ದಿನನಿತ್ಯ ಶಾಲೆಗೆ ಬಾರದ ವಿದ್ಯಾರ್ಥಿಗೆ ಥಳಿಸಿ ಮನಸೋ ಇಚ್ಛೆ ಒದ್ದ ಶಿಕ್ಷಕ…ಈ ರಾಕ್ಷಸೀ ವರ್ತನೆ ವಿಡಿಯೊದಲ್ಲಿ ಸೆರೆ

ಶಾಲೆಗೆ ದಿನನಿತ್ಯ ಬರುತ್ತಿಲ್ಲ ಎಂಬ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕ ವಿದ್ಯಾರ್ಥಿಯನ್ನು ಕೋಲಿನಿಂದ ಹೊಡೆದಿದ್ದಲ್ಲದೆ ಕಾಲಿನಿಂದ ಒದೆಯುವುದು ಸಹ ವಿಡಿಯೊದಲ್ಲಿ ಸೆರೆಯಾಗಿದೆ. ಹೊಡೆದ ಏಟಿಗೆ ವಿದ್ಯಾರ್ಥಿ ಅಳುವುದನ್ನು ಮತ್ತು ಕ್ಷಮೆ ಕೇಳುವುದನ್ನು ಸಹ ವಿಡಿಯೊದಲ್ಲಿ ನೋಡಬಹುದಾಗಿದೆ. ಈ … Continued

ಕ್ರೂಸ್‌ ಹಡಗಿನಲ್ಲಿ ಡ್ರಗ್ಸ್‌ ಪ್ರಕರಣ: ಶಾರುಖ್​ ಪುತ್ರನಿಗೆ ಇಂದೂ ಸಿಗಲಿಲ್ಲ ಬಿಡುಗಡೆ ಭಾಗ್ಯ, ಅ.20ರ ವರೆಗೆ ಜೈಲು ವಾಸ​

ಮುಂಬೈ: ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್​ ಅವರ ಮಗ ಆರ್ಯನ್​ ಖಾನ್​ಗೆ ಇಂದು (ಗುರುವಾರ) ಸಹ ಜಾಮೀನು ಸಿಗಲಿಲ್ಲ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್​ಸಿಬಿ)ಗೆ ಹೇಳಿಕೆ ಸಲ್ಲಿಸಲು ಅವಕಾಶ ನೀಡಿದ ಮುಂಬೈನ ವಿಶೇಷ ಎನ್​ಡಿಪಿಎಸ್​ ಕೋರ್ಟ್​, ಜಾಮೀನು ಅರ್ಜಿ ವಿಚಾರಣೆ ಮುಂದೂಡಿತ್ತು. ಇಂದು (ಗುರವಾರ) ವಿಚಾರಣೆ ನಡೆಸಿದ … Continued

ಸಹಾಯಕ ಪ್ರಾಧ್ಯಾಪಕರ ನೇಮಕ: 2023ರ ವರೆಗೆ ಪಿಎಚ್‌ಡಿ ಕಡ್ಡಾಯವಲ್ಲ ಎಂದ ಯುಜಿಸಿ

ನವದೆಹಲಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಪಿಎಚ್‌ಡಿ ಕಡ್ಡಾಯ ಮಾಡಿದ್ದು, ಆದರೆ ಈ ಬಾರಿ ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ನಿಯಮದಿಂದ ಸಡಿಲಿಕೆ ನೀಡಿದೆ. ಕಡ್ಡಾಯವಾಗಿ ಪಿಎಚ್‌ಡಿ ಹೊಂದಿರಲೇಬೇಕು ಎಂದು ತಾನೇ ಮಾಡಿದ್ದ ಆದೇಶವನ್ನು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಆಯೋಗ, ಕಡ್ಡಾಯವಾಗಿ ಪಿಎಚ್‌ಡಿ ಹೊಂದುವ ಅಗತ್ಯವಿಲ್ಲ ಎಂದು ಹೇಳಿದೆ. ಕಳೆದ ಎರಡು … Continued

ರೈತರಿಗೆ ಮತ್ತೆ ಬೆಂಬಲಿಸಿ ವಾಜಪೇಯಿ ಭಾಷಣದ ವಿಡಿಯೊ ತುಣುಕು ಹಂಚಿಕೊಂಡ ಬಿಜೆಪಿಯ ವರುಣ್ ಗಾಂಧಿ..!

ನವದೆಹಲಿ: ಸಂಸದ ವರುಣ್‍ಗಾಂಧಿ ಮತ್ತೆ ಬಿಜೆಪಿ ಪಕ್ಷಕ್ಕೆ ರೈತರ ಬೆಂಬಲಿಸಿ ಟ್ವೀಟ್‌ ಮಾಡಿದ್ದಾರೆ. ಆದರೆ ಈ ಸಲ ಮಾಝಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿಯವರು ರೈತರನ್ನು ಬಂಬಲಿಸಿ ಮಾತನಾಡಿದ ವಿಡೊಯೊವೊಂದನ್ನು ಹಂಚಿಕೊಂಡಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 1980ರಭಾಷಣದ ಸಂಕ್ಷಿಪ್ತ ತುಣುಕನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಗುರುವಾರ ಟ್ವಿಟರ್‌ನಲ್ಲಿ ಪೋಸ್ಟ್ … Continued

ಕಬಡ್ಡಿ ಆಡಿ ಗಮನ ಸೆಳೆದ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾಸಿಂಗ್.. ವೀಕ್ಷಿಸಿ

ನವದೆಹಲಿ: ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಮಹಿಳೆಯರೊಂದಿಗೆ ಕಬಡ್ಡಿ ಆಡಿ ಗಮನ ಸೆಳೆದಿದ್ದಾರೆ. ಮಧ್ಯಪ್ರದೇಶದ ಭೂಪಾಲ್ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಿಂಗ್ ಅವರು ವಿಶ್ವ ಪ್ರಸಿದ್ದ ಕಾಳಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಕಬಡ್ಡಿ ಆಡುತ್ತಿದ್ದ ಯುವತಿಯರು ತಮ್ಮೊಂದಿಗೆ ಕಬಡ್ಡಿ ಆಡುವಂತೆ ಮನವಿ ಮಾಡಿಕೊಂಡಾಗ ಕೇಸರಿ ರೂಮಾಲು ಸುತ್ತಿ ಅಂಕಣಕ್ಕೆ … Continued

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಏರಿಕೆ: 110 ರೂ. ದಾಟಿದ ಲೀಟರ್‌ ಪೆಟ್ರೋಲ್ ದರ..!

ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಇದರಿಂದ ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 110 ರೂ. ಗಡಿ ದಾಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 108.44 ರೂ.ಆಗಿದೆ. ಇಂಡಿಯನ್ ಆಯಿಲ್ ಕಂಪನಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್ ಗೆ 35 ಪೈಸೆ ಏರಿಕೆ … Continued

ಭಾರತದಲ್ಲಿ 18,987 ಮಂದಿಗೆ ಹೊಸದಾಗಿ ಕೊರೊನಾ ಸೋಂಕು

ನವದೆಹಲಿ: ಕಳೆದ ಒಂದು ವಾರದಿಂದ ಕೊರೊನಾ ಸೋಂಕಿನ ಪ್ರಮಾಣ ಶೇ.1.44ರ ಅನುಪಾತದಲ್ಲೇ ನಿಯಂತ್ರಣದಲ್ಲಿದ್ದು, 18,987 ಮಂದಿಗೆ ಹೊಸದಾಗಿ ಸೋಂಕು ತಗಲಿದೆ. 246 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿನ ಸಂಖ್ಯೆ 3,40,20,730ರಷ್ಟಾಗಿದೆ. ಹಿಂದಿನ ದಿನಕ್ಕೆ ಹೋಲಿಸಿದರೆ 1067 ಮಂದಿಗೆ ಕಡಿಮೆ ಸೋಂಕು ತಗುಲಿದೆ. ದಿನದ ಸೋಂಕಿನ ಪ್ರಮಾಣ ಶೇ.1.46ರಷ್ಟು ಮಾತ್ರ. ಇದಕ್ಕೆ ಪ್ರತಿಯಾಗಿ ಚೇತರಿಕೆ ಪ್ರಮಾಣದಲ್ಲಿ … Continued

ಅನಿಲ ದೇಶ್‌ಮುಖ್‌ ವಿರುದ್ಧದ ಭ್ರಷ್ಟಾಚಾರದ ಪ್ರಕರಣ: ಮುಖ್ಯ ಕಾರ್ಯದರ್ಶಿಗೆ ಸಿಬಿಐ ಸಮನ್ಸ್‌; ಹೈಕೋರ್ಟ್‌ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಮನ್ಸ್‌ ನೀಡಿದ್ದು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರವು ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದೆ. ಮುಖ್ಯ ಕಾರ್ಯದರ್ಶಿ ಸೀತಾರಾಮ್‌ ಕುಂಟೆ ಹಾಗೂ ಪೊಲೀಸ್ ಮಹಾನಿರ್ದೇಶಕ ಸಂಜಯ್ ಪಾಂಡೆ ಅವರಿಗೆ ಸಿಬಿಐ … Continued

550 ಕೇಕ್ ಕಟ್ ಮಾಡಿ ಜನ್ಮದಿನ ಆಚರಿಸಿಕೊಂಡ ವ್ಯಕ್ತಿ..!

ಮುಂಬೈ: ಜನ್ಮದಿನ ಏನಾದರೂ ನೆನಪಿನಲ್ಲಿ ಉಳಿಯುವ ಕೆಲಸ ಮಾಡಲು ಹೆಚ್ಚಿನವರು ಬಯಸುತ್ತಾರೆ. ಆದರೆ ವ್ಯಕ್ತಿಯೊಬ್ಬ 550 ಕೇಕ್ ಕಟ್ ಮಾಡಿ ವಿಶೇಷವಾಗಿ ಜನ್ಮದಿನ ಆಚರಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸುದ್ದಿಯಾಗಿದ್ದಾರೆ. ಜನ್ಮದಿನಕ್ಕೆ ಎಲ್ಲರೂ ತಮ್ಮ ಸ್ನೇಹಿತರ ಜೊತೆ ಮತ್ತು ಕುಟುಂಬದವರ ಜೊತೆ ಕೇಕ್ ಕಟ್ ಮಾಡಿ ಆಚರಣೆ ಮಾಡಿಕೊಳ್ಳುತ್ತಾರೆ. ಹೆಚ್ಚು ಎಂದರೂ 10 ಕೇಕ್ … Continued

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ

ಲಖಿಂಪುರ್ ಖೇರಿ: ಚಂಡಮಾರುತದ ಮಧ್ಯಭಾಗದಲ್ಲಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಅಕ್ಟೋಬರ್ 3 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸೆಷನ್ಸ್ ಕೋರ್ಟ್ ಬುಧವಾರ ಜಾಮೀನು ನಿರಾಕರಿಸಿದೆ. ಆಶಿಶ್ ಮಿಶ್ರಾ ಮತ್ತು ಆತನ ಸಹಚರ ಆಶಿಶ್ ಪಾಂಡೆ ಇಂದು ತಮ್ಮ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ಮುಖ್ಯ … Continued