ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ (Obulapuram Mining Case) ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhan Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ತೆಲಂಗಾಣದ ಚಂಚಲಗುಡ ಜೈಲಿರುವ ಜನಾರ್ದನ ರೆಡ್ಡಿ ಈಗ ಶಾಸಕ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶ … Continued

ಜನಾರ್ದನ ರೆಡ್ಡಿ ಬಂಧನ, ಚಂಚಲಗೂಡ ಜೈಲಿಗೆ ಶಿಫ್ಟ್‌

ಹೈದರಾಬಾದ್‌: ದೇಶದ ಗಮನ ಸೆಳೆದಿದ್ದ ಆಂಧ್ರಪ್ರದೇಶದ ಓಬಳಾಪುರಂ ಮೈನಿಂಗ್‌ ಕಂಪನಿಯ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿಯ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಬೆನ್ನಲ್ಲೆ ರೆಡ್ಡಿ ಅವರನ್ನ ಬಂಧಿಸಲಾಗಿದ್ದು, ಹೈದರಾಬಾದ್‌ನ ಚಂಚಲಗೂಡ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಮಂಗಳವಾರ ತೀರ್ಪು … Continued

ಅಕ್ರಮ ಗಣಿಗಾರಿಕೆ : ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ; ಸಿಬಿಐ ವಿಶೇಷ ಕೋರ್ಟ್ ಆದೇಶ

ಹೈದರಾಬಾದ್‌ : ತೆಲಂಗಾಣದ ನಾಂಪಲ್ಲಿಯಲ್ಲಿರುವ ಸಿಬಿಐ ನ್ಯಾಯಾಲಯವು ಮಂಗಳವಾರ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರ ಮೂವರನ್ನು ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ದೋಷಿಗಳು ಎಂದು ತೀರ್ಪು ನೀಡಿದೆ. ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ (OMC) ಒಳಗೊಂಡ ಬೃಹತ್ ಗಣಿಗಾರಿಕೆ ಹಗರಣದ ತನಿಖೆ ಪ್ರಾರಂಭವಾದ ವರ್ಷಗಳ ನಂತರ ಈ … Continued

ಕನ್ನಡಿಗರ ಕ್ಷಮೆ ಕೋರಿದ ಗಾಯಕ ಸೋನು ನಿಗಮ್‌

ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಸೋನು ನಿಗಮ್ ನೀಡಿದ್ದ ಹೇಳಿಕೆಗೆ ತೀವ್ರ ಟೀಕೆಗಳು ವ್ಯಕ್ತವಾದ ನಂತರ ಅವರು ಕ್ಷಮೆಯಾಚಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸ್ಪಷ್ಟೀಕರಣ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ, ಗಾಯಕ ನಂತರ ಕ್ಷಮೆಯಾಚಿಸಿದ್ದಾರೆ. ಕರ್ನಾಟಕದ ಮೇಲಿನ ಪ್ರೀತಿ ತನ್ನ ಅಹಂಗಿಂತ ದೊಡ್ಡದು ಎಂದು ಸೋನು ನಿಗಮ್‌ ಹೇಳಿದ್ದಾರೆ. “ಕ್ಷಮಿಸಿ ಕರ್ನಾಟಕ. ನಿಮ್ಮ … Continued

ಬೈಲಹೊಂಗಲ | ಭೀಕರ ರಸ್ತೆ ಅಪಘಾತ; ಮಗು ಸೇರಿ ಸ್ಥಳದಲ್ಲೇ ಮೂವರು ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಎರಡು ಕಾರುಗಳು ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಹಿರೇಬಾಗೇವಾಡಿ ಗ್ರಾಮದ ಅನಿಸ್ ಸೈಯ್ಯದ್ (26), ಉಮೇಹೈಮಾನ ಸೈಯ್ಯದ್ (22), ಒಂದು ವರ್ಷದ ಮಗು ಅಹ್ಮದ್ ಸೈಯ್ಯದ್ ಸ್ಥಳದಲ್ಲಿಯೇ ಮೃತಪಟ್ಟವರು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಗುಡುಗು-ಮಿಂಚು ಸಹಿತ ಗಾಳಿ ಮಳೆ ; ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 10ರ ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಾಯುಭಾರ ಕುಸಿತದಿಂದ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದೆ. ಹೀಗಾಗಿ ಮೇ 10ರ ವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲುದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ 7ರಿಂದ … Continued

ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು

ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (Sacred Thread) ತೆಗೆಸಿದ ಪ್ರಕರಣ ರಾಜ್ಯದಲಲಿ ಹಸಿರಾಗಿರುವಾಗಲೇ ನೀಟ್ ಪರೀಕ್ಷೆಯಲ್ಲೂ (NEET Exam) ಅಧಿಕಾರಿಗಳು ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ … Continued

ಭಾರತ-ಪಾಕ್ ಯುದ್ಧ, ಪ್ರಕೃತಿ ವಿಕೋಪ, ನಾಲ್ಕು ಸುನಾಮಿಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಬಾಗಲಕೋಟೆ: ಪಹಲ್ಗಾಮ್ ದಾಳಿಯ (Pahalgam Terror Attack) ಬಳಿಕ ಭಾರತ-ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಕವಿದಿರುವ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಪಹಲ್ಗಾಮ್‌ ದಾಳಿ‌ ಹಿನ್ನೆಲೆಯಲ್ಲಿ ಯುದ್ಧ ಅಲ್ಲಗಳೆಯುವಂತಿಲ್ಲ. ಮತೀಯ ಮತಾಂಧತೆ ಗೊಂದಲ ಹೆಚ್ಚಾಗುತ್ತದೆ ಯುದ್ಧದ ಭೀತಿ‌‌ ಇದೆ ಎಂದು ಅವರು ಹೇಳಿದ್ದಾರೆ. ಯುದ್ಧ ಮಾಡುವವರು ತಯಾರಿದ್ದಾರೆ. ಯುದ್ಧಮಾಡಿಸಿಕೊಳ್ಳುವವರು ಹೆದರುತ್ತಿದ್ದಾರೆ. … Continued

ಕನ್ನಡಿಗರ ಕುರಿತು ವಿವಾದಾತ್ಮಕ ಹೇಳಿಕೆ; ಹಿನ್ನೆಲೆ ಗಾಯಕ ಸೋನು ನಿಗಮ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಕನ್ನಡಿಗರಿಗೆ ನೋವುಂಟುಮಾಡುವ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕನ್ನಡ ಪರ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮರಾಜ ಎ ಅವರು ದೂರು ದಾಖಲಿಸಿದ್ದಾರೆ. ಕನ್ನಡಿಗರ ಭಾವನೆಗಳಿಗೆ ನೋವುಂಟುಮಾಡುವ ಮತ್ತು ಕರ್ನಾಟಕದ … Continued

ಶಿರಸಿ | ಮೇ 10ರಿಂದ ಸ್ವರ್ಣವಲ್ಲಿಯಲ್ಲಿ ಎರಡು ದಿನಗಳ ಕೃಷಿ ಜಯಂತಿ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಸ್ವರ್ಣ ವಲ್ಲೀ ಕೃಷಿ ಪ್ರತಿಷ್ಠಾನದ ಸಹಯೋಗದಲ್ಲಿ ಶ್ರೀ ಲಕ್ಷ್ಮಿನೃಸಿಂಹ ರಥೋತ್ಸವದ ಸಂದರ್ಭದಲ್ಲಿ 16ನೇ ವರ್ಷದ ಕೃಷಿ ಜಯಂತಿ ಯನ್ನು  ಮೇ 10 ಮತ್ತು 11ರಂದು ಎರಡು ದಿನಗಳ ಕಾಲ ನಡೆಸ ಲಾಗುವುದು ಎಂದು ಅಧ್ಯಕ್ಷ ವಿ.ಎನ್. ಹೆಗಡೆ ಹೇಳಿದರು. ಶನಿವಾರ ನಗರದ ಯೋಗ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳ್ಳಿಗಳು … Continued