ಮತಗಟ್ಟೆ ಸಮೀಕ್ಷೆಗಳು ಠುಸ್‌ : ಹರ್ಯಾಣದಲ್ಲಿ ಬಿಜೆಪಿ ಮ್ಯಾಜಿಕ್‌ ; ಹ್ಯಾಟ್ರಿಕ್‌ ಗೆಲುವಿನತ್ತ ಕಮಲ ಪಕ್ಷ…!

ನವದೆಹಲಿ : ಹರ್ಯಾಣದಲ್ಲಿ ಎಲ್ಲ ಮತಗಟ್ಟೆ ಸಮೀಕ್ಷೆಗಳು ತಲೆಕೆಳಗಾಗುವುದು ಬಹುತೇಕ ನಿಚ್ಚಳವಾಗಿದ್ದು, ಬಿಜೆಪಿ ರಾಜ್ಯದಲ್ಲಿ ಹ್ಯಾಟ್ರಿಕ್‌ ಗೆಲುವಿನತ್ತ ದಾಪುಗಾಲು ಇಡುತ್ತಿದೆ. ಮಂಗಳವಾರ ಮಧ್ಯಾಹ್ನ 12:55ರ ಹೊತ್ತಿಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 49ರಲ್ಲಿ ಬಿಜೆಪಿ ಮುಂದಿದ್ದರೆ, ಕಾಂಗ್ರೆಸ್ 34ರಲ್ಲಿ ಮುನ್ನಡೆ ಸಾಧಿಸಿದೆ. ಏಳು ಎಕ್ಸಿಟ್ ಪೋಲ್‌ಗಳ ಪ್ರಕಾರ ಕಾಂಗ್ರೆಸ್ 55 ಸ್ಥಾನಗಳನ್ನು ಗೆಲ್ಲುತ್ತದೆ, ಹಾಗೂ … Continued

ಕೇವಲ 60 ನಿಮಿಷಗಳಲ್ಲಿ ನ್ಯೂಯಾರ್ಕ್‌ ನಿಂದ ಲಂಡನ್‌ ಗೆ …! 2025 ರಲ್ಲಿ ಪರೀಕ್ಷಾರ್ಥ ಹಾರಾಟಕ್ಕೆ ಸಿದ್ಧವಾದ ಹೈಪರ್ಸಾನಿಕ್ ಜೆಟ್

ಕೇವಲ ಒಂದು ಗಂಟೆಯಲ್ಲಿ ಲಂಡನ್‌ನಿಂದ ನ್ಯೂಯಾರ್ಕ್‌ಗೆ ಹಾರಬಲ್ಲ ಕ್ರಾಂತಿಕಾರಿ ಹೈಪರ್‌ಸಾನಿಕ್ ಜೆಟ್, 2025 ರಲ್ಲಿ ತನ್ನ ಪರೀಕ್ಷಾರ್ಥ ಹಾರಾಟಕ್ಕೆ ಸಿದ್ಧವಾಗಿದೆ. ಸ್ಟಾರ್ಟ್‌ಅಪ್ ಎಂಜಿನಿಯರಿಂಗ್ ಕಂಪನಿ ವೀನಸ್ ಏರೋಸ್ಪೇಸ್ ಇದನ್ನು ಅಭಿವೃದ್ಧಿಪಡಿಸಿದೆ, ಈ ಭವಿಷ್ಯದ ವಿಮಾನವು ಬೆರಗುಗೊಳಿಸುವ ವೇಗದಲ್ಲಿ ಹಾರಾಟ ನಡೆಸಲಿದೆ. ಇಂಜಿನ್ ಅನ್ನು ಹೆಚ್ಚಿನ ಎತ್ತರದಲ್ಲಿ ದೀರ್ಘ ಪ್ರಯಾಣಕ್ಕಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ಮ್ಯಾಕ್ 6 ರ … Continued

ಸಂಜೋಯ ರಾಯ್ ನಿಂದ ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ : ಆರ್‌.ಜಿ. ಕರ್ ಪ್ರಕರಣದಲ್ಲಿ ಸಿಬಿಐ ಚಾರ್ಜ್‌ಶೀಟ್

ಕೋಲ್ಕತ್ತಾ : ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯನಿರತ ತರಬೇತಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾನೆ ಎಂದು ಕೋಲ್ಕತ್ತಾ ಪೊಲೀಸರೊಂದಿಗೆ ಗುತ್ತಿಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸಂಜೋಯ ರಾಯ್ ವಿರುದ್ಧ ಸಿಬಿಐ ಆರೋಪ ಹೊರಿಸಿದೆ. ಸೋಮವಾರ ಮಧ್ಯಾಹ್ನ ಸೀಲ್ದಾಹ್‌ನಲ್ಲಿರುವ ವಿಶೇಷ ನ್ಯಾಯಾಲಯದಲ್ಲಿ ಕೇಂದ್ರೀಯ ಸಂಸ್ಥೆ ಆರೋಪಪಟ್ಟಿ ಸಲ್ಲಿಸಲಿದೆ. ವಿರಾಮದ … Continued

ಮಾಲ್ಡೀವ್ಸ್‌ ಗೆ ಭೇಟಿ | ಮುಯಿಝು ಆಹ್ವಾನ ಸ್ವೀಕರಿಸಿದ ಪ್ರಧಾನಿ ಮೋದಿ : ರುಪೇ ಕಾರ್ಡ್‌ ಬಿಡುಗಡೆಗೆ ಒಪ್ಪಿಗೆ, ಬೃಹತ್ ಕರೆನ್ಸಿ ಸ್ವಾಪ್ ಒಪ್ಪಂದ

ನವದೆಹಲಿ : ಮಾಲ್ಡೀವ್ಸ್‌ಗೆ ಭೇಟಿ ನೀಡುವಂತೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಆಹ್ವಾನವನ್ನು ಪ್ರಧಾನಿ ನರೇಂದ್ರ ಮೋದಿ ಸ್ವೀಕರಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ತಿಳಿಸಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮಾತನಾಡಿ, ಪ್ರಧಾನಿ ಮೋದಿ ಅವರು ಮಾಲ್ಡೀವ್ಸ್‌ ಅಧ್ಯಕ್ಷರಿಂದ ಆಹ್ವಾನವನ್ನು ಸ್ವೀಕರಿಸಿದ ನಂತರ ದ್ವೀಪಸಮೂಹ ರಾಷ್ಟ್ರಕ್ಕೆ ಭೇಟಿ ನೀಡುವ ಆಹ್ವಾನ … Continued

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ತಿರುವನಂತಪುರಂ: ಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್‌ಲೈನ್ ಬುಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ದಿನಕ್ಕೆ ಗರಿಷ್ಠ 80,000 ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. “ಈ ಬಾರಿ ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ಇರುವುದಿಲ್ಲ. ಯಾತ್ರಿಗಳು ಬುಕ್ … Continued

ಹೊಟ್ಟೆ ನೋವೆಂದು ಹೋದ ಮಹಿಳೆಯ ಹೊಟ್ಟೆಯೊಳಗಿತ್ತು 2 ಕೆಜಿ ತೂಕದ ಕೂದಲಿನ ಉಂಡೆ…!

ಬರೇಲಿ : ಉತ್ತರ ಪ್ರದೇಶದ ಬರೇಲಿಯ ವೈದ್ಯರು 31 ವರ್ಷದ ಮಹಿಳೆಯ ಹೊಟ್ಟೆಯಿಂದ 2 ಕಿಲೋಗ್ರಾಂ ತೂಕದ ಕೂದಲಿನ ಉಂಡೆಯನ್ನು ಹೊರತೆಗೆದಿದ್ದಾರೆ. ಮಹಿಳೆ ಅಪರೂಪದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು, ಇದರಿಂದಾಗಿ ಮಹಿಳೆ 15 ವರ್ಷಗಳಿಂದ ಕೂದಲು ತಿನ್ನುತ್ತಿದ್ದರು ಎಂದು ಹೇಳಲಾಗಿದೆ. ದೀರ್ಘಕಾಲದವರೆಗೆ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದ ರೋಗಿಯು ಟ್ರೈಕೊಲೊಟೊಮೇನಿಯಾ ಎಂಬ ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದರು … Continued

ಐಎಎಫ್‌ನ ಚೆನ್ನೈ ಏರ್‌ಶೋ : ಕನಿಷ್ಠ 5 ಪ್ರೇಕ್ಷಕರು ಸಾವು, ಡಿಹೈಡ್ರೇಶನ್‌ನಿಂದ ಸುಮಾರು 100 ಮಂದಿ ಆಸ್ಪತ್ರೆಗೆ ದಾಖಲು

ಚೆನ್ನೈ: ಭಾನುವಾರ ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಪಡೆಯ (IAF) ವೈಮಾನಿಕ ಪ್ರದರ್ಶನದ ವೇಳೆ ನಿರ್ಜಲೀಕರಣ (dehydration)ದಿಂದಾಗಿ ಕನಿಷ್ಠ ಐವರು ಪ್ರೇಕ್ಷಕರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 100 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು ಆರೋಗ್ಯ ಇಲಾಖೆಯ ಪ್ರಕಾರ, 93 ಜನರು ಶಾಖದ ಹೊಡೆತ ಮತ್ತು ನಿರ್ಜಲೀಕರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಹೆಚ್ಚಿನವರು ಅಗತ್ಯ … Continued

₹ 1,800 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶ : ಇಬ್ಬರ ಬಂಧನ

ನವದೆಹಲಿ/ಭೋಪಾಲ್: ಗುಜರಾತ್‌ನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮತ್ತು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಮಧ್ಯಪ್ರದೇಶದ ಭೋಪಾಲ್ ಬಳಿಯ ಬಾಗ್ರೋಡಾ ಕೈಗಾರಿಕಾ ಪ್ರದೇಶದಲ್ಲಿ ಬೃಹತ್ ಡ್ರಗ್ಸ್ ತಯಾರಿಕಾ ದಂಧೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳು ಸುಮಾರು ₹ 1,800 ಕೋಟಿ ಮೌಲ್ಯದ ಮೆಫೆಡ್ರೋನ್ (MD) ಔಷಧಗಳನ್ನು … Continued

ವೀಡಿಯೊ ..| ʼರಾಮಲೀಲಾʼ ಪ್ರದರ್ಶನದ ವೇಳೆ ಅಭಿನಯಿಸುತ್ತಿದ್ದಾಗಲೇ ಹೃದಯಾಘಾತದಿಂದ ರಾಮನ ಪಾತ್ರಧಾರಿ ಸಾವು

ನವದೆಹಲಿ : ರಾಮಲೀಲಾದಲ್ಲಿ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ದೆಹಲಿಯ ಶಹದಾರದಲ್ಲಿರುವ ಜೈ ಶ್ರೀ ರಾಮಲೀಲಾ ವಿಶ್ವಕರ್ಮ ನಗರದಲ್ಲಿ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಪೂರ್ವ ದೆಹಲಿಯ ನಿವಾಸಿ ಸುಶೀಲ ಕೌಶಿಕ (45) ಅವರು ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಚಿನ್ನ ಮತ್ತು ಬೆಳ್ಳಿ ಆಭರಣಗಳಂತೆ … Continued

ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಬೆಂಕಿ : ಒಂದೇ ಕುಟುಂಬದ 7 ಮಂದಿ ಸಾವು

ಮುಂಬೈ: ಮುಂಬೈನ ಚೆಂಬೂರಿನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಾವಿಗೀಡಾಗಿದ್ದಾರೆ. ಸಿದ್ದಾರ್ಥ ಕಾಲೋನಿಯಲ್ಲಿರುವ ಕಟ್ಟಡದಲ್ಲಿ ಭಾನುವಾರ ಮುಂಜಾನೆ 5:20ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಟ್ಟಡದ ನೆಲ ಮಹಡಿಯನ್ನು ಅಂಗಡಿಯಾಗಿ ಮತ್ತು ಮೇಲಿನ ಮಹಡಿಯನ್ನು ನಿವಾಸವಾಗಿ ಬಳಸಲಾಗುತ್ತಿತ್ತು ಎಂದು … Continued