‘ಅನುಮಾನ ಆಧರಿಸಿ ಇವಿಎಂ ವಿರುದ್ಧ ನಿರ್ದೇಶನ ನೀಡಲು ಸಾಧ್ಯವೇ? : ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ: ದೃಢ ಪುರಾವೆಗಳಿಲ್ಲದೆ ಹ್ಯಾಕ್‌ ಆಗಿದೆ, ಇಲ್ಲವೇ ತಿರುಚಲಾಗಿದೆ ಎಂಬ ಶಂಕೆಯ ಆಧಾರದ ಮೇಲೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ನೀಡಬಹುದೇ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಪ್ರಶ್ನಿಸಿದೆ. ಇವಿಎಂಗಳ ಮೂಲಕ ಚಲಾವಣೆಯಾದ ಪ್ರತಿ ಮತವನ್ನು ಚುನಾವಣಾ ಸಮಯದಲ್ಲಿ ವೋಟರ್-ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಚೀಟಿಗಳೊಂದಿಗೆ ತಾಳೆ ಮಾಡಲು ನಿರ್ದೇಶನ ನಿಡುವಂತೆ … Continued

ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

ನವದೆಹಲಿ: ದಾರಿ ತಪ್ಪಿಸುವ ಮತ್ತು ಅಲೋಪಥಿ ಪದ್ದತಿ ವಿರುದ್ಧ ಅವಹೇಳನಕರ ಜಾಹೀರಾತು ಅಭಿಯಾನ ಆರಂಭಿಸಿದ್ದಕ್ಕಾಗಿ ಪತಂಜಲಿ ಆಯುರ್ವೇದ ಪ್ರಕಟಿಸಿದ್ದ ಬೇಷರತ್‌ ಕ್ಷಮೆಯಾಚನೆ ಜಾಹೀರಾತಿನ ಗಾತ್ರದ ಬಗ್ಗೆ ಸುಪ್ರೀಂ ಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದ ಒಂದು ದಿನದ ನಂತರ ಅದು ಜಾಹೀರಾತಿನ ಗಾತ್ರವನ್ನು ಹೆಚ್ಚಿಸಿ ಕಂಪೆನಿ ಕ್ಷಮಾಪಣೆ ಪ್ರಕಟಿಸಿದೆ. ವಿವಿಧ ದಿನಪತ್ರಿಕೆಗಳಲ್ಲಿ ಬುಧವಾರ ಪ್ರಕಟವಾದ ಜಾಹೀರಾತು ಈ ಹಿಂದೆ … Continued

ಚುನಾವಣಾ ಭಾಷಣ ಮಾಡುವ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಮಧ್ಯಾಹ್ನ ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅದೃಷ್ಟವಶಾತ್, ಬಿಜೆಪಿ ನಾಯಕನಿಗೆ ತಕ್ಷಣದ ಚಿಕಿತ್ಸೆ ಸಿಕ್ಕಿದೆ ಮತ್ತು ಸ್ವಲ್ಪ ವಿರಾಮದ ನಂತರ, ವರುದ್‌ ಭಾಷಣವನ್ನು ಮುಂದುವರಿಸಲು ಸಾಧ್ಯವಾಯಿತು. ತಮ್ಮ ಭಾಷಣವನ್ನು ಪೂರ್ಣಗೊಳಿಸಿದ ಸ್ವಲ್ಪ ಸಮಯದ ನಂತರ, ಗಡ್ಕರಿ ಅವರು ಎಕ್ಸ್ (ಹಿಂದಿನ … Continued

ವೀಡಿಯೋ..| ಎರಡೂ ಕೈತೋಳುಗಳಿಲ್ಲದೆ ಡ್ರೈವಿಂಗ್‌ ಲೈಸೆನ್ಸ್‌ ಪಡೆದ ಏಷ್ಯಾದ ಮೊದಲ ಮಹಿಳೆ ಇವರು : ಕೇರಳದ ಯುವತಿಯ ಕಾರ್‌ ಚಾಲನೆಗೆ ಬೆರಗಾಗ್ತೀರಾ..!

ಉತ್ಸಾಹ ಮತ್ತು ಸಾಧನೆಗೆ ಯಾವುದೇ ಮಿತಿಯಿಲ್ಲ. ಇದಕ್ಕೆ ಜಿಲುಮೋಲ್ ಮೇರಿಯೆಟ್ ಥಾಮಸ್ ಉತ್ತಮ ಉದಾಹರಣೆಯಾಗಿದ್ದಾರೆ. ಎರಡೂ ಕೈಗಳಿಲ್ಲದ ಕೇರಳದ 32 ವರ್ಷದ ಈ ಮಹಿಳೆ ಚಾಲನಾ ಪರವಾನಗಿ ಪಡೆದ ಮೊದಲ ಏಷ್ಯಾದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಿಲುಮೋಲ್ ಮೇರಿಯೆಟ್ ಥಾಮಸ್ ಅವರು ತನ್ನ ಪಾದಗಳ ಮೂಲಕ ಕಾರನ್ನು ಓಡಿಸುತ್ತಾರೆ. ಆರು ವರ್ಷಗಳ ಸುದೀರ್ಘ ಕಾಯುವಿಕೆ … Continued

ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ನವದೆಹಲಿ : ಸಂಪತ್ತಿನ ಮರು ಹಂಚಿಕೆ ಕುರಿತಾಗಿನ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಘೋಷಣೆಯು ಈಗ ವಿವಾದ ಸೃಷ್ಟಿಸಿದ್ದು, ಈ ನಡುವೆ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ನೀಡಿರುವ ಉತ್ತರಾಧಿಕಾರ ತೆರಿಗೆ ಸಲಹೆ ವಿವಾದದ ಕಿಡಿ ಹೊತ್ತಿಸಿದೆ. ಭಾರತದಲ್ಲಿಯೂ ಅಮೆರಿಕ ಮಾದರಿಯ ಉತ್ತರಾಧಿಕಾರ ತೆರಿಗೆ ಅನ್ವಯಿಸುವಂತೆ ಪಿತ್ರೊಡಾ ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ … Continued

ರಾಹುಲ್ ಗಾಂಧಿ ಸ್ಪರ್ಧೆಯ ಸಸ್ಪೆನ್ಸ್ ನಡುವೆ ಅಮೇಥಿಯಲ್ಲಿ ರಾರಾಜಿಸುತ್ತಿರುವ “ರಾಬರ್ಟ್ ವಾದ್ರಾ ಅಬ್ ಕಿ ಬಾರ್” ಪೋಸ್ಟರ್…!

ಅಮೇಥಿ : ಉತ್ತರ ಪ್ರದೇಶದ ಅಮೇಥಿಯ ಕಾಂಗ್ರೆಸ್‌ ಅಭ್ಯರ್ಥಿಯ ಬಗ್ಗೆ ಸಸ್ಪೆನ್ಸ್ ನಡುವೆ, ಪಕ್ಷದ ಸ್ಥಳೀಯ ಕಚೇರಿಯ ಹೊರಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸುವ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಪೋಸ್ಟರ್‌ಗಳಲ್ಲಿ “ಅಮೇಥಿ ಕಿ ಜನತಾ ಕರೇ ಪುಕಾರ್, ರಾಬರ್ಟ್ ವಾದ್ರಾ ಅಬ್ ಕಿ ಬಾರ್”, ಅಂದರೆ “ಅಮೇಥಿಯ … Continued

ಅತ್ಯಧಿಕ ಅಪಾಯದ ಮಟ್ಟ 6ರ ವಿರುದ್ಧ ರಕ್ಷಣೆಗಾಗಿ ದೇಶದ ಅತ್ಯಂತ ಹಗುರ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ ಡಿ ಆರ್‌ ಡಿ ಒ

ನವದೆಹಲಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಘಟಕವು ದೇಶದಲ್ಲೇ ಅತ್ಯಂತ ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಈ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಇತ್ತೀಚೆಗೆ ಚಂಡೀಗಢದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ಸಂಶೋಧನಾ ಪ್ರಯೋಗಾಲಯದಲ್ಲಿ (ಟಿಬಿಆರ್‌ಎಲ್) ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಡಿಆರ್‌ಡಿಒದ ಡಿಫೆನ್ಸ್ ಮೆಟೀರಿಯಲ್ಸ್ ಅಂಡ್ … Continued

ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued

“ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ” : ಪ್ರಧಾನಿ ಮೋದಿ

ಟೋಂಕ್: ‘ಕಾಂಗ್ರೆಸ್ ಪಕ್ಷವು ಮಹಿಳೆಯರ ಮಂಗಳಸೂತ್ರ ಕಸಿಯಲು ಬಯಸಿದೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ಬಗ್ಗೆ ಚರ್ಚೆಯ ನಡುವೆಯೇ, ನಿಮ್ಮ ಆಸ್ತಿಯನ್ನು ಕಿತ್ತುಕೊಂಡು ಅದರ ವಿಶೇಷ ಜನರಿಗೆ ಹಂಚಲು ಕಾಂಗ್ರೆಸ್ ಬಲವಾದ ಸಂಚು ರೂಪಿಸುತ್ತಿದೆ ಎಂಬ ಸತ್ಯವನ್ನು ದೇಶದ ಮುಂದೆ ಇಟ್ಟಿದ್ದೇನೆ ಎಂದು ಪ್ರಧಾನಿ ಮಂಗಳವಾರ ಪುನರುಚ್ಚರಿಸಿದ್ದಾರೆ. ಮಂಗಳವಾರ ಇಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ … Continued

100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

ನವದೆಹಲಿ : ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಉಪಕುಲಪತಿಯಾಗಿ ಪ್ರೊಫೆಸರ್ ನಯಿಮಾ ಖಾತೂನ್ ಅವರನ್ನು ನೇಮಕ ಮಾಡಲಾಗಿದೆ. ವಿಶ್ವವಿದ್ಯಾನಿಲಯದ ಸಂದರ್ಶಕರಾಗಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನುಮೋದನೆ ಪಡೆದ ನಂತರ ಶಿಕ್ಷಣ ಸಚಿವಾಲಯವು ಪ್ರೊಫೆಸರ್ ನಯಿಮಾ ಖಾತೂನ್ ಅವರನ್ನು ನೇಮಕ ಮಾಡಿದೆ. ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ 123 ವರ್ಷಗಳ ಇತಿಹಾಸದಲ್ಲಿ ಈ ಹುದ್ದೆಗೆ ನೇಮಕಗೊಂಡ … Continued