ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂ) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. 96 ವರ್ಷದ ನಾಯಕನನ್ನು ದೆಹಲಿಯ ಏಮ್ಸ್‌ನ ಜೆರಿಯಾಟ್ರಿಕ್ ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ.  ವಯೋಸಹಜ ಸಮಸ್ಯೆಯಿಂದಾಗಿ ಅವರನ್ನು ಬುಧವಾರ ದೆಹಲಿಯ ಆಲ್ ಇಂಡಿಯಾ … Continued

ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೊಡಾ ಮರುನೇಮಕ

ನವದೆಹಲಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನಿಡಿದ್ದ ಸ್ಯಾಮ್ ಪಿತ್ರೊಡಾ ಅವರನ್ನು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಆದೇಶಿಸಿದ್ದಾರೆ. ಗಾಂಧಿ ಕುಟುಂಬದ ನಿಷ್ಠ ಸ್ಯಾಮ್ ಪಿತ್ರೋಡಾ ಅವರು ನೀಡಿದ್ದ ‘ಜನಾಂಗೀಯ’ ಹೇಳಿಕೆಗಳು ಮತ್ತು ಉತ್ತರಾಧಿಕಾರ ತೆರಿಗೆಯ … Continued

ಕಾಲೇಜಿನಲ್ಲಿ ಹಿಜಾಬ್‌ಗೆ ನಿಷೇಧ ಪ್ರಶ್ನಿಸಿದ್ದ ವಿದ್ಯಾರ್ಥಿಗಳ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ಮುಂಬೈ: ತಮ್ಮ ಧರ್ಮ ಪ್ರತಿನಿಧಿಸುವ ಬುರ್ಖಾ, ನಖಾಬ್‌, ಪದಕ, ಟೊಪ್ಪಿಗೆ ಅಥವಾ ಸ್ಟೋಲ್‌ ರೀತಿಯ ಬಟ್ಟೆ ಧರಿಸುವುದಕ್ಕೆ ಕಾಲೇಜು ಆಡಳಿತ ಮಂಡಳಿ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಮುಂಬೈ ಕಾಲೇಜೊಂದರ ಒಂಬತ್ತು ವಿದ್ಯಾರ್ಥಿಗಳು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಕಾಲೇಜಿನ ನಿರ್ಧಾರದಲ್ಲಿ ತಾನು ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಎ.ಎಸ್. ಚಂದೂರ್ಕರ್‌ ಮತ್ತು … Continued

ವೀಡಿಯೊ..| ತುರ್ತು ಪರಿಸ್ಥಿತಿಯನ್ನು ʼಕರಾಳ ಅವಧಿʼ ಎಂದ ಕರೆದ ಸ್ಪೀಕರ್ ಓಂ ಬಿರ್ಲಾ; 2 ನಿಮಿಷ ಮೌನ : ವಿಪಕ್ಷಗಳ ಪ್ರತಿಭಟನೆ, ಸದನ ಮುಂದೂಡಿಕೆ

ನವದೆಹಲಿ: ಇಂದು, ಬುಧವಾರ ಲೋಕಸಭೆ ಸ್ಪೀಕರ್ (Lok Sabha Speaker) ಆಗಿ ಎನ್​ಡಿಎ ಅಭ್ಯರ್ಥಿ ಓಂ ಬಿರ್ಲಾ (Om Birla) ಮರು ಆಯ್ಕೆಯಾಗಿ ನಂತರ ಎನ್​ಡಿಎ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕರ ನಡುವೆ ಪರಿಸ್ಪರ ನಗು ಮತ್ತು ಹಸ್ತಲಾಘವಗಳು ನಡೆದವು. ಆದರೆ ಬಳಿಕ ಮಾತನಾಡಿದ ಸ್ಪೀಕರ್ ಓಂ ಬಿರ್ಲಾ 1975 ರಲ್ಲಿ ತುರ್ತು ಪರಿಸ್ಥಿತಿ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲ್ ಬಂಧಿಸಿದ ಸಿಬಿಐ

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ ಅಧಿಕೃತವಾಗಿ ಬಂಧಿಸಿದೆ. ತನಿಖೆ ನಡೆಸಲು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಮಿತಾಭ ರಾವತ್ ಅವರು ಅನುಮತಿ ನೀಡಿದ ನಂತರ ಕೇಜ್ರಿವಾಲ್ ಅವರನ್ನು ಕೇಜ್ರಿವಾಲ್ ಅವರನ್ನು ಔಪಚಾರಿಕವಾಗಿ ಬಂಧಿಸಿತು. ಕೇಜ್ರಿವಾಲ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಬಿಐ … Continued

ವೀಡಿಯೊ…| ನೂತನ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸುವ ವೇಳೆ ಪ್ರಧಾನಿ ಮೋದಿ-ರಾಹುಲ್ ಗಾಂಧಿ ಅಪರೂಪದ ಹಸ್ತಲಾಘವ

ನವದೆಹಲಿ: 18 ನೇ ಲೋಕಸಭೆಯಲ್ಲಿ ಸ್ಪೀಕರ್‌ ಆಗಿ ಓಂ ಬಿರ್ಲಾ ಅವರು ಇಂದು ಬುಧವಾರ (ಜೂನ್‌ 26) ಆಯ್ಕೆಯಾಗಿದ್ದಾರೆ. ನೂತನ ಸ್ಪೀಕರ್‌ ಅವರನ್ನು ಸ್ವಾಗಿಸುವಾಗ ಪ್ರಧಾನಿ ಮೋದಿ ಹಾಗೂ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಒಟ್ಟಾಗಿ ಬಂದಾಗ ಇಬ್ಬರು ಹಸ್ತಲಾಘವ ಮಾಡಿದ್ದಾರೆ. ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಅವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಸಂಸದೀಯ ಏಕತೆಯ … Continued

ವೀಡಿಯೊ..| ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಬಿಜೆಪಿಯ ಓಂ ಬಿರ್ಲಾ

ನವದೆಹಲಿ: ಇಂದು ಬುಧವಾರ (ಜೂನ್‌ ೨೬) ನಡೆದ ಚುನಾವಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ಅವರು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಕುರ್ಚಿಗೆ ಕರೆದೊಯ್ದರು. ಲೋಕಸಭೆ ಸ್ಪೀಕರ್ ಆಯ್ಕೆಗೆ ಮೊದಲ ಬಾರಿಗೆ ಮತದಾನ ನಡೆದಿದೆ. ಅವಿರೋಧವಾಗಿ … Continued

ಸೂರಜ್ ರೇವಣ್ಣ ವಿರುದ್ಧ 2ನೇ ಪ್ರಕರಣ ದಾಖಲು

ಹಾಸನ: ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, 2ನೇ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸೂರಜ್ ರೇವಣ್ಣ ವಿರುದ್ಧ ಎರಡನೇ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಸೂರಜ್ ರೇವಣ್ಣ ಅವರ ಆಪ್ತ ನೀಡಿದ ದೂರಿನ ಮೇರೆಗೆ ಪ್ರಕರಣ … Continued

ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್‌ ಗಾಂಧಿ ಆಯ್ಕೆ

ನವದೆಹಲಿ : 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂದು ಕಾಂಗ್ರೆಸ್ ಮಂಗಳವಾರ ಪ್ರಕಟಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಹುಲ್ ಗಾಂಧಿ ಐದು ಅವಧಿಗೆ ಸಂಸದರಾಗಿದ್ದಾರೆ ಮತ್ತು ಪ್ರಸ್ತುತ ಲೋಕಸಭೆಯಲ್ಲಿ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. … Continued

ಪೋಶೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತನನ್ನು ತಕ್ಷಣವೇ ಬಿಡುಗಡೆ ಮಾಡಲು ಬಾಂಬೆ ಹೈಕೋರ್ಟ್ ಆದೇಶ

ಮುಂಬೈ: ಪುಣೆಯ ಪೋಶೆ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ 17 ವರ್ಷದ ಬಾಲಕನನ್ನು ನಿರೀಕ್ಷಣಾ ಮಂದಿರದಿಂದ ಕೂಡಲೇ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ (ಜೂನ್‌ 25) ಆದೇಶಿಸಿದೆ. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಹಾಗೂ ಮಂಜೂಷಾ ದೇಶಪಾಂಡೆ ಅವರಿದ್ದ ವಿಭಾಗೀಯ ಪೀಠವು, ಬಾಲ ನ್ಯಾಯ ಮಂಡಳಿ (ಜೆಜೆಬಿ) ಹೊರಡಿಸಿದ … Continued