ಕೇರಳ ವಿಧಾನಸಭಾ ಚುನಾವಣೆ: ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಜನತಾದಳ (ಜಾತ್ಯತೀತ) ೨೦೨೧ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಕೋವಲಂ, ಅಂಕಮಲಿ, ಚಿತ್ತೂರು ಮತ್ತು ತಿರುವಲ್ಲಾ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಮುಖ್ಯಸ್ಥ ಎಚ್.ಡಿ.ದೇವೇಗೌಡ ಅನುಮೋದಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ … Continued

ಅಯೋಧ್ಯೆಯಲ್ಲಿ ಭಗವಾನ್‌ ರಾಮ್ ವಿವಿ ಸ್ಥಾಪನೆಗೆ ಉತ್ತರ ಪ್ರದೇಶ ಸರ್ಕಾರ ಚಿಂತನೆ

ಅಯೋಧ್ಯೆಯಲ್ಲಿ ಭಗವಾನ್ ರಾಮ್ ಹೆಸರಿನ ವಿಶ್ವವಿದ್ಯಾಲ ಸ್ಥಾಪಿಸಲು ಉತ್ತರ ಪ್ರದೇಶ ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ. ಪ್ರಸ್ತಾವಿತ ವಾರ್ಸಿಟಿ ಅಧ್ಯಯನಗಳು ಮತ್ತು ನಂಬಿಕೆ, ಧರ್ಮಗ್ರಂಥಗಳು ಮತ್ತು ಭಗವಾನ್ ರಾಮನಿಗೆ ಸಂಬಂಧಿಸಿದ ಧಾರ್ಮಿಕ ಸಂಗತಿಗಳ ಬಗ್ಗೆ ಇದು ಸಂಶೋಧನೆ ನಡೆಸಲಿದ. ಉನ್ನತ ಶಿಕ್ಷಣ ಖಾತೆಯನ್ನೂ ಹೊಂದಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಡಾ.ದಿನೇಶ್ ಶರ್ಮಾ, ವಿಶ್ವವಿದ್ಯಾಲಯವು ಭಗವಾನ್ ರಾಮನ … Continued

ರಾಹುಲ್‌ ಗಾಂಧಿಯನ್ನು ಶಾಲೆಗೆ ಕಳಿಸಿ: ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಟೀಕೆ

ನವದೆಹಲಿ: ಕೇಂದ್ರ ಸರಕಾರದ ಅಡಿಯಲ್ಲಿ ಯಾವ ಸಚಿವಾಲಯಗಳು ಅಸ್ತಿತ್ವದಲ್ಲಿವೆ ಎಂಬುದನ್ನು ಕಲಿಯಲು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯನ್ನು ಶಾಲೆಗೆ ಕಳಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಟೀಕೆ ಮಾಡಿದ್ದಾರೆ. ಪ್ರತ್ಯೇಕ ಮೀನುಗಾರಿಕೆ ಸಚಿವಾಲಯವನ್ನು ರಚನೆ ಮಾಡಬೇಕೆಂಬ ರಾಹುಲ್‌ ಗಾಂಧಿ ಹೇಳಿಕೆಯನ್ನು ಟೀಕೆ ಮಾಡಿದ ಕೇಂದ್ರ ಸಚಿವ ಸಿಂಗ್‌, ರಾಹುಲ್ ಗಾಂಧಿಯವರ ಹೇಳಿಕೆಗಳಿಂದಾಗಿ ನನಗೆ ನೋವಾಗಿದೆ. … Continued

ಜಮ್ಮು-ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಹತನಾದ ಅಲ್‌ ಬದ್ರ್‌ ಮುಖ್ಯಸ್ಥ ಗನಿ

ಜಮ್ಮು ಮತ್ತು ಕಾಶ್ಮೀರದ ಸೊಪೋರ್‌ ಜಿಲ್ಲೆಯ ತುಜ್ಜಾರ್ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಲ್ ಬದ್ರ್ ಮುಖ್ಯಸ್ಥ ಗನಿ ಖ್ವಾಜಾ ಹತನಾಗಿದ್ದಾನೆ. ಎನ್‌ಕೌಂಟರ್ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಐಜಿಪಿ ಕಾಶ್ಮೀರ ವಿಜಯ್ ಕುಮಾರ್, ಅಲ್‌ ಬದ್ರ್‌ ಮುಖ್ಯಸ್ಥನನ್ನು ಕೊಂದಿರುವುದು ದೊಡ್ಡ ಯಶಸ್ಸು ಎಂದು ಹೇಳಿದ್ದಾರೆ. ತುಜ್ಜರ್ ಗ್ರಾಮದಲ್ಲಿ ಕೆಲವು ಉಗ್ರರು ತಲೆಮರೆಸಿಕೊಂಡಿದ್ದಾರೆ ಎಂದು … Continued

ನಂದಿಗ್ರಾಮ ಸಭೆಯಲ್ಲಿ ಹಿಂದೂ ಮಂತ್ರ ಜಪಿಸಿದ ಮಮತಾ ಬ್ಯಾನರ್ಜಿ..!

ನಂದಿಗ್ರಾಮ್‌ನ ಟಿಎಂಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಹಲವಾರು ಹಿಂದೂ ಮಂತ್ರಗಳನ್ನು 10 ನಿಮಿಷಗಳ ಕಾಲ ಪಠಿಸಿದರು. “ನಾನು ಪ್ರತಿದಿನ ಹೊರಹೋಗುವ ಮೊದಲು ಚಂಡಿಪಾಥ್‌ ಮಠಣ ಮಾಡುತ್ತೇನೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು, ಬಿಜೆಪಿ ತನ್ನ ಹಿಂದೂ ಕಾರ್ಡ್ ಅನ್ನು ನನ್ನೊಂದಿಗೆ ಆಡಬಾರದು “ಎಂದು ಮಮತಾ ಬ್ಯಾನರ್ಜಿ ಹೇಳಿದರು.“ನಾನು ಕೂಡ ಹಿಂದೂ. ನನ್ನೊಂದಿಗೆ ಹಿಂದೂ … Continued

ರಾಜಕೀಯ ಪ್ರವೇಶ: ಆ ಸಮಯ ಬಂದಾಗ ಹೇಳುತ್ತೇನೆ ಎಂದ ಸೌರವ ಗಂಗೂಲಿ

ಸೋಮವಾರ, ಭಾರತದ ಮಾಜಿ ಕ್ರಿಕೆಟ್‌ ನಾಯಕ ಮತ್ತು ಪ್ರಸ್ತುತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯಕ್ಕೆ ಸೇರುವ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಚುನಾವಣೆ ಸಂದರ್ಭದಲ್ಲಿ ಕ್ರಿಕೆಟಿಗ ಸೌರವ್ ಗಂಗೂಲಿ ಬಿಜೆಪಿಗೆ ಸೇರುತ್ತಾರೋ ಇಲ್ಲವೋ ಎಂಬ ಬಗ್ಗೆ ಭಾರಿ ಊಹಾಪೋಹಗಳಿವೆ. ರಿಪಬ್ಲಿಕ್ ಬಾಂಗ್ಲಾದ ಅರ್ನಾಬ್ ಗೋಸ್ವಾಮಿ ಅವರೊಂದಿಗಿನ ಸಂದರ್ಶನದಲ್ಲಿ, ಸೌರವ್ ಅವರು … Continued

ಉತ್ತರಾಖಂಡದ ಸಿಎಂ ಸ್ಥಾನಕ್ಕೆ ರಾವತ್‌ ರಾಜೀನಾಮೆ

ಡೆಹರಾಡೂನ್: ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಉಲ್ಬಣಿಸಿದ್ದು, ವಿಧಾನಸಭೆ ಚುನಾವಣೆಗೆ ವರ್ಷವಷ್ಟೇ ಬಾಕಿ ಉಳಿದಿರುವಾಗ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಮಂಗಳವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ. ಹೈಕಮಾಂಡ್‌ ಸೂಚನೆ ಮೇರೆಗೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಮಂಗಳವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ತಮ್ಮ … Continued

ಭಾರತ-ಬಾಂಗ್ಲಾದೇಶದ ನಡುವಿನ ಮೈತ್ರಿ ಸೇತು ಉದ್ಘಾಟಿಸಿದ ಮೋದಿ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ‘ಮೈತ್ರಿ ಸೇತು’ವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು. “ಬಾಂಗ್ಲಾದೇಶ ಸಂಪರ್ಕವು ಭಾರತದ ಈಶಾನ್ಯ ಪ್ರದೇಶಕ್ಕೆ ಬೆಳೆಯುತ್ತದೆ. ಮತ್ತು ಭಾರತ ಮತ್ತು ಬಾಂಗ್ಲಾದೇಶದ ವ್ಯಾಪಾರಕ್ಕೂ ಬಹಳ ಮುಖ್ಯ. ಇದು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಹೊಸ ವ್ಯಾಪಾರ ಕಾರಿಡಾರ್ ಆಗಿದೆ” ಎಂದು ಮೋದಿ ಹೇಳಿದರು. ತ್ರಿಪುರ ಮತ್ತು ಬಾಂಗ್ಲಾದೇಶದ ಭಾರತದ … Continued

ಎಐಎಡಿಎಂಕೆ ಮೈತ್ರಿ ಕೂಟ ತೊರೆದ ನಟ ವಿಜಯಕಾಂತ ಪಕ್ಷ ಡಿಎಂಡಿಕೆ

ಡಿಎಂಡಿಕೆ ಪಕ್ಷವು ಎಐಎಡಿಎಂಕೆ ಮೈತ್ರಿಕೂಟವನ್ನು ತೊರೆಯಲು ನಿರ್ಧರಿಸಿದೆ ಎಂದು ಎಂಡಿಎಂಕೆ ಮುಖ್ಯಸ್ಥ ವಿಜಯಕಾಂತ ಹೇಳಿದ್ದಾರೆ. ಮಂಗಳವಾರ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಡಿಕೆ ಪಕ್ಷವು ಎಐಎಡಿಎಂಕೆ ಜೊತೆ ಮೂರು ಸಲ ಮಾತುಕತೆ ನಡೆಸಿತು. ಎಐಎಡಿಎಂಕೆ ತಾವು ಕೇಳಿದ ಸಂಖ್ಯೆಯಷ್ಟು ಸೀಟುಗಳನ್ನು ನೀಡಲು ನಿರಾಕರಿಸಿತು ಹಾಗೂ ಮಾತುಕತೆಗಳು ಅಪೇಕ್ಷಿತ … Continued

ಪಶ್ಚಿಮ ಬಂಗಾಳದಲ್ಲಿ ೮ ಹಂತದ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್‌

  ನವ ದೆಹಲಿ: ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯವಾದಿ ಮನೋಹರ್ ಲಾಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠವು ಮಂಗಳವಾರ … Continued