ಇ-ರಿಕ್ಷಾದಲ್ಲಿದ್ದ ಪಟಾಕಿ ಸ್ಫೋಟ, ಒಬ್ಬ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ: ಸ್ಫೋಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ ಸೋಮವಾರ ಇ-ರಿಕ್ಷಾದಲ್ಲಿ ಪಟಾಕಿಗಳು ಸ್ಫೋಟಗೊಂಡು ಒಬ್ಬರು ಮೃತಪಟ್ಟಿದ್ದಾರೆ. ಇ-ರಿಕ್ಷಾ ಪಟಾಕಿಗಳನ್ನು ಹೊತ್ತೊಯ್ದಿದ್ದು, ಜಗನ್ನಾಥ ಯಾತ್ರೆ ವೇಳೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಮೆರವಣಿಗೆ ವೇಳೆ ಪಟಾಕಿ ಸಿಡಿಸಲು ಪಟಾಕಿ ತುಂಬಿದ್ದ ಇ-ರಿಕ್ಷಾದ ಮೇಲೆ ಯಾತ್ರೆ ವೇಳೆ ಸಿಡಿಸಲಾಗಿದ್ದ ಪಟಾಕಿ ಕಿಡಿ ಬಿದ್ದ ನಂತರ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಪೊಲೀಸರು … Continued

ದೆಹಲಿ ಮದ್ಯ ಹಗರಣ: ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು, ಮಂಗಳವಾರ ಮಧ್ಯಾಹ್ನ 3:50ಕ್ಕೆ ವಿಚಾರಣೆ ನಡೆಸಲು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಒಪ್ಪಿಗೆ ನೀಡಿದ್ದಾರೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಸೋಡಿಯಾ ಅವರ … Continued

ಇಬ್ಬರು ಭಯೋತ್ಪಾದಕರ ಕಿಂಗ್‌ಪಿನ್‌ಗಳ ನಂತರ ಕರಾಚಿಯಲ್ಲಿ ಹತ್ಯೆಯಾದ ಕಾಶ್ಮೀರಿ ಭಯೋತ್ಪಾದಕ ಸಂಘಟನೆ ಮಾಜಿ ಕಮಾಂಡರ್‌

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಅಲ್ ಬದರ್‌ ಮಾಜಿ ಕಮಾಂಡರ್ ಸೈಯದ್ ಖಾಲಿದ್ ರಝಾ ಅವರನ್ನು ಪಾಕಿಸ್ತಾನದ ಕರಾಚಿಯಲ್ಲಿರುವ ಅವರ ನಿವಾಸದ ಹೊರಗೆ ಭಾನುವಾರ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇದು ಕಳೆದ ಒಂದು ವಾರದಲ್ಲಿ ಕಾಶ್ಮೀರಿ ಭಯೋತ್ಪಾದಕನ ಮೂರನೇ ಹತ್ಯೆಯಾಗಿದೆ – ಅದರಲ್ಲಿ ಎರಡು ಪಾಕಿಸ್ತಾನದಲ್ಲಿ ಮತ್ತು ಒಂದು ಅಫ್ಘಾನಿಸ್ತಾನದಲ್ಲಿ ನಡೆದಿದೆ. ಫೆಬ್ರವರಿ 21 … Continued

ಹೆಚ್ಚಿನ ಪಿಂಚಣಿ ಆಯ್ಕೆ ಮಾಡಲು ಇದ್ದ ಕಾಲಾವಕಾಶ ವಿಸ್ತರಿಸಿದ ಇಪಿಎಫ್‌ಒ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಸೋಮವಾರ ಚಂದಾದಾರರಿಗೆ ಹೆಚ್ಚಿನ ಪಿಂಚಣಿ ಆಯ್ಕೆ ಮಾಡಲು ಮೇ 3ರ ವರೆಗೆ ಗಡುವನ್ನು ವಿಸ್ತರಿಸಿದೆ. ಈ ಹಿಂದೆ, ಅಧಿಕ ಪಿಂಚಣಿಯನ್ನು ಆಯ್ಕೆ ಮಾಡಲು ಮಾರ್ಚ್ 3 ಕೊನೆಯ ದಿನಾಂಕ ಎಂದು ಇಪಿಎಫ್‌ ಹೇಳಿತ್ತು. 2022ರ ನವೆಂಬರ್ 4 ರಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ನೌಕರರ ಭವಿಷ್ಯ … Continued

ಐಆರ್‌ ಸಿಟಿಸಿ ಹಗರಣ: ಲಾಲು ಪ್ರಸಾದ ಯಾದವ, ರಾಬ್ರಿ ದೇವಿಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ನವದೆಹಲಿ: ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥ ಲಾಲು ಪ್ರಸಾದ ಯಾದವ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ಹಗರಣವು ಭಾರತೀಯ ರೈಲ್ವೇಯಲ್ಲಿ ಭೂಮಿಗೆ ಬದಲಾಗಿ ಉದ್ಯೋಗಗಳನ್ನು ಒದಗಿಸಿದೆ ಎಂದು … Continued

ದೆಹಲಿ ಸಾರಾಯಿ ನೀತಿ ಪ್ರಕರಣ: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾಗೆ 5 ದಿನಗಳ ಕಾಲ ಸಿಬಿಐ ಕಸ್ಟಡಿ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭಾನುವಾರ ರಾತ್ರಿ ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿರುವ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಎಎಪಿ ವರಿಷ್ಠ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಐದು ದಿನಗಳ ಸಿಬಿಐ ಕಸ್ಟಡಿಗೆ ಕಳುಹಿಸಲಾಗಿದೆ. ಸಿಸೋಡಿಯಾ ಅವರನ್ನು ರೌಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶ ಎಂ.ಕೆ. ನಾಗಪಾಲ ಅವರ ಮುಂದೆ ಹಾಜರುಪಡಿಸಲಾಯಿತು. ಸಿಬಿಐ ಕೋರ್ಟ್ … Continued

ಚುನಾವಣೋತ್ತರ ಸಮೀಕ್ಷೆ ಪ್ರಕಟ : ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಒಕ್ಕೂಟ ಅಧಿಕಾರಕ್ಕೆ ಬರುವ ಸಾಧ್ಯತೆ; ಮೇಘಾಲಯದಲ್ಲಿ ಎನ್‌ಪಿಪಿ ಏಕೈಕ ದೊಡ್ಡ ಪಕ್ಷ

ನವದೆಹಲಿ: ತ್ರಿಪುರಾವನ್ನು ಪೂರ್ಣ ಬಹುಮತದೊಂದಿಗೆ ಉಳಿಸಿಕೊಳ್ಳಲು ಬಿಜೆಪಿ ಸಜ್ಜಾಗಿದೆ. ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಸೋಮವಾರ ಭವಿಷ್ಯ ನುಡಿದಿದೆ. ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 36 ರಿಂದ 45 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ, ಆದರೆ ತಿಪ್ರಾ … Continued

ನಾಲ್ಕು ತಿಂಗಳ ಹಸುಳೆಯೊಂದಿಗೆ ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿದ ಶಾಸಕಿ…!

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶಕ್ಕೆ ಶಾಸಕಿಯೊಬ್ಬರು ತಮ್ಮ ನಾಲ್ಕು ತಿಂಗಳ ಮಗುವಿನೊಂದಿಗೆ ಭಾಗವಹಿಸಿ ಗಮನ ಸೆಳೆದಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು, ಸೋಮವಾರ ಮುಂಬೈಗೆ ಆಗಮಿಸಿದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‍ಸಿಪಿ) ಶಾಸಕಿ ಸರೋಜ್ ಅಹಿರೆ ತಮ್ಮ ನಾಲ್ಕು ತಿಂಗಳ ಮಗನೊಂದಿಗೆ ಕಾಣಿಸಿಕೊಂಡರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಾಗ್ಪುರದಲ್ಲಿ ನಡೆದ ವಿಧಾನಸಭೆಯ ಚಳಿಗಾಲದ … Continued

ಹೆಚ್ಚಿನ ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಬಂಧನ ವಿರೋಧಿಸಿದ್ದಾರೆ : ಅರವಿಂದ ಕೇಜ್ರಿವಾಲ್ ಹೇಳಿಕೆ

ನವದೆಹಲಿ: ದೆಹಲಿ ಮದ್ಯದ ನೀತಿ ಪ್ರಕರಣದಲ್ಲಿ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವುದನ್ನು “ಹೆಚ್ಚಿನ ಸಿಬಿಐ ಅಧಿಕಾರಿಗಳು” ವಿರೋಧಿಸಿದ್ದಾರೆ ಎಂದು ತಿಳಿದು ಬಂದಿದೆ ಮತ್ತು “ರಾಜಕೀಯ ಒತ್ತಡ” ದ ಕಾರಣ ಸಾಕ್ಷ್ಯಾಧಾರಗಳಿಲ್ಲದೆ ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ. ಈಗ ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ … Continued