ಭಾರೀ ಮಳೆ ಹಿನ್ನೆಲೆ: ಜುಲೈ 25ರಂದು ಉತ್ತರ ಕನ್ನಡ ಜಿಲ್ಲೆಯ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್‌ಗಳಿಗೆ ಜುಲೈ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 25ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. … Continued

ಕರ್ನಾಟಕ ಹೈಕೋರ್ಟ್​ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನ ಆರು ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆಯ ಸಂದೇಶ ಬಂದಿದ್ದು, ಬೆದರಿಕೆ ಹಾಕಿರುವವರು 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಹಾಗೂ ಅದನ್ನು ಪಾಕಿಸ್ತಾನದ ಬ್ಯಾಂಕ್‌ ಅಕೌಂಟ್‌ಗೆ ಹಾಕಿ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಕೊಲೆ ಬೆದರಿಕೆ ಹಿಂದೆ ಪಾಕಿಸ್ತಾನದ ಕೈವಾಡದ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಎಫ್‌ಐಆರ್‌ ದಾಖಲಾಗಿದ್ದು, … Continued

ಅತಿ ದೀರ್ಘ ಕಾಲ ಸಿಎಂ : ಜ್ಯೋತಿ ಬಸು ಹಿಂದಿಕ್ಕಿ 2ನೇ ಸ್ಥಾನಕ್ಕೆ ಏರಿದ ನವೀನ ಪಟ್ನಾಯಕ್ : ಮೊದಲ ಸ್ಥಾನದಲ್ಲಿ ಯಾರು..? ಟಾಪ್ 10 ಸಿಎಂಗಳ ಪಟ್ಟಿ…

ನವದೆಹಲಿ : ಒಡಿಶಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಈಗ ದೇಶದ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾದವರಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಪಟ್ನಾಯಕ್ ಅವರು ಮುಖ್ಯಮಂತ್ರಿಯಾಗಿ 23 ವರ್ಷ 140 ದಿನಗಳನ್ನು ಪೂರೈಸಿದ್ದಾರೆ. ಅವರು ಮಾರ್ಚ್ 5, 2000 ರಿಂದ ಒಡಿಶಾದ ಮುಖ್ಯಮಂತ್ರಿಯಾಗಿದ್ದಾರೆ. ಈಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರ ದಾಖಲೆಯನ್ನು … Continued

ಗುಂಡು ಹಾರಿಸಿ ಹೆಂಡತಿ, ಅಳಿಯನನ್ನು ಕೊಂದ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಿರಿಯ ಪೊಲೀಸ್‌ ಅಧಿಕಾರಿ

ಪುಣೆ : 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಸೋಮವಾರ ಮಹಾರಾಷ್ಟ್ರದ ಪುಣೆ ನಗರದಲ್ಲಿನ ತನ್ನ ಮನೆಯಲ್ಲಿ ತನ್ನ ಪತ್ನಿ ಮತ್ತು ಸೋದರಳಿಯನನ್ನು ಬಂದೂಕಿನಿಂದ ಗುಂಡಿಕ್ಕಿ ಕೊಂದಿದ್ದಾರೆ ಹಾಗೂ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3:30ರ … Continued

2022-23ನೇ ಸಾಲಿಗೆ ನೌಕರರ ಭವಿಷ್ಯ ನಿಧಿಗೆ ಶೇ.8.15 ಬಡ್ಡಿದರಕ್ಕೆ ಒಪ್ಪಿಗೆ ನೀಡಿದ ಸರ್ಕಾರ

ನವದೆಹಲಿ: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2023-24ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಯೋಜನೆಗೆ ಶೇಕಡಾ 8.15 ರಷ್ಟು ಬಡ್ಡಿಯನ್ನು ಕ್ರೆಡಿಟ್ ಮಾಡಲು ಅನುಮೋದಿಸಿದೆ. ಜುಲೈ 24 ರಂದು ಹೊರಡಿಸಲಾದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಕಚೇರಿ ಆದೇಶದ ಪ್ರಕಾರ, ಕಾರ್ಮಿಕ ಸಚಿವಾಲಯವು ಇಪಿಎಫ್ ಯೋಜನೆಯ ಪ್ರತಿಯೊಬ್ಬ ಸದಸ್ಯರಿಗೆ 2021-22 ಕ್ಕೆ ವಾರ್ಷಿಕ … Continued

ಬೆಂಗಳೂರು: ಆರ್‌ಎಸ್‌ಎಸ್ ಪ್ರಮುಖ ಮದನದಾಸ ದೇವಿ ನಿಧನ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಹಿರಿಯ ಮುಖಂಡ ಮದನದಾಸ ದೇವಿ (81) ಅವರು ಸೋಮವಾರ (ಜುಲೈ 24) ಬೆಳಿಗ್ಗೆ ನಿಧನರಾದರು. ಮೂಲತಃ ಮಹಾರಾಷ್ಟ್ರದವರಾದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಅವರು ಮುಂಜಾನೆ 5 ಗಂಟೆಗೆ ರಾಜರಾಜೇಶ್ವರಿ ನಗರದ  ರಾಷ್ಟೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪಾರ್ಥೀವ ಶರೀರವನ್ನು ಆರ್‌ಎಸ್‌ಎಸ್‌ ಸ್ಥಳೀಯ ಪ್ರಧಾನ ಕಚೇರಿ … Continued

ಮಳೆಯಿಂದ ತತ್ತರಿಸಿರುವ ಗುಜರಾತಿನ ಜುನಾಗಢದಲ್ಲಿ ವಾಹನದಟ್ಟಣೆ ಇರುವ ರಸ್ತೆಯ ಮೇಲೆ ವಿಹರಿಸುತ್ತಿರುವ ಸಿಂಹ : ವೀಕ್ಷಿಸಿ

ಭಾರೀ ಮಳೆಯ ನಡುವೆ ಗುಜರಾತ್‌ನ ಜುನಾಗಢ್‌ನಲ್ಲಿರುವ ಫ್ಲೈಓವರ್‌ನಲ್ಲಿ ಸಿಂಹವೊಂದು ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿದೆ. ವಾಹನಗಳು ಹಾದುಹೋಗುವಾಗ ಸಿಂಹ ರಸ್ತೆಯಲ್ಲಿ ನಡೆದುಕೊಂಡು ಹೋಗುವುದನ್ನು ವೀಡಿಯೊ ತೋರಿಸುತ್ತದೆ. ಮಾಜಿ ಕ್ರಿಕೆಟಿಗ ಸಾಬಾ ಕರೀಂ ಅವರು ಟ್ವಿಟ್ಟರ್‌ನಲ್ಲಿ ಈ ವೀಡಿಯೊ ಪೋಸ್ಟ್ ಮಾಡಿದ್ದಾರೆ. ಸಿಂಹವೊಂದು ರಸ್ತೆಯಲ್ಲಿ ಶಾಂತವಾಗಿ ನಡೆದುಕೊಂಡು ಹೋಗುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಸಾಬಾ ಕರೀಂ … Continued

ಜುಲೈ 26ರ ವರೆಗೆ ಜ್ಞಾನವಾಪಿ ಮಸೀದಿಯ ಎಎಸ್‌ಐ ಸರ್ವೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಜುಲೈ 26ರವರೆಗೆ ಯಾವುದೇ ಸರ್ವೆ ನಡೆಸದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ ಹಾಗೂ ಪರಿಹಾರಕ್ಕಾಗಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗುವಂತೆ ಮುಸ್ಲಿಂ ಅರ್ಜಿದಾರರಿಗೆ ಸೂಚಿಸಿದೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ವಾರಾಣಸಿ ಜಿಲ್ಲಾ ನ್ಯಾಯಾಲಯದ ಎಎಸ್‌ಐ ಆದೇಶವನ್ನು ಪ್ರಶ್ನಿಸಲು ಜ್ಞಾನವಾಪಿ ಮಸೀದಿ ಆಡಳಿತ … Continued

ಸೀಮಾ ಹೈದರ್ ಗುರುತಿನ ಪರಿಶೀಲನೆಗಾಗಿ ಎಲ್ಲ ದಾಖಲೆಗಳನ್ನು ಪಾಕಿಸ್ತಾನ ರಾಯಭಾರ ಕಚೇರಿಗೆ ಕಳುಹಿಸಿದ ಪೊಲೀಸರು

ನವದೆಹಲಿ: ತನ್ನ ಭಾರತೀಯ ಪ್ರೇಮಿಯೊಂದಿಗೆ ವಾಸಿಸಲು ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿರುವ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಗುರುತಿನ ಪರಿಶೀಲನೆಗಾಗಿ ಆಕೆಯಿಂದ ವಶಪಡಿಸಿಕೊಂಡ ಎಲ್ಲಾ ದಾಖಲೆಗಳನ್ನು ನೋಯ್ಡಾ ಪೊಲೀಸರು ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಕಳುಹಿಸಿದ್ದಾರೆ. ಮೇ ತಿಂಗಳಲ್ಲಿ ತನ್ನ ಪ್ರೇಮಿ ಸಚಿನ್ ಮೀನಾ ಜೊತೆ ವಾಸಿಸಲು ತನ್ನ ನಾಲ್ಕು ಮಕ್ಕಳೊಂದಿಗೆ ನೇಪಾಳದ ಮೂಲಕ ಭಾರತಕ್ಕೆ ಅಕ್ರಮವಾಗಿ … Continued

ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಎಎಸ್‌ಐ ಸರ್ವೆ ಆರಂಭ

ವಾರಾಣಸಿ : ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯ 30 ಸದಸ್ಯರ ತಂಡ ಇಂದು ಸೋಮವಾರ (ಜುಲೈ ೨೪) ಸಮೀಕ್ಷೆ ಆರಂಭಿಸಿದೆ. ಮಸೀದಿಯನ್ನು ಪ್ರಾಚೀನ ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಮಸೀದಿ ವ್ಯವಸ್ಥಾಪನಾ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. … Continued