ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ : 13 ಕಾರ್ಮಿಕರ ಸಾವು ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಪಾಲನಪುರ: ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಮಂಗಳವಾರ ಪಟಾಕಿ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಸಂಭವಿಸಿದ ಸ್ಫೋಟದಲ್ಲಿ ಕಟ್ಟಡ ಕುಸಿದು ಕನಿಷ್ಠ 13 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೀಸಾ ಪಟ್ಟಣದ ಬಳಿ ಇರುವ ಘಟಕದಲ್ಲಿ ಈ ಘಟನೆ ನಡೆದಿದೆ. “ಮಂಗಳವಾರ ಬೆಳಿಗ್ಗೆ 9: 45 ರ ಸುಮಾರಿಗೆ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ, ಇದರಿಂದಾಗಿ … Continued

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರದಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ 41 ರೂಪಾಯಿ ಇಳಿಕೆ ಮಾಡುವುದನ್ನು ಘೋಷಿಸಿವೆ. ದೆಹಲಿಯಲ್ಲಿ ಮಂಗಳವಾರ (ಏಪ್ರಿಲ್‌ 1)ದಿಂದ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ 1762 ರೂ.ಗಳಾಗಿವೆ. ಮುಂಬೈ: 1,714.50 ರೂ. ( 1,755.50 ರೂ. ಇತ್ತು) … Continued

ಚಂಡಮಾರುತದ ಪರಿಚಲನೆಯ ಪ್ರಭಾವ : ಕರ್ನಾಟಕದ ಹಲವು ಜಿಲ್ಲೆಗಳಿಗೆ ಏಪ್ರಿಲ್ 6ರ ವರೆಗೂ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 6 ದಿನಗಳ ಕಾಲ ಮಳೆ ಅಬ್ಬರಿಸುವ ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್‌ 1 ಮತ್ತು 2ರಂದು ಕರ್ನಾಟಕದ ಕರಾವಳಿ ಹಾಗೂ ಒಳನಾಡಿನಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ … Continued

ಏಪ್ರಿಲ್‌ ನಿಂದ ಜೂನ್‌ ಅವಧಿಯಲ್ಲಿ ಕರ್ನಾಟಕ ಸೇರಿ ದೇಶಾದ್ಯಂತ ತಾಪಮಾನ ಇನ್ನಷ್ಟು ಹೆಚ್ಚಳ ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ನವದೆಹಲಿ: ಭಾರತವು ಏಪ್ರಿಲ್‌ನಿಂದ ಜೂನ್‌ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ, ಮಧ್ಯ ಮತ್ತು ಪೂರ್ವ ಭಾರತ ಮತ್ತು ವಾಯುವ್ಯ ಬಯಲು ಪ್ರದೇಶಗಳಲ್ಲಿ ಹೆಚ್ಚಿನ ಶಾಖದ ದಿನಗಳು ಇರುತ್ತವೆ ಎಂದು ಐಎಂಡಿ (IMD) ಸೋಮವಾರ (ಮಾರ್ಚ್ 31) ತಿಳಿಸಿದೆ. ದೇಶಾದ್ಯಂತ ಬಿಸಿಲ ಬೇಗೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪ್ರಖರತೆ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ಭಾರತೀಯ … Continued

ಪ್ರಧಾನಿ ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ನೇಮಕ ; ಯಾರು ಈ ಅಧಿಕಾರಿ..?

ನವದೆಹಲಿ: ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಅವರು 2014 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಖಾಸಗಿ ಕಾರ್ಯದರ್ಶಿಯಾಗಿ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿಯಾದ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ … Continued

ಇವರು ಭಾರತದ ಅತಿ ಎತ್ತರದ ದಂಪತಿ, ಕುಟುಂಬದ ನಾಲ್ವರ ಸಂಯೋಜಿತ ಎತ್ತರ 26 ಅಡಿ…! ವಿಶ್ವ ದಾಖಲೆ ಸ್ಥಾಪಿಸುತ್ತಾರೆಯೇ..?

ತಮ್ಮ ಸಂಯೋಜಿತ (ಒಟ್ಟು ಸೇರಿ) ಎತ್ತರದಲ್ಲಿ ಭಾರತದ ಅತಿ ಎತ್ತರದ ಕುಟುಂಬ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಕುಟುಂಬದ ಶರದ್ ಕುಲಕರ್ಣಿ (52) ಅವರು 7 ಅಡಿ 1.5 ಇಂಚು ಎತ್ತರವಿದ್ದಾರೆ. ಮತ್ತು ಅವರ ಪತ್ನಿ ಸಂಜೋತ್ (46) ಅವರು 6 ಅಡಿ 2.6 ಇಂಚು ಎತ್ತರವಿದ್ದಾರೆ. ಈ ದಂಪತಿಯ … Continued

ಲಿಂಗಸುಗೂರು | ಬೀದಿ ನಾಯಿಗಳ ದಾಳಿ ; ಬಾಲಕ ಸಾವು

ರಾಯಚೂರು: ಬಹಿರ್ದೆಸೆಗೆ ತೆರಳಿದ್ದ ವೇಳೆ ಬೀದಿ ನಾಯಿ ದಾಳಿ ನಡೆಸಿದ ನಂತರ ಗಂಭೀರ ಗಾಯಗೊಂಡಿದ್ದ ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಸಬಾ ಲಿಂಗಸುಗೂರು ಗ್ರಾಮದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಲಿಂಗಸಗೂರು ಪುರಸಭೆ ವ್ಯಾಪತಿಯ ಕಸಬಾ ಲಿಂಗಸುಗೂರು ಗ್ರಾಮದ ಸಿದ್ದಪ್ಪ ಬೀರಪ್ಪ(6) ಮೃತ ಬಾಲಕ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ … Continued

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ : 6 ಮಂದಿ ಸಾವು, ಐವರಿಗೆ ಗಂಭೀರ ಗಾಯ

ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಎದುರಿನ ಪಿಡಬ್ಲ್ಯೂಡಿ ರಸ್ತೆಯ ಬಳಿ ಭಾನುವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಆರು ಜನ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಇದ್ದಾರೆ. ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ದೊಡ್ಡ ಮರವೊಂದು ಉರುಳಿ ಬಿದ್ದ ಪರಿಣಾಮ ರಸ್ತೆಯ ಅಂಚಿನಲ್ಲಿ ಕುಳಿತಿದ್ದ ಜನರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು … Continued

ವೀಡಿಯೊ…| 14ನೇ ಮಗುವಿಗೆ ಜನ್ಮ ನೀಡಿದ 50 ವರ್ಷದ ಮಹಿಳೆ…! ಆಂಬುಲೆನ್ಸ್‌ ನಲ್ಲಿ ಹೆರಿಗೆ

ಹಾಪುರ: ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು 14ನೇ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಾಗಿದೆ. 50 ವರ್ಷದ ಗರ್ಭಿಣಿ ಮಹಿಳೆ ಹೆರಿಗೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ತೆರಳುತ್ತಿದ್ದಾಗ ಆಂಬ್ಯುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಇಮಾಮುದ್ದೀನ್ ಎಂಬ ವ್ಯಕ್ತಿಯ ಪತ್ನಿ ಗುಡಿಯಾ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ನಲ್ಲಿ ತನ್ನ 14 ನೇ ಮಗುವನ್ನು ಸ್ವಾಗತಿಸಿದರು. … Continued

ಛತ್ತೀಸಗಢ | ಪ್ರಧಾನಿ ಮೋದಿ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಶರಣಾದ 50 ನಕ್ಸಲೀಯರು

ರಾಯ್ಪುರ : ಛತ್ತೀಸ್‌ಗಢದ ಬಿಲಾಸಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ 50 ಮಾವೋವಾದಿಗಳು ಶರಣಾಗಿದ್ದಾರೆ, ಇದು ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಮನೆಗೆ ಹಿಂತಿರುಗಿ ಅಭಿಯಾನಕ್ಕೆ ಮಹತ್ವದ ಯಶಸ್ಸು ಎಂದು ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ … Continued