ಬಿಸಿಲಿನ ತೀವ್ರತೆ : ಬಲಿಯಾ ಆಸ್ಪತ್ರೆಗೆ ದಾಖಲಾದ 48 ಗಂಟೆಗಳಲ್ಲಿ ‘ತೀವ್ರ ಶಾಖ’ದಿಂದ 34 ಜನರು ಸಾವು

ಲಕ್ನೋ: ಕಳೆದ 24 ಗಂಟೆಗಳಲ್ಲಿ ಬಿಸಿಲಿನ ತೀವ್ರತೆಯಿಂದ ಅಸ್ವಸ್ಥಗೊಂಡು ಬಲ್ಲಿಯಾ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 34 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಏರುತ್ತಿದ್ದು, ತೀವ್ರ ಶಾಖದಿಂದ ಜನ ತತ್ತರಿಸುತ್ತಿದ್ದಾರೆ. ಜನರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು” ಎಂದು ಮುಖ್ಯ ವೈದ್ಯಾಧಿಕಾರಿ (ಸಿಎಂಒ) ಡಾ.ಜಯಂತಕುಮಾರ ಮಾಹಿತಿ ನೀಡಿದ್ದಾರೆ. … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ 8 ದಿನಗಳ ಇ.ಡಿ. ಕಸ್ಟಡಿ

ಚೆನ್ನೈ : ಚೆನ್ನೈನ ಸ್ಥಳೀಯ ನ್ಯಾಯಾಲಯವು ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು 8 ದಿನಗಳ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ. ವಿ. ಸೆಂಥಿಲ್ ಬಾಲಾಜಿ ಅವರು ಶುಕ್ರವಾರ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಚೆನ್ನೈ ಮೆಟ್ರೋಪಾಲಿಟನ್ ಸೆಷನ್ ನ್ಯಾಯಾಲಯಕ್ಕೆ ಹಾಜರಾದರು. ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಏತನ್ಮಧ್ಯೆ, ಉದ್ಯೋಗಕ್ಕಾಗಿ ನಗದು ಹಣ … Continued

ಕರ್ನಾಟಕ ಗೆದ್ದ ನಂತರ ಪಕ್ಷ ಅಷ್ಟಕ್ಕೆ ಸಂತೃಪ್ತಿ ಪಡುವುದು ಬೇಡ: ಕಾಂಗ್ರೆಸ್‌ಗೆ ಶಶಿ ತರೂರ್

ವಲ್ಲಾಡೋಲಿಡ್ (ಸ್ಪೇನ್): ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿದ ನಂತರ ಕಾಂಗ್ರೆಸ್ ಸುಮ್ಮನೆ ಕೂಡ್ರದಿರುವುದು ಮುಖ್ಯ, ಏಕೆಂದರೆ ರಾಜ್ಯ ಮತ್ತು ರಾಷ್ಟ್ರೀಯ ಚುನಾವಣೆಗಳ ನಡುವೆ ಮತದಾರರು ತಮ್ಮ ನಡವಳಿಕೆಯನ್ನು ಬದಲಾಯಿಸಬಹುದು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಜೈಪುರ ಸಾಹಿತ್ಯ ಉತ್ಸವದ ಇತ್ತೀಚಿನ ಸ್ಪೇನ್‌ ವಲ್ಲಾಡೋಲಿಡ್ ಆವೃತ್ತಿಯ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಂದಿನ ಲೋಕಸಭೆ ಚುನಾವಣೆಗೆ … Continued

ಪೊಲೀಸ್ ಠಾಣೆಯ ಮುಂದೆ ನೂರಾರು 500 ರೂ ನೋಟುಗಳನ್ನು ಎಸೆದು ಕಿರುಚಾಡಿದ ವೃದ್ಧೆ : ಕಾರಣವೇನೆಂದರೆ….ವೀಕ್ಷಿಸಿ

ನೀಮುಚ್ (ಮಧ್ಯಪ್ರದೇಶ) : ತನ್ನ ಸ್ವಂತ ಮಗನ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ಪೊಲೀಸರು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಿ ವೃದ್ಧೆಯೊಬ್ಬರು 500 ರೂಪಾಯಿ ನೋಟುಗಳನ್ನು ರಸ್ತೆಯ ಮೇಲೆ ಎಸೆದ ನಂತರ ನಿಮಚ್‌ನ ಕ್ಯಾಂಟ್ ಪೊಲೀಸ್ ಠಾಣೆಯ ಹೊರಗೆ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಗುರುವಾರ ತಡರಾತ್ರಿ ನಡೆದ ಈ ಘಟನೆಯಿಂದಾಗಿ ಪೊಲೀಸ್ ಠಾಣೆಯ ಹೊರಗೆ ಭಾರೀ … Continued

ಜೂನ್ 21 ರಂದು ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನೇತೃತ್ವ ವಹಿಸಲಿರುವ ಪ್ರಧಾನಿ ಮೋದಿ

ನವದೆಹಲಿ; ಜೂನ್ 21 ರಂದು ಆಚರಿಸಲಾಗುವ 9 ನೇ ಅಂತರರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮೊದಲ ಬಾರಿಗೆ ಯೋಗ ಅಧಿವೇಶನ ಮುನ್ನಡೆಸಲಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನವು ಯೋಗಾಭ್ಯಾಸದ ಅನೇಕ ಪ್ರಯೋಜನಗಳ ಬಗ್ಗೆ ವಿಶ್ವಾದ್ಯಂತ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಡಿಸೆಂಬರ್ 2014 ರಲ್ಲಿ, ವಿಶ್ವಸಂಸ್ಥೆಯು ಜೂನ್ 21 … Continued

ನೆಹರೂ ಮ್ಯೂಸಿಯಂ ಮರುನಾಮಕರಣ ಮಾಡಿದ ಕೇಂದ್ರ : ಭಾರತೀಯರ ಹೃದಯದಿಂದ ನೆಹರು ಹೆಸರು ತೆಗೆದುಹಾಕಲು ಸಾಧ್ಯವಿಲ್ಲ ಎಂದ ಕಾಂಗ್ರೆಸ್

ನವದೆಹಲಿ: ‘ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ’ಯನ್ನು ‘ಪ್ರಧಾನಿಗಳ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿ’ ಎಂದು ಮರುನಾಮಕರಣ ಮಾಡಲಾಗಿದೆ. ಸಂಸ್ಕೃತಿ ಸಚಿವಾಲಯದ ಅಧಿಕೃತ ಪ್ರಕಟಣೆಯ ಪ್ರಕಾರ, “ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯ ವಿಶೇಷ ಸಭೆಯಲ್ಲಿ, ಅದರ ಹೆಸರನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಬದಲಾಯಿಸಲು ನಿರ್ಧರಿಸಲಾಯಿತು. ವಿಶೇಷ … Continued

ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ತಮಿಳುನಾಡಿನ ಮಾಜಿ ಮಾಜಿ ಪೊಲೀಸ್ ಮಹಾನಿರ್ದೇಶಕರಿಗೆ 3 ವರ್ಷ ಜೈಲು

ಚೆನ್ನೈ: ಸಹ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ ರಾಜೇಶ ದಾಸ್ ಅವರಿಗೆ ಇಂದು, ಶುಕ್ರವಾರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ವಿಲ್ಲುಪುರಂ ನ್ಯಾಯಾಲಯವು ಅಮಾನತುಗೊಂಡ ಐಪಿಎಸ್ ಅಧಿಕಾರಿಯನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಅವರಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು … Continued

ವೀಡಿಯೋ: ಆದಿಪುರುಷ ಸಿನೆಮಾ ವೀಕ್ಷಣೆ ವೇಳೆ ಥಿಯೇಟರ್‌ನಲ್ಲಿ ಕಾಣಿಸಿಕೊಂಡ ಮಂಗ : ‘ಜೈ ಶ್ರೀ ರಾಮ’ ಎಂದು ಕೂಗಿದ ಅಭಿಮಾನಿಗಳು | ವೀಕ್ಷಿಸಿ

ಆದಿಪುರುಷ ಸಿನೆಮಾ ಇಂದು ಶುಕ್ರವಾರ (ಜೂನ್ 16) ಹೆಚ್ಚಿನ ಅಭಿಮಾನಿಗಳ ನಡುವೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಚಿತ್ರ ವೀಕ್ಷಿಸಲು ಪ್ರೇಕ್ಷಕರು ಚಿತ್ರಮಂದಿರದ ಹೊರಗೆ ಸಾಲುಗಟ್ಟಿ ನಿಂತಿದ್ದರು. ನೆಟಿಜನ್‌ಗಳು ಚಿತ್ರ ವೀಕ್ಷಿಸುತ್ತಿರುವ ಹಾಲ್‌ನಲ್ಲಿ ಹನುಮಂತನಿಗೆ ಮೀಸಲಿಟ್ಟ ಆಸನದ ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ. ಚಿತ್ರದ ನಿರ್ಮಾಪಕರು ಭಗವಾನ್ ಹನುಮಂತನಿಗಾಗಿ ಒಂದು ಆಸನವನ್ನು ಕಾಯ್ದಿರಿಸಿದ್ದಾರೆ. ಏಕೆಂದರೆ ಹಿಂದೂ ಮಹಾಕಾವ್ಯ ರಾಮಾಯಣವನ್ನು ಪಠಿಸಿದಾಗ … Continued

ಕಾಶ್ಮೀರ : ಕುಪ್ವಾರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಸೇನೆ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಎಡಿಜಿಪಿ … Continued

ಮದುವೆ ವೇಳೆ ವರದಕ್ಷಿಣೆ ಕೇಳಿದ್ದಕ್ಕೆ ವರನನ್ನು ಮರಕ್ಕೆ ಕಟ್ಟಿ ಹಾಕಿದ ವಧುವಿನ ಕುಟುಂಬ | ವೀಕ್ಷಿಸಿ

ಪ್ರತಾಪಗಢ : ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ ಮಂಗಳವಾರ, ಜೂನ್ 14 ರಂದು ಮದುವೆಯ ʼಜಯ ಮಾಲಾ’ ಸಮಾರಂಭದಲ್ಲಿ ವರ ಮತ್ತು ವಧುವಿನ ಕುಟುಂಬಗಳ ನಡುವೆ ವಾಗ್ವಾದ ನಡೆದ ನಂತರ ಮದುವೆ ಸಮಾರಂಭದಲ್ಲಿ ಜಗಳ ಉಲ್ಬಣಗೊಂಡು ವರನನ್ನು ಮರಕ್ಕೆ ಕಟ್ಟಿಹಾಕಿದ ಘಟನೆ ವರದಿಯಾಗಿದೆ. ಜಗಳಕ್ಕೆ ಕಾರಣ ವರ – ಅಮರಜೀತ ವರ್ಮಾ – ವಧುವಿನ ಕುಟುಂಬದಿಂದ ವರದಕ್ಷಿಣೆಗೆ … Continued