ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವೀಡಿಯೊ ಹಂಚಿಕೆ: 19 ರಾಜ್ಯಗಳಲ್ಲಿ ಸಿಬಿಐ ದಾಳಿ

ನವದೆಹಲಿ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ (ಸಿಎಸ್‌ಎಎಂ) ಸಂಬಂಧಿಸಿದ ಆಡಿಯೊ, ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪದಡಿ ದೇಶದ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 56 ಸ್ಥಳಗಳ ಸಿಬಿಐ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ. ಆಪರೇಷನ್ ‘ಮೇಘ ಚಕ್ರ’ದ ಭಾಗವಾಗಿ ಈ ಶೋಧ ನಡೆಸಲಾಗುತ್ತಿದೆ. ಕ್ಲೌಡ್ ಸ್ಟೋರೇಜ್ ಬಳಸಿಕೊಂಡು ಇಂಟರ್ನೆಟ್‌ನಲ್ಲಿ ಸಿಎಸ್‌ಎಎಂ ದಂಧೆ ನಡೆಸುತ್ತಿದ್ದ ಪೆಡ್ಲರ್‌ಗಳ … Continued

ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ಪುತ್ರನ ಬಂಧನದ ನಂತರ ಉತ್ತರಾಖಂಡ ಪಕ್ಷದ ಮುಖಂಡ ವಿನೋದ್ ಆರ್ಯ ಅವರನ್ನು ಉಚ್ಚಾಟಿಸಿದ  ಬಿಜೆಪಿ

ನವದೆಹಲಿ : 19 ವರ್ಷದ ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪುಲಕಿತ್ ಆರ್ಯ ತಂದೆ ವಿನೋದ್ ಆರ್ಯ ಮತ್ತು ಸಹೋದರ ಅಂಕಿತ್ ಆರ್ಯ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಉಚ್ಚಾಟಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಬಿಜೆಪಿ ಮುಖಂಡರ ಪುತ್ರ ಪುಲಕಿತ್ ಆರ್ಯ … Continued

ಪಾಟ್ನಾ ಸಮಾವೇಶದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಪಿಎಫ್‌ಐ: ವರದಿ

ಪಾಟ್ನಾದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಲು ಇಸ್ಲಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಚು ರೂಪಿಸಿತ್ತು ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ. ಇದಲ್ಲದೆ, ಪಿಎಫ್‌ಐ ಭಯೋತ್ಪಾದನಾ ಘಟಕಗಳು ಮತ್ತು ಇತರ ದಾಳಿಗಳನ್ನು ಸಿದ್ಧಪಡಿಸುತ್ತಿದೆ ಎಂದು ಇ.ಡಿ. ಹೇಳಿಕೊಂಡಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಉತ್ತರ … Continued

ನೋಡನೋಡುತ್ತಿದ್ದಂತೆ ಕುಸಿದುಬಿದ್ದ ಗುಡ್ಡದ ಬೃಹತ್‌ ಭಾಗ, ಆದಿ ಕೈಲಾಸ ಮಾನಸ ಸರೋವರ ಯಾತ್ರೆ ಪ್ರಮುಖ ಮಾರ್ಗ ಬಂದ್‌ | ವೀಕ್ಷಿಸಿ

ಶುಕ್ರವಾರ ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಬೆಟ್ಟದ ದೊಡ್ಡ ಭಾಗವು ಕುಸಿದು ಬಿದ್ದಿದ್ದು, ಇದರ ನಂತರ ಆದಿ ಕೈಲಾಸ ಮಾನಸ ಸರೋವರ ಯಾತ್ರೆಗೆ ಯಾತ್ರಾರ್ಥಿಗಳು ಬಳಸುವ ಪ್ರಮುಖ ಮಾರ್ಗವನ್ನು ಬಂದ್‌ ಮಾಡಲಾಯಿತು. ಶುಕ್ರವಾರ ಸಂಜೆ ನಜಾಂಗ್ ತಂಬಾ ಗ್ರಾಮದ ಬಳಿ ಭೂಕುಸಿತ ಸಂಭವಿಸಿದ ನಂತರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದ್ದು, ಸ್ಥಳೀಯರೊಂದಿಗೆ ಕನಿಷ್ಠ 40 ಯಾತ್ರಿಕರು ತವಾಘಾಟ್ ಬಳಿ … Continued

ಬರಿಕೈಯಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ | ವೀಡಿಯೊ ವೈರಲ್‌

ಭೋಪಾಲ: ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ಮಧ್ಯಪ್ರದೇಶದ ರೇವಾ ಜಿಲ್ಲೆಯ ಬಾಲಕಿಯರ ಶಾಲೆಯಲ್ಲಿ ಕೊಳಕು ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸುತ್ತಿರುವುದನ್ನು ಸಂಸದರ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಕಂಡುಬಂದಿದೆ. ಯುವ ಮೋರ್ಚಾದ ಸೇವಾ ಪಖವಾಡ ಅಭಿಯಾನದ ಅಂಗವಾಗಿ ಬಿಜೆಪಿ ಯುವ ಘಟಕದ ಸದಸ್ಯರು ಖತ್ಖಾರಿ ಬಾಲಕಿಯರ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಸಂಸದ ಜನಾರ್ದನ್ ಮಿಶ್ರಾ … Continued

ಉತ್ತರಾಖಂಡ: ರೆಸಾರ್ಟ್‌ ರಿಸೆಪ್ಶನಿಸ್ಟ್‌ ಕೊಲೆ ಆರೋಪದ ಮೇಲೆ ಬಿಜೆಪಿ ಮುಖಂಡನ ಪುತ್ರನ ಬಂಧನ-ಪೊಲೀಸರು

ಪೌರಿ: ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನಲ್ಲಿರುವ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿ (receptionist)ಯಾಗಿ ಕೆಲಸ ಮಾಡುತ್ತಿದ್ದ 19 ವರ್ಷದ ಹುಡುಗಿಯನ್ನು ಕೊಂದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರೊಬ್ಬರ ಮಗನನ್ನು ಬಂಧಿಸಲಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ರೆಸಾರ್ಟ್‌ನಲ್ಲಿರುವ ಇಬ್ಬರು ಉದ್ಯೋಗಿಗಳನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಉಕ್ರೇನ್-ರಷ್ಯಾ ನಡುವೆ ಶಾಂತಿ ಸ್ಥಾಪನೆಗೆ ಪ್ರಧಾನಿ ಮೋದಿ, ಪೋಪ್ ಫ್ರಾನ್ಸಿಸ್ ಒಳಗೊಂಡ ಸಮಿತಿ ರಚಿಸಿ: ವಿಶ್ವ ಸಂಸ್ಥೆಯಲ್ಲಿ ಮೆಕ್ಸಿಕೋ ಸಲಹೆ

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವೆ ಶಾಶ್ವತ ಶಾಂತಿಗೆ ಮಧ್ಯಸ್ಥಿಕೆ ವಹಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ, ಪೋಪ್ ಫ್ರಾನ್ಸಿಸ್ ಮತ್ತು ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರನ್ನು ಒಳಗೊಂಡ ಸಮಿತಿಯನ್ನು ಸ್ಥಾಪಿಸಲು ಮೆಕ್ಸಿಕೋ ವಿಶ್ವಸಂಸ್ಥೆಗೆ ಪ್ರಸ್ತಾಪಿಸಿದೆ. ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆ ಸೆಕ್ಯುರಿಟಿ ಕೌನ್ಸಿಲ್ ಚರ್ಚೆಯಲ್ಲಿ ಉಕ್ರೇನ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದಾಗ ಮೆಕ್ಸಿಕೊದ ವಿದೇಶಾಂಗ … Continued

ಅಂಗವಿಕಲರಿಗೆ ಸಹಾಯ ಮಾಡಲು ಕೃತಕ ಸ್ಮಾರ್ಟ್ ಕಾಲು ಅಭಿವೃದ್ಧಿಪಡಿಸಿದ ಇಸ್ರೋ

ನವದೆಹಲಿ: ಭಾರತ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಂಗವಿಕಲರಿಗೆ ಆರಾಮವಾಗಿ ನಡೆಯಲು ಸಹಾಯ ಮಾಡುವ ಕೃತಕ ಸ್ಮಾರ್ಟ್ ಕಾಲನ್ನು ಅಭಿವೃದ್ಧಿಪಡಿಸಿದೆ. ಕೃತಕ ಕಾಲು ಬಾಹ್ಯಾಕಾಶ ತಂತ್ರಜ್ಞಾನದಿಂದ ಸ್ಪಿನ್-ಆಫ್ ಆಗಿದ್ದು ಅದನ್ನು ಶೀಘ್ರದಲ್ಲೇ ವಾಣಿಜ್ಯ ಬಳಕೆಗಾಗಿ ತಯಾರಿಸಬಹುದು ಎಂದು ಹೇಳಲಾಗಿದ್ದು, ಇದು ಸುಮಾರು ಹತ್ತು ಪಟ್ಟು ಅಗ್ಗವಾಗುವ ನಿರೀಕ್ಷೆಯಿದೆ. ಹೊಸದಾಗಿ ಘೋಷಿಸಲಾದ ಸ್ಮಾರ್ಟ್ ಟೆಕ್ ಅನ್ನು ಮೈಕ್ರೊಪ್ರೊಸೆಸರ್-ನಿಯಂತ್ರಿತ … Continued

ಭಾರತದ ವಿದೇಶೀ ವಿನಿಮಯ ರಿಸರ್ವ್ $5.22 ಬಿಲಿಯನ್‌‌ ಕುಸಿತ, ಎರಡು ವರ್ಷಗಳ ಕನಿಷ್ಠ ಮಟ್ಟಕ್ಕೆ ತಲುಪಿದ ರಿಸರ್ವ್‌: ಆರ್‌ಬಿಐ ಅಂಕಿಅಂಶಗಳು

ಮುಂಬೈ: ಭಾರತದ ವಿದೇಶಿ ವಿನಿಮಯ ರಿಸರ್ವ್‌ ಸತತ ಏಳನೇ ವಾರವೂ ಕುಸಿಯಿತು, ಸೆಪ್ಟೆಂಬರ್ 16 ರ ವಾರದಲ್ಲಿ $ 545.652 ಶತಕೋಟಿಗೆ ಇಳಿದಿದೆ, ಇದು ಅಕ್ಟೋಬರ್ 2, 2020 ರ ನಂತರದ ಅತ್ಯಂತ ಕಡಿಮೆ ಮಟ್ಟವಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಸಾಪ್ತಾಹಿಕ ಅಂಕಿಅಂಶಗಳು ಶುಕ್ರವಾರ ತೋರಿಸಿವೆ.ಹಿಂದಿನ ವಾರದ ಅಂತ್ಯದಲ್ಲಿ ರಿಸರ್ವ್‌ $550.871 ಶತಕೋಟಿ ಇತ್ತು. … Continued

ಪಿಎಫ್‌ಐ ಬಂಧನದ ವಿರುದ್ಧದ ಪ್ರತಿಭಟನೆ ವೇಳೆ ಕಣ್ಣೂರಿನ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

ಕಣ್ಣೂರು (ಕೇರಳ): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ನಾಯಕರ ಬಂಧನವನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಕಣ್ಣೂರಿನ ಮಟ್ಟನ್ನೂರಿನಲ್ಲಿರುವ ಆರ್‌ಎಸ್‌ಎಸ್ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಇಬ್ಬರು ಸದಸ್ಯರ ಗುಂಪು ಸ್ಕೂಟರ್‌ನಲ್ಲಿ ಬಂದು ಪೆಟ್ರೋಲ್ ಬಾಂಬ್ ಎಸೆದ ಪರಿಣಾಮ ಕಿಟಕಿ ಗಾಜುಗಳು ಒಡೆದಿವೆ. ಪೊಲೀಸ್ ತಂಡವು ಸ್ಥಳಕ್ಕೆ ತಲುಪಿ ತನಿಖೆಯನ್ನು ಪ್ರಾರಂಭಿಸಿತು; ಪ್ರದೇಶದಲ್ಲಿ … Continued