ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಕೊರೊನಾ ಸೋಂಕು: ವೀಡಿಯೊ ಕಾನ್ಫರೆನ್ಸ್‌ ಮೂಲಕ ಕ್ಯಾಬಿನೆಟ್ ಸಭೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಮಲ್ ನಾಥ್ ಬುಧವಾರ ಹೇಳಿದ್ದಾರೆ. ರಾಜ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಈ ಕಾರಣದಿಂದ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. “ನಾವು ಉದ್ಧವ್ ಠಾಕ್ರೆ ಅವರೊಂದಿಗೆ ಸಭೆ ನಡೆಸಿದ್ದೇವೆ ಆದರೆ ಅವರು ಕೋವಿಡ್‌ಗೆ ಧನಾತ್ಮಕ … Continued

ಅಫ್ಘಾನಿಸ್ತಾನದಲ್ಲಿ ಭೂಕಂಪ : 280 ಜನರು ಸಾವು, ನೂರಾರು ಮನೆಗಳ ಕುಸಿತ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಬುಧವಾರ ಮುಂಜಾನೆ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 280 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ನೂರಾರು ಜನರು ಗಾಯಗೊಂಡಿದ್ದಾರೆ ಮತ್ತು ದೂರದ ಪರ್ವತ ಹಳ್ಳಿಗಳಿಂದ ಮಾಹಿತಿ ಸಿಕ್ಕಿದ ನಂತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಗಡಿಯ ಸಮೀಪವಿರುವ ಖೋಸ್ಟ್ ನಗರದಿಂದ ಸುಮಾರು 44 ಕಿಮೀ … Continued

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ ರಾಜ್ಯಪಾಲ ಕೋಶ್ಯಾರಿಗೆ ಕೊರೊನಾ ಸೋಂಕು, ಆಸ್ಪತ್ರೆಗೆ ದಾಖಲು

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಇಂದು, ಬುಧವಾರ (ಜೂನ್ 22) ಕೋವಿಡ್-19 ಸೋಂಕು ದೃಢಪಟ್ಟಿದೆ ಹಾಗೂ ಅವರನ್ನು ಮುಂಬೈನ HN ರಿಲಯನ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ತನಗೆ ಸೌಮ್ಯ ಲಕ್ಷಣಗಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಮಹಾರಾಷ್ಟ್ರವು ಪ್ರಸ್ತುತ ರಾಜಕೀಯ ಪ್ರಕ್ಷುಬ್ಧತೆಗೆ ಸಾಕ್ಷಿಯಾಗಿದೆ. ಶಿವಸೇನಾ ನಾಯಕ ಏಕನಾಥ್ ಶಿಂಧೆ … Continued

ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ನಂತರ ದೇವಸ್ಥಾನದ ಕಸ ಗುಡಿಸಿದ ದ್ರೌಪದಿ ಮುರ್ಮು | ವೀಕ್ಷಿಸಿ

ಭುವನೇಶ್ವರ : ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಇಂದು, ಬುಧವಾರ ತನ್ನ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‌ಪುರದಲ್ಲಿರುವ ಶಿವ ದೇವಾಲಯಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ದೇವಾಲಯದ ಪ್ರಾಂಗಣದ ಕಸ ಗುಡಿಸುತ್ತಿರು ದೃಶ್ಯ ಕ್ಯಾಮಾರಾದಲ್ಲಿ ಸೆರೆಯಾಗಿದೆ. ದ್ರೌಪದಿ ಮುರ್ಮು ಅವರು ‘ಜಾಹಿರಾ’ ಎಂಬ ಬುಡಕಟ್ಟು ಆರಾಧನಾ ಸ್ಥಳಕ್ಕೂ ಭೇಟಿ … Continued

ಭಾರತೀಯ ಮೂಲದ ಡಾ. ಆರತಿ ಪ್ರಭಾಕರ್ ಅವರನ್ನು ಅಮೆರಿಕದ ಉನ್ನತ ವಿಜ್ಞಾನ ಸಲಹೆಗಾರರನ್ನಾಗಿ ನೇಮಕ ಮಾಡಿದ ಅಧ್ಯಕ್ಷ ಬೈಡನ್‌

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಮಂಗಳವಾರ ಭಾರತೀಯ ಮೂಲದ ಅಮೆರಿಕನ್ ಡಾ. ಆರತಿ ಪ್ರಭಾಕರ್ ಅವರನ್ನು ಶ್ವೇತಭವನದ ಮುಂದಿನ ವಿಜ್ಞಾನ ಸಲಹೆಗಾರರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ಸೆನೆಟ್‌ನಿಂದ ದೃಢೀಕರಿಸಲ್ಪಟ್ಟರೆ, ಡಾ. ಆರತಿ ಪ್ರಭಾಕರ್ ಅವರು ಬೈಡನ್‌ ಅವರ ವಿಜ್ಞಾನ ಮತ್ತು ತಂತ್ರಜ್ಞಾನದ ಮುಖ್ಯ ಸಲಹೆಗಾರರಾಗಿ, ವಿಜ್ಞಾನ ಮತ್ತು ತಂತ್ರಜ್ಞಾನದ . ಬೈಡನ್‌ ಅವರು ಡಾ. … Continued

ಇಡಿಯಿಂದ ರಾಹುಲ್ ವಿಚಾರಣೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಉಗುಳಿದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ | ವೀಕ್ಷಿಸಿ

ನವದೆಹಲಿ: ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪೊಲೀಸ್ ಅಧಿಕಾರಿಗಳತ್ತ ಉಗುಳಿರುವ ಘಟನೆ ನಡೆದಿದೆ. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ವಾಹನ ಹತ್ತಿಸುವ ವೇಳೆ ವಾಹನ ಏರಿದ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ನೆಟ್ಟಾ ಡಿಸೋಜಾ ಪೊಲೀಸರ ಜೊತೆ ಮಾತಿನ ಚಕಮಕಿ … Continued

ಮಹಾ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉಲ್ಬಣ: ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಅಸ್ಸಾಂಗೆ ಶಿಫ್ಟ್‌: ತಮಗೆ 46 ಶಾಸಕರ ಬೆಂಬಲ ಎಂದ ನಾಯಕ

ಗುವಾಹತಿ (ಅಸ್ಸಾಂ): ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಪಕ್ಷದ ಇತರ ಶಾಸಕರೊಂದಿಗೆ ಇಂದು, ಬುಧವಾರ ಮುಂಜಾನೆ ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹತಿಗೆ ಆಗಮಿಸಿದ್ದಾರೆ. ಅವರನ್ನು ಬಿಜೆಪಿ ಮುಖಂಡರಾದ ಸುಶಾಂತ ಬೊರ್ಗೊಹೈನ್ ಮತ್ತು ಪಲ್ಲಬ್ ಲೋಚನ್ ದಾಸ್ ಬರಮಾಡಿಕೊಂಡಿದ್ದಾರೆ. ಶಿವಸೇನೆಯ 56 ಶಾಸಕರ ಪೈಕಿ 40 ಶಾಸಕರು ಮತ್ತು ಆರು ಪಕ್ಷೇತರರ ಬೆಂಬಲವಿದೆ ಎಂದು … Continued

ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಮಹಾ ಸಂಕಟ: ಶಿವಸೇನೆಯೊಳಗಿನ ‘ದಂಗೆ’ ಶಮನಕ್ಕೆ ಉದ್ಧವ ಠಾಕ್ರೆ ಪ್ರಯತ್ನ

ಮುಂಬೈ: ಸೋಮವಾರದ ವಿಧಾನ ಪರಿಷತ್ತಿನ ಚುನಾವಣೆಯ ನಂತರ ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಮತ್ತು ಪಕ್ಷದ ಇತರ ಹಲವಾರು ಶಾಸಕರು ಯಾರ ಸಂಪರ್ಕಕ್ಕೂ ಸಿಗದೆ ಹೋದಾಗ ರಾಜಕೀಯ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಪ್ರಾರಂಭವಾಯಿತು. ಇದು ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಸರ್ಕಾರದ ಪಕ್ಷಗಳಲ್ಲಿ ಒಂದಾದ ಶಿವಸೇನೆಯೊಳಗೆ ಸಂಭವನೀಯ ದಂಗೆಗೆ … Continued

ಕಾರಿನ ಬಾನೆಟ್‌ನಲ್ಲಿ ಸಿಲುಕಿಕೊಂಡ ಚಿರತೆ: ಒದ್ದಾಡುತ್ತಲೇ ಕಷ್ಟಪಟ್ಟು ತಪ್ಪಿಸಿಕೊಂಡು ಓಡಿಹೋದ ಚಿರತೆ… ದೃಶ್ಯ ಸೆರೆ

ಕಾಡು ಮೃಗಕ್ಕೆ ಸಂಬಂಧಿಸಿದಂತೆ ಮನ ಕರಗಿಸುವ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರಿನ ಬಾನೆಟ್‌ನಲ್ಲಿ ಚಿರತೆಯೊಂದು ಸಿಲುಕೊಂಡಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಭಾರತೀಯ ಅರಣ್ಯ ಸೇವೆಗಳ ಅಧಿಕಾರಿ ಸುಸಾಂತ ನಂದಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬಾನೆಟ್‌ನಲ್ಲಿ ಸಿಲುಕಿಕೊಂಡಿರುವ ಚಿರತೆ ಬಿಡಿಸಿಕೊಳ್ಳಲು ಒದ್ದಾಡುತ್ತಿರುವ ದೃಶ್ಯದ ಮೂಲಕ 7 ಸೆಕೆಂಡುಗಳ ಈ ಕ್ಲಿಪ್ ಶುರುವಾಗುತ್ತದೆ. … Continued