ಹೊಸ ವರ್ಷದ ಮುನ್ನಾದಿನ ಪರ್ವತ ಪ್ರದೇಶಗಳು- ಕಡಲತೀರಗಳ ಪ್ರವಾಸಿ ತಾಣಗಳಿಗಿಂತ ಅಯೋಧ್ಯೆಯೇ ಹೆಚ್ಚು ಜನಪ್ರಿಯ ತಾಣವಾಗಿತ್ತು : ಓಯೋ(OYO) ಸಿಇಒ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ ಮತ್ತು ಹೊಸದಾಗಿ ನವೀಕರಿಸಿದ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸುವ ಮೂಲಕ ರಾಮ ಮಂದಿರದ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ವೇದಿಕೆ ಸಿದ್ಧಪಡಿಸಿದ್ದಾರೆ. ಅಯೋಧ್ಯೆ ನಗರವು ಜನವರಿ 22 ರಂದು ರಾಂ ಮಂದಿರದ ಉದ್ಘಾಟನೆಗೆ ಮುಂಚಿತವಾಗಿ ಗಮನಾರ್ಹವಾದ ರೂಪಾಂತರಕ್ಕೆ ಒಳಗಾಯಿತು, ತಜ್ಞರು ಧಾರ್ಮಿಕ … Continued

ವೀಡಿಯೊ…| ಟ್ರಕ್ ಚಾಲಕರ ಪ್ರತಿಭಟನೆ ವೇಳೆ ಪೊಲೀಸರನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ ಚಾಲಕರು

ಮುಂಬೈ : ನೂತನ ಹಿಟ್ ಅಂಡ್ ರನ್ ಕಾನೂನನ್ನು ವಿರೋಧಿಸಿ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಟ್ರಕ್ ಚಾಲಕರು ಸೋಮವಾರ ಪೊಲೀಸರನ್ನು ಅಟ್ಟಾಡಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಜೆಎನ್‌ಪಿಟಿ ರಸ್ತೆಯಲ್ಲಿ ಪ್ರತಿಭಟನಾಕಾರರ ರಸ್ತೆ ತಡೆ ತೆರವುಗೊಳಿಸಲು ಪೊಲೀಸರು ಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯ ವೀಡಿಯೊದಲ್ಲಿ ದೊಣ್ಣೆಗಳನ್ನು ಹಿಡಿದ ವ್ಯಕ್ತಿಗಳ ಗುಂಪು ಪೊಲೀಸರ … Continued

ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್ ನನ್ನು ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ನನ್ನು ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಆತನನ್ನು ಭಯೋತ್ಪಾದಕ ಎಂದು ಘೋಷಿಸಿದೆ. ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್‌ನೊಂದಿಗೆ ಗೋಲ್ಡಿ ಬ್ರಾರ್ ಸಂಬಂಧ ಹೊಂದಿದ್ದಾನೆ ಎಂದು ಗೃಹ ಸಚಿವಾಲಯ ಹೊರಡಿಸಿದ ನೋಟಿಸ್ ತಿಳಿಸಿದೆ. ಗೋಲ್ಡಿ ಬ್ರಾರ್ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದಾನೆ ಮತ್ತು … Continued

ರೈಲಿನ ಮುಂದೆ ಹಾರಿ ತಂದೆ- ಮೂವರು ಮಕ್ಕಳು ಆತ್ಮಹತ್ಯೆ

ಗುಜರಾತಿನ ಬೊಟಾಡ್ ಜಿಲ್ಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆ ಯತ್ನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಈತ ಜಾಮೀನಿನ ಮೇಲೆ ಹೊರ ಬಂದಿದ್ದ ಎಂದು ಹೇಳಲಾಗಿದೆ. ಮೃತರನ್ನು ಮಂಗಾಭಾಯಿ ವಿಜುದಾ ಹಾಗೂ ಅವರ ಪುತ್ರಿಯರಾದ ಸೋನಂ (17), ರೇಖಾ (21) ಮತ್ತು ಮಗ ಜಿಗ್ನೇಶ (19) ಎಂದು … Continued

ಹೊಸ ವರ್ಷದ ಆರಂಭದ ದಿನವೇ ಇಸ್ರೋದಿಂದ ಮತ್ತೊಂದು ಮೈಲಿಗಲ್ಲು : ಕಪ್ಪು ಕುಳಿಗಳ ಅಧ್ಯಯನಕ್ಕೆ ಎಕ್ಸ್‌ಪೋಸ್ಯಾಟ್‌ ಉಪಗ್ರಹದ ಯಶಸ್ವಿ ಉಡಾವಣೆ

ನವದೆಹಲಿ: 2023 ರಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ವಿಶ್ವದ ಮೊದಲ ದೇಶವೆಂಬ ಹೆಗ್ಗಳಿಕೆ ಪಡೆದ ನಂತರ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಮತ್ತೊಂದು ಐತಿಹಾಸಿಕ ಉಡಾವಣೆ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2024ರ ಆರಂಭದ ದಿನವೇ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) … Continued

4 ಮಾಸ್ಟರ್​ ಡಿಗ್ರಿ, 1 ಪಿಎಚ್​ಡಿ ಪದವಿ ಪಡೆದಿದ್ರೂ ಮನೆ ಮನೆಗೆ ತರಕಾರಿ ಮಾರ್ತಾರೆ ಈ ಪ್ರತಿಭಾವಂತ…!

ಚಂಡೀಗಢ: ನಾಲ್ಕು ಸ್ನಾತಕೋತ್ತರ ಪದವಿ ಮತ್ತು ಪಿಎಚ್‌ಡಿ ಪದವಿ ಪಡೆದಿರುವ ವ್ಯಕ್ತಿಯೊಬ್ಬರು ತಮ್ಮ ಜೀವನ ನಿರ್ವಹಣೆಗೆ ತರಕಾರಿ ಮಾರುತ್ತಿರುವ ವಿದ್ಯಮಾನದ ಬಗ್ಗೆ ವರದಿಯಾಗಿದೆ. 39 ವರ್ಷದ ಡಾ. ಸಂದೀಪ ಸಿಂಗ್ ಅವರು ಪಂಜಾಬಿನ ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಲ್ಲಿ ಗುತ್ತಿಗೆ ಪ್ರಾಧ್ಯಾಪಕರಾಗಿದ್ದರು. ಆದಾಗ್ಯೂ, ದುರದೃಷ್ಟಕರ ಸಂದರ್ಭಗಳು ಅವರು ಕೆಲಸವನ್ನು ತೊರೆಯುವಂತೆ ಮಾಡಿತು. ಅದು ನಂತರದಲ್ಲಿ ಅವರು ಹಣ … Continued

ರಾಮಮಂದಿರ ಹೆಸರಿನಲ್ಲಿ ಕ್ಯೂಆರ್ ಕೋಡ್ ಮೂಲಕ ವಂಚನೆ : ಭಕ್ತರಿಗೆ ವಿ ಎಚ್‌ ಪಿ ಎಚ್ಚರಿಕೆ

ಅಯೋಧ್ಯಾ : ಅಯೋಧ್ಯಾ ರಾಮಮಂದಿರ ಉದ್ಘಾಟನೆಗೆ ಇನ್ನು ಕೆಲವೇ ಕೆಲವು ದಿನಗಳಿದ್ದು, ದೇವಸ್ಥಾನದ ಹೆಸರಿನಲ್ಲಿ ವಂಚಕರ ಜಾಲಗಳು ಸಕ್ರಿಯಗೊಂಡಿದೆ. ಮಂದಿರಕ್ಕೆ ದೇಣಿಗೆ ನೀಡುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವಂಚಕರು ಸಂದೇಶಗಳು ಹಾಗೂ ಕ್ಯೂಆರ್ ಕೋಡ್ ಹಂಚಿಕೊಳ್ಳುವ ಮೂಲಕ ವಂಚನೆಗೆ ಮುಂದಾಗಿದ್ದು, ಈ ಬಗ್ಗೆ ಜನರು ಜಾಗರೂಕರಾಗಿ ಇರಬೇಕು ಎಂದು ವಿಎಚ್‌ಪಿ ಮನವಿ ಮಾಡಿದೆ. ದೇವಾಲಯದ ಹೆಸರಿನಲ್ಲಿ ಸೈಬರ್ … Continued

ಭಾರತ ವಿರೋಧಿ ಪ್ರಚಾರ ; ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತೆಹ್ರೀಕ್-ಎ-ಹುರಿಯತ್ (TeH) ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಕೇಂದ್ರ ಸರ್ಕಾರ ಭಾನುವಾರ ಘೋಷಿಸಿದೆ. ಮೃತ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಈ ಹಿಂದೆ ಈ ಸಂಘಟನೆಯ ನೇತೃತ್ವ ವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ನಿಷೇಧಿತ … Continued

ವೀಡಿಯೊ…| ಪ್ರಧಾನಿ ಮೋದಿಯತ್ತ ಪುಷ್ಪವೃಷ್ಟಿ ಗೈದ ರಾಮಜನ್ಮಭೂಮಿ ವಿವಾದದ ಮುಸ್ಲಿಂ ಪರ ಪ್ರಮುಖ ಅರ್ಜಿದಾರ ಇಕ್ಬಾಲ್ ಅನ್ಸಾರಿ

ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಅಯೋಧ್ಯಾದಲ್ಲಿ ಶನಿವಾರ (ಡಿಸೆಂಬರ್ 30) ರೋಡ್‌ ಶೋದಲ್ಲಿ ಭಾಗವಹಿಸಿದ ವೇಳೆ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಪ್ರಮುಖ ಅರ್ಜಿದಾರರಲ್ಲಿ ಒಬ್ಬರಾಗಿದ್ದ ಇಕ್ಬಾಲ್ ಅನ್ಸಾರಿ ಅವರು ಪ್ರಧಾನಿ ಮೋದಿಗೆ ಪುಷ್ಪವೃಷ್ಟಿ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಇಕ್ಬಾಲ್ ಅನ್ಸಾರಿ ಮತ್ತು ಇತರರು ರಸ್ತೆಬದಿಯಲ್ಲಿ ನಿಂತಿದ್ದರು. … Continued

ವೀಡಿಯೊ…| ಕರ್ತವ್ಯದ ಪಥದ ಪಾದಚಾರಿ ಮಾರ್ಗದಲ್ಲಿ ಖೇಲ್ ರತ್ನ, ಅರ್ಜುನ ಪ್ರಶಸ್ತಿ ಇಟ್ಟು ಹೋದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್

ನವದೆಹಲಿ: ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ ನಾಲ್ಕು ದಿನಗಳ ನಂತರ, ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ನವದೆಹಲಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಪ್ರಶಸ್ತಿಯನ್ನು ಇಟ್ಟು ಹೋಗಿದ್ದಾರೆ. ಪ್ರಧಾನಿ ಕಚೇರಿಗೆ ಹೋಗದಂತೆ ದೆಹಲಿ ಪೊಲೀಸರು ತಡೆದ ನಂತರ ಆಕೆ ಪಾದಚಾರಿ ಮಾರ್ಗದಲ್ಲಿ ಪ್ರಶಸ್ತಿಯನ್ನು ಇಟ್ಟು ಹೋಗಿದ್ದಾರೆ. ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ … Continued