ನಟಿ, ಮಾಜಿ ಸಂಸದೆ ವಿಜಯಶಾಂತಿ ಬಿಜೆಪಿಗೆ ಗುಡ್‌ ಬೈ

ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ಕೆಲವೇ ದಿನಗಳಿರುವಾಗ ಮಾಜಿ ಸಂಸದೆ, ನಟಿ ವಿಜಯಶಾಂತಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ವಿಜಯಶಾಂತಿ ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಜಿ.ಕಿಶನ್ ರೆಡ್ಡಿ ಅವರಿಗೆ ಕಳುಹಿಸಿದ್ದಾರೆ. ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಭಾಗವಹಿಸುವ ಸಮಾರಂಭದಲ್ಲಿ … Continued

ಏಕದಿನ ವಿಶ್ವಕಪ್ 2023 : ರೋಚಕ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿದ ಆಸ್ಟ್ರೇಲಿಯಾ, ಫೈನಲ್‌ನಲ್ಲಿ ಭಾರತಕ್ಕೆ ಎದುರಾಳಿ

ಕೋಲ್ಕತ್ತಾ: 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಫೈನಲ್ ಪ್ರವೇಶಿಸಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್ ಗಳಿಂದ ಸೋಲಿಸುವ ಮೂಲಕ ಭಾನುವಾರದ ಫೈನಲ್‌ನಲ್ಲಿ ಭಾರತದ ವಿರುದ್ಧದ ಅಂತಿಮ ಹಣಾಹಣಿಗೆ ಸಜ್ಜಾಗಿದೆ. ದಕ್ಷಿಣ ಆಫ್ರಿಕಾ ಮತ್ತೊಮ್ಮೆ ವಿಶ್ವಕಪ್ ಸೆಮಿಫೈನಲ್‌ನಂತಹ ದೊಡ್ಡ ವೇದಿಕೆಯ ಮೇಲೆ ಬಂದು … Continued

‘ಫೇಕ್ ಕಾಮ್ರೆಡ್ಸ್ ಹಮಾಸ್ ರ್‍ಯಾಲಿʼ ಸ್ಫೋಟಿಸ್ತೇವೆ: ಕೋಯಿಕ್ಕೋಡ್ ಜಿಲ್ಲಾಧಿಕಾರಿಗೆ ಮಾವೋವಾದಿಗಳ ಬೆದರಿಕೆ ಪತ್ರ

ಕೋಯಿಕ್ಕೋಡ್: ಮಾವೋವಾದಿಗಳ ವಿರುದ್ಧದ ಸರ್ಕಾರ ಮತ್ತು ಪೊಲೀಸರು ಕಾರ್ಯಾಚರಣೆಯನ್ನು ನಿಲ್ಲಿಸದಿದ್ದರೆ ‘ಫೇಕ್ ಕಾಮ್ರೆಡ್ಸ್ ಹಮಾಸ್ ರ್ಯಾಲಿ’ಯನ್ನು ಸ್ಫೋಟಿಸುವುದಾಗಿ ಭಾರತೀಯ ಕಮ್ಯುನಿಸ್ಟ್ ಪಾರ್ಟಿ (ಮಾವೋವಾದಿ) ಕೋಯಿಕ್ಕೋಡ್ ಜಿಲ್ಲಾಧಿಕಾರಿಗೆ ಪತ್ರವೊಂದನ್ನು ಕಳುಹಿಸಿದೆ. ಕೋಯಿಕ್ಕೋಡ್ ಜಿಲ್ಲೆಯ ಅಗತ್ಯತೆಗಳನ್ನು ಪೂರೈಸುವುದನ್ನು ಬಿಟ್ಟು ಸರ್ಕಾರವು ವಿದೇಶಿ ಭಯೋತ್ಪಾದಕರಿಗಾಗಿ ರ್‍ಯಾಲಿಯನ್ನು ಆಯೋಜಿಸುತ್ತಿದೆ ಎಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಪತ್ರ ತಲು‍ಪಿದ್ದು, … Continued

ವಿಶ್ವಕಪ್‌ನಲ್ಲಿ 4ನೇ ಬಾರಿಗೆ 5 ವಿಕೆಟ್ ಉರುಳಿಸಿ ಹೊಸ ದಾಖಲೆ ನಿರ್ಮಿಸಿದ ಮೊಹಮ್ಮದ್ ಶಮಿ

ಬುಧವಾರ ನಡೆದ ಐಸಿಸಿ 50 ಓವರ್‌ಗಳ ಪಂದ್ಯಾವಳಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಭಾರತದ ಅನುಭವಿ ವೇಗಿ ಮೊಹಮ್ಮದ್ ಶಮಿ ಈ ವಿಶ್ವಕಪ್‌ನಲ್ಲಿ ನಾಲ್ಕನೇ ಬಾರಿಗೆ 5 ವಿಕೆಟ್ ಕಬಳಿಸಿದರು. ವಿಶ್ವಕಪ್‌ನಲ್ಲಿ ತನ್ನ 4ನೇ ಸಲ 5-ವಿಕೆಟ್‌ಗಳ ಸಾಧನೆಯೊಂದಿಗೆ, ಶಮಿ ಏಕದಿನದ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಅವರ ದಾಖಲೆಯನ್ನು ಮುರಿದರು. … Continued

ವಿಶ್ವಕಪ್ 2023 : ಶಮಿ ಮಾರಕ ಬೌಲಿಂಗ್‌, ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ; ಫೈನಲ್ ಪ್ರವೇಶ

ಮುಂಬೈ: 2023ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಭಾರತ ಫೈನಲ್ ಪ್ರವೇಶಿಸಿದೆ. 2023ರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಅಜೇಯ ಓಟ ಮುಂದುವರೆಸಿದೆ ಆಡಿದ 10 ಪಂದ್ಯಗಳಲ್ಲೂ ಗೆಲುವು ಸಾಧಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ … Continued

ವಿಶ್ವಕಪ್‌ 2023 : ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ : 50 ನೇ ಏಕದಿನ ಶತಕ ಹೊಡೆದು ನೂತನ ದಾಖಲೆ ನಿರ್ಮಾಣ

ಭಾರತದ ಅಗ್ರಮಾನ್ಯ ಬ್ಯಾಟರ್‌ ವಿರಾಟ್ ಕೊಹ್ಲಿ ಭಾರತದ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಅಂತಾಷ್ಟ್ರೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕ್ರಿಕೆಟ್ ವಿಶ್ವಕಪ್ 2023 ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಬೌಲಿಂಗ್ ದಾಳಿಯ ವಿರುದ್ಧ ಮಾಜಿ ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ … Continued

ಜಮ್ಮು: ದೋಡಾದಲ್ಲಿ ಬಸ್ಸು ಕಂದರಕ್ಕೆ ಉರುಳಿ 36 ಸಾವು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಬಸ್ ಕಮರಿಗೆ ಬಿದ್ದ ಪರಿಣಾಮ 36 ಮಂದಿ ಮೃತಪಟ್ಟಿದ್ದಾರೆ ಹಾಗೂ 19 ಮಂದಿ ಗಾಯಗೊಂಡಿದ್ದಾರೆ. 55 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸರ್ ಬಳಿ ರಸ್ತೆಯಿಂದ ಸ್ಕಿಡ್ ಆಗಿ 300 ಅಡಿ ಕೆಳಕ್ಕೆ ಬಿದ್ದಿದೆ ಎಂದು ಜಮ್ಮು ವಿಭಾಗೀಯ ಆಯುಕ್ತ ರಮೇಶ್ ಕುಮಾರ್ ತಿಳಿಸಿದ್ದಾರೆ. “ಅಪಘಾತದ … Continued

ಐಶ್ವರ್ಯಾ ರೈ ಬಚ್ಚನ್ ಬಗ್ಗೆ ವಿವಾದಾತ್ಮಕ ಹೇಳಿಕೆ : ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಅಬ್ದುಲ್ ರಜಾಕ್

ನವದೆಹಲಿ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ, ರಜಾಕ್ ಅನುಚಿತವಾದ ಕಾಮೆಂಟ್ ಸಾಮಾಜಿಕ ಮಾಧ್ಯಮದಲ್ಲಿ ಮತ್ತು ಸಹ ಕ್ರಿಕೆಟಿಗರಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಪಾಕಿಸ್ತಾನ ಕ್ರಿಕೆಟ್ ತಂಡದ ಪ್ರದರ್ಶನ ಮತ್ತು ಕೋಚಿಂಗ್ ತಂತ್ರಗಳ ಬಗ್ಗೆ ರಜಾಕ್ ಮಾಧ್ಯಮಗಳನ್ನು ಉದ್ದೇಶಿಸಿ … Continued

ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ನಿಧನ

ಮುಂಬೈ : ಸಹಾರಾ ಸಮೂಹದ ಸಂಸ್ಥಾಪಕ ಸುಬ್ರತಾ ರಾಯ್ ಅವರು ದೀರ್ಘಕಾಲದ ಅನಾರೋಗ್ಯದ ಕಾರಣದಿಂದ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಆರೋಗ್ಯದಲ್ಲಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಭಾನುವಾರ ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಕೆಡಿಎಎಚ್) ದಾಖಲಿಸಲಾಗಿತ್ತು. ಸಹಾರಾ ಇಂಡಿಯಾ ಪರಿವಾರ್ ನಿಧನದ ಸುದ್ದಿಯನ್ನು ಖಚಿತಪಡಿಸಿದೆ. “ನಮ್ಮ ಗೌರವಾನ್ವಿತ … Continued

ವೀಡಿಯೊ…| ಬೈಕ್‌ ಓಡಿಸುತ್ತಿರುವಾಗಲೇ ಪಟಾಕಿ ಸಿಡಿಸುತ್ತ ಬೈಕ್‌ ಸಾಹಸದ ಸ್ಟಂಟ್‌ ಮಾಡಿದ ವ್ಯಕ್ತಿ : ವೀಡಿಯೊ ವೈರಲ್ ಆದ ನಂತರ ಬಂಧನ

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ತನ್ನ ಬೈಕ್‌ನಲ್ಲಿ ಸ್ಟಂಟ್‌ ಮಾಡುತ್ತಿದ್ದು, ಬೈಕ್‌ ನಲ್ಲಿ ಪಟಾಕಿ ಸಿಡಿಸುತ್ತಲೇ ಬೈಕ್‌ ಸ್ಟಂಟ್‌ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಈತನ ಬೈಕ್ ಸ್ಟಂಟ್ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ತಮಿಳುನಾಡಿನ ತಿರುಚ್ಚಿಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ವೀಡಿಯೊದಲ್ಲಿ ವ್ಯಕ್ತಿ ತನ್ನ ಮೋಟಾರು ಬೈಕ್‌ಗೆ ಪಟಾಕಿಗಳನ್ನು ಜೋಡಿಸಿ, … Continued