ವೀಡಿಯೊಗಳು : ಪೇಟ ಧರಿಸಿ ಐತಿಹಾಸಿಕ ಪಾಟ್ನಾ ಗುರುದ್ವಾರದಲ್ಲಿ ಭಕ್ತರಿಗೆ ಊಟ ಬಡಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಮೇ 13) ಪಾಟ್ನಾದ ಐತಿಹಾಸಿಕ ತಖತ್ ಶ್ರೀ ಹರಿಮಂದಿರ ಜಿ ಪಾಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದರು ಮತ್ತು ಸಾಮೂಹಿಕ ಭೋಜನದಲ್ಲಿ ಸಿಖ್ ಭಕ್ತರಿಗೆ ಊಟ ಬಡಿಸಿದ್ದಾರೆ. ಕೇಸರಿ ಪೇಟವನ್ನು ಧರಿಸಿ ಮತ್ತು ಖೀರ್ ಪಾತ್ರೆ ಹಿಡಿದು ಆಗಮಿಸಿದ ಪ್ರಧಾನಿ ಮೋದಿ ಶ್ರೀ ಗುರು ಗೋವಿಂದ ಸಿಂಗ್ ಅವರ … Continued

ದೆಹಲಿ ಸಿಎಂ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ; ಎಎಪಿ ನಾಯಕಿ ಸ್ವಾತಿ ಮಲಿವಾಲ್ ಎಂದು ಹೇಳಿಕೊಂಡ ಮಹಿಳೆಯಿಂದ ಪೊಲೀಸರಿಗೆ 2 ಕರೆಗಳು : ಮೂಲಗಳು

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕ (ಪಿಎ) ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪಿಸಿಆರ್ ಗೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಗ್ಗೆ ದೆಹಲಿ ಪೊಲೀಸರಿಗೆ ಸತತ ಎರಡು ಕರೆಗಳು ಬಂದಿದ್ದು, ಇವೆರಡೂ ಸಿವಿಲ್ … Continued

ವೀಡಿಯೊ…| ವಂದೇ ಭಾರತ ರೈಲಿನಡಿ ಸಿಲುಕಿದ ಹಸು ; ಪ್ರಾಣಾಪಾಯದಿಂದ ಪಾರಾಗಿದ್ದೇ ಒಂದು ವಿಸ್ಮಯ..

ಮುಂಬೈ: ಇತ್ತೀಚೆಗಿನ ದಿನಗಳಲ್ಲಿ ದೇಶದಾದ್ಯಂತ ವೇಗವಾಗಿ ಬರುತ್ತಿರುವ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿಗೆ ಹಸುಗಳು ಢಿಕ್ಕಿ ಹೊಡೆದ ಘಟನೆಗಳು ವರದಿಯಾಗುತ್ತಿವೆ. ವೇಗವಾಗಿ ಬರುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಡಿಕ್ಕಿಯಾಗಿ ಹಲವು ಹಸುಗಳು ಸಾವಿಗೀಡಾಗಿವೆ. ಆದರೆ, ಈ ಅಪರೂಪದ ಘಟನೆಯಲ್ಲಿ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿನ ಲೋಕೋಮೋಟಿವ್ ಪೈಲಟ್ ತುರ್ತು ಬ್ರೇಕ್ ಹಾಕಿ ಅಚ್ಚರಿಯ ರೀತಿಯಲ್ಲಿ … Continued

ತಾಯಂದಿರ ದಿನದಂದು ಚುನಾವಣಾ ಸಮಾವೇಶದಲ್ಲಿ ಇಬ್ಬರಿಂದ ಅನಿರೀಕ್ಷಿತ ಉಡುಗೊರೆ ಪಡೆದ ಪ್ರಧಾನಿ ಮೋದಿ..| ವೀಕ್ಷಿಸಿ

ಭಾನುವಾರ ಬಂಗಾಳದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೃದಯ ತುಂಬಿ ಬರುವ ಕ್ಷಣವನ್ನು ಅನುಭವಿಸಿದರು. ಹೂಗ್ಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ, ಸಭೆಯ ಮಧ್ಯದಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ತಾಯಿ ದಿವಂಗತ ಹೀರಾಬೆನ್ ಮೋದಿ ಅವರ ಭಾವಚಿತ್ರಗಳನ್ನು ಹಿಡಿದಿರುವುದನ್ನು ಗಮನಿಸಿದರು. ಪ್ರಧಾನಿಯವರು ಅವರ ಪ್ರಯತ್ನವನ್ನು ಗುರುತಿಸಿದರು ಮತ್ತು ತಾಯಂದಿರ ದಿನವನ್ನು ಗುರುತಿಸುವ … Continued

ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ: ಚುನಾವಣಾಧಿಕಾರಿಗಳ ವಿರುದ್ಧ ಕಾಂಗ್ರೆಸ್‌ ಕಿಡಿ

ಪಾಟ್ನಾ : ಬಿಹಾರದ ಸಮಸ್ತಿಪುರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಖರ್ಗೆ ಅವರ ಹೆಲಿಕಾಪ್ಟರ್‌ನ್ನು ತಪಾಸಣೆ ನಡೆಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೇಶ ರಾಥೋರ ಅವರು ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ನಾಯಕರನ್ನು ಚುನಾವಣಾಧಿಕಾರಿಗಳು ಗುರಿಯಾಗಿಸುತ್ತಿದ್ದಾರೆ. ಬಿಜೆಪಿ ನೇತೃತ್ವದ ಎನ್‍ಡಿಎ ನಾಯಕರಿಗೆ ಮಾತ್ರ ಮುಕ್ತವಾಗಿ … Continued

ಗರ್ಭಧಾರಣೆ ಕುರಿತ ಪುಸ್ತಕದಲ್ಲಿ ‘ಬೈಬಲ್’ ಪದ ಬಳಕೆ: ನಟಿ ಕರೀನಾ ಕಪೂರಗೆ ಮಧ್ಯಪ್ರದೇಶ ಹೈಕೋರ್ಟ್ ನೋಟಿಸ್

ಮುಂಬೈ: ಬಾಲಿವುಡ್ ನಟಿ ಕರೀನಾ ಕಪೂರ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ತಾವು ಬರೆದ ತಾಯ್ತನದ ಪುಸ್ತಕದಲ್ಲಿ ಬೈಬಲ್‌ ಪದ ಬಳಸಿದ್ದಕ್ಕೆ ಅವರಿಗೆ ಮಧ್ಯಪ್ರದೇಶ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. ಗರ್ಭಾವಸ್ಥೆ ಹಾಗೂ ತಾಯ್ತನಕ್ಕೆ ಸಂಬಂಧಿಸಿದಂತೆ ನಟಿ ಕರೀನಾ ಪುಸ್ತಕ ಬರೆದಿದ್ದು, ಇದಕ್ಕೆ ‘ಕರೀನಾ ಕಪೂರ್ ಖಾನ್ಸ್‌ ಪ್ರಗ್ನೆನ್ಸಿ ಬೈಬಲ್ ಎಂದು ಹೆಸರಿಟ್ಟಿದ್ದರು. ಆದರೆ ಹೀಗೆ … Continued

ತಾಯಿ, ಹೆಂಡತಿ, ಮೂವರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…

ಲಕ್ನೋ :   ಕೊಲೆ-ಆತ್ಮಹತ್ಯೆಯ ಆಘಾತಕಾರಿ ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿ, ತಾಯಿ ಮತ್ತು ಮೂವರು ಮಕ್ಕಳನ್ನು ಕೊಂದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಲಕ್ನೋದಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿರುವ ಸೀತಾಪುರ ಸಮೀಪದ ರಾಮಪುರ ಮಥುರಾದ ಪಲ್ಹಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 42 … Continued

ಇಂಡಿಯಾ ಮೈತ್ರಿಕೂಟ ಅಧಿಕಾರ ಬಂದ್ರೆ ಅಯೋಧ್ಯೆ ರಾಮಮಂದಿರ ಶುದ್ಧೀಕರಿಸ್ತೇವೆ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕನ ಹೇಳಿಕೆ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ಭಾರತ ಬಣ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಶುದ್ಧೀಕರಿಸಲಾಗುತ್ತದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಶುಕ್ರವಾರ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಈ ಕುರಿತು ಮಾತನಾಡಿದ ನಾನಾ ಪಟೋಲೆ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೇರಿದರೆ, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಶುದ್ಧೀಕರಿಸಲಾಗುತ್ತದೆ. ಅಲ್ಲಿರುವುದು … Continued

ಸೋಮವಾರಪೇಟೆ : ವಿದ್ಯಾರ್ಥಿನಿ ತಲೆ ಕಡಿದು ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ಎಸ್​ಎಲ್​ಸಿ ಫಲಿತಾಂಶ ಹೊರಬಿದ್ದ ಮೇ 9ರಂದು ಆರೋಪಿ ವಿದ್ಯಾರ್ಥಿನಿ ಮೀನಾ (16) ರುಂಡ ಕತ್ತರಿಸಿ ರುಂಡದ ಸಮೇತ ಪರಾರಿಯಾಗಿದ್ದ. ಆತನ ಸ್ವಗ್ರಾಮ ಹಮ್ಮಿಯಾಲದ ಸಮೀಪದ ಕಾಡಿನಲ್ಲಿ ಅಡಗಿಕೊಂಡಿದ್ದ ಆರೋಪಿ ಪ್ರಕಾಶ (32) ನನ್ನು … Continued

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : ಡಬ್ಲ್ಯೂ ಎಫ್‌ ಐ ಮಾಜಿ ಮುಖ್ಯಸ್ಥನ ವಿರುದ್ಧ ದೋಷಾರೋಪಣೆ ರೂಪಿಸಲು ಕೋರ್ಟ್‌ ಆದೇಶ

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾದ ಪ್ರಕರಣದಲ್ಲಿ ಡಬ್ಲೂಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ ಶರಣ್‌ ಸಿಂಗ್ ವಿರುದ್ಧ ದೋಷಾರೋಪಣೆ ರೂಪಿಸಲು ದೆಹಲಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ. ದೆಹಲಿಯ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ಪ್ರಿಯಾಂಕಾ ರಜಪೂತ ಅವರು ಈ ಆದೇಶ ಹೊರಡಿಸಿದ್ದಾರೆ. “1ರಿಂದ 5ರವರೆಗಿನ ಸಂತ್ರಸ್ತೆಯರಿಗೆ ಸಂಬಂಧಿಸಿದಂತೆ ಮೊದಲನೇ ಆರೋಪಿ ಬ್ರಿಜ್‌ … Continued