ನಾಳೆ ಕಡಲ ಭದ್ರತೆ ಕುರಿತ ವಿಶ್ವಸಂಸ್ಥೆ ಭದ್ರತಾ ಮಂಡಳಿ ಮುಕ್ತ ಚರ್ಚೆಗೆ ಅಧ್ಯಕ್ಷತೆ ವಹಿಸುವ ಭಾರತದ ಮೊದಲ ಪ್ರಧಾನಿ ಮೋದಿ..!

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸೋಮವಾರ ಸಾಗರ ಭದ್ರತೆಯ ಕುರಿತು ನಡೆಯುವ ಉನ್ನತ ಮಟ್ಟದ ಮುಕ್ತ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಿದ ಮೊದಲ ಭಾರತೀಯ ಪ್ರಧಾನಿ ಮೋದಿ ಆಗಲಿದ್ದಾರೆ. ಸಮುದ್ರ ಭದ್ರತೆ ವರ್ಧಿಸುವುದು-ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಒಂದು ಪ್ರಕರಣ'( ‘Enhancing … Continued

ಅಫ್ಘನ್‌ ಪಡೆಗಳ ವಾಯು ದಾಳಿ: 200ಕ್ಕೂ ಹೆಚ್ಚು ತಾಲಿಬಾನ್‌ ಉಗ್ರರ ಸಾವು

ಕಾಬೂಲ್: ಆಫ್ಘಾನಿಸ್ತಾನದ ಕೆಲಪ್ರದೇಶವನ್ನು ಆಕ್ರಮಿಸಿಕೊಂಡಿರುವ ತಾನಿಬಾನ್ ಉಗ್ರರ ನಿಗ್ರಹಕ್ಕಾಗಿ ಸೇನಾ ಕಾರ್ಯಾಚರಣೆ ತೀವ್ರಗೊಂಡಿದ್ದು, ಅಫ್ಘಾನ ವಾಯು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ೨೦೦ಕ್ಕೂ ಹೆಚ್ಚು ತಾಲಿಬಾನಿಗಳು ಮೃತಪಟ್ಟಿದ್ದಾರೆ ಹಾಗೂನೂರಾರು ಬಂಡುಕೋರರು ತೀವ್ರವಾಗಿ ಗಾಯಗೊಂಡಿದ್ದಾರೆ. ಶೆಬರ್ಗನ್ ಪಟ್ಟಣದ ಜವ್‌ಜನ್ ಪಟ್ಟಣದಲ್ಲಿ ತಾಲಿಬಾನ್ ಉಗ್ರಗಾಮಿಗಳ ನೆಲೆಗಳನ್ನು ಗುರಿಯಾಗಿಟ್ಟುಕೊಂಡು ವೈಮಾನಿಕ ದಾಳಿ ನಡೆಸಲಾಗಿದೆ. ಬಿ-೫೨ ಬಾಂಬ್ ದಾಳಿಯಲ್ಲಿ ೨೦೦ಕ್ಕೂ ಹೆಚ್ಚು … Continued

ಪಾಕಿಸ್ತಾನದಲ್ಲಿ ಹಿಂದೂ ದೇವಸ್ಥಾನ ಧ್ವಂಸ ಪ್ರಕರಣ: 50 ಜನರ ಬಂಧನ, 150 ಮಂದಿ ವಿರುದ್ಧ ಪ್ರಕರಣ ದಾಖಲು

ಇಸ್ಲಾಮಾಬಾದ್: ಪಾಕಿಸ್ತಾನದ ರಹೀಂ ಯಾರ್ ಖಾನ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಪ್ರಾರ್ಥನಾ ಸ್ಥಳವನ್ನು ಅಪವಿತ್ರಗೊಳಿಸಿದ್ದಾನೆ ಎಂದು ಆರೋಪಿಸಿ ಗುಂಪೊಂದು ಹಿಂದು ದೇವಸ್ಥಾನವನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಮಂದಿಯನ್ನು ಶನಿವಾರ ಬಂಧಿಸಲಾಗಿದೆ. ಬಂಧಿತರಲ್ಲಿ ಪ್ರಧಾನ ಆರೋಪಿಯೂ ಸೇರಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದೇವಸ್ಥಾನ ಧ್ವಂಸಗೊಳಿಸಿದ ನಾಚಿಕೆಗೇಡಿನ ಪ್ರಕರಣಕ್ಕೆ ಸಂಬಂಧಿಸಿದ ವೀಡಿಯೊ ದೃಶ್ಯಾವಳಿ ಆಧಾರದಲ್ಲಿ ಇದುವರೆಗೆ … Continued

ಹಿಂದೂ ದೇಗುಲ ಧ್ವಂಸ: ಪೊಲೀಸ್‌ ಇಲಾಖೆಗೆ ಛೀಮಾರಿ ಹಾಕಿದ ಪಾಕ್‌ ಮುಖ್ಯ ನ್ಯಾಯಮೂರ್ತಿ

ಇಸ್ಲಾಮಾಬಾದ್:‌ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಹಿಂದೂ ದೇವಾಲಯ ಧ್ವಂಸಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಗುಲ್ಜರ್‌ ಅಹ್ಮದ್‌ ಅವರು ಪೊಲೀಸ್‌ ಇಲಾಖೆಗೆ ಛೀಮಾರಿ ಹಾಕಿದ್ದಾರೆ. ಅಷ್ಟೇ ಅಲ್ಲದೆ, ಕಿಡಿಗೇಡಿಗಳನ್ನು ಬಂಧಿಸುವಂತೆ ಆದೇಶಿಸಿದ್ದಾರೆ. ಪಾಕಿಸ್ತಾನದ ಭೋಂಗ್ ಪಟ್ಟಣದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿಗೆ ಸಂಬಂಧಿಸಿದಂತೆ ಹಿಂದೂ ಕೌನ್ಸಿಲ್‌ನ ಮುಖ್ಯಸ್ಥ ರಮೇಶ್‌ ಕುಮಾರ್‌ ಅವರೊಂದಿಗೆ ನ್ಯಾ. … Continued

ಹಿಂದೂ ದೇವಾಲಯ ದಾಳಿ ಪ್ರಕರಣ: ಮಂದಿರ ಪುನರ್‌ಸ್ಥಾಪಿಸುವ ಭರವಸೆ ನೀಡಿದ ಪಾಕಿಸ್ತಾನ ಪ್ರಧಾ‌ನಿ

ಇಸ್ಲಮಾಬಾದ್:ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗುರುವಾರ ಪಂಜಾಬ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯವನ್ನು ಧ್ವಂಸ ಮಾಡಿದ್ದನ್ನು ಖಂಡಿಸಿದ್ದಾರೆ ಮತ್ತು ಮಂದಿರವನ್ನು ಪುನುರ್‌ ನಿರ್ಮಾಣದ ಭರವಸೆ ನೀಡಿದ್ದಾರೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಟ್ವೀಟರಿನಲ್ಲಿ, ‘ನಿನ್ನೆ ಭುಂಗ್, RYK ಯ ಗಣೇಶ್ ಮಂದಿರದ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಎಲ್ಲ ಅಪರಾಧಿಗಳನ್ನು ಬಂಧಿಸುವಂತೆ ಮತ್ತು ಯಾವುದೇ ಪೊಲೀಸ್ … Continued

ಪಾಕಿಸ್ತಾನದ ಪಂಜಾಬ್‌ನಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ:ದೇವಸ್ಥಾನ, ವಿಗ್ರಹಗಳಿಗೆ ಹಾನಿ

ಮುಲ್ತಾನ್‌: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಸ್ಲಿಂ ಗುಂಪೊಂದು ಹಿಂದೂ ದೇವಾಲಯದ ಮೇಲೆ ದಾಳಿ ಮಾಡಿ, ಅದರ ಕೆಲವು ಭಾಗಗಳನ್ನು ಸುಟ್ಟುಹಾಕಿದೆ ಮತ್ತು ವಿಗ್ರಹಗಳನ್ನು ಹಾನಿಗೊಳಿಸಿದೆ ಎಂದು ವರದಿಯಾಗಿದೆ. ಪೊಲೀಸರ ವೈಫಲ್ಯದ ನಂತರ, ಪರಿಸ್ಥಿತಿಯನ್ನು ನಿಯಂತ್ರಿಸಲು ಪಾಕಿಸ್ತಾನದ ಸೇನೆಗೆ ಕರೆ ಮಾಡಲಾಗಿದೆ. ಲಾಹೋರ್‌ನಿಂದ 590 ಕಿಮೀ ದೂರದಲ್ಲಿರುವ ರಹೀಮ್ ಯಾರ್ ಖಾನ್ ಜಿಲ್ಲೆಯ ಭೋಂಗ್ ನಗರದ ಮುಸ್ಲಿಂ … Continued

ಪಾಕಿಸ್ತಾನದಲ್ಲಿ ಹಣಕಾಸು ಬಿಕ್ಕಟ್ಟು:ತಮ್ಮ ಪ್ರಧಾನಿ ನಿವಾಸವನ್ನೇ ಬಾಡಿಗೆಗೆ ಇಟ್ಟ ಪಾಕಿಸ್ತಾನ ಸರ್ಕಾರ..!

ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್ ಸರ್ಕಾರಿ ನಿವಾಸ ಈಗ ಬಾಡಿಗೆಗೆ ಇದೆ..! ಈ ನಿವಾಸ ಇಸ್ಲಮಾಬಾದ್​​ನ ರೆಡ್ ಝೋನ್​ ಏರಿಯಾದಲ್ಲಿದೆ. ಹಾಗೇ ಇದನ್ನು ಬಾಡಿಗೆಗೆ ಕೊಡುವ ಬಗ್ಗೆ ​ ಪಾಕಿಸ್ತಾನದ ಫೆಡರಲ್ ಕ್ಯಾಬಿನೆಟ್ಟಿನಲ್ಲಿ ಮಂಗಳವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ. ಪಾಕಿಸ್ತಾನ ಸರ್ಕಾರ ಹಣದ ಕೊರತೆಯಿಂದ ಬಳಲುತ್ತಿದೆ. ಅದನ್ನು ನೀಗಿಸಲು, ಆದಾಯದ ಮೂಲವಾಗಿ ಈ ಸರ್ಕಾರಿ ನಿವಾಸವನ್ನು … Continued

ಕಾಬೂಲಿನಲ್ಲಿ ಅಫಘಾನ್ ರಕ್ಷಣಾ ಮಂತ್ರಿ ಬಿಸ್ಮಿಲ್ಲಾ ಮೊಹಮ್ಮದಿ ಮನೆ ಸಮೀಪ ಪ್ರಬಲ ಕಾರ್ ಬಾಂಬ್ ಸ್ಫೋಟ

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಕೇಂದ್ರದಲ್ಲಿ ರಕ್ಷಣಾ ಸಚಿವ ಬಿಸ್ಮಿಲ್ಲಾ ಖಾನ್ ಮೊಹಮ್ಮದಿ ಅವರ ನಿವಾಸದಿಂದ ಕೇವಲ ಮೀಟರ್ ದೂರದಲ್ಲಿ ಮಂಗಳವಾರ ಪ್ರಬಲ ಕಾರ್ ಬಾಂಬ್ ಸ್ಫೋಟ ಸಂಭವಿಸಿದೆ. ಕಾಬೂಲ್ ನಲ್ಲಿ ರಕ್ಷಣಾ ಸಚಿವರ ಮನೆ ಬಳಿ ಕಾರ್ ಬಾಂಬ್ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ತಕ್ಷಣ ಆಗಮಿಸಿದವು. ಈ ಪ್ರದೇಶದಲ್ಲಿ ಪ್ರತ್ಯಕ್ಷದರ್ಶಿಗಳು ಕೂಡ … Continued

ಚೀನಾದ ವುಹಾನ್ ನಲ್ಲಿ ಮತ್ತೆ ಮರಳಿದ ಕೋವಿಡ್ : ಎಲ್ಲ ನಿವಾಸಿಗಳ ಪರೀಕ್ಷೆಗೆ ಆದೇಶ

ವುಹಾನ್: ಕೊರೋನಾ ವೈರಸ್ ಮೊದಲು ಕಾಣಿಸಿಕೊಂಡ ವುಹಾನ್ ನಲ್ಲಿ ವರ್ಷದ ಬಳಿಕ ಮತ್ತೆ ಕೋವಿಡ್ ಸೋಂಕು ಸ್ಫೋಟವಾಗಿದ್ದು, ಚೀನಾ ಸರ್ಕಾರ ವುಹಾನ್ ನಲ್ಲಿ ಸಾಮೂಹಿಕ ಕೋವಿಡ್ ಪರೀಕ್ಷೆಗೆ ಆದೇಶಿಸಿದೆ. ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ವುಹಾನ್ ನ ಏಳು ವಲಸೆ ಕಾರ್ಮಿಕರಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಇನ್ನೂ ಹಲವರಲ್ಲಿ ಸೋಂಕು ಇರುವ ಕುರಿತು ಶಂಕೆ ವ್ಯಕ್ತವಾಗಿದೆ. … Continued

ಇಂದು ಅಧಿಕೃತವಾಗಿ ಬೇರ್ಪಟ್ಟ ಬಿಲ್​ ಗೇಟ್ಸ್​-ಮೆಲಿಂಡಾ : 27 ವರ್ಷದ ದಾಂಪತ್ಯ ಜೀವನ ಅಂತ್ಯ

ವಾಷಿಂಗ್ಟನ್‌: ಜಗತ್ತಿನ ಶ್ರೀಮಂತ ಉದ್ಯಮಿ ಬಿಲ್ ಗೇಟ್ಸ್ ಮತ್ತು ಪತ್ನಿ ಮೆಲಿಂಡಾ ಫ್ರೆಂಚ್​ ಗೇಟ್ಸ್ ಈಗ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ತಾವಿಬ್ಬರೂ ಬೇರೆಯಾಗುತ್ತಿರುವುದಾಗಿ ಮೂರು ತಿಂಗಳ ಹಿಂದೆ ಘೋಷಿಸಿದ್ದರು. ಇದೀಗ ಅಧಿಕೃತವಾಗಿ ವಿಚ್ಛೇದನ​ ಪಡೆಯವ ಮೂಲಕ, 27ವರ್ಷದ ದಾಂಪತ್ಯ ಮುರಿದುಕೊಂಡಿದ್ದಾರೆ. ವಾಷಿಂಗ್ಟನ್​​ನ ಕಿಂಗ್​ಕೌಂಟಿ ಕೋರ್ಟ್​ನಲ್ಲಿ ಇಂದು (ಮಂಗಳವಾರ) ಈ ದಂಪತಿಯ ವಿಚ್ಛೇದನಕ್ಕೆ ಸಂಬಂಧಪಟ್ಟ ಅಂತಿಮ ವಿಚಾರಣೆ … Continued