10, 12ನೇ ತರಗತಿಗಳಿಗೆ ಆಫ್‌ಲೈನ್‌ ಪರೀಕ್ಷೆ ನಡೆಸದಿರಲು ಕೋರಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಹತ್ತು ಮತ್ತು ಹನ್ನೆರಡನೇ ತರಗತಿಗಳಿಗೆ ವಿವಿಧ ಶಿಕ್ಷಣ ಮಂಡಳಿಗಳು ನಡೆಸುವ ಪರೀಕ್ಷೆಗಳನ್ನು ಭೌತಿಕವಾಗಿ/ಆಫ್‌ಲೈನ್‌ ವಿಧಾನದಲ್ಲಿ ನಡೆಸದಂತೆ ಕೋರಿ ಹದಿನೈದು ರಾಜ್ಯಗಳ ಶಾಲಾ ವಿದ್ಯಾರ್ಥಿಗಳು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ಅಧಿಕಾರಿಗಳು ಪರೀಕ್ಷೆಯ ನಿಯಮಗಳು ಮತ್ತು ದಿನಾಂಕಗಳನ್ನು ಇನ್ನೂ ನಿರ್ಧರಿಸದ ಕಾರಣ ಅರ್ಜಿಯು ಅಕಾಲಿಕವಾಗಿದ್ದು ತಪ್ಪು ಸಲಹೆಯಿಂದ ಕೂಡಿದೆ ಎಂದು ನ್ಯಾಯಮೂರ್ತಿ ಎ.ಎಂ. … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನ

ಮುಂಬೈ: ಮುಂಬೈ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ ನಂತರ ಇಂದು, ಬುಧವಾರ ಬಂಧಿಸಿದೆ. ಇತ್ತೀಚೆಗಷ್ಟೇ ಇಡಿ ಹಲವು ದಾಳಿಗಳನ್ನು ನಡೆಸಿದ್ದು, ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ … Continued

ರಾಮ ಸೇತುವಿಗೆ ರಾಷ್ಟ್ರೀಯ ಪರಂಪರೆ ಸ್ಮಾರಕ ಸ್ಥಾನಮಾನ: ಮಾರ್ಚ್ 9ರಂದು ಸುಬ್ರಮಣಿಯನ್ ಸ್ವಾಮಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಸಮ್ಮತಿ

ನವದೆಹಲಿ: ರಾಮಸೇತುವನ್ನು ರಾಷ್ಟ್ರೀಯ ಪರಂಪರೆಯ ಸ್ಮಾರಕವಾಗಿ ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಮನವಿಯನ್ನು ಮಾರ್ಚ್ 9 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ಸುಬ್ರಮಣಿಯನ್ ಸ್ವಾಮಿ ಅವರು ಪ್ರಕರಣದ ಆರಂಭಿಕ ವಿಚಾರಣೆಯನ್ನು ಕೋರಿದ ನಂತರ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ … Continued

ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆ: ರಾಜ್ಯಾದ್ಯಂತ ಡಿಎಂಕೆಗೆ ಭರ್ಜರಿ ಜಯ

ಚೆನ್ನೈ: ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಭರ್ಜರಿ ಜಯ ದಾಖಲಿಸಿದೆ, ತಮಿಳುನಾಡಿನ 21 ನಗರ ಪಾಲಿಕೆಗಳು, 138 ಪುರಸಭೆಗಳ ಪೈಕಿ ಎಲ್ಲಾ ಮತ್ತು 128 ಪುರಸಭೆಗಳನ್ನು ಗೆದ್ದಿದೆ. 489 ಪಟ್ಟಣ ಪಂಚಾಯಿತಿಗಳ ಪೈಕಿ 400ರಲ್ಲಿಯೂ ಪಕ್ಷ ಗೆಲುವು ಸಾಧಿಸಿದೆ. ಪಾಲಿಕೆಯಲ್ಲಿ 946, ಪುರಸಭೆಗಳಲ್ಲಿ 2,360 ಮತ್ತು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಪ್ರಶ್ನಿಸಿದ ಇಡಿ

ಮುಂಬೈ: ಮುಂಬೈ ಭೂಗತ ಜಗತ್ತಿನ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ಪ್ರಶ್ನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 62 ವರ್ಷದ ಎನ್‌ಸಿಪಿ ನಾಯಕ ಅವರು ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಬೆಳಗ್ಗೆ 8 ಗಂಟೆ ಸುಮಾರಿಗೆ … Continued

ರಷ್ಯಾ-ಉಕ್ರೇನ್ ಯುದ್ಧವಾದರೆ ಭಾರತದಲ್ಲಿ ಯಾವುದೆಲ್ಲ ಹೆಚ್ಚು ದುಬಾರಿಯಾಗಬಹುದು..?

ನವದೆಹಲಿ: ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನಡುವೆ ಭಾರತದಲ್ಲಿ ಜನಸಾಮಾನ್ಯರು ಇದರ ಬಿಸಿ ಅನುಭವಿಸುವ ಸಾಧ್ಯತೆಯಿದೆ, ಏಕೆಂದರೆ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗುವ ಸಾಧ್ಯತೆಯಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನತೆಗಳು ಹೆಚ್ಚಾಗುತ್ತಿರುವಾಗ, ಜಾಗತಿಕ ಆರ್ಥಿಕತೆಯು ಟೆಂಟರ್‌ ಹುಕ್ಸ್‌ನಲ್ಲಿದೆ. ನೈಸರ್ಗಿಕ ಅನಿಲದಿಂದ ಗೋಧಿಯ ವರೆಗೆ, ವಿವಿಧ ಸರಕುಗಳ ಬೆಲೆಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುತ್ತವೆ ಎಂದು ತಜ್ಞರು ನಂಬುತ್ತಾರೆ. ಮುಂದಿನ … Continued

ಯುದ್ಧಾತಂಕ: ಉಕ್ರೇನ್‌ನಿಂದ 242 ಭಾರತೀಯ ವಿದ್ಯಾರ್ಥಿಗಳು ವಾಪಸ್

ನವದೆಹಲಿ: ತನ್ನ ನೆರೆಯ ರಷ್ಯಾದೊಂದಿಗೆ ಯುರೋಪಿಯನ್ ರಾಷ್ಟ್ರದ ನಡುವಿನ ಉದ್ವಿಗ್ನತೆಯ ನಡುವೆ ಭಾರತವು ಉಕ್ರೇನ್‌ನಿಂದ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. 242 ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ಭಾರತಕ್ಕೆ ಮರಳಿ ಕರೆತರಲಾಯಿತು. ಅವರು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲು ಡ್ರೀಮ್‌ಲೈನರ್ B-787 ವಿಮಾನವನ್ನು ನಿಯೋಜಿಸಲಾಗಿದೆ, ಇದರ ಅಡಿಯಲ್ಲಿ ಉಕ್ರೇನ್‌ನ ಖಾರ್ಕಿವ್‌ನಿಂದ … Continued

ಸ್ವಾಮಿ ಗಂಗೇಶಾನಂದರ ಮರ್ಮಾಂಗ ಕತ್ತರಿಸಿದ ಪ್ರಕರಣಕ್ಕೆ ದೊಡ್ಡ ತಿರುವು: 5 ವರ್ಷಗಳ ಹಿಂದಿನ ಪಿತೂರಿ ಬಯಲಾಯ್ತು..!

ತಿರುವನಂತಪುರಂ: ಕೇರಳದಲ್ಲಿ ಹಿಂದೂ ಸಂತನ ಮರ್ಮಾಂಗ ಕತ್ತರಿಸಿದ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ ಪೊಲೀಸರು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ವರದಿಯ ಪ್ರಕಾರ, ಸ್ವಾಮಿ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಯುವತಿ ತನ್ನ ಗೆಳೆಯನೊಂದಿಗೆ ಒಟ್ಟಿಗೆ ವಾಸಿಸಲು ಸ್ವಾಮೀಜಿ ಅಡ್ಡಿಯಾಗಿದ್ದಾರೆ ಎಂದು ತಿಳಿದಿದ್ದಳು. ಹೀಗಾಗಿ ಸ್ವಾಮೀಜಿಯವರ ವಿರುದ್ಧ ಪೀತೂರಿ ಅಂಗವಾಗಿ ಬೃಹನ್‌ ನಾಟಕ ನಡೆಸಿದರು ಎಂಬುದು ತನಿಖೆಯಿಂದ ಗೊತ್ತಾಗಿದೆ. … Continued

ಪರಸ್ಪರ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಪ್ರಧಾನಿ ಮೋದಿಗೆ ಟಿವಿ ಚರ್ಚೆ ಆಫರ್ ನೀಡಿದ ಪಾಕ್‌ ಪ್ರಧಾನಿ ಇಮ್ರಾನ್ ಖಾನ್

ನವದೆಹಲಿ: ಎರಡು ನೆರೆಯ ರಾಷ್ಟ್ರಗಳ ನಡುವಿನ ಸಮಸ್ಯೆಗಳನ್ನು ಬಗೆಹರಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರದರ್ಶನದಲ್ಲಿ ಚರ್ಚೆ ನಡೆಸಲು ಬಯಸುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ನರೇಂದ್ರ ಮೋದಿ ಅವರೊಂದಿಗೆ ಟಿವಿಯಲ್ಲಿ ಚರ್ಚೆ ಮಾಡಲು ನಾನು ಇಷ್ಟಪಡುತ್ತೇನೆ” ಎಂದು ಇಮ್ರಾನ್ ಖಾನ್ ರಷ್ಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಭಿನ್ನಾಭಿಪ್ರಾಯಗಳನ್ನು ಚರ್ಚೆಯ ಮೂಲಕ … Continued

ಎಸ್ಎಫ್​​ಜೆ ನಂಟಿರುವ ಪಂಜಾಬ್ ಪಾಲಿಟಿಕ್ಸ್ ಟಿವಿಯ ಆ್ಯಪ್, ವೆಬ್‌ಸೈಟ್, ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗುಪ್ತಚರ ಮಾಹಿತಿಗಳ ಆಧಾರದ ಮೇರೆಗೆ ಮತ್ತು ಕಳೆದ ವರ್ಷ ಜಾರಿಗೆ ತಂದ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳ ಅಡಿಯಲ್ಲಿ ನೀಡಲಾದ ತುರ್ತು ಅಧಿಕಾರಗಳನ್ನು ಅನ್ವಯಿಸಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (I&B) ವಿದೇಶಿ ಮೂಲದ ‘ಪಂಜಾಬ್ ಪಾಲಿಟಿಕ್ಸ್ ಟಿವಿ’ಯ ಡಿಜಿಟಲ್ ಮಾಧ್ಯಮ ಸಂಪನ್ಮೂಲಗಳನ್ನು ನಿಷೇಧಿಸಿದೆ. ಇದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) … Continued