ಪುಣೆಯಲ್ಲಿ ಪಿಎಫ್‌ಐ ಪ್ರತಿಭಟನೆ ವೇಳೆ ಪಾಕಿಸ್ತಾನ ಪರ ಘೋಷಣೆ : ತನಿಖೆ ಆರಂಭ

ಪುಣೆ: ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಚೇರಿ ಹಾಗೂ ನಾಯಕರ ಮೇಲೆ ನಡೆದ ಬೃಹತ್‌ ದಾಳಿಯ ನಡುವೆ ಶುಕ್ರವಾರ ಪುಣೆಯಲ್ಲಿ ಪಿಎಫ್‌ಐ ಸಂಘಟನೆಯ ಪ್ರತಿಭಟನೆಯ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಯಿತು. ವರದಿಗಳ ಪ್ರಕಾರ, ನಗರದ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳು ಕೇಳಿಬಂದವು, ಅಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ … Continued

ಏಕನಾಥ್ ಶಿಂಧೆ ಪುತ್ರ ಸಿಎಂ ಕುರ್ಚಿ ಮೇಲೆ ಕುಳಿತಿರುವ ಫೋಟೋ ವೈರಲ್: ಶ್ರೀಕಾಂತ ಶಿಂಧೆ ಹೇಳಿದ್ದೇನು..?

ಥಾಣೆ: ‘ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಶಿವಸೇನಾದ ಸಂಸದ ಶ್ರೀಕಾಂತ್ ಶಿಂಧೆ ಅವರು ಮುಖ್ಯಮಂತ್ರಿಗಳಿಗೆ ಮೀಸಲಾದ ಖುರ್ಚಿಯಲ್ಲಿ ಕುಳಿತಿದ್ದಾರೆ. ಅವರು ಸೂಪರ್ ಸಿಎಂ ಆಗಿದ್ದಾರೆ’ ಎಂದು ಟೀಕಿಸಿರುವ ಫೋಟೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಈ ಫೋಟೊವನ್ನೇ ಇಟ್ಟುಕೊಂಡು ಪ್ರತಿಪಕ್ಷಗಳು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿವೆ. … Continued

ಅಯ್ಯೋ ದೇವ್ರೆ…: ಬೈದು ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಗುಂಡು ಹಾರಿಸಿ ಗಾಯಗೊಳಿಸಿದ 10ನೇ ತರಗತಿ ವಿದ್ಯಾರ್ಥಿ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಲಕ್ನೊ: ಉತ್ತರ ಪ್ರದೇಶದ ಸೀತಾಪುರದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ದೇಶಿ ನಿರ್ಮಿತ ಪಿಸ್ತೂಲ್‌ನಿಂದ ಗುಂಡು ಹಾರಿಸಿರುವ ಘಟನೆ ಇಂದು, ಶನಿವಾರ ನಡೆದಿದೆ. 10ನೇ ತರಗತಿಯ ಬಾಲಕ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಡಿದ ಬಳಿಕ ಶಿಕ್ಷಕ ಆತನಿಗೆ ಬೈದಿದ್ದರಿಂದ ಮನನೊಂದಿದ್ದ ಎನ್ನಲಾಗಿದೆ. ಆರೋಪಿ ವಿದ್ಯಾರ್ಥಿ ಶಿಕ್ಷಕರ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಈ … Continued

ಚೀನಾದಲ್ಲಿ ಗೃಹ ಬಂಧನದಲ್ಲಿದ್ದಾರೆಯೇ ಕ್ಸಿ ಜಿನ್‌ಪಿಂಗ್ ? ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸುತ್ತಿದೆ ಸುದ್ದಿ

ನವದೆಹಲಿ: ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ. ಇಂಟರ್ನೆಟ್‌ನಲ್ಲಿನ ಹಲವಾರು ಪೋಸ್ಟ್‌ಗಳ ಪ್ರಕಾರ, ಶಾಂಘೈ ಸಹಕಾರ ಸಂಸ್ಥೆ ಅಥವಾ SCO, ಶೃಂಗಸಭೆಗಾಗಿ ಇತ್ತೀಚೆಗೆ ಸಮರ್‌ಕಂಡ್‌ನಲ್ಲಿದ್ದ ಜಿನ್‌ಪಿಂಗ್ ಅವರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಅಥವಾ PLA ಮುಖ್ಯಸ್ಥ ಸ್ಥಾನದಿಂದ ತೆಗೆದುಹಾಕಲಾಗಿದೆ. ಆದಾಗ್ಯೂ, ಚೀನಾದ ಕಮ್ಯುನಿಸ್ಟ್ … Continued

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವೀಡಿಯೊ ಹಂಚಿಕೆ: 19 ರಾಜ್ಯಗಳಲ್ಲಿ ಸಿಬಿಐ ದಾಳಿ

ನವದೆಹಲಿ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ (ಸಿಎಸ್‌ಎಎಂ) ಸಂಬಂಧಿಸಿದ ಆಡಿಯೊ, ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪದಡಿ ದೇಶದ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 56 ಸ್ಥಳಗಳ ಸಿಬಿಐ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ. ಆಪರೇಷನ್ ‘ಮೇಘ ಚಕ್ರ’ದ ಭಾಗವಾಗಿ ಈ ಶೋಧ ನಡೆಸಲಾಗುತ್ತಿದೆ. ಕ್ಲೌಡ್ ಸ್ಟೋರೇಜ್ ಬಳಸಿಕೊಂಡು ಇಂಟರ್ನೆಟ್‌ನಲ್ಲಿ ಸಿಎಸ್‌ಎಎಂ ದಂಧೆ ನಡೆಸುತ್ತಿದ್ದ ಪೆಡ್ಲರ್‌ಗಳ … Continued

ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ಪುತ್ರನ ಬಂಧನದ ನಂತರ ಉತ್ತರಾಖಂಡ ಪಕ್ಷದ ಮುಖಂಡ ವಿನೋದ್ ಆರ್ಯ ಅವರನ್ನು ಉಚ್ಚಾಟಿಸಿದ  ಬಿಜೆಪಿ

ನವದೆಹಲಿ : 19 ವರ್ಷದ ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪುಲಕಿತ್ ಆರ್ಯ ತಂದೆ ವಿನೋದ್ ಆರ್ಯ ಮತ್ತು ಸಹೋದರ ಅಂಕಿತ್ ಆರ್ಯ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಉಚ್ಚಾಟಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಬಿಜೆಪಿ ಮುಖಂಡರ ಪುತ್ರ ಪುಲಕಿತ್ ಆರ್ಯ … Continued

ಪಾಟ್ನಾ ಸಮಾವೇಶದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಪಿಎಫ್‌ಐ: ವರದಿ

ಪಾಟ್ನಾದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಲು ಇಸ್ಲಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಚು ರೂಪಿಸಿತ್ತು ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ. ಇದಲ್ಲದೆ, ಪಿಎಫ್‌ಐ ಭಯೋತ್ಪಾದನಾ ಘಟಕಗಳು ಮತ್ತು ಇತರ ದಾಳಿಗಳನ್ನು ಸಿದ್ಧಪಡಿಸುತ್ತಿದೆ ಎಂದು ಇ.ಡಿ. ಹೇಳಿಕೊಂಡಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಉತ್ತರ … Continued

ನೋಡನೋಡುತ್ತಿದ್ದಂತೆ ಕುಸಿದುಬಿದ್ದ ಗುಡ್ಡದ ಬೃಹತ್‌ ಭಾಗ, ಆದಿ ಕೈಲಾಸ ಮಾನಸ ಸರೋವರ ಯಾತ್ರೆ ಪ್ರಮುಖ ಮಾರ್ಗ ಬಂದ್‌ | ವೀಕ್ಷಿಸಿ

ಶುಕ್ರವಾರ ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಬೆಟ್ಟದ ದೊಡ್ಡ ಭಾಗವು ಕುಸಿದು ಬಿದ್ದಿದ್ದು, ಇದರ ನಂತರ ಆದಿ ಕೈಲಾಸ ಮಾನಸ ಸರೋವರ ಯಾತ್ರೆಗೆ ಯಾತ್ರಾರ್ಥಿಗಳು ಬಳಸುವ ಪ್ರಮುಖ ಮಾರ್ಗವನ್ನು ಬಂದ್‌ ಮಾಡಲಾಯಿತು. ಶುಕ್ರವಾರ ಸಂಜೆ ನಜಾಂಗ್ ತಂಬಾ ಗ್ರಾಮದ ಬಳಿ ಭೂಕುಸಿತ ಸಂಭವಿಸಿದ ನಂತರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದ್ದು, ಸ್ಥಳೀಯರೊಂದಿಗೆ ಕನಿಷ್ಠ 40 ಯಾತ್ರಿಕರು ತವಾಘಾಟ್ ಬಳಿ … Continued

ಬರಿಕೈಯಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ | ವೀಡಿಯೊ ವೈರಲ್‌

ಭೋಪಾಲ: ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ಮಧ್ಯಪ್ರದೇಶದ ರೇವಾ ಜಿಲ್ಲೆಯ ಬಾಲಕಿಯರ ಶಾಲೆಯಲ್ಲಿ ಕೊಳಕು ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸುತ್ತಿರುವುದನ್ನು ಸಂಸದರ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಕಂಡುಬಂದಿದೆ. ಯುವ ಮೋರ್ಚಾದ ಸೇವಾ ಪಖವಾಡ ಅಭಿಯಾನದ ಅಂಗವಾಗಿ ಬಿಜೆಪಿ ಯುವ ಘಟಕದ ಸದಸ್ಯರು ಖತ್ಖಾರಿ ಬಾಲಕಿಯರ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಸಂಸದ ಜನಾರ್ದನ್ ಮಿಶ್ರಾ … Continued

ಉತ್ತರಾಖಂಡ: ರೆಸಾರ್ಟ್‌ ರಿಸೆಪ್ಶನಿಸ್ಟ್‌ ಕೊಲೆ ಆರೋಪದ ಮೇಲೆ ಬಿಜೆಪಿ ಮುಖಂಡನ ಪುತ್ರನ ಬಂಧನ-ಪೊಲೀಸರು

ಪೌರಿ: ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನಲ್ಲಿರುವ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿ (receptionist)ಯಾಗಿ ಕೆಲಸ ಮಾಡುತ್ತಿದ್ದ 19 ವರ್ಷದ ಹುಡುಗಿಯನ್ನು ಕೊಂದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರೊಬ್ಬರ ಮಗನನ್ನು ಬಂಧಿಸಲಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ರೆಸಾರ್ಟ್‌ನಲ್ಲಿರುವ ಇಬ್ಬರು ಉದ್ಯೋಗಿಗಳನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued