ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ…!

ಈಶಾನ್ಯದ ಅರುಣಾಚಲ ಪ್ರದೇಶದ ದೂರದ ಹಳ್ಳಿ, 40-ಕಿಮೀ ಚಾರಣ ಮಾಡಿ ಅಲ್ಲಿಗೆ ಹೋಗಬೇಕು. ಆದರೆ ಈ ಮತದಾನ ಕೇಂದ್ರದಲ್ಲಿರುವುದು ಒಬ್ಬರೇ ಒಬ್ಬರು ಮತದಾರರು..! ಲೋಕಸಭೆ ಚುನಾವಣೆ ಮತದಾನಕ್ಕಾಗಿ ಏಕೈಕ ಮತದಾರರು ಇರುವ ಮಲೋಗಮ್ ಗ್ರಾಮದ ಮತದಾನ ಕೇಂದ್ರಕ್ಕೆ ಚುನಾವಣಾ ಆಯೋಗದ (EC) ಅಧಿಕಾರಿಗಳು ಗುರುವಾರ ಶ್ರಮದಾಯಕ ಸುದೀರ್ಘ ಪಾದಯಾತ್ರೆಯನ್ನು ಕೈಗೊಂಡರು. ಕೇಂದ್ರದ ಏಕೈಕ ಮತದಾರರಾದ 44 … Continued

ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನವದೆಹಲಿ: ದೆಹಲಿ ವಕ್ಫ್ ಮಂಡಳಿಯ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬಂಧಿಸಿದೆ ಎಂದು ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಇ.ಡಿ. ಮುಂದೆ ಹಾಜರಾಗಿದ್ದರು. ಸೋಮವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು … Continued

ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರ 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಏಪ್ರಿಲ್ 18 ರಂದು ಜಪ್ತಿ ಮಾಡಿದೆ. ಲಗತ್ತಿಸಲಾದ ಆಸ್ತಿಗಳಲ್ಲಿ ಕುಂದ್ರಾ ಅವರ ಪತ್ನಿ ನಟಿ ಶಿಲ್ಪಾ ಶೆಟ್ಟಿ ಅವರ ಮುಂಬೈನ ಜುಹುದಲ್ಲಿನ ವಸತಿ … Continued

ವೀಡಿಯೊ…| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

ಇತ್ತೀಚೆಗೆ ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಟ್​ ಆ್ಯಂಡ್ ರನ್ ಪ್ರಕರಣದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ನಂತರ ಮುಂಭಾಗದ ಟೈರ್ ಅಡಿಯಲ್ಲಿ … Continued

‘ಇದು ಸಾಮಾನ್ಯ ಚುನಾವಣೆಯಲ್ಲ’ : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

ನವದೆಹಲಿ: ಅಭೂತಪೂರ್ವ ಕ್ರಮದಲ್ಲಿ, ಮುಂಬರುವ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುವ ಎಲ್ಲಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕ ಪತ್ರಗಳನ್ನು ಬರೆದಿದ್ದಾರೆ. ಈ ಉಪಕ್ರಮವು ಬಿಜೆಪಿಯ ಸಮಗ್ರ ಕಾರ್ಯತಂತ್ರದ ಭಾಗವಾಗಿದ್ದು, ಕ್ಷೇತ್ರಗಳಾದ್ಯಂತ ಪ್ರಧಾನಿ ಸಂದೇಶದ ವ್ಯಾಪಕ ಪ್ರಚಾರಕ್ಕಾಗಿ ಈ ಉಪಕ್ರಮ ಬಂದಿದೆ. ಮಾಹಿತಿಯ ಪ್ರಕಾರ, ಅಭ್ಯರ್ಥಿಗಳು ಪತ್ರವನ್ನು ಸ್ವೀಕರಿಸಿದ … Continued

ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ… : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

ಪಣಜಿ: ಲೋಕಸಭೆ ಚುನಾವಣೆ 2024 ಏಪ್ರಿಲ್ 19 ರಂದು ಪ್ರಾರಂಭವಾಗಲಿದ್ದು, ಮೊದಲ ಹಂತದಲ್ಲಿ 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಅಭ್ಯರ್ಥಿಗಳು ನಾಮಪತ್ರದಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ದಕ್ಷಿಣ ಗೋವಾ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಪಲ್ಲವಿ ಡೆಂಪೋ ಸುಮಾರು 1400 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ತನ್ನ 119 ಪುಟಗಳ ಅಫಿಡವಿಟ್‌ನಲ್ಲಿ, ಡೆಂಪೊ ತನ್ನ ಪತಿ … Continued

ಲೋಕಸಭೆ ಚುನಾವಣೆಗೆ ಗುಲಾಂ ನಬಿ ಆಜಾದ್ ಸ್ಪರ್ಧಿಸಲ್ಲ

ನವದೆಹಲಿ : ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರ ಪಕ್ಷ ಹೇಳಿದೆ. ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. 2022 ರಲ್ಲಿ ಅವರು ಕಾಂಗ್ರೆಸ್ ತೊರೆದ … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued

ವೀಡಿಯೊ..| ಅಯೋಧ್ಯೆಯಲ್ಲಿ ರಾಮನವಮಿ ದಿನ ಬಾಲರಾಮನ ಹಣೆಗೆ ʼಸೂರ್ಯ ರಶ್ಮಿಯ ತಿಲಕ ʼ ; ಅದ್ಭುತ ದೃಶ್ಯ ಕಣ್ತುಂಬಿಕೊಂಡ ಭಕ್ತ ಸಾಗರ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ನಡೆಯುತ್ತಿರುವ ಮೊದಲ ರಾಮನವಮಿ ಆಚರಣೆ ಸಂಭ್ರಮದಿಂದ ನಡೆಯುತ್ತಿದೆ. ಬಾಲರಾಮ (ರಾಮ ಲಲ್ಲಾ)ನ ದರ್ಶನಕ್ಕಾಗಿ ಲಕ್ಷಾಂತರ ಜನರು ಆಗಮಿಸಿದ್ದಾರೆ. ಇದೇ ವೇಳೆ ಸೂರ್ಯ ರಶ್ಮಿ ಬಾಲರಾಮನ ಹಣೆಗೆ ಸ್ಪರ್ಶಿಸುವ ʼಸೂರ್ಯ ತಿಲಕʼದ ವಿಸ್ಮಯಕಾರಿ ದೃಶ್ಯವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ದೇವಾಲಯದ ಟ್ರಸ್ಟ್‌ನಿಂದ ನಿಯೋಜಿಸಲ್ಪಟ್ಟ ಪ್ರಮುಖ ಸರ್ಕಾರಿ ಸಂಸ್ಥೆಯ ವಿಜ್ಞಾನಿಗಳು … Continued

ಲೋಕಸಭೆ ಚುನಾವಣೆ : ಅಮೇಥಿಯಲ್ಲಿ ಸ್ಪರ್ಧೆ ವಿಚಾರ, ರಾಹುಲ್‌ ಗಾಂಧಿ ಹೇಳಿದ್ದೇನು..?

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉತ್ತರ ಪ್ರದೇಶದ ಅಮೇಥಿಯಿಂದಲೂ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಮೆಥಿಯಲ್ಲಿ ಸ್ಪರ್ಧಸಿಉವ ಕುರಿತಾದ ಪ್ರಶ್ನೆಗೆ, “ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಮತ್ತು ಕಾಂಗ್ರೆಸ್ ಅಧ್ಯಕ್ಷರು ನನ್ನನ್ನು ಏನು ಮಾಡಲು ಕೇಳುತ್ತಾರೋ ಅದನ್ನು ನಾನು ಮಾಡುತ್ತೇನೆ… ಅಂತಹ ನಿರ್ಧಾರಗಳನ್ನು … Continued