ಕಾನ್ಪುರ ಹಿಂಸಾಚಾರ: 3 ಎಫ್ಐಆರ್, ರಾತ್ರೋರಾತ್ರಿ ಪೊಲೀಸ್ ಕಾರ್ಯಾಚರಣೆಯಲ್ಲಿ 36 ಜನರ ಬಂಧನ ; ಸಂಚುಕೋರರ ವಿರುದ್ಧ ಬುಲ್ಡೋಜರ್ ಕ್ರಮದ ಎಚ್ಚರಿಕೆ

ಕಾನ್ಪುರ: ಕಾನ್ಪುರ ಹಿಂಸಾಚಾರ ಪ್ರಕರಣದಲ್ಲಿ 36 ಜನರನ್ನು ಬಂಧಿಸಲಾಗಿದೆ ಮತ್ತು 3 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಕಾನ್ಪುರದ ಯತೀಂ ಖಾನಾ ಮತ್ತು ಪರೇಡ್ ಕ್ರಾಸ್‌ರೋಡ್‌ಗಳ ನಡುವೆಯೂ ಭದ್ರತೆಯನ್ನು ಹೆಚ್ಚಿಸಲಾಗಿದೆ. “…36 ಜನರನ್ನು ಬಂಧಿಸಲಾಗಿದೆ ಮತ್ತು ಇಲ್ಲಿಯವರೆಗೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ವೀಡಿಯೊದ ಆಧಾರದ ಮೇಲೆ ಹೆಚ್ಚಿನ ಜನರನ್ನು ಗುರುತಿಸಲಾಗುತ್ತಿದೆ” ಎಂದು ಪೊಲೀಸ್ ಕಮಿಷನರ್ ವಿಜಯ್ ಸಿಂಗ್ ಮೀನಾ … Continued

ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಓರ್ವನ ಬಂಧನ, ಐವರು ಆರೋಪಿಗಳ ಗುರುತು ಪತ್ತೆ, ಮೂವರು ಅಪ್ರಾಪ್ತರು

ಹೈದರಾಬಾದ್‌: ಹೈದರಾಬಾದ್‌ನಲ್ಲಿ ಕಳೆದ ವಾರ ಕಾರಿನೊಳಗೆ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಆರೋಪಿಗಳನ್ನು ಗುರುತಿಸಲಾಗಿದ್ದು, ಇವರಲ್ಲಿ ಮೂವರು ಅಪ್ರಾಪ್ತರು ಎಂದು ಪೊಲೀಸರು ಹೇಳಿದ್ದಾರೆ. ತೆಲಂಗಾಣ ರಾಜಧಾನಿಯ ಹೃದಯಭಾಗದಲ್ಲಿ ಐಷಾರಾಮಿ ಕಾರುಗಳನ್ನು ಚಲಾಯಿಸುವ ರಾಜಕಾರಣಿಗಳ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಒಳಗೊಂಡಿರುವ ಅಪರಾಧವು ಪ್ರತಿಭಟನೆಯ … Continued

ಅನಂತನಾಗ್ ಎನ್‌ಕೌಂಟರ್: ಹಿಜ್ಬ್ ಕಮಾಂಡರ್ ಹತ್ಯೆ, ಮುಂದುವರಿದ ಕಾರ್ಯಾಚರಣೆ

ಅನಂತನಾಗ್: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕರಣ್ ವೆರಿನಾಗ್ ಪ್ರದೇಶದ ಗವಾಸ್ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಹಿಜ್ಬ್ ಕಮಾಂಡರ್ ಹತರಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ತಂಡವು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು … Continued

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ: ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧದ ಎಲ್ಲ ಆರೋಪಗಳಿಗೆ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಕಾರ್ಯ ಮುಗಿದಿರುವುದರಿಂದ ರಾಜ್ಯ ಸರ್ಕಾರವು ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿದೆ. ಅಲ್ಲದೇ  ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಸಂಬಂಧದ ಆರೋಪಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದಾರೆ. ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ … Continued

2017ರ ‘ಆಜಾದಿ ಕೂಚ್’ ಪ್ರಕರಣದಲ್ಲಿ ಜಿಗ್ನೇಶ್ ಮೇವಾನಿಗೆ ಜಾಮೀನು; ಆದರೆ ಕೋರ್ಟ್‌ ಅನುಮತಿಯಿಲ್ಲದೆ ಗುಜರಾತ್ ತೊರೆಯುವಂತಿಲ್ಲ

ಅಹಮದಾಬಾದ್: ಅನುಮತಿಯಿಲ್ಲದೆ ‘ಆಜಾದಿ ಕೂಚ್’ ಮೆರವಣಿಗೆ ನಡೆಸಿದ ಐದು ವರ್ಷಗಳ ಹಿಂದಿನ ಪ್ರಕರಣದಲ್ಲಿ ಗುಜರಾತ್‌ನ ಮೆಹ್ಸಾನಾ ಪಟ್ಟಣದ ಸೆಷನ್ಸ್ ನ್ಯಾಯಾಲಯವು ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ ಒಂಬತ್ತು ಜನರಿಗೆ ಜಾಮೀನು ನೀಡಿದೆ. ಆದರೆ, ನ್ಯಾಯಾಲಯದ ಅನುಮತಿಯಿಲ್ಲದೆ ಗುಜರಾತ್ ತೊರೆಯಬಾರದು ಎಂಬ ಷರತ್ತಿನ ಮೇಲೆ ಅವರಿಗೆ ಜಾಮೀನು ನೀಡಲಾಗಿದೆ. ಮೇವಾನಿ ಮತ್ತು ಇತರರು ತಮ್ಮ … Continued

ಕಾಶ್ಮೀರದಲ್ಲಿ ಹಿಂದೂಗಳ ಟಾರ್ಗೆಟ್‌ ಹತ್ಯೆ: ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಭಯೋತ್ಪಾದಕರ ದಾಳಿಗಳ ಬಗ್ಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ನಿರ್ದಿಷ್ಟ ಸಮುದಾಯದ ಮೇಲೆ ನಡೆಯುತ್ತಿರುವ ಈ ದಾಳಿಗಳು ಅತ್ಯಂತ ಖಂಡನಾರ್ಹ ಎಂದು ಹೇಳಿದೆ. ಕಾಶ್ಮೀರ ಕಣಿವೆ ಪರಿಸ್ಥಿತಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ್ದು, … Continued

ಪ್ರಬಲ ವಿರೋಧ ಪಕ್ಷ ಬೇಕು, ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಸ್ವಜನಪಕ್ಷಪಾತ-ಕುಟುಂಬ ರಾಜಕಾರಣದಿಂದ ಪಕ್ಷಗಳು ಹೊರಬರಬೇಕು: ಪ್ರಧಾನಿ ಮೋದಿ

ಕಾನ್ಪುರ(ಉತ್ತರ ಪ್ರದೇಶ): ರಾಜಕೀಯದಲ್ಲಿ ಪರಿವಾರ ಅಥವಾ ವಂಶವಾದವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿರ್ದಿಷ್ಟ ವ್ಯಕ್ತಿ ಅಥವಾ ರಾಜಕೀಯ ಪಕ್ಷದ ವಿರುದ್ಧ ಯಾವುದೇ ವೈಯಕ್ತಿಕ ಅಸಮಾಧಾನವನ್ನು ಹೊಂದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ ಮತ್ತು ದೇಶದಲ್ಲಿ ಪ್ರಬಲ ಪ್ರತಿಪಕ್ಷವನ್ನು ಬಯಸುವುದಾಗಿ ಪ್ರತಿಪಾದಿಸಿದ್ದಾರೆ. ಕುಟುಂಬ ರಾಜಕಾರಣವನ್ನೇ ನೆಚ್ಚಿರುವ ಪಕ್ಷಗಳು ನನ್ನ ವಿರುದ್ಧ ಗುಡುಗುತ್ತಿವೆ. ನನಗೆ ವೈಯಕ್ತಿಕವಾಗಿ ಯಾರೊಂದಿಗೂ … Continued

ಮೂರು 3 ತಿಂಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಅತಿದೊಡ್ಡ ಜಿಗಿತ ವರದಿ ಮಾಡಿದ ಭಾರತ

ನವದೆಹಲಿ: ಭಾರತವು ಇಂದು 4,041 ಹೊಸ ಕೋವಿಡ್ ಸೋಂಕನ್ನು ವರದಿ ಮಾಡಿದೆ – ಮಾರ್ಚ್ 11ರ ನಂತರ ಇದು ಅತಿ ಹೆಚ್ಚು ಏಕದಿನ ಉಲ್ಬಣವಾಗಿದೆ. ದೇಶದ ಕೆಲವು ಭಾಗಗಳಲ್ಲಿ ಮತ್ತೊಂದು ಅಲೆಯ ಭಯಕ್ಕೆ ಕಾರಣವಾಗಿದೆ. ಸಾಂಕ್ರಾಮಿಕ ರೋಗದ ಪ್ರಾರಂಭದಿಂದಲೂ ಭಾರತದಲ್ಲಿ 4.317 ಕೋಟಿ ಕೋವಿಡ್ ಸೋಂಕುಗಳು ಮತ್ತು 5,24,651 ಸಾವುನೋವುಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯದ … Continued

ಭಾರತ-ಚೀನಾ ಗಡಿಯಲ್ಲಿ ತಾನು ಪಾರ್ವತಿ ದೇವಿ ಅವತಾರ ಎಂದ ಮಹಿಳೆ, ಕೈಲಾಸ ಪರ್ವತದಲ್ಲಿರುವ ಶಿವನ ಮದುವೆಯಾಗ್ತಾಳಂತೆ…!

ಪಿಹೋರಗಢ: ಭಾರತ-ಚೀನಾ ಗಡಿಗೆ ಸಮೀಪವಿರುವ ನಾಭಿಧಾಂಗ್‌ನ ನಿರ್ಬಂಧಿತ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ಲಕ್ನೋದ ಮಹಿಳೆಯೊಬ್ಬರು ತಾನು ಪಾರ್ವತಿ ದೇವಿಯ ಅವತಾರವೆಂದು ಹೇಳಿಕೊಂಡಿದ್ದು, ಪ್ರದೇಶವನ್ನು ತೊರೆಯಲು ನಿರಾಕರಿಸಿದ್ದಾರೆ ಮತ್ತು ಕೈಲಾಸ ಪರ್ವತದಲ್ಲಿ ನೆಲೆಸಿರುವ ಶಿವನನ್ನು ಮದುವೆಯಾಗುವುದಾಗಿ ಹೇಳಿದ್ದಾರೆ. ನಿರ್ಬಂಧಿತ ಪ್ರದೇಶದಿಂದ ಹರ್ಮಿಂದರ್ ಕೌರ್ ಎಂಬ ಮಹಿಳೆಯನ್ನು ಅಲ್ಲಿಮದ ತೆರವು ಮಾಡಲು ಹೋಗಿದ್ದ ಪೊಲೀಸ್ ತಂಡವು ನಿರಾಶೆಯಿಂದ ಹಿಂತಿರುಗಬೇಕಾಯಿತು, … Continued

ವೀಸಾ ಹಗರಣದಲ್ಲಿ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂಗೆ ಬಂಧನ ಪೂರ್ವ ಜಾಮೀನು ನಿರಾಕರಿಸಿದ ಕೋರ್ಟ್‌

ನವದೆಹಲಿ: ವೀಸಾ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ನಿರೀಕ್ಷಣಾ ಜಾಮೀನು ಕೋರಿಕೆಯನ್ನು ಸಿಬಿಐ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ಕಳೆದ ವಾರ ವಾದ ಆಲಿಸಿದ ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಕಾರ್ತಿ ಚಿದಂಬರಂ ಅವರ ತಂದೆ ಪಿ ಚಿದಂಬರಂ ಅವರು ಕೇಂದ್ರ ಗೃಹ ಸಚಿವರಾಗಿದ್ದಾಗ 2011ರಲ್ಲಿ … Continued