ವಿದೇಶೀ ವಿನಿಮಯ ಸಂಗ್ರಹ : 700 ಶತಕೋಟಿ ಡಾಲರ್ ದಾಟಿದ ವಿಶ್ವದ 4ನೇ ರಾಷ್ಟ್ರವಾದ ಭಾರತ…

ನವದೆಹಲಿ: ಇದೇ ಮೊದಲ ಬಾರಿಗೆ, ಭಾರತದ ವಿದೇಶಿ ವಿನಿಮಯ (forex) ಮೀಸಲು ಸಂಗ್ರಹ $700 ಬಿಲಿಯನ್ ಗಡಿಯನ್ನು ದಾಟಿದೆ. ಭಾರತದ ವಿದೇಶಿ ವಿನಿಮಯ ಮೀಸಲು ಸತತ ಏಳು ವಾರಗಳ ಗಮನಾರ್ಹ ಬೆಳವಣಿಗೆಯ ಸರಣಿಯನ್ನು ಮುಂದುವರೆಸಿದೆ. ಈ ಸಾಧನೆಯೊಂದಿಗೆ, ಭಾರತವು ಚೀನಾ, ಜಪಾನ್ ಮತ್ತು ಸ್ವಿಟ್ಜರ್ಲೆಂಡ್‌ ನಂತರ ಈ ಮೈಲಿಗಲ್ಲು ದಾಟಿದ ವಿಶ್ವದ ನಾಲ್ಕನೇ ಆರ್ಥಿಕತೆಯಾಗಿ ಹೊರಹೊಮ್ಮಿದೆ. … Continued

ಅಹಮದ್‌ ನಗರ ಜಿಲ್ಲೆಗೆ ಅಹಲ್ಯಾನಗರ ಎಂದು ಮರುನಾಮಕರಣ : ಕೇಂದ್ರ ಸರ್ಕಾರ ಒಪ್ಪಿಗೆ

ಮುಂಬೈ: ಮಹಾರಾಷ್ಟ್ರದ ಅಹಮದ್‌ ನಗರ ಜಿಲ್ಲೆಯ ಹೆಸರನ್ನು ಅಹಲ್ಯಾನಗರ ಎಂದು ಮರುನಾಮಕರಣ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ಈ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಾಹಿತಿ ನೀಡಿದ್ದು, ಅಹಮದ್‌ ನಗರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ಕಳೆದ ಮಾರ್ಚ್‌ನಲ್ಲಿ ರಾಜ್ಯ ಸಚಿವ ಸಂಪುಟ ಕೈಗೊಂಡಿತ್ತು. ನಂತರ ಕೇಂದ್ರದದ ಸಮ್ಮತಿಗಾಗಿ ಕಳುಹಿಸಲಾಗಿತ್ತು … Continued

ವಿಧಾನಸಭೆ ಚುನಾವಣೆ : ಹರ್ಯಾಣದಲ್ಲಿ ಕಾಂಗ್ರೆಸ್ಸಿಗೆ ಜೈ, ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಎಂದ ಬಹುತೇಕ ಎಕ್ಸಿಟ್‌ ಪೋಲ್‌ಗಳು…

ನವದೆಹಲಿ : ಹರ್ಯಾಣದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಶನಿವಾರ ಮುಕ್ತಾಯವಾಗಿದ್ದು, ಕಾಂಗ್ರೆಸ್‌ ಪಕ್ಷವು ಮುಂದಿನ ಸರ್ಕಾರವನ್ನು ರಚಿಸುವ ಸಾಧ್ಯತೆಯಿದೆ ಎಂದು ಮತಗಟ್ಟೆ ಸಮೀಕ್ಷೆ (exit polls)ಗಳು ಅಂದಾಜಿಸಿವೆ. ಹೀಗಾದರೆ ಬಿಜೆಪಿಯ 10 ವರ್ಷಗಳ ಅಧಿಕಾರದ ಓಟಕ್ಕೆ ತಡೆ ಬೀಳಲಿದೆ. ಒಟ್ಟು ಏಳು ಎಕ್ಸಿಟ್ ಪೋಲ್‌ಗಳು ಹರಿಯಾಣದ 90 ಸ್ಥಾನಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು … Continued

ಸಾವರ್ಕರ್ ಮಾನನಷ್ಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ಪುಣೆ : ವಿನಾಯಕ ದಾಮೋದರ್ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಕ್ಟೋಬರ್ 23 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಪುಣೆ ನ್ಯಾಯಾಲಯವು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. . ಕಳೆದ ವರ್ಷ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ … Continued

ವೀಡಿಯೊ..| ಮತಚಲಾಯಿಸಲು ಮತಗಟ್ಟೆಗೆ ಕುದುರೆ ಏರಿ ಬಂದ ಕುರುಕ್ಷೇತ್ರದ ಸಂಸದ-ಕೈಗಾರಿಕೋದ್ಯಮಿ ನವೀನ್‌ ಜಿಂದಾಲ್‌…!

ಕುರುಕ್ಷೇತ್ರ (ಹರಿಯಾಣ): ಹರಿಯಾಣ ವಿಧಾನಸಭಾ ಚುನಾವಣೆಗೆ ಶನಿವಾರ ಮತದಾನ ಮಾಡಲು ಬಿಜೆಪಿ ಸಂಸದ ಮತ್ತು ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಅವರು ಕುದುರೆಯ ಮೇಲೆ ಬಂದು ಮತಚಲಾಯಿಸಿದ್ದಾರೆ. ಅವರು ಮತದಾನ ಕೇಂದ್ರದವರೆಗೆ ಕುದುರೆ ಸವಾರಿ ಮಾಡಿಕೊಂಡು ಮತಗಟ್ಟೆಗೆ ಆಗಮಿಸುತ್ತಿರುವ ವೀಡಿಯೊ ವೈರಲ್‌ ಆಗಿದೆ. ಮತ ಚಲಾಯಿಸಲು ಜಿಂದಾಲ್ ಅವರು ಕುದುರೆಯ ಮೇಲೆ ಬರಲು ನಿರ್ಧರಿಸಿದ್ದಾರೆ ಏಕೆಂದರೆ ಅದು … Continued

ಎಸ್‌ಸಿ, ಎಸ್‌ಟಿ ಉಪ ವರ್ಗೀಕರಣ ತೀರ್ಪು ; ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅವುಗಳ ಆಂತರಿಕ ಹಿಂದುಳಿದಿರುವಿಕೆ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ರಾಜ್ಯಗಳಿಗೆ ಇರುವ ಅಧಿಕಾರವನ್ನು ಆಗಸ್ಟ್‌ 1ರಂದು ಎತ್ತಿ ಹಿಡಿದಿದ್ದ ತನ್ನ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚಿಗೆ ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ. ಮರುಪರಿಶೀಲನೆ ಅರ್ಜಿ ಸಲ್ಲಿಸಲು ಅನುಮತಿ ನೀಡಲಾಗಿತ್ತು. ಮುಕ್ತ ನ್ಯಾಯಾಲಯದಲ್ಲಿ ಮರುಪರಿಶೀಲನಾ … Continued

ಕುಪ್ವಾರಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ “ಆಪರೇಷನ್ ಗುಗಲ್ಧಾರ್” ಅಡಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ ಎಂದು ಎಂದು ಸೇನೆ ಶನಿವಾರ ಬೆಳಿಗ್ಗೆ ತಿಳಿಸಿದೆ. ಉಗ್ರರನ್ನು ಹತ್ಯೆ ಮಾಡುವ ಮೊದಲು ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇಬ್ಬರನ್ನು ಹತ್ಯೆ ಮಾಡಲಾಗಿದ್ದು ಅವರಿಗೆ ಸೇರಿದ ವಸ್ತುಗಳನ್ನು … Continued

ವಿವಾದಾತ್ಮಕ ಧಾರ್ಮಿಕ ಬೋಧಕ ಝಾಕಿರ್ ನಾಯ್ಕ್ ‘ಎಕ್ಸ್’ ಖಾತೆಗೆ ಭಾರತದಲ್ಲಿ ನಿರ್ಬಂಧ

ನವದೆಹಲಿ: ವಿವಾದಾತ್ಮಕ ಇಸ್ಲಾಮಿಕ್ ಬೋಧಕ ಜಾಕಿರ್ ನಾಯ್ಕ್‌ ಅವರ ‘ಎಕ್ಸ್’ (ಹಿಂದೆ ಟ್ವಿಟರ್) ನಲ್ಲಿನ ಸಾಮಾಜಿಕ ಮಾಧ್ಯಮ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಪ್ರಸ್ತುತ ಪಾಕಿಸ್ತಾನಕ್ಕೆ ಒಂದು ತಿಂಗಳ ಭೇಟಿಯಲ್ಲಿರುವ ಜಾಕಿರ್ ನಾಯ್ಕ್‌ ಅವರನ್ನು ಸ್ವಾಗತಿಸಿದ್ದಕ್ಕಾಗಿ ಪಾಕಿಸ್ತಾನವನ್ನು ಟೀಕಿಸಿದ ನಂತರ ಈ ಕ್ರಮವನ್ನು ಅನುಸರಿಸಲಾಯಿತು. ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ … Continued

ಸುಷ್ಮಾ ಸ್ವರಾಜ್ ಭೇಟಿಯ 9 ವರ್ಷಗಳ ನಂತರ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ವಿದೇಶಾಂಗ ಸಚಿವ ಜೈಶಂಕರ

ನವದೆಹಲಿ: ಎಸ್. ಜೈಶಂಕರ ಅವರು ಶಾಂಘೈ ಸಹಕಾರ ಸಂಘಟನೆ (SCO) ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಈ ತಿಂಗಳ ಕೊನೆಯಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಒಂಬತ್ತು ವರ್ಷಗಳ ನಂತರ ಪಾಕಿಸ್ತಾನಕ್ಕೆ ಭೇಟಿ ನೀಡುವ ಮೊದಲ ವಿದೇಶಾಂಗ ಸಚಿವರಾಗಿದ್ದಾರೆ. 2015ರಲ್ಲಿ ಸುಷ್ಮಾ ಸ್ವರಾಜ್ ಪಾಕಿಸ್ತಾನಕ್ಕೆ ಕೊನೆಯ ಬಾರಿಗೆ ಭೇಟಿ ನೀಡಿದ್ದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ … Continued

ವೀಡಿಯೊ | ನಂಬಲಸಾಧ್ಯ ; ರಾಮ್-ರಾಮ್ ಎನ್ನುವ ಮಾಲೀಕನ ಅನುಕರಿಸಿ ರಾಮ್‌ ರಾಮ್‌ ಎಂದು ಹೇಳುವ ನಾಯಿ…!? ವೀಡಿಯೊ ವೈರಲ್‌

ಸೈಬೀರಿಯನ್ ಹಸ್ಕಿಯ ವಿಶಿಷ್ಟ ಪ್ರತಿಭೆ ಜನರ ಹೃದಯವನ್ನು ಗೆದ್ದಿದೆ. ಅದರ ಮಾಲೀಕ ಸೂಚನೆ ನೀಡಿದಾಗ ಅದು ರಾಮ್‌ ರಾಮ್‌ ಎಂದು ಹೇಳಿದಂತೆ ಭಾಸುವಾಗುವ ವೀಡಿಯೊವೊಂದು ವೈರಲ್‌ ಆಗಿದೆ. ಅಂತರ್ಜಾಲದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ಹಸ್ಕಿ ತನ್ನ ಮಾಲೀಕ ರಾಮ್‌-ರಾಮ್‌ ಎಂದು ಹೇಳಿದಾಗ ಪ್ರತಿಯಾಗಿ ರಾಮ್‌-ರಾಮ್‌ ಎಂದು ಹೇಳಿಂದತೆ ಭಾಸವಾಗುತ್ತದೆ. ವೀಡಿಯೊದ ಆರಂಭದಲ್ಲಿ, ಕ್ಯಾಮೆರಾದ ಹಿಂದಿನ ವ್ಯಕ್ತಿಯೊಬ್ಬರು ನಾಯಿಯನ್ನು … Continued