ತನ್ನ ಸಹೋದರನಿಗೆ ಉಚಿತವಾಗಿ ಕಿಡ್ನಿ ನೀಡಿದ ನಂತರ ಮಹಿಳೆಗೆ ವಾಟ್ಸಾಪ್ ಕರೆ ಮೂಲಕ ‘ತ್ರಿವಳಿ ತಲಾಖ್’ ನೀಡಿದ ಪತಿ…!

ತನ್ನ ಸಹೋದರನ ಜೀವವನ್ನು ಉಳಿಸಲು ತನ್ನ ಕಿಡ್ನಿಯನ್ನು ದಾನ ಮಾಡಿದ ತರನ್ನುಮ್ ಎಂದು ಗುರುತಿಸಲಾದ 42 ವರ್ಷದ ಮಹಿಳೆಗೆ ಆಕೆಯ ಪತಿ ವಾಟ್ಸಾಪ್ ಕರೆ ಮೂಲಕ ಮೂರು ಬಾರಿ ‘ತಲಾಖ್’ ಎಂದು ಉಚ್ಚರಿಸುವ ಮೂಲಕ ವಿಚ್ಛೇದನ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಲಾಖ್‌ ನೀಡಿದ ಪತಿಯನ್ನು ಮೊಹಮ್ಮದ್ ರಸೀದ್ ಎಂದು ಗುರುತಿಸಲಾಗಿದ್ದು, ಕಿಡ್ನಿ ದಾನ ಮಾಡಿದ್ದಕ್ಕಾಗಿ … Continued

2024ರ ಲೋಕಸಭೆ ಚುನಾವಣೆಗೆ 16 ಸದಸ್ಯರ ಪ್ರಣಾಳಿಕೆ ಸಮಿತಿ ರಚಿಸಿದ ಕಾಂಗ್ರೆಸ್‌

ನವದೆಹಲಿ: ಕಾಂಗ್ರೆಸ್ ಪಕ್ಷವು 2024 ರ ಲೋಕಸಭೆ ಚುನಾವಣೆಗೆ ಶುಕ್ರವಾರ ಪ್ರಣಾಳಿಕೆ ಸಮಿತಿಯನ್ನು ರಚಿಸಿದ್ದು, ರಾಜ್ಯಸಭಾ ಸಂಸದ ಪಿ ಚಿದಂಬರಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಮಿತಿಯ ಸಂಚಾಲಕನ ಸ್ಥಾನವನ್ನು ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿ.ಎಸ್. ಸಿಂಗ್ ದೇವ್ ಅವರಿಗೆ ನೀಡಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 16 ಸದಸ್ಯರು … Continued

ವೀಡಿಯೊ | ಪ್ರಧಾನಿ ನಿವಾಸದ ಬಳಿ ಪಾದಚಾರಿ ಮಾರ್ಗದಲ್ಲಿ ʼಪದ್ಮಶ್ರೀʼ ಪ್ರಶಸ್ತಿ ಇಟ್ಟು ಹೋದ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಬಜರಂಗ ಪುನಿಯಾ

ನವದೆಹಲಿ: ಬ್ರಿಜ್ ಭೂಷಣ ಶರಣ್ ಸಿಂಗ್ ಅವರ ಆಪ್ತ ಸಂಜಯ ಸಿಂಗ್ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಕರ್ತವ್ಯ ಪಥದ ಪ್ರಧಾನಿ ನಿವಾಸದ ಸಮೀಪದ ಪಾದಚಾರಿ ಮಾರ್ಗದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಇಟ್ಟು ಹೋಗಿದ್ದಾರೆ. ಪದ್ಮಶ್ರೀಯನ್ನು ಕರ್ತವ್ಯ ಪಥದಲ್ಲಿ ತೊರೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪುನಿಯಾ, … Continued

ಈ ಖರ್ಗೆ-ಪರ್ಗೆ ಯಾರು..? ವಿಪಕ್ಷಗಳ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ‘ನಿತೀಶಕುಮಾರ’ : ಜೆಡಿಯು ಶಾಸಕ

ನವದೆಹಲಿ: ನವದೆಹಲಿಯಲ್ಲಿ ನಡೆದ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್‌ನ ನಾಲ್ಕನೇ ಸಭೆಯ ನಂತರ, ಜೆಡಿಯು ಶಾಸಕರೊಬ್ಬರು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದು, ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಪ್ರಶ್ನಾರ್ಥಕ ಚಿಹ್ನೆಗೆ ಕಾರಣವಾಗಿದೆ. ಜೆಡಿಯು ಶಾಸಕ ಗೋಪಾಲ ಮಂಡಲ್ ಮಾತನಾಡಿ, ಸಾಮಾನ್ಯ ಜನರಿಗೆ ಖರ್ಗೆ ಅವರ ಪರಿಚಯವಿಲ್ಲ, ಬಿಹಾರ ಮುಖ್ಯಮಂತ್ರಿ ನಿತೀಶ್ … Continued

ನೀವೇಕೆ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ….: ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ನಂತರ ರಾಜ್ಯ ನಾಯಕರನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಷ್ಟ್ರೀಯ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್‌ ಸೋಲು ಗುರುವಾರ ನಡೆದ ಪಕ್ಷದ ಉನ್ನತ ನಾಯಕತ್ವದ ಸಭೆಯಲ್ಲಿ ಭಾರಿ ಮಹತ್ವ ಪಡೆದಿದ್ದು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಅಗತ್ಯವನ್ನು ರಾಹುಲ್ ಗಾಂಧಿ ಅವರು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ … Continued

ಡಬ್ಲ್ಯುಎಫ್‌ಐ ಅಧ್ಯಕ್ಷರ ಆಯ್ಕೆ ವಿರೋಧಿಸಿ ʼಪದ್ಮಶ್ರೀ ಪುರಸ್ಕಾರʼ ಹಿಂದಿರುಗಿಸಿದ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ : ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ನೂತನ ಮುಖ್ಯಸ್ಥರಾಗಿ ನಿರ್ಗಮಿತ ಮುಖ್ಯಸ್ಥ ಬ್ರಿಜ್ ಭೂಷಣ ಶರಣ ಸಿಂಗ್ ಅವರ ಆಪ್ತ ಸಂಜಯ ಸಿಂಗ್ ಅವರನ್ನು ಆಯ್ಕೆಯಾಗಿದ್ದರ ವಿರುದ್ಧ ಪ್ರತಿಭಟನೆಗಳ ಮಧ್ಯೆ ಟೋಕಿಯೊ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಪ್ರಕಟಿಸಿದ್ದಾರೆ. ಭಾರತದ ಕುಸ್ತಿ ಒಕ್ಕೂಟ (WFI)ದ ಮುಖ್ಯಸ್ಥರಾಗಿ ಸಂಜಯ … Continued

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ

ನವದೆಹಲಿ: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ಬೆಳಗ್ಗೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಿದ ಹಿನ್ನಲೆಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆ 39.50 ರೂ.ಗಳಷ್ಟು ಅಗ್ಗವಾಗಿದೆ. ಈ ಕಡಿತವನ್ನು 19 ಕಿಲೋ ವಾಣಿಜ್ಯ ಬಳಕೆ ಸಿಲಿಂಡರ್‌ಗಳಿಗೆ ಮಾತ್ರ ಮಾಡಲಾಗಿದೆ. ಮನೆ ಬಳಕೆ ಗ್ಯಾಸ್‌ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಂಗಳೂರಿನಲ್ಲಿ ಇದೀಗ … Continued

ಕಾಣೆಯಾಗಿರುವ ಭಾರತೀಯಳ ಬಗ್ಗೆ ಮಾಹಿತಿ ನೀಡಿದವರಿಗೆ $10,000 ಬಹುಮಾನ ಘೋಷಿಸಿದ ಅಮೆರಿಕದ ಎಫ್‌ಬಿಐ

ನ್ಯೂಯಾರ್ಕ್: ನಾಲ್ಕು ವರ್ಷಗಳ ಹಿಂದೆ ನ್ಯೂಜೆರ್ಸಿಯಿಂದ ಕಾಣೆಯಾದ ಭಾರತದ 29 ವರ್ಷದ ವಿದ್ಯಾರ್ಥಿನಿಯ ಬಗ್ಗೆ ಮಾಹಿತಿ ನೀಡಿದವರಿಗೆ ಎಫ್‌ಬಿಐ 10,000 USD ವರೆಗೆ ಬಹುಮಾನ ಘೋಷಿಸಿದೆ. ಏಪ್ರಿಲ್ 29, 2019 ರ ಸಂಜೆ ಮಯೂಷಿ ಭಗತ್ ಅವರು “ಬಣ್ಣದ ಪೈಜಾಮ ಪ್ಯಾಂಟ್ ಮತ್ತು ಕಪ್ಪು ಟಿ-ಶರ್ಟ್” ಧರಿಸಿ ಜರ್ಸಿ ಸಿಟಿಯಲ್ಲಿರುವ ತನ್ನ ಅಪಾರ್ಟ್ಮೆಂಟ್‌ನಿಂದ ಹೊರಹೋಗುತ್ತಿರುವಾಗ ಕೊನೆಯ … Continued

ಹಳಿಗಳ ಮೇಲೆ ವೀಡಿಯೊ ಚಿತ್ರೀಕರಣ ಮಾಡುವಾಗ ರೈಲು ಡಿಕ್ಕಿ ಹೊಡೆದು ಮೂವರು ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ರೈಲಿಗೆ ಡಿಕ್ಕಿ ಹೊಡೆದು ಮೂವರು ಬಾಲಕರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ರೈಲ್ವೇ ಸೇತುವೆಯ ಮೇಲೆ ಸಾಮಾಜಿಕ ಜಾಲತಾಣಗಳಿಗಾಗಿ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದಾಗ ರೈಲು ಡಿಕ್ಕಿ ಹೊಡೆದಿದೆ. ಸುಜ್ನಿಪಾರಾ ಮತ್ತು ಅಹಿರೋನ್ ನಿಲ್ದಾಣಗಳ ನಡುವಿನ ರೈಲ್ವೆ ಸೇತುವೆ ಮೇಲೆ ಹಳಿಗಳ ಮಧ್ಯೆ ಐವರು ಯುವಕರು ರೀಲ್ಸ್ ಮಾಡುತ್ತಿದ್ದರು. ಈ … Continued

ಜಮ್ಮು-ಕಾಶ್ಮೀರದಲ್ಲಿ ಸೇನಾ ಟ್ರಕ್ ಮೇಲೆ ಭಯೋತ್ಪಾದಕರ ಹೊಂಚು ದಾಳಿ: 4 ಸೈನಿಕರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು ಹೊಂಚು ಹಾಕಿ ಎರಡು ಸೇನಾ ವಾಹನಗಳ ಮೇಲೆ ನಡೆಸಿದ ದಾಳಿಯ ನಂತರ ನಾಲ್ವರು ಯೋಧರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಹನಗಳು ಬುಧವಾರ ರಾತ್ರಿಯಿಂದ ಭಯೋತ್ಪಾದಕರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಗಾಗಿ ಬುಫ್ಲಿಯಾಜ್ ಬಳಿಯ ಪ್ರದೇಶದಿಂದ ಸೈನಿಕರನ್ನು ಸಾಗಿಸುತ್ತಿತ್ತು. ಕಾರ್ಯಾಚರಣೆಯು ಡಿಕೆಜಿ (ಡೇರಾ ಕಿ … Continued