ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ : ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಇದನ್ನು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ ವಲ್ಲಭ ಅವರು, ಪಕ್ಷವು ‘ದಿಕ್ಕಿಲ್ಲದೆ’ ಸಾಗುತ್ತಿದೆ ಎಂದು ಕರೆದಿದ್ದಾರೆ ಮತ್ತು ತಮ್ಮ ನಿರ್ಗಮನಕ್ಕೆ ಜಾತಿ ಗಣತಿಯಂತಹ … Continued

ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್‌

ನವದೆಹಲಿ: ‘ಅಶಿಸ್ತು’ ಮತ್ತು ‘ಪಕ್ಷ ವಿರೋಧಿ ಹೇಳಿಕೆ’ಗಾಗಿ ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಕಾಂಗ್ರೆಸ್ ಬುಧವಾರ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಅಶಿಸ್ತು ಮತ್ತು ಪಕ್ಷ ವಿರೋಧಿ ಹೇಳಿಕೆಗಳ ದೂರುಗಳನ್ನು ಗಮನಿಸಿ ಕಾಂಗ್ರೆಸ್ ಅಧ್ಯಕ್ಷರು ಸಂಜಯ ನಿರುಪಮ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು … Continued

ಫೋರ್ಬ್ಸ್ ಶ್ರೀಮಂತರ ಪಟ್ಟಿ 2024 : ಭಾರತದಿಂದ 25 ಹೊಸ ಬಿಲಿಯನೇರ್‌ ಗಳು ಪಟ್ಟಿಗೆ ಸೇರ್ಪಡೆ ; ಮುಖೇಶ ಅಂಬಾನಿಗೆ ಅಗ್ರಸ್ಥಾನ

ನವದೆಹಲಿ: ಇತ್ತೀಚಿನ ‘ಫೋರ್ಬ್ಸ್ ವರ್ಲ್ಡ್ಸ್ ಬಿಲಿಯನೇರ್‌ (ಶತಕೋಟ್ಯಧಿಪತಿಗಳ)ಗಳ ಪಟ್ಟಿ 2024’ ಪ್ರಕಾರ, ಈ ವರ್ಷ ಭಾರತದ 25 ಶತಕೋಟ್ಯಧಿಪತಿಗಳು ಹೊಸದಾಗಿ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಕಳೆದ ವರ್ಷ ಹೋಲಿಸಿದರೆ ಈ ವರ್ಷ ದೇಶದಲ್ಲಿ ಒಟ್ಟು ಶತಕೋಟ್ಯಾಧಿಪತಿಗಳ ಸಂಖ್ಯೆ 200 ಕ್ಕೆ ಹೆಚ್ಚಾಗಿದೆ. ಈ ಭಾರತೀಯರ ಒಟ್ಟು ಸಂಪತ್ತು $ 954 ಶತಕೋಟಿಯಷ್ಟಿದೆ, ಇದು ಕಳೆದ ವರ್ಷ … Continued

ವಯನಾಡ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಆಗಮಿಸಿ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಬುಧವಾರ (ಏಪ್ರಿಲ್‌ ೩) … Continued

ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸುಮಲತಾ ಘೋಷಣೆ ; ಮುಂದಿನ ನಡೆ ಬಗ್ಗೆ ಹೇಳಿದ್ದೇನು..?

ಮಂಡ್ಯ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಘೋಷಣೆ ಮಾಡಿದ್ದಾರೆ. ಹಾಗೂ ಇದೇ ವೇಳೆ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ. ಮೈತ್ರಿ ಧರ್ಮ ಪಾಲನೆಗೆ ಮುಂದಾಗಿರುವ ಸುಮಲತಾ ಅಂಬರೀಶ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯದಲ್ಲಿ ಬುಧವಾರ … Continued

8 ಗಂಟೆಗಳ ಕಾಲ ನಡೆದ ಎನ್‌ಕೌಂಟರ್‌ನಲ್ಲಿ 13 ಮಾವೋವಾದಿಗಳ ಹತ್ಯೆ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ ಎಂಟು ಗಂಟೆಗಳ ಕಾಲ ನಡೆದ ಭದ್ರತಾ ಎನ್‌ಕೌಂಟರ್‌ನಲ್ಲಿ ಹತರಾದ ಮಾವೋವಾದಿಗಳ ಸಾವಿನ ಸಂಖ್ಯೆ 13 ಕ್ಕೆ ಏರಿದೆ. ಬುಧವಾರ ಬೆಳಿಗ್ಗೆ ಸಿಬ್ಬಂದಿ ಮತ್ತೆ ಮೂರು ಮೃತದೇಹಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ 6 ಗಂಟೆಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಲೆಂಡಾ ಗ್ರಾಮದ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ … Continued

ಅರವಿಂದ ಕೇಜ್ರಿವಾಲ್ ಅಸ್ವಸ್ಥ, ಜೈಲಿನಲ್ಲಿ 4.5 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದ ಎಎಪಿ ; ನಿರಾಕರಿಸಿದ ಅಧಿಕಾರಿಗಳು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಿದಾಗಿನಿಂದ ಅವರು 4.5 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಮತ್ತು ಸಚಿವೆ ಅತಿಶಿ ಇಂದು ಹೇಳಿದ್ದಾರೆ. ಆದರೆ ತಿಹಾರ್ ಜೈಲಿನಲ್ಲಿರುವ ಅಧಿಕಾರಿಗಳು ಅವರು ಚೆನ್ನಾಗಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸಚಿವೆ … Continued

‘ಯುಗಾಂತ್ಯ’ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ ; ಮಲ್ಲಿಕಾರ್ಜುನ ಖರ್ಗೆ ಪತ್ರ

ನವದೆಹಲಿ: 33 ವರ್ಷಗಳ ಸುದೀರ್ಘ ಸಂಸದೀಯ ಪಯಣಕ್ಕೆ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರು ಮಂಗಳವಾರ ಅಂತ್ಯ ಹಾಡಿದ್ದಾರೆ. ರಾಜ್ಯಸಭೆಯಿಂದ ಬುಧವಾರ (ಏಪ್ರಿಲ್‌ 3) ನಿವೃತ್ತರಾಗಲಿರುವ ಭಾರತದ ಮಾಜಿ ಪ್ರಧಾನಿ ಮತ್ತು ಪಕ್ಷದ ಹಿರಿಯ ನಾಯಕ ಮನಮೋಹನ ಸಿಂಗ್ ಅವರಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಸಿಂಗ್ ನಿವೃತ್ತಿಯನ್ನು ‘ಯುಗಾಂತ್ಯ’ ಎಂದು ಖರ್ಗೆ … Continued

ಪತಂಜಲಿ ಸಂಸ್ಥೆಯಿಂದ ನ್ಯಾಯಾಲಯ ಆದೇಶದ ಉಲ್ಲಂಘನೆ: ಸುಪ್ರೀಂ ಕೋರ್ಟ್‌ ಕೆಂಡಾಮಂಡಲ

ನವದೆಹಲಿ: ವೈಜ್ಞಾನಿಕ ತಳಹದಿಯ ಔಷಧಗಳನ್ನು ಗುರಿಯಾಗಿಸಿಕೊಂಡ ಜಾಹೀರಾತುಗಳನ್ನು ನಿಲ್ಲಿಸಲು ವಿಫಲವಾಗಿ ಕೇವಲ ನೆಪಮಾತ್ರದ ಕ್ಷಮೆಯಾಚನೆ ಅಫಿಡವಿಟ್‌ ಸಲ್ಲಿಸಿದ್ದ ಪತಂಜಲಿ ಆಯುರ್ವೇದ ಸಂಸ್ಥೆಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇಂತಹ ಜಾಹೀರಾತುಗಳ ಪ್ರಸಾರ ನಿಲ್ಲಿಸುವಂತೆ ನ್ಯಾಯಾಲಯ ಕಂಪನಿಗೆ ಆದೇಶಿಸಿರುವ ಬಗ್ಗೆ ತನ್ನ ಮಾಧ್ಯಮ ವಿಭಾಗಕ್ಕೆ ತಿಳಿದಿಲ್ಲ ಎಂದು ಪತಂಜಲಿ ನೀಡಿದ ಹೇಳಿಕೆಯನ್ನು ನ್ಯಾಯಮೂರ್ತಿಗಳಾದ ಹಿಮಾ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ ಸಿಂಗ್‌ ಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರ ಕಸ್ಟಡಿ ಇನ್ನು ಮುಂದೆ ಅಗತ್ಯವಿಲ್ಲ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ಜಾಮೀನು ನೀಡಿದೆ. ವಿಚಾರಣೆಯ ಬಾಕಿ ಇರುವಂತೆ ಸಿಂಗ್ ಅವರನ್ನು ಜಾಮೀನಿನ ಮೇಲೆ … Continued