ಜಾತಿಮುಕ್ತ ಸಮಾಜ ನಿರ್ಮಾಣ, ಅಂತರಂಗ-ಬಹಿರಂಗ ಶುದ್ಧಿಯಿಂದ ಜಗಜ್ಯೋತಿಯಾದ ಕಾಯಕಯೋಗಿ ವಿಶ್ವಗುರು ಬಸವಣ್ಣ…

ವಿಶ್ವ ಗುರು ಮತ್ತು ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ೮೯೧ನೇ ಜಯಂತಿಯನ್ನು ೧೦-೦೫-೨೦೨೪ ರಂದು ಆಚರಿಸಲಾಗುತ್ತಿದ್ದು, ತನ್ನಿಮಿತ್ತ ಲೇಖನ) ನಡೆಯನ್ನೇ ನುಡಿಯಾಗಿಸಿದ ಪುಣ್ಯ ಪುರುಷರಲ್ಲಿ ಬಸವಣ್ಣನವರು ಅಗ್ರಗಣ್ಯರು. ತಮ್ಮ ನಡೆ-ನುಡಿಯಗಳನ್ನು ಸ್ಪಟಿಕದ ಸಲಾಖೆಯಂತೆ ನೇರ ಹಾಗೂ ಪಾರದರ್ಶಕವಾಗಿಸಿಕೊಂಡು, ತಮ್ಮ ನಡೆಯಿಂದ ಸಮಾಜಕ್ಕೆ ಚೇತನ ತುಂಬಿದವರು ಅಣ್ಣ ಬಸವಣ್ಣನವರು ; ತಮ್ಮ ನುಡಿಯಿಂದ ಲಿಂಗವನ್ನು ಮೆಚ್ಚಿಸಿ, … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ (ಮೇ 9) ಪ್ರಕಟವಾಗಿದೆ. ಇದರ ಬೆನ್ನಲ್ಲೇ ಈಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ (SSLC 2 … Continued

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: 625ಕ್ಕೆ 625 ಅಂಕ ಪಡೆದ ಅಂಕಿತಾ ರಾಜ್ಯಕ್ಕೆ ಟಾಪರ್, ಉಡುಪಿ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದ್ದು, ಶೇ 73.40 ಮಂದಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 2,87,416 (65.90%) ಬಾಲಕರು ಪಾಸ್ ಆಗಿದ್ದು 3,43,788 (81.11%) ಬಾಲಕಿಯರು ಪಾಸ್​ ಆಗಿದ್ದಾರೆ. ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಶೇ 10ರಷ್ಟು ಕಡಿಮೆ ಆಗಿದೆ. … Continued

ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೇಲೆ ಜೇನು ದಾಳಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೆಂಗ್ರೆ ಹೊಳೆ ಬಳಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್(Bhimanna Naik) ಹಾಗೂ ಪೌರಾಯುಕ್ತ ಕಾಂತರಾಜ ಸೇರಿದಂತೆ ಹಲವರ ಮೇಲೆ ಜೇನು ದಾಳಿ ಮಾಡಿದೆ ಎಂದು ವರದಿಯಾಗಿದೆ. ಶಿರಸಿ ನಗರಕ್ಕೆ ನೀರು ಪೂರೈಸುವ ತಾಲೂಕಿನ ಕೆಂಗ್ರೆ ಹೊಳೆಯಲ್ಲಿರುವ ನೀರಿನ ಪ್ರಮಾಣ ವೀಕ್ಷಣೆಗೆ ತೆರಳಿದ್ದ ವೇಳೆ ಜೇನು ನೋಣಗಳು ದಾಳಿ … Continued

ಶಿವಮೊಗ್ಗ : ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಹಾಡಹಗಲೇ ಜೋಡಿ ಕೊಲೆ ನಡೆದಿದೆ., ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮತ್ತೊಬ್ಬ ಗಾಯಗೊಂಡಿದ್ದಾನೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ರೌಡಿಗಳ ನಡುವೆ ನಡೆದ ಗಲಾಟೆಯಿಂದಾಗ ಮರ್ಡರ್ ಆಗಿರಬಹುದು ಎಂದು ಶಂಕಿಸಲಾಗಿದೆ. ಲಷ್ಕರ್ ಮೊಹಲ್ಲಾದ ಜನತಾ … Continued

ಗೋಪಾಲಕೃಷ್ಣ ಭಟ್ಟ ನಿಧನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ  ಸಿದ್ದಾಪುರ  ತಾಲೂಕಿನ ವಾಜಗದ್ದೆ ಸಮೀಪದ ಗೊಡ್ವೆಮನೆಯ ಗೋಪಾಲಕೃಷ್ಣ ಸುಬ್ರಾಯ ಭಟ್ಟ (59) ಮೇ 7ರಂದು  ನಿಧನರಾಗಿದ್ದಾರೆ. ಅವರು ಪತ್ನಿ, ಓರ್ವ ಪುತ್ರ, ತಾಯಿ, ಮೂವರು ಸಹೋದರರು,ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತುಮಕೂರಿನ ಸಾಕೇತ್ ಅಟೋಮೊಬೈಲ್ಸ್‌ನಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಹೃದಯಸ್ಥಂಭನದಿಂದ ಹಠಾತ್ತಾಗಿ ನಿಧನರಾಗಿದ್ದಾರೆ. ಅವರ … Continued

ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ಬೆಂಗಳೂರು : ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ , .ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರಿಗೆ ಬೆಂಗಳೂರಿನ … Continued

ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ(79) ಇಂದು, ಬುಧವಾರ (ಏಪ್ರಿಲ್‌  8) ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇದೆ ಸುಬ್ಬ ಪೂಜಾರಿ ಮತ್ತು ದೇವಕಿ ದಂಪತಿಯ ಪ್ರಥಮ ಪುತ್ರರಾಗಿ 1946ರ ಜನವರಿ 15ರಂದು ಜನಿಸಿದ ಅವರು … Continued

ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ

ಬೆಂಗಳೂರು : ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಕೋರ್ಟ್‌ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಮಹಿಳೆ ಅಪಹರಣ ಆರೋಪದ ಮೇಲೆ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು, ಬುಧವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ರೇವಣ್ಣ … Continued

ನಾಳೆ (ಮೇ 9) ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಎಲ್ಲಿ ನೋಡುವುದು..? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam) ಫಲಿತಾಂಶವು ಮೇ 9ರ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ದಿನಾಂಕ: 25.03.2024 … Continued