ಸುಪ್ರೀಂ ಕೋರ್ಟ್‌ ಆದೇಶ : ಚುನಾವಣಾ ಬಾಂಡ್‌ ದತ್ತಾಂಶವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಂಗಳವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) 2019ರ ಏಪ್ರಿಲ್ 12ರಿಂದ ರಾಜಕೀಯ ಪಕ್ಷಗಳು ಎನ್‌ಕ್ಯಾಶ್ ಮಾಡಿದ ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ರವಾನಿಸಿದೆ. ಮಂಗಳವಾರ (ಮಾರ್ಚ್ 12) ಸಂಜೆ 5:30ರೊಳಗೆ ಮಾಡಬೇಕೆಂದು ಸೋಮವಾರದ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಅಂಕಿ-ಅಂಶವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದೆ. ಮಾರ್ಚ್ 15, … Continued

ಪೌರತ್ವ ತಿದ್ದುಪಡಿ ನಿಯಮಾವಳಿ- 2024ಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್

ನವದೆಹಲಿ : ಸೋಮವಾರದಿಂದ ಜಾರಿಗೆ ಬಂದಿರುವ ಪೌರತ್ವ (ತಿದ್ದುಪಡಿ) ನಿಯಮಾವಳಿ-2024ಕ್ಕೆ ತಡೆ ನೀಡುವಂತೆ ಕೋರಿ ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) 2019 ಕುರಿತು ಸೋಮವಾರ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಎಎಗೆ ಸಂಸತ್ತು 2019ರಲ್ಲಿ ಅಂಗೀಕಾರ ನೀಡಿದಾಗ ಸುಪ್ರೀಂ ಕೋರ್ಟ್‌ನಲ್ಲಿ … Continued

ಲೋಕಸಭೆ ಚುನಾವಣೆ: ಕಾಂಗ್ರೆಸ್‌ 2ನೇ ಪಟ್ಟಿ ಬಿಡುಗಡೆ ; ಮೂರು ಮಾಜಿ ಸಿಎಂ ಮಕ್ಕಳಿಗೆ ಟಿಕೆಟ್‌

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 43 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಕಮಲನಾಥ ಮತ್ತು ಅಶೋಕ ಗೆಹ್ಲೋಟ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ಪುತ್ರರಿಗೆ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ ಅವರ ಪುತ್ರರಾಗಿರುವ ನಕುಲನಾಥ ಅವರನ್ನು ಮಧ್ಯಪ್ರದೇಶದ ಚಿಂದ್ವಾರದಿಂದ ಕಣಕ್ಕಿಳಿಸಲಾಗಿದೆ. ಅವರು ಕ್ಷೇತ್ರದಿಂದ ಹಾಲಿ ಸಂಸದರಾಗಿದ್ದಾರೆ. ರಾಜಸ್ಥಾನದ ಮಾಜಿ … Continued

ಎಐಎಸ್ಎಂಕೆ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ ತಮಿಳು ನಟ ಶರತ್ ಕುಮಾರ

ಚೆನ್ನೈ: ಲೋಕಸಭೆ ಚುನಾವಣೆಗೆ ಮುನ್ನ, ತಮಿಳು ಹಿರಿಯ ನಟ ಆರ್. ಶರತಕುಮಾರ ಅವರು ಮಂಗಳವಾರ (ಮಾರ್ಚ್ 12) ತಮ್ಮ ಅಖಿಲ ಭಾರತೀಯ ಸಮತುವ ಮಕ್ಕಳ್ ಕಚ್ಚಿ (AISMK) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ. ಎಐಎಸ್‌ಎಂಕೆ (AISMK) ಪದಾಧಿಕಾರಿಗಳು ಮತ್ತು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರ ಸಮ್ಮುಖದಲ್ಲಿ ಶರತಕುಮಾರ ತಮ್ಮ ಪಕ್ಷವನ್ನು ಬಿಜೆಪಿ ಪಕ್ಷದೊಂದಿಗೆ ವಿಲೀನಗೊಳಿಸಿದರು. … Continued

ಮನೋಹರಲಾಲ ಖಟ್ಟರ್ ರಾಜೀನಾಮೆ ನಂತರ ಹರಿಯಾಣದ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಆಯ್ಕೆ

ನವದೆಹಲಿ : ನಯಾಬ್ ಸಿಂಗ್ ಸೈನಿ ಅವರು ಹರಿಯಾಣದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮಂಗಳವಾರ ಮಧ್ಯಾಹ್ನ ಪ್ರಕಟಿಸಿದೆ. ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ , ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಅವರ ಜೆಜೆಪಿಯ ಮೂವರು ಸದಸ್ಯರು ಸೇರಿದಂತೆ ಮನೋಹರ ಖಟ್ಟರ್‌ ಅವರ ಇಡೀ ಸಚಿವ ಸಂಪುಟ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ನೂತನ ಮುಖ್ಯಮಂತ್ರಿ … Continued

ವೀಡಿಯೊ…| ಭಾರತದ ಎಲ್ಲ ಮುಸ್ಲಿಮರು ‘ಸಿಎಎ’ ಸ್ವಾಗತಿಸಬೇಕು…: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಬರೇಲಿ (ಉತ್ತರ ಪ್ರದೇಶ) : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸಿದ ಕೆಲವು ಗಂಟೆಗಳ ನಂತರ, ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಈ ಕಾನೂನನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಹಾಗೂ ಅವರು ಮುಸ್ಲಿಂ ಸಮುದಾಯದ ಭಯ ನಿವಾರಿಸಲು ಪ್ರಯತ್ನಿಸಿದ್ದಾರೆ. ಇದು Bಆರತದ ಮುಸ್ಲಿಮರ ಪೌರತ್ವದ … Continued

ಮಿತ್ರ ಪಕ್ಷಗಳಲ್ಲಿ ಬಿರುಕು : ಹರಿಯಾಣ ಸಿಎಂ ಮನೋಹರಲಾಲ ಖಟ್ಟರ್‌-ಸಚಿವರ ದಿಢೀರ್‌ ರಾಜೀನಾಮೆ…!

ನವದೆಹಲಿ: ಹರ್ಯಾಣದ ಬಿಜೆಪಿ ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಊಹಾಪೋಹಗಳ ನಡುವೆ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಹರ್ಯಾಣದಲ್ಲಿ ಈ ಬೆಳವಣಿಗೆ ನಡೆದಿದೆ. ಖಟ್ಟರ್ ಹಾಗೂ ಅವರ ಸಂಪುಟದ ಸಚಿವರು ರಾಜಭವನಕ್ಕೆ ತೆರಳಿ ರಾಜ್ಯಪಾಲ … Continued

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಕೇಂದ್ರ ಸರ್ಕಾರದ ಅಧಿಸೂಚನೆ ನಂತರ ನಾವು ಜಾರಿ ಮಾಡಲ್ಲ ಎಂದ ಪಶ್ಚಿಮ ಬಂಗಾಳ, ಕೇರಳ ಸಿಎಂಗಳು

ನವದೆಹಲಿ: 2019 ರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದ್ದರೂ ಸಹ, ತಮ್ಮ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯ … Continued

ಇ.ಡಿ.ಅಧಿಕಾರಿಗಳ ಮೇಲೆ ಹಲ್ಲೆ ಪ್ರಕರಣ: ಕಲ್ಕತ್ತಾ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಮಾನತುಗೊಂಡ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಹಜಹಾನ್ ಶೇಖ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ (ಇ ಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಇದೇ ವೇಳೆ ನ್ಯಾಯಮೂರ್ತಿಗಳಾದ … Continued

ಎಂಐಆರ್‌ವಿ (MIRV) ತಂತ್ರಜ್ಞಾನ ಹೊಂದಿದ ಅಗ್ನಿ-5 ಕ್ಷಿಪಣಿಯ ಉಡಾವಣೆ ಯಶಸ್ವಿ : ಆಯ್ದ ಕೆಲವೇ ದೇಶಗಳ ಪಟ್ಟಿಗೆ ಭಾರತವೂ ಸೇರ್ಪಡೆ

ನವದೆಹಲಿ: ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (MIRV) ತಂತ್ರಜ್ಞಾನವನ್ನು ಹೊಂದಿರುವ ಮಿಷನ್ ದಿವ್ಯಾಸ್ತ್ರ ಎಂದು ಹೆಸರಿಸಲಾದ ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಚೊಚ್ಚಲ ಹಾರಾಟ ಪರೀಕ್ಷೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಯಶಸ್ವಿಯಾಗಿ ನಡೆಸಿದೆ. ಈ ಪರೀಕ್ಷೆಯೊಂದಿಗೆ, ಭಾರತವು ಬಹು ಸ್ವತಂತ್ರವಾಗಿ ಟಾರ್ಗೆಟಬಲ್ ರೀಎಂಟ್ರಿ ವೆಹಿಕಲ್ (MIRV) ಸಾಮರ್ಥ್ಯವನ್ನು ಹೊಂದಿರುವ ರಾಷ್ಟ್ರಗಳ … Continued