ಎನ್‌ಸಿಪಿಯ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಲೋಕಸಭಾ ಸದಸ್ಯತ್ವದಿಂದ ಅನರ್ಹ

ನವದೆಹಲಿ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮೊಹಮ್ಮದ್ ಫೈಜಲ್ ಪಿಪಿ ಅವರನ್ನು ಬುಧವಾರ (ಅಕ್ಟೋಬರ್ 4) ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಕೊಲೆ ಯತ್ನ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಮಾಡಿದ ಮನವಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದ ನಂತರ ಲೋಕಸಭೆಯ ಸಚಿವಾಲಯದಿಂದ ಈ ಕ್ರಮ ಬಂದಿದೆ. ಕೇರಳದ ಗೌರವಾನ್ವಿತ ಉಚ್ಚ ನ್ಯಾಯಾಲಯದ ದಿನಾಂಕ 03.10.2023 ರ ಆದೇಶದ … Continued

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಎರಡನೇ ಆಘಾತ: ಎನ್‌ಡಿಎ ಮೈತ್ರಿಕೂಟದಿಂದ ಹೊರಬಿದ್ದ ನಟ ಪವನ್ ಕಲ್ಯಾಣ ಜನಸೇನಾ ಪಕ್ಷ

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮತ್ತೊಂದು ಆಘಾತವಾಗಿ, ನಟ ಪವನ ಕಲ್ಯಾಣ ನೇತೃತ್ವದ ಜನಸೇನಾ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದಿದೆ ಹಾಗೂ ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಬೆಂಬಲಿಸಲು ನಿರ್ಧರಿಸಿದೆ. ಟಿಡಿಪಿಯನ್ನು ಬೆಂಬಲಿಸುವ ಸಲುವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ತೊರೆದಿದ್ದೇನೆ ಎಂದು ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಪವನ್ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಬೆಂಗಳೂರು : ಬಿಜೆಪಿ ಯುವ ಮೋರ್ಚಾದ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ಕೆ ಇಸ್ಮಾಯಿಲ್‌ ಶಫಿ (ಆರೋಪಿ 9), ಕೆ ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಮತ್ತು ಎಂ ಶಾಹೀದ್‌ (ಆರೋಪಿ 11) ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಚ್‌.ಬಿ. ಪ್ರಭಾಕರ ಶಾಸ್ತ್ರಿ … Continued

ಇಟಲಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ನಟಿ ಗಾಯತ್ರಿ ಜೋಶಿ-ಪತಿ ವಿಕಾಸ ಪಾರು, ಇಬ್ಬರು ಸಾವು | ವೀಡಿಯೊ

ಮುಂಬೈ: ಶಾರುಖ್ ಖಾನ್ ಅಭಿನಯದ ‘ಸ್ವದೇಸ್’ ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಗಾಯತ್ರಿ ಜೋಶಿ ಅವರು ತಮ್ಮ ಪತಿ ವಿಕಾಸ್ ಒಬೆರಾಯ್ ಅವರೊಂದಿಗೆ ಇಟಲಿಯಲ್ಲಿ ಪ್ರಯಾಣಿಸುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ. ನಂತರ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸ್ವಿಟ್ಜರ್ಲೆಂಡ್‌ ದಂಪತಿ ಮೃತಪಟ್ಟಿದ್ದಾರೆ. ಗಾಯತ್ರಿ ಮತ್ತು ಅವರ ಪತಿ ಸಾರ್ಡಿನಿಯಾದಲ್ಲಿ ವಿಹಾರಕ್ಕೆ ತೆರಳಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯತ್ರಿ … Continued

2024ರ ಲೋಕಸಭೆ ಚುನಾವಣೆ-ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ : ನರೇಂದ್ರ ಮೋದಿ Vs ರಾಹುಲ್‌ ಗಾಂಧಿ ; ಸಾಮಾನ್ಯ ವರ್ಗ, ಮುಸ್ಲಿಮರ ಒಲವು ಯಾರತ್ತ..?

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಮುಸ್ಲಿಮರ ಮೊದಲ ಆಯ್ಕೆಯಾಗಿದ್ದಾರೆ. ಹಾಗೂ ಮುಂದುವರಿದ ವರ್ಗಗಳ ಮತದಾರರಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಮೊದಲ ಆದ್ಯತೆಯ ಆಯ್ಕೆಯಾಗಿದ್ದಾರೆ ಎಂದು ಕಂಡುಬಂದಿದೆ. ಸಮೀಕ್ಷೆಯ ಪ್ರಕಾರ, 70 %ರಷ್ಟು ಮುಂದುವರಿದ ಅಥವಾ ಸಾಮಾನ್ಯ ವರ್ಗಗಳ ಮತದಾರರು ನರೇಂದ್ರ ಮೋದಿ ಅವರು … Continued

ಏಷ್ಯನ್ ಗೇಮ್ಸ್ 2023 : 4×400 ಮೀ ಓಟದಲ್ಲಿ ಚಿನ್ನ ಗೆದ್ದ ಭಾರತದ ಪುರುಷರ ರಿಲೇ ತಂಡ

ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ ಅಕ್ಟೋಬರ್ 4, ಬುಧವಾರ ವಿವಿಧ ವಿಭಾಗಗಳಲ್ಲಿ ಕ್ರೀಡೆಯಲ್ಲಿ ಅಥ್ಲೆಟಿಕ್ಸ್ ಭಾರತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪದಕಗಳನ್ನು ತಂದು ಕೊಡುವುದನ್ನು ಮುಂದುವರೆಸಿದೆ. ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಅವರ ಚಿನ್ನ ಸೇರಿದಂತೆ ಡಬಲ್ ಪೋಡಿಯಂ ಫಿನಿಶ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್‌ಗಳ ಸಾಧನೆಯನ್ನು ಮುಖ್ಯವಾಗಿಸಿದೆ. ಬುಧವಾರ, ಮುಹಮ್ಮದ್ ಅನಾಸ್, ಅಮೋಜ್ ಜಾಕೋಬ್, ಮುಹಮ್ಮದ್ … Continued

ಗೇಮಿಂಗ್ ಆಪ್ ಪ್ರಕರಣದಲ್ಲಿ ರಣಬೀರ್ ಕಪೂರಗೆ ಇ.ಡಿ.ಯಿಂದ ಸಮನ್ಸ್

ನವದೆಹಲಿ: ಗೇಮಿಂಗ್ ಆಪ್ ಒಳಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟ ರಣಬೀರ್ ಕಪೂರ್ ಅವರಿಗೆ ಶುಕ್ರವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ. ಅಪ್ಲಿಕೇಶನ್ ಅನ್ನು ಪ್ರಚಾರ ಮಾಡುವ ಹಲವಾರು ಜಾಹೀರಾತುಗಳಲ್ಲಿ ನಟ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ. ಒಂದು ಅಪರಾಧದ ಆದಾಯದಿಂದ ಅವರಿಗೆ ದೊಡ್ಡ ಮೊತ್ತದ ಹಣವನ್ನು ವಿನಿಮಯವಾಗಿ ನೀಡಲಾಗಿದೆ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ. … Continued

ಏಷ್ಯನ್ ಗೇಮ್ಸ್ 2023 : ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾಗೆ ಚಿನ್ನ, ಕಿಶೋರ ಜೆನಾಗೆ ಬೆಳ್ಳಿ

ಚೀನಾದ ಹ್ಯಾಂಗ್‌ಝೌದಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ ಜಾವೆಲಿನ್ ಫೈನಲ್‌ನಲ್ಲಿ ಇಬ್ಬರು ಭಾರತೀಯರು ಪ್ರಾಬಲ್ಯ ಮೆರೆದರು. ನೀರಜ ಚೋಪ್ರಾ ಅವರು ಏಷ್ಯನ್ ಗೇಮ್ಸ್‌ನಲ್ಲಿ ತಮ್ಮ ಜಾವೆಲಿನ್ ಚಿನ್ನದ ಪದಕವನ್ನು ಉಳಿಸಿಕೊಂಡರು ಮತ್ತು ಉದಯೋನ್ಮುಖ ತಾರೆ ಕಿಶೋರ್ ಜೆನಾ ಅವರು ಬೆಳ್ಳಿ ಗೆದ್ದರು. ಮಹಿಳೆಯರ ಜಾವೆಲಿನ್ ನಲ್ಲಿ ಅನ್ನು ರಾಣಿ ಚಿನ್ನದ ಪದಕವನ್ನು ಗೆದ್ದ ಮಾರನೇ ದಿನ, 12 … Continued

ದೆಹಲಿ ಮದ್ಯ ನೀತಿ ಪ್ರಕರಣ : ಮನೆ ಇ.ಡಿ. ದಾಳಿ ನಡೆದ ಕೆಲವೇ ಗಂಟೆಗಳ ನಂತರ ಎಎಪಿ ನಾಯಕ ಸಂಜಯ ಸಿಂಗ್ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿಯ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (AAP)ಕ್ಕೆ ಜಾರಿ ನಿರ್ದೇಶನಾಲಯವು ಶಾಕ್‌ ನೀಡಿದೆ. (ED). ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರನ್ನು ಇ.ಡಿ. ಇಂದು ಬುಧವಾರ (ಅಕ್ಟೋಬರ್‌ 4) ಬಂಧಿಸಿದೆ. ಬುಧವಾರ ಬೆಳಗ್ಗೆಯಿಂದಲೇ ಸಂಸದರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ … Continued

ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಬ್ಸಿಡಿ 300 ರೂ.ಗೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದ ಬಡ ಮಹಿಳೆಯರಿಗೆ ನೀಡುವ ಸಬ್ಸಿಡಿಯನ್ನು ಪ್ರತಿ ಸಿಲಿಂಡರ್‌ಗೆ ಪ್ರಸ್ತುತ 200 ರೂ.ಗಳಿಂದ 300 ರೂ.ಗಳಿಗೆ ಸರ್ಕಾರ ಬುಧವಾರ (ಅಕ್ಟೋಬರ್ 4) ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ ಠಾಕೂರ್ ಹೇಳಿದ್ದಾರೆ. ಉಜ್ವಲಾ ಫಲಾನುಭವಿಗಳು ಪ್ರಸ್ತುತ 14.2 ಕೆಜಿ ಸಿಲಿಂಡರ್‌ಗೆ 703 ರೂ.ಗಳನ್ನು ಪಾವತಿಸುತ್ತಿದ್ದರು. ಮಾರುಕಟ್ಟೆ ಬೆಲೆ … Continued