ಏಷ್ಯನ್ ಗೇಮ್ಸ್ 2023: ಮೊದಲ ದಿನವೇ 5 ಪದಕ ಗೆದ್ದ ಭಾರತ

ಹ್ಯಾಂಗ್ ಝೂ (ಚೀನಾ) : 19ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಮೊದಲ ದಿನವಾದ ಇಂದು, ಭಾನುವಾರ ಭಾರತ ಐದು ಪದಕಗಳನ್ನು ಗೆದ್ದಿದೆ. ಮಹಿಳೆಯರ 10 ಮೀ ಏರ್ ರೈಫಲ್ ತಂಡ ವಿಭಾಗ, ಪುರುಷರ ಲೈಟ್ ವೈಟ್ ಡಬಲ್ ಸ್ಕಲ್ಸ್ ವಿಭಾಗ ಮತ್ತು ಪುರುಷರ-8 ಜೋಡಿ ರೋವಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಪುರುಷರ ಜೋಡಿ ರೋವಿಂಗ್ … Continued

ವೀಡಿಯೊ..: ಚಲಿಸುತ್ತಿದ್ದ ಬೈಕ್‌ ಸವಾರನಿಗೆ ಹಾವು ಕಡಿದು ಸ್ಥಳದಲ್ಲೇ ಸಾವು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ದ್ವಿಚಕ್ರವಾಹನದಲ್ಲಿದ್ದ ವ್ಯಕ್ತಿಯೊಬ್ಬನಿಗೆ ನಾಗರ ಹಾವು ಕಚ್ಚಿ ಆತ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಹಾವು ಕಚ್ಚಿದ ಅವರು ಕೆಲವೇ ಕ್ಷಣಗಳಲ್ಲಿ ಅವರು ನಿಧನರಾಗಿದ್ದಾರೆ. ಇಂದೋರ್‌ನ ಮೊವ್ ಪೊಲೀಸ್ ಠಾಣೆ ವ್ಯಾಪ್ತಿಯ ತೇಲಿ ಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮನೀಶ ಎಂದು ಗುರುತಿಸಲಾಗಿದ್ದು, ಅವರು ಹಾವು ಹಿಡಿಯುವುದರಲ್ಲಿ … Continued

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸಿದ್ದ, ಭಾರತದಲ್ಲಿ ದಾಳಿ ನಡೆಸುವುದನ್ನು ಸಂಘಟಿಸಿದ್ದ : ವರದಿಗಳು

ನವದೆಹಲಿ: ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ಘರ್ಷಣೆಯ ಕೇಂದ್ರಬಿಂದುವಾಗಿರುವ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್, ಕೆನಡಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಮತ್ತು ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ನೆರವು ನೀಡಿದ್ದ ಎಂದು ಭಾರತೀಯ ಗುಪ್ತಚರ ಸಂಸ್ಥೆಗಳು ಸಿದ್ಧಪಡಿಸಿದ ದಸ್ತಾವೇಜು ಹೇಳುತ್ತದೆ ಎಂದು ವರದಿಗಳು ತಿಳಿಸಿವೆ. ಜೂನ್‌ನಲ್ಲಿ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ … Continued

‘ಒಂದು ರಾಷ್ಟ್ರ, ಒಂದು ಚುನಾವಣೆ’ : ಉನ್ನತ ಮಟ್ಟದ ಸಮಿತಿ ಮೊದಲ ಸಭೆ ; ಪಕ್ಷಗಳ ಅಭಿಪ್ರಾಯ ಪಡೆಯಲು ನಿರ್ಧಾರ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದಲ್ಲಿ ಶನಿವಾರ ದೇಶದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಉನ್ನತ ಮಟ್ಟದ ಸಮಿತಿಯ ಮೊದಲ ಸಭೆ ನಡೆಯಿತು. ಎಂಟು ಸದಸ್ಯರ ಸಮಿತಿಯು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಪಡೆಯಲು ರಾಜಕೀಯ ಪಕ್ಷಗಳು ಮತ್ತು ಕಾನೂನು ಆಯೋಗದ ಸದಸ್ಯರನ್ನು ಆಹ್ವಾನಿಸಲು ನಿರ್ಧರಿಸಿದೆ ಎಂದು ಹೇಳಿಕೆಯೊಂದು ತಿಳಿಸಿದೆ. … Continued

ಜೈಪುರದಲ್ಲಿ ಕಾಲೇಜು ವಿದ್ಯಾರ್ಥಿ ಸ್ಕೂಟರ್ ಮೇಲೆ ಸವಾರಿ ಮಾಡಿದ ರಾಹುಲ್ ಗಾಂಧಿ | ವೀಕ್ಷಿಸಿ

ಜೈಪುರ: ದಿನಪೂರ್ತಿ ಜೈಪುರ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಸ್ಕೂಟರ್ ಸವಾರಿ ಆನಂದಿಸುತ್ತಿರುವುದು ಕಂಡುಬಂದಿದೆ. ಕಾಲೇಜಿನ ಹೊರಗೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರ ಸ್ಕೂಟರ್‌ನಲ್ಲಿ ಗಾಂಧಿ ಸವಾರಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 13 ಸೆಕೆಂಡುಗಳ ವೀಡಿಯೊ ಕ್ಲಿಪ್‌ನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸ್ಕೂಟಿರಿನ ಹಿಂದೆ ಕುಳಿತು ಸವಾರಿ ಮಾಡುತ್ತಿದ್ದು, … Continued

ದೆಹಲಿ ವಿಶ್ವವಿದ್ಯಾಲಯ ಚುನಾವಣೆ: 4ರಲ್ಲಿ 3 ಸ್ಥಾನಗಳನ್ನು ಗೆದ್ದ ಎಬಿವಿಪಿ

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (DUSU) ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನಾಲ್ಕು ಸೆಂಟ್ರಲ್ ಪ್ಯಾನಲ್ ಹುದ್ದೆಗಳ ಪೈಕಿ ಮೂರರಲ್ಲಿ ಗೆಲುವು ಸಾಧಿಸಿದೆ. ಎಬಿವಿಪಿಯ ತುಷಾರ್ ದೇಧಾ ಅವರು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (DUSU) ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಅವರು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಅಭ್ಯರ್ಥಿ ಹಿತೇಶ ಗುಲಿಯಾ … Continued

ಈ ವರ್ಷದಿಂದ 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ

ಬೆಂಗಳೂರು : 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ಕಳೆದ ವರ್ಷ 5 ಮತ್ತು 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು. ಈಗ 9 ಮತ್ತು 11ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. … Continued

ಭ್ರಷ್ಟಾಚಾರ ಪ್ರಕರಣ : ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋದ ಚಂದ್ರಬಾಬು ನಾಯ್ಡು

ನವದೆಹಲಿ: ಕೌಶಲ್ಯಾಭಿವೃದ್ಧಿ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ನಾಯ್ಡು ಪರ ವಕೀಲರು ಶನಿವಾರ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಅರ್ಜಿಯ … Continued

ಖಲಿಸ್ತಾನಿ ಉಗ್ರ ಗುರುಪತ್‌ವಂತ್ ಸಿಂಗ್ ಪನ್ನೂನ್‌ ಪಂಜಾಬಿನ ಆಸ್ತಿ ವಶಪಡಿಸಿಕೊಂಡ ಎನ್‌ಐಎ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆಯಡಿ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನೂನ್ ಒಡೆತನದ ಚಂಡೀಗಢ ಮತ್ತು ಅಮೃತಸರದ ಆಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮುಟ್ಟುಗೋಲು ಹಾಕಿಕೊಂಡಿದೆ. ಚಂಡೀಗಢದ ಸೆಕ್ಟರ್ 15 ರಲ್ಲಿ ಪನ್ನುನ್ ಅವರ ನಿವಾಸದ ಹೊರಗೆ ಅಂಟಿಸಲಾದ ಆಸ್ತಿ ಮುಟ್ಟುಗೋಲು ನೋಟೀಸ್ ಅಂಟಿಸಲಾಗಿದೆ. ಗುರ್ಪತ್‌ವಂತ್ … Continued

ರಾತ್ರಿ ಸುರಿದ ಭಾರೀ ಮಳೆಯ ನಂತರ ನಾಗ್ಪುರ ಜಲಮಯ : ರಕ್ಷಣಾ ಕಾರ್ಯಾಚರಣೆಗಾಗಿ ಕೇಂದ್ರ ಪಡೆಗಳ ನಿಯೋಜನೆ

ನಾಗ್ಪುರ : ಶುಕ್ರವಾರ ಮಧ್ಯರಾತ್ರಿಯಿಂದ ನಾಗ್ಪುರ ನಗರದಲ್ಲಿ ಭಾರೀ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಮತ್ತು ಈ ಪಾಕೆಟ್‌ಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ನಾಗ್ಪುರ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 5:30 ರ ವರೆಗೆ 106 ಮಿಮೀ ಮಳೆಯಾಗಿದೆ. ಹಲವಾರು ರಸ್ತೆಗಳು ಮತ್ತು ವಸತಿ ಪ್ರದೇಶಗಳು ಜಲಾವೃತವಾಗಿವೆ … Continued