ಗುಜರಾತಿನಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ-ಕಾಂಗ್ರೆಸ್‌ ಹೀನಾಯ ಸೋಲಿಗೆ ಕಾರಣವಾದ ಅಂಶಗಳು..

ಗುಜರಾತಿನ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ 156 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸಾರ್ವಕಾಲಿಕವಾಗಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷ ಎಂಬ ಹೆಗ್ಗಳಿಕೆಗೆ ಬಿಜೆಪಿ ಪಾತ್ರವಾಗಿದೆ. ಕಾಂಗ್ರೆಸ್‌ ಕೇವಲ 16 ಸ್ಥಾನಗಳಿಗೆ ಕುಸಿಯುವ ಮೂಲಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವೂ ಸಿಗದ ಪರಿಸ್ಥಿತಿ ಎದುರಾಗಿದೆ. ಪ್ರಧಾನಿ ಮೋದಿಯವರ ಜನಪ್ರಿಯತೆಯು ಮತ್ತೊಮ್ಮೆ ಬಿಜೆಪಿ ಪರವಾಗಿ ಕೆಲಸ … Continued

ಗುಜರಾತಿನಲ್ಲಿ ಕಾಂಗ್ರೆಸ್ ಧೂಳೀಪಟ: ವಿಪಕ್ಷ ನಾಯಕನ ಸ್ಥಾನ ಸಿಗುವುದೂ ಡೌಟು..!

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಿದ್ದು, 182 ಕ್ಷೇತ್ರಗಳಲ್ಲಿ ಕೇವಲ 16 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಹೀಗಾಗಿ ವಿಪಕ್ಷ ನಾಯಕನ ಸ್ಥಾನವನ್ನೂ ಕಳೆದುಕೊಳ್ಳುವ ಭೀತಿ ಎದರಿಸುತ್ತಿದೆ ಎಂದು ವರದಿಗಳು ತಿಳಿಸಿವೆ. 182 ಸದಸ್ಯ ಸಂಖ್ಯೆಯ ಗುಜರಾತ್ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್‌ಗೆ ಒಟ್ಟು ವಿಧಾನಸಭೆ ಬಲದ ಕನಿಷ್ಠ ಶೇ.10ರಷ್ಟು ಶಾಸಕರು … Continued

ಉಪಚುನಾವಣೆ: ಆರು ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ತಲಾ 2 ಕ್ಷೇತ್ರಗಳಲ್ಲಿ ಗೆಲುವು

ನವದೆಹಲಿ: ಗುರುವಾರ ಪ್ರಕಟವಾದ ಡಿಸೆಂಬರ್ 5 ರ ಉಪಚುನಾವಣೆಯ ಫಲಿತಾಂಶದಲ್ಲಿ ಸಮಾಜವಾದಿ ಪಕ್ಷವು ಮುಲಾಯಂ ಸಿಂಗ್‌ ಯಾದವ್‌ ಅವರ ನಿಧನದಿಂದ ತೆರವಾಗಿದ್ದ ಮೈನ್‌ಪುರಿ ಲೋಕಸಭಾ ಸ್ಥಾನವನ್ನು ಉಳಿಸಿಕೊಂಡಿದೆ, ಆದರೆ ಬಿಜೆಪಿಯು ಉತ್ತರ ಪ್ರದೇಶದ ರಾಂಪುರ ಸದರ್ ವಿಧಾನಸಭಾ ಕ್ಷೇತ್ರವನ್ನು ಸಮಾಜವಾದಿ ಪಕ್ಷದಿಂದ ಕಸಿದುಕೊಂಡಿದೆ. ಹಾಗೂ ಆಡಳಿತಾರೂಢ ನಿತೀಶಕುಮಾರ್ ನೇತೃತ್ವದ ಮೈತ್ರಿ ಕೂಟದಲ್ಲಿ ತೆಕ್ಕೆಯಲ್ಲಿದ್ದ ಬಿಹಾರದ ಕುರ್ಹಾನಿ … Continued

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯುವ 9ನೇ ರಾಜಕೀಯ ಪಕ್ಷ ಆಗಲಿರುವ ಎಎಪಿ : ಹಾಗಾದ್ರೆ ಏನೆಲ್ಲ ಬದಲಾಗುತ್ತದೆ..?

ನವದೆಹಲಿ: ಅರವಿಂದ್ ಕೇಜ್ರಿವಾಲ್ 2012 ರಲ್ಲಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಪ್ರಾರಂಭಿಸಿದಾಗ, ಅನೇಕರು ಇದು ಎಷ್ಟು ವರ್ಷ ಎಂದು ಹೇಳಿದ್ದರು. ಆದರೆ ಈಗ ಅದು ಗುಜರಾತ್‌ ಚುನಾವಣೆ ಫಲಿತಾಂಶದ ನಂತರ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಇತ್ತೀಚೆಗೆ ಮುಕ್ತಾಯಗೊಂಡ ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ  … Continued

ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯಿಂದ ಅಧಿಕಾರ ಕಸಿದುಕೊಂಡ ಕಾಂಗ್ರೆಸ್: ಬಂಡಾಯ ಅಭ್ಯರ್ಥಿಗಳು ಬಿಜೆಪಿಗೆ ಮುಳುವಾದರು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಿ ಅಧಿಕಾರಕ್ಕೆ ಮರಳುವ ಹಾದಿಯಲ್ಲಿ ಕಾಂಗ್ರೆಸ್ ಮುನ್ನಡೆಯುತ್ತಿದೆ. ಇದೇವೇಳೆ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಬಿಜೆಪಿಯ ಸೋಲನ್ನು ಒಪ್ಪಿಕೊಂಡಿದ್ದಾರೆ, ಜನರು ನೀಡಿದ ತೀರ್ಪನ್ನು ಗೌರವಿಸುತ್ತೇವೆ ಹಾಗೂ . ರಾಜೀನಾಮೆ ಸಲ್ಲಿಸಲು ಶೀಘ್ರವೇ ರಾಜ್ಯಪಾಲರ ಕಚೇರಿಗೆ ತೆರಳುವುದಾಗಿ ತಿಳಿಸಿದ್ದಾರೆ ಏತನ್ಮಧ್ಯೆ, ಕಾಂಗ್ರೆಸ್ ತನ್ನ ವಿಜೇತ ಶಾಸಕರನ್ನು ಚಂಡೀಗಢಕ್ಕೆ ಅಥವಾ ಚತ್ತೀಸ್‌ಗಡಕ್ಕೆ ಸ್ಥಳಾಂತರಿಸಲು ಪ್ರಾರಂಭಿಸಿದೆ, … Continued

ಮಂಡೌಸ್ ಚಂಡಮಾರುತ : ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಕಂಡುಬಂದ ‘ಮಂಡೌಸ್’ ಚಂಡಮಾರುತದ ಪರಿಣಾಮಗಳು ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದಲ್ಲೂ ಕಂಡುಬರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಹೇಳಿದೆ. ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳನ್ನು ಒಳಗೊಂಡು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 9ರಿಂದ ಡಿಸೆಂಬರ್‌ 12ರ ವರೆಗೆ ಗುಡುಗು ಮತ್ತು ಬಿರುಗಾಳಿಯೊಂದಿಗೆ … Continued

ಗುಜರಾತ್‌ ಚುನಾವಣೆ ಫಲಿತಾಂಶ: ಅತಿ ಹೆಚ್ಚು ಸ್ಥಾನ ಗೆದ್ದು 37 ವರ್ಷಗಳ ಹಿಂದಿನ ದಾಖಲೆ ಸಾರ್ವಕಾಲಿಕ ದಾಖಲೆ ಮುರಿಯುವತ್ತ ಬಿಜೆಪಿ

ನವದೆಹಲಿ:  ದಾಖಲೆ ಸ್ಥಾನಗಳನ್ನು ಗೆಲ್ಲುವ ಮೂಲಕ ಗುಜರಾತ್‌ನಲ್ಲಿ ಭಾರತೀಯ ಜನತಾ ಪಕ್ಷವು ಸತತ ಏಳನೇ ಅವಧಿಯೊಂದಿಗೆ ದಾಖಲೆ ಸೃಷ್ಟಿಸಲು ಸಜ್ಜಾಗಿದೆ. ಕೇಸರಿ ಪಕ್ಷವು ಕಾಂಗ್ರೆಸ್ ಜೊತೆಗಿನ ಮತ್ತೊಂದು ದಾಖಲೆ ಮುರಿಯುವ ಸಾಧ್ಯತೆಯಿದೆ. ಬಿಜೆಪಿಯು ಗುಜರಾತ್ ರಾಜಕೀಯದ ಪ್ರಾಬಲ್ಯದಲ್ಲಿದ್ದರೂ, 1985 ರ ಗುಜರಾತ್ ಚುನಾವಣೆಯಲ್ಲಿ 149 ಸ್ಥಾನಗಳನ್ನು ಗೆದ್ದ ಮಾಜಿ ಮುಖ್ಯಮಂತ್ರಿ ಮಾಧವಸಿಂಹ ಸೋಲಂಕಿ ಅವರು ಈವರೆಗೆ … Continued

ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಮಾಂಡೋಸ್ ಚಂಡಮಾರುತವಾಗಿ ಪರಿವರ್ತನೆ: ದಕ್ಷಿಣ ಭಾರತದ ರಾಜ್ಯಗಳಿಗೆ ಎಚ್ಚರಿಕೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ “ಮಂಡೌಸ್” ಆಗಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಬೀಸುತ್ತಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವು ಕಳೆದ ಮೂರು ಗಂಟೆಗಳಲ್ಲಿ ಸುಮಾರು 8 ಕಿಮೀ ವೇಗದಲ್ಲಿ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದು ಪಶ್ಚಿಮ-ವಾಯುವ್ಯಕ್ಕೆ ಚಲಿಸುವ ಮತ್ತು … Continued

ಗುಜರಾತ್‌ನಲ್ಲಿ ಬಿಜೆಪಿಗೆ ಭಾರಿ ಮುನ್ನಡೆ, ಹಿಮಾಚಲದಲ್ಲಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ತೀವ್ರ ಹಣಾಹಣಿ

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಭರ್ಜರಿ ಮುನ್ನಡೆ ಸಾಧಿಸುತ್ತಿದೆ ಎಂದು ಆರಂಭಿಕ ಟ್ರೆಂಡ್‌ಗಳು ತೋರಿಸಿವೆ. ಏತನ್ಮಧ್ಯೆ, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಸುಮಾರು ಒಂದು … Continued

ಇಸ್ಲಾಂ, ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಪರಿಶಿಷ್ಟರ ಸ್ಥಾನಮಾನ ನೀಡಲಾಗುವುದಿಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ನವದೆಹಲಿ: ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶ, 1950, ಕಾಲಕಾಲಕ್ಕೆ ತಿದ್ದುಪಡಿ ಮಾಡಿದಂತೆ, ಹಿಂದೂ ಧರ್ಮ, ಸಿಖ್ ಧರ್ಮ ಮತ್ತು ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ (SC) ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರನ್ನು ಪರಿಶಿಷ್ಟ ಜಾತಿಗಳ … Continued