ಪಂಜಾಬಿನಲ್ಲಿ ಎಎಪಿ ಅಧಿಕಾರಕ್ಕೆ ಬರುವ ಸಾಧ್ಯತೆ: ಎಬಿಪಿ-ಸಿ ವೋಟರ್ ಸಮೀಕ್ಷೆ..!

ನವದೆಹಲಿ: ಪಂಜಾಬ್ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಬಹುದು ಹಾಗೂ ಆಮ್ ಆದ್ಮಿ ಪಕ್ಷ ಬಹುಮತದ ತುದಿಗೆ ಬಂದು ನಿಲ್ಲಬಹುದು ಎಂದು ಎಬಿಪಿ-ಸಿವೋಟರ್ ಸಮೀಕ್ಷೆ ಅಂದಾಜಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚೊಚ್ಚಲ ಪ್ರಯತ್ನದಲ್ಲೇ ಪ್ರಮುಖ ಪ್ರತಿಪಕ್ಷವಾಗಿ ಹೊರಹೊಮ್ಮಿದ್ದ ಎಎಪಿ ಇದೀಗ ಅಧಿಕಾರ ಚುಕ್ಕಾಣಿ ಹಿಡಿಯುವ ಸನಿಹದಲ್ಲಿ ಬಂದು ನಿಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ. … Continued

ದಾಖಲೆ ಬರೆದ ರಿಲಯನ್ಸ್.. 15 ಲಕ್ಷ ಕೋಟಿ ರೂ. ಮಾರುಕಟ್ಟೆ ಮೌಲ್ಯ ದಾಟಿದ ಮೊದಲ ಭಾರತೀಯ ಕಂಪನಿಯಾಯ್ತು ರಿಲಯನ್ಸ್ .!

ಮುಂಬೈ: ಶುಕ್ರವಾರ, ಐತಿಹಾಸಿಕ ಸಾಧನೆಯನ್ನು ಸಾಧಿಸಿದ ರಿಲಯನ್ಸ್ ಇಂಡಸ್ಟ್ರೀಸ್ (RIL) 15 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ದಾಟಿದ ಮೊದಲ ದೇಶೀಯ ಕಂಪನಿಯಾಯಿತು. ಅದರ ಷೇರಿನ ಬೆಲೆಯಲ್ಲಿ ಭಾರೀ ಏರಿಕೆಯನ್ನು ಗಮನಿಸಿದ ನಂತರ, ರಿಲಯನ್ಸ್ ಇಂಡಸ್ಟ್ರೀಸ್ ಮಾರುಕಟ್ಟೆ ಬಂಡವಾಳವು ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಟ್ರೇಡ್ ಚಾರ್ಟ್‌ಗಳಲ್ಲಿ 15, 14, 017.5 ಕೋಟಿ ರೂ.ಗಳನ್ನು ತಲುಪಿತು. … Continued

ಮುಖೇಶ್ ಅಂಬಾನಿ ನಿವಾಸದ ಹೊರಗೆ ಸ್ಫೋಟಕ ಪತ್ತೆ -ಉದ್ಯಮಿ ಮನ್ಸುಖ್ ಹಿರೇನ್ ಸಾವಿನ ಪ್ರಕರಣ: 9,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಐಎ

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆ ಹಾಗೂ ಮನ್‍ಸುಖ್‍ ಹಿರೇನ್ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಚಾರ್ಜ್‌ಶೀಟ್‌ ಸಲ್ಲಿಸಿದೆ. 9,000ಕ್ಕೂ ಹೆಚ್ಚು ಪುಟಗಳ ಚಾರ್ಜ್‌ ಶೀಟ್‌ ಸಲ್ಲಿಸಿದೆ. ಬಿಲಿಯನೇರ್ ಉದ್ಯಮಿ ಮುಖೇಶ್ ಅಂಬಾನಿಯವರ ನಿವಾಸ ಆಂಟಿಲಿಯಾ ಹೊರಗೆ … Continued

ರೈಲು ಪ್ರಯಾಣದ ವೇಳೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ..!: ಹೊಟ್ಟೆ ಕೆಟ್ಟಿತ್ತು ಎಂದ ಗೋಪಾಲ ಮಂಡಲ

ಪಾಟ್ನಾ: ಬಿಹಾರದ ಜೆಡಿಯು ಶಾಸಕರೊಬ್ಬರು ರೈಲು ಪ್ರಯಾಣದ ವೇಳೆ ಒಳಉಡುಪಿನಲ್ಲಿ ಕಾಣಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಬಿಹಾರದ ಜೆಡಿಯು ಶಾಸಕರಾದ ಗೋಪಾಲ್ ಮಂಡಲ್ (JDU MLA Gopal Mandal) ಅವರು ರೈಲು ಪ್ರಯಾಣದ ವೇಳೆ ಒಳಉಡುಪಿನಲ್ಲಿ ಓಡಾಡಿದ್ದಕ್ಕೆ ಸಹ ಪ್ರಯಾಣಿಕರು ಆಕ್ಷೇಪಿಸಿದ್ದಾರೆ. ಶಾಸಕ ಗೋಪಾಲ್ ಮಂಡಲ್ ಅವರು ತೇಜಸ್ ರಾಜಧಾನಿ ಎಕ್ಸ್‌ಪ್ರೆಸ್‌ನ ಮೊದಲ ಎಸಿ ಕಂಪಾರ್ಟ್ಮೆಂಟ್‌ನಲ್ಲಿ … Continued

ತಮಿಳಿನಲ್ಲಿ ಮಂತ್ರ ಪಠನೆ: ಧಾರ್ಮಿಕ ಇಲಾಖೆ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ಚೆನ್ನೈ: ತಮಿಳುನಾಡಿನ ಹಿಂದೂ ದೇವಾಲಯಗಳಲ್ಲಿ ಸಂಸ್ಕೃತ ಮಾತ್ರವಲ್ಲದೇ ತಮಿಳಿನಲ್ಲೂ ಪೂಜೆ ಮಾಡಲು ತಮಿಳುನಾಡು ಧಾರ್ಮಿಕ ಮತ್ತು ದತ್ತಿ ಇಲಾಖೆ ಒತ್ತಾಯಿಸುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಪರಿಗಣಿಸಲು ಶುಕ್ರವಾರ ಮದ್ರಾಸ್‌ ಹೈಕೋರ್ಟ್‌ ನಿರಾಕರಿಸಿದೆ. 2008ರಲ್ಲಿ ವಿ. ಎಸ್‌. ಶಿವಕುಮಾರ್‌ ವರ್ಸಸ್‌ ಎಂ ಪಿಚ್ಚೈ ಬತ್ತಾರ್‌ ಪ್ರಕರಣದಲ್ಲಿ ಈ ವಿಚಾರವನ್ನು ತೀರ್ಮಾನಿಸಲಾಗಿದೆ ಎಂದು ಮುಖ್ಯ … Continued

ಕೋವಿಡ್‌ ಪರಿಸ್ಥಿತಿ ಗಂಭೀರ..: 11ನೇ ತರಗತಿ ಪರೀಕ್ಷೆ ನಡೆಸುವ ಕೇರಳ ಸರ್ಕಾರದ ನಿರ್ಧಾರಕ್ಕೆಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಕೋವಿಡ್‌ ಪ್ರಕರಣಗಳು ವ್ಯಾಪಕವಾಗಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 6ರಿಂದ 11ನೇ ತರಗತಿ ಪರೀಕ್ಷೆ ನಡೆಸುವ ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಕೇರಳದ ಕೋವಿಡ್‌ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಪರೀಕ್ಷೆ ನಡೆಸುವ ಕೇರಳದ ನಿರ್ಧಾರಕ್ಕೆ ತಡೆ ನೀಡಿದೆ. ಕೇರಳದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ, ಒಂದು ವಾರ ಕಾಲ ಪರೀಕ್ಷೆ ತಡೆ ಹಿಡಿಯಲಾಗಿದೆ ಎಂದು ನ್ಯಾಯಮೂರ್ತಿಗಳಾದ … Continued

ರೋಗಿಗಳಿಗೆ ಸಮಾಧಾನಕರ ಸುದ್ದಿ.. ಬಿಪಿ, ಶುಗರ್, ಕ್ಯಾನ್ಸರ್ ಸೇರಿ ಸಾಮಾನ್ಯ ಬಳಕೆಯ 39 ಔಷಧಿಗಳ ಬೆಲೆ ಕಡಿಮೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ : ಕೇಂದ್ರ ಸರ್ಕಾರವು ಭಾರತೀಯ ರೋಗಿಗಳಿಗೆ ಒಳ್ಳೆಯ ಸುದ್ದಿ ನೀಡಿದ್ದು, ಸುಮಾರು 39 ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿದೆ. ಕ್ಯಾನ್ಸರ್ ವಿರೋಧಿ ಔಷಧಿಗಳು, ಮಧುಮೇಹ ವಿರೋಧಿ, ಎಂಟಿವೈರಲ್, ಬ್ಯಾಕ್ಟೀರಿಯಾ ವಿರೋಧಿ ಔಷಧಗಳು, ಎಂಟಿರೆಟ್ರೋವೈರಲ್ ಔಷಧಗಳು, ಟಿಬಿ ವಿರೋಧಿ ಔಷಧಗಳು ಮತ್ತು ಕೋವಿಡ್ ಚಿಕಿತ್ಸೆಯಲ್ಲಿ ಬಳಸಲಾಗುವ ಔಷಧಗಳು ಸೇರಿದಂತೆ ಸುಮಾರು 39 ಔಷಧಿಗಳ ಬೆಲೆಯನ್ನು ಕಡಿತಗೊಳಿಸಿದೆ. … Continued

ಗೋವು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಲಹಾಬಾದ್‌ ಹೈಕೋರ್ಟ್ ಸಲಹೆಗೆ ಮುಸ್ಲಿಂ ಧರ್ಮಗುರುಗಳ ಬೆಂಬಲ

ಲಕ್ನೋ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸಲಹೆಗೆ ಮುಸ್ಲಿಂ ಧರ್ಮಗುರುಗಳಿಂದ ಪ್ರಶಂಸೆ ವ್ಯಕ್ತವಾಗಿದೆ. ನ್ಯಾಯಾಲಯದ ಸಲಹೆಯನ್ನು ಕೆಲವು ಮುಸ್ಲಿಂ ಧರ್ಮಗುರುಗಳು ಸ್ವಾಗತಿಸಿದ್ದು, ಇಂತಹ ಕ್ರಮವು ಸಮಾಜದ ವಿವಿಧ ವರ್ಗಗಳ ನಡುವೆ ಸಹೋದರತ್ವ ಮತ್ತು ಏಕತೆ ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ಹೈಕೋರ್ಟ್ ಅಭಿಪ್ರಾಯವನ್ನು ಸ್ವೀಕರಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ … Continued

ಮತ್ತೆ ಉಲ್ಟಾ..ಕಾಶ್ಮೀರದಲ್ಲಿ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ನಮಗಿದೆ ಎಂದ ತಾಲಿಬಾನ್

ನವದೆಹಲಿ: ವಿಶ್ವದಲ್ಲಿ ಇರುವ ಎಲ್ಲಾ ಮುಸ್ಲಿಮರಿಗಾಗಿಯೂ ಧ್ವನಿ ಎತ್ತಲು ತಮಗೆ ಹಕ್ಕಿದೆ. ಅಂತೆಯೇ ಕಾಶ್ಮೀರವನ್ನೂ ಸೇರಿ ಮುಸ್ಲಿಂ ಪ್ರದೇಶ ಅಥವಾ ಮುಸ್ಲಿಮರಿಗಾಗಿ ನಾವು ಧ್ವನಿ ಎತ್ತಬಹುದು ಎಂದು ತಾಲಿಬಾನಿಗಳು ಹೇಳಿಕೊಂಡಿದ್ದಾರೆ. ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ಭಾರತ ವಿರೋಧಿ ಚಟುವಟಿಕೆ ಅಥವಾ ಭಯೋತ್ಪಾದಕ ಕೆಲಸಗಳಿಗೆ ಬಳಸಬಹುದು ಎಂಬ ಬಗ್ಗೆ ಆತಂಕವಿದೆ. ಈಗ ತಾಲಿಬಾನಿಗಳ ಈ ಹೇಳಿಕೆ ಮತ್ತೆ ಅವರ … Continued

ಸಜ್ಜನ್‌ಕುಮಾರ್‌ ವೈದ್ಯಕೀಯ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ವೈದ್ಯಕೀಯ ಕಾರಣಗಳ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿದ್ದ 1984ರ ಸಿಖ್‌ ಗಲಭೆ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿರುವ ಸಜ್ಜನ್‌ ಕುಮಾರ್‌ ಮನವಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಅದಲ್ಲದೆ, ತಮ್ಮ ಸ್ವಂತ ಖರ್ಚಿನಲ್ಲಿ‌ ಉತ್ತಮ ಚಿಕಿತ್ಸೆ ಪಡೆಯಲು ಮೇದಂತಾ ಆಸ್ಪತ್ರೆಗೆ ವರ್ಗಾಯಿಸುವಂತೆ ಕೋರಿದ್ದ ಸಜ್ಜನ್‌ ಕುಮಾರ್‌ ಮನವಿಯನ್ನೂ ನ್ಯಾಯಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌ ಮತ್ತು … Continued