ಪ್ರಸಾರ ಭಾರತಿ ಉನ್ನತೀಕರಣಕ್ಕೆ 2,539 ಕೋಟಿ ರೂ. : ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ : ‘ಪ್ರಸಾರ ಭಾರತಿ’ಯ ಉನ್ನತೀಕರಣಕ್ಕೆ 2025 – 26ನೇ ಸಾಲಿನವರೆಗೆ 2,539.61 ಕೋಟಿ ರೂ. ಮೀಸಲಿರಿಸುವ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಆಕಾಶವಾಣಿ ಮತ್ತು ದೂರದರ್ಶನದ ಪ್ರಸಾರ ವ್ಯಾಪ್ತಿ ಜಾಲವನ್ನು ವಿಸ್ತರಿಸುವ ಉದ್ದೇಶದೊಂದಿಗೆ ‘ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ಧಿ’ (ಬಿಐಎನ್‌ಡಿ) ಯೋಜನೆಯ … Continued

ಸರ್ಕಾರದ ವಿರುದ್ಧ 10,000 ಕೋಟಿ ರೂ. ನಷ್ಟ ಪರಿಹಾರದ ದಾವೆ ಹೂಡಿದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಂಡ ವ್ಯಕ್ತಿ

ಇಂದೋರ್‌: ಗ್ಯಾಂಗ್ ರೇಪ್ ಪ್ರಕರಣದಲ್ಲಿ 2022ರ ಅಕ್ಟೋಬರ್‌ನಲ್ಲಿ ಖುಲಾಸೆಗೊಂಡಿದ್ದ ಮಧ್ಯಪ್ರದೇಶದ ರಾಟ್ಲಂನ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬ, ಮಧ್ಯಪ್ರದೇಶ ಸರ್ಕಾರದ ವಿರುದ್ಧ ದಾವೆ ಹೂಡಿದ್ದಾನೆ. ‘ಸುಳ್ಳು ಆರೋಪ’ಗಳನ್ನು ಹೊರಿಸಿ 666 ದಿನಗಳ ಕಾಲ ಕಂಬಿ ಹಿಂದೆ ಕೂರುವಂತೆ ಮಾಡಿದ್ದಕ್ಕಾಗಿ ಸರ್ಕಾರ ತನಗೆ 10,006 ಕೋಟಿ ರೂ ಪರಿಹಾರ ನೀಡಬೇಕು ಎಂದು ಆತ ಒತ್ತಾಯಿಸಿದ್ದಾನೆ. ತನ್ನ ಸೆರೆವಾಸವು ತನ್ನ … Continued

ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್‌ಗೆ ₹19,744 ಕೋಟಿ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನುಷ್ಠಾನಕ್ಕೆ ₹19,744 ಕೋಟಿ ವೆಚ್ಚಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಬುಧವಾರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನ್ನು ಅನುಮೋದಿಸಿದೆ” ಎಂದು … Continued

ಯೋಗಿ ಸರ್ಕಾರಕ್ಕೆ ದೊಡ್ಡ ರಿಲೀಫ್: ಒಬಿಸಿ ಮೀಸಲು ಇಲ್ಲದೆ ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಗೆ ಅವಕಾಶ ನೀಡಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ನವದೆಹಲಿ: ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಇಲ್ಲದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತು ಮತ್ತು ಪ್ರತಿಕ್ರಿಯೆ ಸಲ್ಲಿಸಲು … Continued

ಸಿಸಿಐ ವಿಧಿಸಿದ್ದ ₹1,337 ಕೋಟಿ ದಂಡದಲ್ಲಿ ಶೇ.10ರಷ್ಟು ಠೇವಣಿ ಇರಿಸಲು ಗೂಗಲ್‌ಗೆ ಸೂಚಿಸಿದ ಎನ್‌ಸಿಎಲ್‌ಎಟಿ

ನವದೆಹಲಿ: ಭಾರತೀಯ ಸ್ಪರ್ಧಾ ಆಯೋಗವು ತನ್ನ ಮೇಲೆ ವಿಧಿಸಿದ್ದ ₹ 1,337 ಕೋಟಿ ದಂಡದ ಆದೇಶದ ವಿರುದ್ಧ ಗೂಗಲ್‌ ಸಲ್ಲಿಸಿರುವ ಮನವಿ ಆಲಿಸುವ ಮುನ್ನ ದಂಡದ ಮೊತ್ತದ ಶೇ.10ರಷ್ಟು ಹಣ ಠೇವಣಿ ಇರಿಸುವಂತೆ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯು ಗೂಗಲ್‌ಗೆ ಬುಧವಾರ ಆದೇಶಿಸಿದೆ. ಆಂಡ್ರಾಯ್ಡ್‌ ಮೊಬೈಲ್‌ ಮಾರುಕಟ್ಟೆಯಲ್ಲಿ ತನ್ನ ಪ್ರಭಾವಿ ಸ್ಥಾನವನ್ನು ದುರುಪಯೋಗಪಡಿಸಿಕೊಂಡ ಕಾರಣಕ್ಕಾಗಿ … Continued

ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಆಕೆಯ ಪುತ್ರಿ ಪ್ರಿಯಾಂಕಾ ವಾದ್ರಾ ಆಕೆಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾರೆ. ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ (ನಿರ್ವಹಣಾ ಮಂಡಳಿ) ಡಾ. ಅಜಯ್ ಸ್ವರೂಪ್ ಪ್ರಕಾರ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. … Continued

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಏರ್ ಇಂಡಿಯಾ ಪ್ರಯಾಣಿಕನಿಗೆ 30 ದಿನಗಳ ನಿಷೇಧ ಹೇರಿದ ಏರ್‌ಲೈನ್ಸ್

ನವದೆಹಲಿ: ನವೆಂಬರ್‌ನಲ್ಲಿ ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿ ವ್ಯಕ್ತಿಯನ್ನು 30 ದಿನಗಳ ಕಾಲ ವಿಮಾನಯಾನ ಸಂಸ್ಥೆಯಿಂದ ನಿಷೇಧಿಸಲಾಗಿದೆ ಎಂದು ಕಂಪನಿ ಬುಧವಾರ ತಿಳಿಸಿದೆ. ಘಟನೆ ನಡೆದು ವಾರದ ನಂತರ, ಏರ್ ಇಂಡಿಯಾ ಕೂಡ ಪ್ರಕರಣವನ್ನು ದಾಖಲಿಸಿದೆ ಮತ್ತು ಅಶಿಸ್ತಿನ ಪ್ರಯಾಣಿಕನನ್ನು ನೊ-ಫ್ಲೈ ಲಿಸ್ಟ್‌ಗೆ ಸೇರಿಸಲು ಶಿಫಾರಸು … Continued

ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಕೆಟಿಗ ರಿಷಭ್‌ ಪಂತ್ ಮುಂಬೈಗೆ ಸ್ಥಳಾಂತರ: ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ

ಡೆಹ್ರಾಡೂನ್: ಭಾರತದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ರಿಷಭ್‌ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ಬುಧವಾರ ತಿಳಿಸಿದ್ದಾರೆ. ಅವರ ತಾಯಿಯೊಂದಿಗೆ ಸಂಪರ್ಕದಲ್ಲಿದ್ದೇನೆ. ಅವರ ಅಸ್ಥಿರಜ್ಜು ಹರಿದುಹೋಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ನಾವು ಪಂತ್‌ ಅವರನ್ನು ಮುಂಬೈಗೆ ಸ್ಥಳಾಂತರಿಸುತ್ತೇವೆ” ಎಂದು ಡಿಡಿಸಿಎ … Continued

11,705 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಸ್‌ಎನ್‌ಎಲ್‌

ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) ಖಾಲಿ ಇರುವ ಬರೋಬ್ಬರಿ 11,705 ಜೂನಿಯರ್ ಟೆಲಿಕಾಂ ಆಫೀಸರ್(ಟೆಲಿಕಾಂ)(JTO)ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್​/ಆಫ್​ಲೈನ್(Online/Offline) ಎರಡರ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್​ಎನ್​ಎಲ್(BSNL)​ನ ಅಧಿಕೃತ ವೆಬ್​ಸೈಟ್​​ bsnl.co.inಗೆ ಭೇಟಿ … Continued

ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ…!

ನವದೆಹಲಿ: ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಘಟನೆ ನವೆಂಬರ್ 26 ರಂದು ನಡೆದಿದೆ. ಏರ್ ಇಂಡಿಯಾ ಈ ಕುರಿತು ಪೊಲೀಸ್ ದೂರು ದಾಖಲಿಸಿದೆ ಮತ್ತು ಪುರುಷ ಪ್ರಯಾಣಿಕರನ್ನು ‘ನೊ ಫ್ಲೈ’ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಲು ಆಂತರಿಕ ಸಮಿತಿಯನ್ನು ರಚಿಸಿದೆ … Continued