಿವೆಯಲ್ಲಿ ನಡೆಯುತ್ತಿರುವ ನಾಗರಿಕ ಹತ್ಯೆಗಳ ಮಧ್ಯಯೇ ಶನಿವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಈದ್ಗಾ ಬಳಿ ಒಬ್ಬ ಬೀದಿ ವ್ಯಾಪಾರಿ ಹಾಗೂ ಪುಲ್ವಾಮದಲ್ಲಿ ಬಡಗಿ ಕೆಲಸ ಮಾಡುತ್ತಿದ್ದ ಮತ್ತೊಬ್ಬನನ್ನು ಅಪರಿಚಿತ ಭಯೋತ್ಪಾದಕರು ಹತ್ಯೆಗೈದಿದ್ದಾರೆ. ಬಿಹಾರದ ಬಂಕಾ ಜಿಲ್ಲೆಯ … Continued

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ಡೆಂಗ್ಯೂ: ಏಮ್ಸ್‌

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌)ಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಮನಮೋಹನ್‌ ಸಿಂಗ್‌ ಅವರ ರಕ್ತದ ಪ್ಲೇಟ್ಲೆಟ್ಸ್ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೃದ್ರೋಗ … Continued

ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷನಾಗುವ ಬಗ್ಗೆ ಯೋಚಿಸುತ್ತೇನೆ : ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಬಳಿಕ ರಾಹುಲ್ ಗಾಂಧಿ

ನವದೆಹಲಿ: ತಾನು ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಕುರಿತು ಯೋಚಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು (ಶನಿವಾರ) ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಿರಿಯ ನಾಯಕರು ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷ ಹುದ್ದೆ ಒಪ್ಪಿಕೊಳ್ಳುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ … Continued

ಕೇರಳ: ಭಾರಿ ಮಳೆಗೆ ಭೂ ಕುಸಿತದಿಂದ 3 ಸಾವು, 10 ಮಂದಿ ನಾಪತ್ತೆ, 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆ ಮುಂದುವರೆದಿದ್ದು, ರಾಜ್ಯದ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಸಂಬಂಧಿತ ಭೂ ಕುಸಿತದಲ್ಲಿ ಮೂರು ಮಂದಿ ಮೃತಪಟ್ಟಿದ್ದು 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, … Continued

ವಿಚಿತ್ರವಾದರೂ ಸತ್ಯ: ಕೋವಿಡ್‌ ಲಸಿಕೆ ನೀಡಲು ಮನೆಗೆ ಬಂದ ಆರೋಗ್ಯ ಸಿಬ್ಬಂದಿಗೆ ನಾಗರ ಹಾವು ತೋರಿಸಿ ಹೆದರಿಸಿದ ಮಹಿಳೆ..! ವೀಕ್ಷಿಸಿ

ಅಜ್ಮೇರ್‌: ದೇಶದಲ್ಲಿ ಕೊವಿಡ್​ 19 ಲಸಿಕೆ ಅಭಿಯಾನ (Covid 19 Vaccination) ಅತ್ಯಂತ ವೇಗವಾಗಿ, ಯಶಸ್ವಿಯಾಗಿ ನಡೆಯುತ್ತಿದೆ. ಆದರೂ ಕೆಲವು ಪ್ರದೇಶಗಳ ಜನರು ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಅವರ ಮನವೊಲಿಸಿ ಕೊರೊನಾ ಲಸಿಕೆ ಹಾಕುವುದು ಆರೋಗ್ಯ ಸಿಬ್ಬಂದಿ, ಸ್ಥಳೀಯ ಆಡಳಿತಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಲವೊಮ್ಮೆ ಆರೋಗ್ಯ ಸಿಬ್ಬಂದಿಗೆ ಬೆದರಿಕೆ ಹಾಕಿದ , ಹಲ್ಲೆ … Continued