ಅರವಿಂದ ಕೇಜ್ರಿವಾಲಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ : ಆದರೆ…

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 13) ಅವರಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕೇಜ್ರಿವಾಲ್‌ಗೆ ಜಾಮೀನು ನೀಡಿದೆ. ಆದಾಗ್ಯೂ, ಜಾಮೀನಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ, ಇದರಲ್ಲಿ 10 ಲಕ್ಷ ರೂಪಾಯಿ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲಗೆ ಸುಪ್ರೀಂ ಕೋರ್ಟ್‌ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹೂಡಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. ಇದೇ ವೇಳೆ, ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ್ದರೂ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದ್ದು ಸಿಂಧುವೇ ಆಗಿದೆ. ಅದು ಸಂಬಂಧಿತ ಕಾರ್ಯವಿಧಾನದ ಕಾನೂನುಗಳ ಅನುಸಾರವಾಗಿಯೇ ಇದೆ … Continued

ವೀಡಿಯೊ..| ಮಕ್ಕಳ ʼಮೊಬೈಲ್ʼ ಚಟ ಬಿಡಿಸಲು ಶಾಲಾ ಶಿಕ್ಷಕಿಯರು ಮಾಡಿದ ಅದ್ಭುತ ಉಪಾಯ ನೋಡಿ…!

ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗುತ್ತಿದೆ. ಕೆಲವು ಮಕ್ಕಳು ಊಟ-ತಿಂಡಿಯನ್ನೂ ಮಾಡದೆ ಮೊಬೈಲ್‌ನಲ್ಲೇ ಮುಳುಗಿರುತ್ತಾರೆ. ಮಕ್ಕಳಿಗೆ ಮೊಬೈಲ್‌ ಗೀಳು ಬಿಡಿಸುವುದು ಪೋಷಕರಿಗೆ ಸವಾಲಿನ ಕೆಲಸವಾಗಿದೆ. ಆದರೆ ಇದೇ ವೇಳೆ ಶಾಲೆಯೊಂದರಲ್ಲಿ ಮಕ್ಕಳನ್ನು ಮೊಬೈಲ್‌ ಫೋನ್‌ನಿಂದ ದೂರವಿರಿಸಲು ಶಿಕ್ಷಕರು ಅನುಸರಿಸಿದ ವಿಧಾನದ ವೀಡಿಯೊವೊಂದು ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಬದೌನ್‌ನಲ್ಲಿರುವ ಶಾಲೆಯೊಂದರ ಜಾಗೃತಿ ಕಾರ್ಯಕ್ರಮದ ವೀಡಿಯೊ ಇದು ಎಂದು … Continued

ಬ್ಲೇಡ್‌ ಹಿಡಿದು ಗ್ಯಾಂಗ್-ರೇಪ್ ಯತ್ನದಿಂದ ಪಾರಾದ ನರ್ಸ್… !

ಪಾಟ್ನಾ: ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದು, ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾದ ಒಂದು ತಿಂಗಳ ನಂತರ, ಬಿಹಾರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರದ ಯತ್ನ ನಡೆದಿದೆ ಎಂದು ವರದಿಯಾಗಿದೆ. ಅತ್ಯಾಚಾರಕ್ಕೆ ಯತ್ನಿಸಿದವರಲ್ಲಿ ಒಬ್ಬರು ವೈದ್ಯರಾಗಿದ್ದು, ಅವರು ಸಂಸ್ಥೆಯ ನಿರ್ವಾಹಕರೂ ಆಗಿದ್ದಾರೆ ಎಂದು ಹೇಳಲಾಗಿದೆ. ನರ್ಸ್ ವೈದ್ಯರ … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದ ಮಮತಾ ಬ್ಯಾನರ್ಜಿ…

ಕೋಲ್ಕತ್ತಾ: ಆರ್.​ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ. ನನಗೆ ಹುದ್ದೆಯ ಬಗ್ಗೆ ಕಾಳಜಿ ಇಲ್ಲ. ನ್ಯಾಯ ಖಾತ್ರಿ ಪಡಿಸುವುದಾದರೆ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ. ಕಳೆದ ತಿಂಗಳು … Continued

ಹಿರಿಯ ಸಿಪಿಐ(ಎಂ) ನಾಯಕ ಸೀತಾರಾಮ ಯೆಚೂರಿ ಇನ್ನಿಲ್ಲ…

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರು ಗುರುವಾರ ನಿಧನರಾಗಿದ್ದಾರೆ. ರಾಜಕೀಯ ತಂತ್ರಜ್ಞ, ಚಿಂತಕ, ಲೇಖಕ ಮತ್ತು ಪಕ್ಷದ ಮುಖವಾಣಿ ಪೀಪಲ್ಸ್ ಡೆಮಾಕ್ರಸಿಯ ಸಂಪಾದಕರಾಗಿದ್ದ ಸೀತಾರಾಮ್ ಯೆಚೂರಿ ಅವರ ನಿದನದಿಂದ ಸಿಪಿಐ(ಎಂ) ತನ್ನ ದೃಢವಾದ ಸ್ತಂಭಗಳಲ್ಲಿ ಒಂದನ್ನು ಕಳೆದುಕೊಂಡಿದೆ. ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಯೆಚೂರಿ … Continued

ಅಮೆರಿಕವನ್ನು ಕಂಡುಹಿಡಿದದ್ದು ಕೊಲಂಬಸ್ ಅಲ್ಲ, ಭಾರತದವರು ; ಮಧ್ಯಪ್ರದೇಶ ಉನ್ನತ ಶಿಕ್ಷಣ ಸಚಿವ

ಭೋಪಾಲ್‌ : ಭಾರತದ ನಾವಿಕರೊಬ್ಬರು ಅಮೆರಿಕವನ್ನು ಕಂಡುಹಿಡಿದರು, ಬೀಜಿಂಗ್ ನಗರವನ್ನು ಭಾರತೀಯ ವಾಸ್ತುಶಿಲ್ಪಿ ಸಹಾಯದಿಂದ ವಿನ್ಯಾಸಗೊಳಿಸಲಾಗಿದೆ ಮತ್ತು ಋಗ್ವೇದವನ್ನು ಬರೆದವರು ಭೂಮಿಯು ಸೂರ್ಯನ ಸುತ್ತ ಸುತ್ತುತ್ತದೆ ಎಂದು ಮೊದಲು ಊಹಿಸಿದ್ದರು ಎಂದು ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಹೇಳಿದ್ದಾರೆ. ಬರ್ಕತುಲ್ಲಾ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಮಂಗುಭಾಯ್ ಸಿ. ಪಟೇಲ್ ಮತ್ತು … Continued

ಟ್ರೇನಿ ಸೇನಾ ಅಧಿಕಾರಿಗಳ ಮೇಲೆ ದಾಳಿ-ಹಲ್ಲೆ ; ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಂಗಳವಾರ ತಡರಾತ್ರಿ ಇಬ್ಬರು ಯುವ ಸೇನಾ ಅಧಿಕಾರಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದ್ದು, ಅವರ ಸ್ನೇಹಿತೆಯ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ದರೋಡೆ ಮಾಡುವ ಉದ್ದೇಶದಿಂದ ವಿಹಾರಕ್ಕೆ ಹೊರಟಿದ್ದ ಗುಂಪಿನ ಮೇಲೆ ದಾಳಿ ನಡೆಸಿದ್ದು, ದಾಳಿಕೋರರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಅವರಲ್ಲಿ ಒಬ್ಬ ಕ್ರಿಮಿನಲ್ … Continued

ವೀಡಿಯೊ..| ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಮನೆಯಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ನವದೆಹಲಿಯಲ್ಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ನಿವಾಸದಲ್ಲಿ ಬುಧವಾರ ಗಣೇಶ ಪೂಜೆಯಲ್ಲಿ ಪಾಲ್ಗೊಂಡರು. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರೊಂದಿಗೆ ಪ್ರಾರ್ಥನೆಗಳನ್ನು ಸಲ್ಲಿಸಿದ್ದಾರೆ. ಗಣೇಶ ಚತುರ್ಥಿ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ … Continued

70 ವರ್ಷ ಮೇಲ್ಪಟ್ಟ ಎಲ್ಲರಿಗೂ ₹5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ; ಮೋದಿ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ರಾಷ್ಟ್ರೀಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಪ್ರತಿಯೊಬ್ಬರಿಗೂ ಆರೋಗ್ಯ ವಿಮಾ ಸೌಲಭ್ಯವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ. ಈ ತೀರ್ಮಾನದಿಂದ ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ ಪಿಎಂ-ಜೆಎವೈ) ಆರು ಕೋಟಿ ಹಿರಿಯ ನಾಗರಿಕರನ್ನು ಹೊಂದಿರುವ 4.5 ಕೋಟಿ … Continued