ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಕಂಡಲ್ಲಿ ಗುಂಡಿಕ್ಕುವ ಆದೇಶಕ್ಕೆ ರಾಜ್ಯಪಾಲರ ಅನುಮೋದನೆ

ಇಂಫಾಲ: ಆದಿವಾಸಿಗಳು ಮತ್ತು ಬಹುಸಂಖ್ಯಾತ ಮೈತೆ ಸಮುದಾಯದ ನಡುವೆ ರಾಜ್ಯಾದ್ಯಂತ ಘರ್ಷಣೆಗಳು ಭುಗಿಲೆದ್ದ ನಂತರ ಮಣಿಪುರ ರಾಜ್ಯಪಾಲರು ಗುರುವಾರ ರಾಜ್ಯ ಗೃಹ ಇಲಾಖೆಯ ಶೂಟ್-ಆಟ್-ಸೈಟ್  (ಕಂಡಲ್ಲಿ ಗುಂಡಿಕ್ಕುವ )ಆದೇಶ ಅನುಮೋದಿಸಿದ್ದಾರೆ. ಮೇ 3 ಬುಧವಾರದಂದು ಬುಡಕಟ್ಟು ಒಕ್ಕೂಟದ ಮೆರವಣಿಗೆಯಲ್ಲಿ ಹಿಂಸಾಚಾರದ ಘಟನೆಗಳು ವರದಿಯಾದ ನಂತರ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಈ ಆದೇಶವನ್ನು ಹೊರಡಿಸಲಾಗಿದೆ. … Continued

ಉತ್ತರ ಪ್ರದೇಶ : ಪೊಲೀಸ್‌ ಎನ್‌ಕೌಂಟರಿನಲ್ಲಿ ಮತ್ತೊಬ್ಬ ಕುಖ್ಯಾತ ಗ್ಯಾಂಗ್‌ಸ್ಟರ್‌ ಸಾವು

ಮೀರತ್: ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆಯು ಮತ್ತೊಬ್ಬ ಕುಖ್ಯಾತ ಗ್ಯಾಂಗ್‌ಸ್ಟರನನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ. ದೆಹಲಿ ಸಮೀಪದ ನೋಯ್ಡಾ, ಘಾಜಿಯಾಬಾದ್ ಮತ್ತು ಇತರ ಪ್ರದೇಶಗಳಲ್ಲಿ ಜನರನ್ನು ಭೀತಿಗೊಳಿಸಿದ್ದ ಅನಿಲ ದುಜಾನಾ ಮೀರತ್‌ನಲ್ಲಿ ಯುಪಿ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಎನ್‌ಕೌಂಟರ್‌ನಲ್ಲಿ ಸತ್ತಿದ್ದಾನೆ. ಆತನ ಮೇಲೆ 60 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ. ಕೊಲೆ ಪ್ರಕರಣವೊಂದರಲ್ಲಿ ಜಾಮೀನು … Continued

ಆಸ್ತಿಯ ಮೇಲೆ ತಂದೆ ಸಾಲ ಮಾಡಿದ್ದನ್ನು ತೀರಿಸಿದರೂ ಮಗಳಿಗೆ ಆಸ್ತಿ ಮೇಲೆ ಸಮಾನ ಹಕ್ಕಿದೆ: ಹೈಕೋರ್ಟ್‌

ಬೆಂಗಳೂರು: ತಂದೆಯು ಜಮೀನು ಅಡವಿಟ್ಟು ಸಹೋದರಿಗೆ ಮದುವೆ ನೆರವೇರಿಸಿದ್ದು, ಚಿನ್ನಾಭರಣ ಸಹ ಕೊಡಿಸಿದ್ದಾರೆ. ತಂದೆಯ ಸಾಲ ತೀರಿಸಿ ನಾನು ಜಮೀನು ಹಿಂದಕ್ಕೆ ಪಡೆದಿದ್ದೇನೆ. ಆದ್ದರಿಂದ ತಂದೆಯ ಸಹೋದರಿಗೆ ತಂದೆ ಆಸ್ತಿ ಮೇಲೆ ಸಮಾನ ಹಕ್ಕು ಇಲ್ಲ ಮತ್ತು ಆಕೆಗೆ ಆಸ್ತಿಯಲ್ಲಿ ಪಾಲು ಕೊಡಲಾಗದು” ಎಂಬ ವಾದ ತಿರಸ್ಕರಿಸಿರುವ ಕರ್ನಾಟಕ ಹೈಕೋರ್ಟ್, ತಂದೆಯ ಆಸ್ತಿಯಲ್ಲಿ ಪುತ್ರನ ಜೊತೆಗೆ … Continued

ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ತಡೆ ನೀಡಿದ ಪಾಟ್ನಾ ಹೈಕೋರ್ಟ್

ಪಾಟ್ನಾ: ಬಿಹಾರ ರಾಜ್ಯದಲ್ಲಿ ಜಾತಿ ಆಧಾರಿತ ಸಮೀಕ್ಷೆಯನ್ನು ತಕ್ಷಣ ನಿಲ್ಲಿಸುವಂತೆ ನಿತೀಶಕುಮಾರ ನೇತೃತ್ವದ ಸರ್ಕಾರಕ್ಕೆ ಪಾಟ್ನಾ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ. ಸರ್ಕಾರವು ಇಲ್ಲಿಯವರೆಗೆ ಸಂಗ್ರಹಿಸಿದ ಮಾಹಿತಿ ಎಲ್ಲಿಯೂ ಸೋರಿಕೆಯಾಗದಂತೆ ಸುರಕ್ಷಿತವಾಗಿಡಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ಸಮೀಕ್ಷೆಯ ವಿರುದ್ಧ ಸಲ್ಲಿಸಲಾದ ರಿಟ್ ಅರ್ಜಿಯಲ್ಲಿ ಅಂತಿಮ ಆದೇಶಗಳನ್ನು ನೀಡುವವರೆಗೆ ಸಂಗ್ರಹಿಸಲಾದ ಡೇಟಾವನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು … Continued

ಮಣಿಪುರ ಹಿಂಸಾಚಾರ: ಇಂಟರ್ನೆಟ್ ಸ್ಥಗಿತ, 8 ಜಿಲ್ಲೆಗಳಲ್ಲಿ ಕರ್ಫ್ಯೂ , ಸೇನೆ ನಿಯೋಜನೆ ; ಈಶಾನ್ಯ ರಾಜ್ಯ ಏಕೆ ಹೊತ್ತಿ ಉರಿಯುತ್ತಿದೆ..?

ಇಂಫಾಲ: ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳ ಪ್ರತಿಭಟನೆಯ ನಡುವೆ ಮಣಿಪುರದಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಸೇನೆಯು ಇಂದು, ಗುರುವಾರ ಧ್ವಜ ಮೆರವಣಿಗೆ ನಡೆಸಿತು. ಇಂಫಾಲ್, ಚುರಾಚಂದ್‌ಪುರ ಮತ್ತು ಕಾಂಗ್‌ಪೋಕ್ಪಿಯಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ನಿನ್ನೆ ರಾತ್ರಿ ಮಣಿಪುರದ ಎಂಟು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಯಿತು. ಮಣಿಪುರ ಸರ್ಕಾರ ರಾಜ್ಯದಲ್ಲಿ ಮೊಬೈಲ್ … Continued

ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ: 24 ಗಂಟೆಗಳಲ್ಲಿ ಇದು 2ನೇ ಎನ್‌ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು, ಗುರುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಎಕೆ 47 ರೈಫಲ್ ಮತ್ತು ಒಂದು ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎರಡನೇ … Continued

ಮೋಚಾ ಚಂಡಮಾರುತ ಮುಂದಿನ ವಾರ ಭಾರತದ ಪೂರ್ವ ಕರಾವಳಿ ಅಪ್ಪಳಿಸುವ ಸಾಧ್ಯತೆ

ನವದೆಹಲಿ: ವರ್ಷದ ಮೊದಲ ಚಂಡಮಾರುತ, ಮೋಚಾ ಚಂಡಮಾರುತವು ಈ ವಾರ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಈ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವು ಅಭಿವೃದ್ಧಿ ಹೊಂದುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮೇ 6 ರ ಸುಮಾರಿಗೆ ಚಂಡಮಾರುತದ ಪರಿಚಲನೆಯು ರೂಪುಗೊಳ್ಳುವ ಸಾಧ್ಯತೆಯಿದೆ. ಆದಾಗ್ಯೂ, ಸೈಕ್ಲೋನ್ ರಚನೆಯನ್ನು ಇನ್ನೂ ದೃಢೀಕರಿಸಲಾಗಿಲ್ಲ. “ಮೇ … Continued

“2019ರಲ್ಲಿ ಪ್ರಧಾನಿ ಮೋದಿಗೆ ಅದನ್ನು ಸ್ಪಷ್ಟಪಡಿಸಿದೆ…”: ಆತ್ಮಚರಿತ್ರೆ ಪುಸ್ತಕದಲ್ಲಿ ಶರದ್ ಪವಾರ್

ಮುಂಬೈ: ಭಾರತೀಯ ಜನತಾ ಪಕ್ಷವು 2019 ರಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ)ಯೊಂದಿಗೆ ಚುನಾವಣೋತ್ತರ ಮೈತ್ರಿಗೆ ಉತ್ಸುಕವಾಗಿತ್ತು, ಆದರೆ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು ಪಕ್ಷವು ಮೈತ್ರಿ ಬಗ್ಗೆ ಒಲವು ಹೊಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ “ಸ್ಪಷ್ಟ”ವಾಗಿ ಹೇಳಿದ್ದರು…. ಬುಧವಾರ ಬಿಡುಗಡೆಯಾದ 2015ರ ನಂತರದ ಘಟನೆಗಳ ಮೇಲೆ ಕೇಂದ್ರೀಕರಿಸುವ ತಮ್ಮ ಪರಿಷ್ಕೃತ ಆತ್ಮಚರಿತ್ರೆ … Continued

ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಹಲ್ಲೆ : ಕುಸ್ತಿಪಟುಗಳ ಆರೋಪ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಬುಧವಾರ ಸಂಜೆ ಹೊರಗಿನವರೊಂದಿಗೆ ಜಗಳ ನಡೆದಿದೆ ಎಂದು ಆರೋಪಿಸಿದ್ದಾರೆ. ತಮ್ಮ ಮೇಲೆ ಹಲ್ಲೆ ನಡೆಸಿದ ಅವರಲ್ಲಿ ಕೆಲವರು ದೆಹಲಿ ಪೊಲೀಸ್ ಸಿಬ್ಬಂದಿ ಎಂದು ಆರೋಪಿಸಿದ್ದಾರೆ. ಆದರೆ ದಾಳಿಕೋರರ ಗುರುತಿನ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ರಾಷ್ಟ್ರ ರಾಜಧಾನಿಯ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್‌ನಲ್ಲಿ ಹಿಂಸಾಚಾರಕ್ಕೆ ಸಾಕ್ಷಿಯಾಗಿರುವುದು … Continued

ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ: 11 ಸ್ಥಾನ ಕುಸಿದ ಭಾರತ, ಪಾಕಿಸ್ತಾನ ಭಾರತಕ್ಕಿಂತ ಮುಂದೆ…

ನವದೆಹಲಿ: ಬುಧವಾರ ಬಿಡುಗಡೆಯಾದ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ ವರದಿಯಲ್ಲಿ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಭಾರತವು 161ನೇ ಸ್ಥಾನದಲ್ಲಿದೆ, ಹೀಗಾಗಿ ಕಳೆದ ವರ್ಷಕ್ಕಿಂತ 11 ಸ್ಥಾನ ಕುಸಿದಿದೆ. 2022ರಲ್ಲಿ ಭಾರತ 150ನೇ ಸ್ಥಾನದಲ್ಲಿತ್ತು. ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಶ್ರೀಲಂಕಾ ಸೇರಿದಂತೆ ಯುದ್ಧ ಸಂಘರ್ಷ ಮತ್ತು ಆರ್ಥಿಕ ಸಮಸ್ಯೆ ಹೊಂದಿರುವ ನೆರೆಯ ರಾಷ್ಟ್ರಗಳಾದ ನೇಪಾಳ (95), ಪಾಕಿಸ್ತಾನ … Continued