ಕಾಂಗ್ರೆಸ್‌ ನಾಯಕ ಅಧೀರ್‌ ಹೇಳಿಕೆ ತಿರಸ್ಕರಿಸಿದ ನಂತರ ಪಶ್ಚಿಮ ಬಂಗಾಳ ಕಾಂಗ್ರೆಸ್ ಕಚೇರಿ ಮುಂದಿನ ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳಿಗೆ ಮಸಿ

ಕೋಲ್ಕತ್ತಾ : ಇಂಡಿಯಾ ಮೈತ್ರಿಕೂಟಕ್ಕೆ ಮಮತಾ ಬ್ಯಾನರ್ಜಿ ಅವರು ಸೇರುವ ಬಗ್ಗೆ ಅಧೀರ್ ರಂಜನ್ ಚೌಧರಿ ಅವರು ನಿರ್ಧಾರ ತೆಗೆದುಕೊಳ್ಳುವವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ವಿರೋಧಿಸಿ ಖರ್ಗೆಯವರ ಚಿತ್ರಕ್ಕೆ ಕೋಲ್ಕತ್ತಾದಲ್ಲಿ ಮಸಿ ಬಳಿಯಲಾಗಿದೆ. ಕೋಲ್ಕತ್ತಾದಲ್ಲಿನ ಕಾಂಗ್ರೆಸ್ ರಾಜ್ಯ ಕಚೇರಿಯ ಮುಂಭಾಗದಲ್ಲಿದ್ದ ಹಲವು ಪೋಸ್ಟರ್ ಗಳಲ್ಲಿನ ಖರ್ಗೆ ಭಾವಚಿತ್ರಕ್ಕೆ ಮಸಿ ಬಳಿಯಲಾಗಿದೆ. … Continued

ವಾಟ್ಸಾಪ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿಯ ಬಂಧನ

ಅದಿಲಾಬಾದ್ (ತೆಲಂಗಾಣ): ವಾಟ್ಸಾಪ್ ಸಂದೇಶದ ಮೂಲಕ ತನ್ನ ಪತ್ನಿಗೆ ನಿಷೇಧಿತ ತ್ರಿವಳಿ ತಲಾಖ್ ಹೇಳಿದ ವ್ಯಕ್ತಿಯನ್ನು ಆದಿಲಾಬಾದ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅಬ್ದುಲ್ ಅತೀಕ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದಿಲಾಬಾದ್‌ನ ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಿ ಶ್ರೀನಿವಾಸ್ ಪ್ರಕಾರ, ಅತೀಕ್ 2017 ರಲ್ಲಿ ಜಾಸ್ಮಿನ್ (28) ಎಂಬ ಹುಡುಗಿಯನ್ನು … Continued

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ ಪೊಲೀಸರು

ನವದೆಹಲಿ: ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಭಾನುವಾರ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿವೆ ಎಂದು ಮೂಲಗಳು ತಿಳಿಸಿವೆ. ಮೇ 13ರಂದು ಕೇಜ್ರಿವಾಲ್ ಅವರ ಆಪ್ತ ಸಹಾಯಕ ವಿಭವಕುಮಾರ ಅವರು ದೆಹಲಿ ಸಿಎಂ ನಿವಾಸದಲ್ಲಿ ಮಲಿವಾಲ್ ಮೇಲೆ … Continued

‘ಐಸ್‌ಕ್ರೀಂ ಮ್ಯಾನ್‌’ ಖ್ಯಾತಿಯ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ ಕಾಮತ್ ನಿಧನ

ಮುಂಬೈ: ಭಾರತದ ಟಾಪ್ ಐಸ್ ಕ್ರೀಮ್ ಬ್ರ್ಯಾಂಡ್‌ಗಳಲ್ಲಿ ಒಂದಾದ ನ್ಯಾಚುರಲ್ಸ್ ಐಸ್ ಕ್ರೀಮ್ ಸಂಸ್ಥಾಪಕ ರಘುನಂದನ ಶ್ರೀನಿವಾಸ ಕಾಮತ್ (70) ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮುಂಬೈನ ಎಚ್.ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ನಿಧನರಾದರು. ಎಂದು ಹೇಳುತ್ತವೆ. ರಘುನಂದನ ಕಾಮತ್ ಅವರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಸಾಧಾರಣ ಹಿನ್ನೆಲೆಯಿಂದ ಬಂದ ಅವರು, 400 ಕೋಟಿ … Continued

ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದ ಹೊಸ ವೀಡಿಯೊ ಹೊರಬಿದ್ದಿದ್ದು, ಸ್ವಾತಿ ಮಲಿವಾಲ್ ಅವರನ್ನು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹೊರಕ್ಕೆ ಕರೆದೊಯ್ದಿರುವುದು ಕಂಡುಬಂದಿದೆ. ಇದು ಸೋಮವಾರ ನಡೆದಿದ್ದು, ಅದೇ ದಿನ ಎಎಪಿ ಸಂಸದೆ ಸ್ವಾತಿ ಮಲಿವಾಲ್‌ ತಮ್ಮ ಮೇಲೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆಪ್ತ ಸಹಾಯಕ ಸಹಾಯಕ ವಿಭವಕುಮಾರ ಹಲ್ಲೆ ನಡೆಸಿದ್ದಾರೆ … Continued

ಲೋಕಸಭಾ ಚುನಾವಣೆ : ಚುನಾವಣಾ ಆಯೋಗದಿಂದ 8,889 ಕೋಟಿ ರೂ.ಮೌಲ್ಯದ ವಸ್ತುಗಳ ವಶ

ನವದೆಹಲಿ : ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ಈವರೆಗೆ ದೇಶಾದ್ಯಂತ ನಗದು, ಮದ್ಯ, ಡ್ರಗ್ಸ್‌, ಉಚಿತ ಉಡುಗೊರೆ ಸೇರಿದಂತೆ 8,889 ಕೋಟಿ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದೆ. ಮಾರ್ಚ್‌ 1 ರಿಂದ ಇದುವರೆಗೆ ವಶಕ್ಕೆ ಪಡೆಯಲಾದ ವಸ್ತುಗಳ ಒಟ್ಟು ವಿವರವನ್ನು ನೀಡಿದ ಚುನಾವಣಾ ಆಯೋಗ, 75 ವರ್ಷಗಳ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಬೃಹತ್‌ … Continued

ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’…

ಉತ್ತರ ಪ್ರದೇಶದ ಆಗ್ರಾದಲ್ಲಿ ನಿರ್ಮಿಸಲು ಸುಮಾರು 104 ವರ್ಷಗಳನ್ನು ತೆಗೆದುಕೊಂಡ ‘ರಾಧಾ ಸ್ವಾಮಿ ಸಮಾಧಿ’ ಎಂದೂ ಕರೆಯಲ್ಪಡುವ ಸೋಮಿ ಬಾಗ್ ಸಮಾಧಿ ವಿಶ್ವ ಪರಂಪರೆಯ ತಾಣವಾದ ತಾಜ್ ಮಹಲಿಗೆ ಹೊಸ ಪ್ರತಿಸ್ಪರ್ಧಿಯಾಗಿದೆ. ಆಗ್ರಾದಲ್ಲಿನ ಸೋಮಿ ಬಾಗ್‌ ಸಮಾಧಿ ಬಿಳಿ ಅಮೃತಶಿಲೆಯಿಂದ ನಿರ್ಮಿಸಲಾಗಿದ್ದು, ಈ ನಿರ್ಮಾಣಕ್ಕೆ 104 ವರ್ಷಗಳು ಬೇಕಾಯಿತು. ತಾಜ್ ಮಹಲ್‌ನಿಂದ ಕೇವಲ 12 ಕಿಲೋಮೀಟರ್ … Continued

ಪವಿತ್ರಾ ಜಯರಾಮ ಸಾವಿನ ಬೆನ್ನಲ್ಲೇ ಗೆಳೆಯ-ಕಿರುತೆರೆ ನಟ ಚಂದು ಆತ್ಮಹತ್ಯೆ

ಹೈದರಾಬಾದ್ : ಕೆಲ ದಿನಗಳ ಹಿಂದಷ್ಟೇ ಕನ್ನಡ ಹಾಗೂ ತೆಲುಗು ಕಿರುತೆರೆಯ ಜನಪ್ರಿಯ ನಟಿಯಾದ ಪವಿತ್ರ ಜಯರಾಂ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಈಗ ಗಂಭೀರವಾಗಿ ಗಾಯಗೊಂಡಿದ್ದ ಅವರ ಸ್ನೇಹಿತ ಹಾಗೂ ಕಿರುತೆರೆ ನಟ ಚಂದು ನಟಿ ಪವಿತ್ರಾ ಜಯರಾಮ ಅವರ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಕಾರ್ತಿಕ ದೀಪಂ’, ‘ರಾಧಮ್ಮ ಪೆಲ್ಲಿ’, ‘ತ್ರಿನಯನಿ’ ಮತ್ತು … Continued

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

ನವದೆಹಲಿ : ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆಪ್ತ ಸಹಾಯಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ವಿಭವಕುಮಾರ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ. ಮುಖ್ಯಮಂತ್ರಿಯವರ … Continued

ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

ನವದೆಹಲಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಮತದಾನ ಕೇಂದ್ರಗಳಲ್ಲೂ 48 ಗಂಟೆಗಳ ಒಳಗೆ ಎಷ್ಟು ಹಕ್ಕು ಚಲಾವಣೆಯಾಗಿದೆ ಎಂಬುದರ ಅಂತಿಮ ಅಧಿಕೃತ ದತ್ತಾಂಶ ಬಹಿರಂಗಪಡಿಸಬೇಕು ಎಂದು ಕೋರಿದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು … Continued