ಹೊಸ ವೀಡಿಯೊದಲ್ಲಿ ಭಾರತಕ್ಕೆ ‘ಹಮಾಸ್ ಮಾದರಿ ದಾಳಿ’ಯ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ | ವೀಡಿಯೊ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ ಹೊಸ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಆತ “ಭಾರತವು ಪಂಜಾಬ್ ಅನ್ನು ಆಕ್ರಮಿಸಿಕೊಳ್ಳಲು ಹೋದರೆ ಹಮಾಸ್ ತರಹದ ದಾಳಿ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ವೀಡಿಯೊದಲ್ಲಿ, ಪನ್ನುನ್, “(ಪಿಎಂ) ಮೋದಿ, ಪ್ಯಾಲೆಸ್ತೀನ್-ಇಸ್ರೇಲ್ ಸಂಘರ್ಷದಿಂದ ಕಲಿಯಿರಿ. ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಆಕ್ರಮಣದಲ್ಲಿರುವ ಜನರು ಪ್ರತಿಕ್ರಿಯಿಸುತ್ತಾರೆ ಮತ್ತು ಹಿಂಸಾಚಾರವು … Continued

2010ರ ಪ್ರಚೋದನಕಾರಿ ಭಾಷಣ ಪ್ರಕರಣ : ಲೇಖಕಿ ಅರುಂಧತಿ ರಾಯ್, ಕಾಶ್ಮೀರದ ಪ್ರಾಧ್ಯಾಪಕರ ವಿರುದ್ಧ ಕಾನೂನು ಕ್ರಮಕ್ಕೆ ದೆಹಲಿ ಎಲ್‌ಜಿ ಅನುಮೋದನೆ

ನವದೆಹಲಿ: ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದ 2010ರ ಪ್ರಕರಣದಲ್ಲಿ ಲೇಖಕಿ ಅರುಂಧತಿ ರಾಯ್ ಮತ್ತು ಮಾಜಿ ಕಾಶ್ಮೀರಿ ಪ್ರಾಧ್ಯಾಪಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸುಶೀಲ್ ಪಂಡಿತ ಮತ್ತು ‘ರೂಟ್ಸ್ ಇನ್ ಕಾಶ್ಮೀರ್’ ಎಂಬ ಹೆಸರಿನ ಕಾಶ್ಮೀರಿ ಪಂಡಿತ ಸಂಘಟನೆಯು … Continued

‘ಭಾರತ ಇಸ್ರೇಲ್‌ ಜೊತೆಗೆ ನಿಂತಿದೆ’: ಹಮಾಸ್ ದಾಳಿ ಕುರಿತು ಇಸ್ರೇಲ್ ಪ್ರಧಾನಿಯೊಂದಿಗೆ ಮಾತನಾಡಿದ ಪ್ರಧಾನಿ ಮೋದಿ

ನವದೆಹಲಿ: ನಡೆಯುತ್ತಿರುವ ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮ್ಮ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ ಹಾಗೂ ಭಾರತವು “ಎಲ್ಲಾ ರೂಪಗಳಲ್ಲಿ ಭಯೋತ್ಪಾದನೆಯನ್ನು ಖಂಡಿಸುತ್ತದೆ” ಎಂದು ಹೇಳಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ ಅವರು ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮಾಡಿದ್ದು, ಅವರು “ಸದ್ಯದ ಪರಿಸ್ಥಿತಿಯ ಕುರಿತು … Continued

ಕಾಶ್ಮೀರ: ಶೋಪಿಯಾನ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರನ್ನು ಮೊರಿಫತ್ ಮಕ್ಬೂಲ್ ಮತ್ತು ಅಬ್ರಾರ್ ಎಂದು ಕರೆಯಲ್ಪಡುವ ಜಾಜಿಮ್ ಫಾರೂಕ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ … Continued

ವಿಶ್ವಕಪ್ 2023: ಬ್ಯಾಟರ್‌ ಶುಭಮನ್ ಗಿಲ್ ಆಸ್ಪತ್ರೆಗೆ ದಾಖಲು

ಚೆನ್ನೈ: ಭಾರತದ ತಂಡದ ಆರಂಭಿಕ ಆಟಗಾರ  ಶುಭಮನ್ ಗಿಲ್ ಅವರನ್ನು ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತವು ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕಾಗಿ ದೆಹಲಿಗೆ ಹೊರಡುವ ಮುನ್ನ ಗಿಲ್ ಅವರ ಪ್ಲೇಟ್‌ಲೆಟ್ ಎಣಿಕೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಶುಭಮನ್ ಗಿಲ್ ಅವರನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ವಿಶ್ವಕಪ್‌-2023 ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ … Continued

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ : 5 ರಾಜ್ಯಗಳಲ್ಲಿ ಎಬಿಪಿ-ಸಿವೋಟರ್ ಸಮೀಕ್ಷೆ- ತುರುಸಿನ ಸ್ಪರ್ಧೆಯಲ್ಲಿ ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಲ್ಪ ಮುಂದೆ, ರಾಜಸ್ಥಾನದಲ್ಲಿ ಬಿಜೆಪಿಗೆ ಬಹುಮತ ಸಾಧ್ಯತೆ

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ಮತದಾನವು ನವೆಂಬರ್ 7 ರಂದು ಪ್ರಾರಂಭವಾಗಿ ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದೆ. ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತ್ತು ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. … Continued

ಹಮಾಸ್ ಉಗ್ರರ ಸದೆಬಡಿಯಲು ಗಾಜಾ ‘ಸಂಪೂರ್ಣ ಮುತ್ತಿಗೆ’ಗೆ ಇಸ್ರೇಲ್‌ ಆದೇಶ : ಒಳನುಗ್ಗಲು 3 ಲಕ್ಷ ಸೈನಿಕರು ಸಜ್ಜು ; ವಿದ್ಯುತ್, ಆಹಾರ ಪೂರೈಕೆ ಸ್ಥಗಿತ

ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ಗಾಜಾದ ಮೇಲೆ ‘ಸಂಪೂರ್ಣ ಮುತ್ತಿಗೆ’ ಆದೇಶ ನೀಡಿದ್ದಾರೆ, ಹಮಾಸ್ ಉಗ್ರಗಾಮಿಗಳ ದಾಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್‌ ಅಧಿಕಾರಿಗಳು ಪ್ರದೇಶಕ್ಕೆ ವಿದ್ಯುತ್, ಆಹಾರ ಮತ್ತು ಇಂಧನದ ಪೂರೈಕೆ ಕಡಿತಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ. ಈಗಾಗಲೇ ಇಸ್ರೇಲ್ ವಾಯು ಪಡೆ ಗಾಜಾ ಪಟ್ಟಿಯಲ್ಲಿ ಇರುವ ಹಮಾಸ್ ಉಗ್ರರ 500ಕ್ಕೂ ಹೆಚ್ಚು ನೆಲೆಗಳ ಮೇಲೆ … Continued

ಪಟಾಕಿ ಘಟಕದಲ್ಲಿ ಬೆಂಕಿ ಅವಘಡ ; ಒಂಬತ್ತು ಸಾವು, ಐವರಿಗೆ ಗಾಯ

ಚೆನ್ನೈ: ತಮಿಳುನಾಡಿನ ಅರಿಯಲೂರು ಜಿಲ್ಲೆಯಲ್ಲಿ ಸೋಮವಾರ ಪಟಾಕಿ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಘಟನೆ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದ್ದು, ಹೊತ್ತಿಕೊಂಡಿದ್ದ ಬೆಂಕಿಯನ್ನು ಅಗ್ನಿಶಾಮಕ ಇಲಾಖೆಯವರು ನಂದಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅರಿಯಲೂರು ಜಿಲ್ಲೆಯ ವೀರಗಳೂರು ಗ್ರಾಮದಲ್ಲಿ ಖಾಸಗಿ ಘಟಕದಲ್ಲಿ ಈ ಘಟನೆ … Continued

ರಾಜಸ್ಥಾನ ವಿಧಾನಸಭೆ ಚುನಾವಣೆ: 41 ಅಭ್ಯರ್ಥಿಗಳ ಬಿಜೆಪಿಯ ಮೊದಲ ಪಟ್ಟಿಯಲ್ಲಿ 7 ಸಂಸದರ ಹೆಸರು, ವಸುಂಧರಾ ರಾಜೆ ನಿಷ್ಠರ ಹೆಸರಿಲ್ಲ…

ನವದೆಹಲಿ: ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. 41 ಅಭ್ಯರ್ಥಿಗಳ ಪಟ್ಟಿಯಲ್ಲಿ ಏಳು ಸಂಸದರ ಹೆಸರಿದೆ. ಆದರೆ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ನಿಷ್ಠಾವಂತರಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಶಾಸಕ ನರಪತ್ ಸಿಂಗ್ ರಾಜ್‌ವೀ ಮತ್ತು ರಾಜ್‌ಪಾಲ್ ಸಿಂಗ್ ಶೇಖಾವತ್ … Continued

ಹರ್ದೀಪ್ ನಿಜ್ಜರ್ ಹತ್ಯೆ ಹಿಂದೆ ಚೀನಾ ? ಇದು ಚೀನಾದ ದೊಡ್ಡ ಪಿತೂರಿ ಎಂದು ಆರೋಪಿಸಿದ ಬ್ಲಾಗರ್

ಸ್ವತಂತ್ರ ಬ್ಲಾಗರ್ ಆಗಿರುವ ಜೆನ್ನಿಫರ್ ಜೆಂಗ್ ಅವರು ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಚೀನಾದ ಕಮ್ಯುನಿಸ್ಟ್ ಪಕ್ಷ (ಸಿಸಿಪಿ) ಪಾತ್ರವಿದೆ ಎಂದು ಸೂಚಿಸುವ ಆರೋಪವನ್ನು ಮುಂದಿಟ್ಟಿದ್ದಾರೆ. “ಭಾರತ ಮತ್ತು ಪಶ್ಚಿಮದ ನಡುವೆ ಭಿನ್ನಾಭಿಪ್ರಾಯವನ್ನು ಸೃಷ್ಟಿಸಿ ಭಾರತವನ್ನು ದೂಷಿಸುವಂತೆ ಮಾಡುವುದು ಚೀನಾದ ಉದ್ದೇಶವಾಗಿದೆ” ಎಂದು ಝೆಂಗ್ ಆರೋಪಿಸಿದ್ದಾರೆ. ತೈವಾನ್‌ಗೆ ಸಂಬಂಧಿಸಿದಂತೆ ಕ್ಸಿ ಜಿನ್‌ಪಿಂಗ್ … Continued