ಕರ್ನಾಟಕದಲ್ಲಿ ಕೊರೊನಾ ಹೊಸ ಸೋಂಕು ಮತ್ತೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕಡಿಮೆಯಾಗಿದ್ದ ಪ್ರಕರಣಗಳ ಸಂಖ್ಯೆ ಬುಧವಾರ (ಕಳೆದ 24 ಗಂಟೆಯಲ್ಲಿ) ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,826 ಹೊಸ ಸೋಂಕು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,22,875ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 33 ಮಂದಿ ಮೃತಪಟ್ಟಿದ್ದಾರೆ.ಒಟ್ಟು ಸಾವಿನ ಸಂಖ್ಯೆ 36,881ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಇದೇ ಸಮಯದಲ್ಲಿ ರಾಜ್ಯದಲ್ಲಿ … Continued

ಬೆಂಗಳೂರಿನಲ್ಲಿ ಸೆಪ್ಟೆಂಬರ್‌ನಿಂದ ರಸ್ತೆಗಿಳಿಯಲಿದೆ ಎಲೆಕ್ಟ್ರಿಕಲ್ ಬಸ್ ..!

ಬೆಂಗಳೂರು; ತನ್ನ ಮಹತ್ವಾಕಾಂಕ್ಷೆ ಕಾರ್ಯರೂಪಕ್ಕೆ ತರುವಲ್ಲಿ ಬಿಎಂಟಿಸಿ ಯಶಸ್ವಿಯಾಗಿದ್ದು, ಮುಂದಿನ ತಿಂಗಳಿನಿಂದ ಬೆಂಗಳೂರು ನಗರದಲ್ಲಿ ಎಲೆಕ್ಟ್ರಿಕಲ್ ಬಸ್ ಗಳು ಸಂಚಾರ ಆರಂಭಿಸಲಿವೆ…! ಮೊದಲ ಹಂತದಲ್ಲಿ ಬಿಎಂಟಿಸಿ ನಗರದ ಕೆಲವೇ ಕೆಲವು ಪ್ರದೇಶದಲ್ಲಿ ಮಾತ್ರ ಎಲೆಕ್ಟ್ರಿಕಲ್ ಬಸ್ ಸಂಚಾರ ಆರಂಭಿಸಲಿದೆ. ಕೆ.ಆರ್.ಪುರಂ,ಕೆಂಗೇರಿ ಹಾಗೂ ಯಶ್ವಂತಪುರ ಡಿಪೋಗಳಿಂದ ಎಲೆಕ್ಟ್ರಿಕಲ್ ಬಸ್ ಗಳು ಓಡಾಡಲಿವೆ ಎಂದು ತಿಳಿಸಲಾಗಿದೆ. ಎನ್‌ ಟಿಪಿಸಿ … Continued

ದಿಢೀರ್‌ ಬೆಳವಣಿಗೆಯಲ್ಲಿ ಹೆಲಿಕ್ಯಾಪ್ಟರಿನಲ್ಲಿ ಬಿಎಸ್‌ವೈ ಮನೆಗೆ ಬಂದ ಸಚಿವ ಆನಂದ ಸಿಂಗ್‌..!

ಯಾದಗಿರಿ: ದಿಢೀರ್‌ ರಾಜಕೀಯ ಬೆಳವಣಿಗೆಯೊಂದರಲ್ಲಿ ಇಂದು (ಬುಧವಾರ) ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ನರಸಿಂಹ ನಾಯಕ ( ರಾಜುಗೌಡ) ಅವರು ಹೊಸಪೇಟೆಗೆ ತೆರಳಿ ಹೆಲಿಕ್ಯಾಪ್ಟರ್‌ನಲ್ಲಿ ಬೆಂಗಳೂರಿಗೆ ತೆರಳಿದ್ದು, ಸದ್ಯ ಮಾಜಿ ಮುಖ್ಯಮಂತ್ರಿ ನಿವಾಸದಲ್ಲಿದ್ದಾರೆ. ಬೆಂಗಳೂರಿಗೆ ಹೋಗುವ ಮೊದಲು ಅವರು ಹೊಸಪೇಟೆಯಲ್ಲಿ ಸಚಿವ ಆನಂದ … Continued

ಮಹತ್ವದ ಘೋಷಣೆ..ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು : ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಕಳೆದ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಪಾಲಿಕೆಗಳ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ ) ವೇಳಾಪಟ್ಟಿ ಪ್ರಕಟಿಸಿದೆ. ಈ ಮೂರು ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ ನಡೆಯಲಿದ್ದು, ಸೆ.6ಕ್ಕೆ ಫಲಿತಾಂಶ … Continued

ಬಿಜೆಪಿ, ಆರ್‌ಎಸ್‌ಎಸ್‌ ಕಾರ್ಯಕರ್ತರು ಮೇಲಿನ ಸುಳ್ಳು ಕೇಸ್ ವಾಪಸ್ ಪಡೆಯುತ್ತೇವೆ: ಸಚಿವ ಈಶ್ವರಪ್ಪ

ಬೆಳಗಾವಿ: ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆಯುತ್ತೇವೆ’ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮವರ ಮೇಲೆ ಹಲವೆಡೆ ಸುಳ್ಳು ಪ್ರಕರಣಗಳನ್ನು ಹಾಕಲಾಗಿಕಿದೆ. ಈಗ ನಮಗೂ ಶಕ್ತಿ ಇದೆ. ವಾಪಸ್ ಪಡೆಯುತ್ತೇವೆ … Continued

ನನ್ನ ರಾಜಕೀಯ ಜೀವನ ವೇಣುಗೋಪಾಲ ಸ್ವಾಮಿ ದೇವಸ್ಥಾನ ಬಳಿಯೇ ಆರಂಭವಾಗಿದ್ದು, ಇಲ್ಲಿಯೇ ಅಂತ್ಯವಾಗಲೂಬಹುದು, ಏನೆಂಬುದು ಗೊತ್ತಿಲ್ಲ

ಹೊಸಪೇಟೆ: ನಾನು ರಾಜ್ಯದ ಉನ್ನತ ರಾಜಕಾರಣಿಯೇನಲ್ಲ, ವಿಜಯನಗರ ಜಿಲ್ಲೆಯೊಳಗೆ ಹೊಸಪೇಟೆಯಲ್ಲಿ ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿ ಬಂದಿರುವ ರಾಜಕಾರಣಿಯಷ್ಟೆ, ಯಾರನ್ನೂ ಬ್ಲ್ಯಾಕ್ ಮೇಲ್ ಮಾಡುವ ಕೆಲಸ ಮಾಡುವ ತಂತ್ರ ನಾನು ಮಾಡುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಇಂದು (ಬುಧವಾರ) ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ನನಗೆ ಕೆಲವೊಂದು ನೋವುಗಳಿವೆ ಹೌದು, … Continued

ಜಿಪಂ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಜಿಲ್ಲಾ ಪಂಚಾಯತ​ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಇಂದು (ಬುಧವಾರ) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ ಜಾಮೀನು ಅವಧಿಯಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಗೆ ಪ್ರವಶಿದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂಕೋರ್ಟ್ ಷರತ್ತು ವಿಧಿಸಿದೆ. ಪ್ರಕರಣ ಹೈಕೋರ್ಟ್ ಮುಂದೆ ವಿಚಾರಣೆಗೆ ಬಾಕಿ ಇದೆ … Continued

ಸ್ಪೀಕರ್‌ ಬಳಿ ಸಮಯ ಕೇಳಿದ ಆನಂದ ಸಿಂಗ್‌: ರಾಜೀನಾಮೆ ಸುದ್ದಿಗೆ ಮತ್ತಷ್ಟು ಪುಷ್ಟಿ, ಈಗ ಬಿಎಸ್‌ ವೈ ಎಂಟ್ರಿ..ಮುಂದೇನು..?

ಬೆಂಗಳೂರು: ತಮ್ಮ ನಿರೀಕ್ಷೆಯಂತೆ ಖಾತೆ ನೀಡದಿರುವುದಕ್ಕೆ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂಭವವಿದೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ಸಮಯಾವಕಾಶವನ್ನು ಅವರು ಕೇಳಿದ್ದು ಅವರ ರಾಜೀನಾಮೆ ವದಂತಿಗೆ ಇನ್ನಷ್ಟು ರೆಕ್ಕೆಪುಕ್ಕಗಳು ಬರುವಂತೆ ಮಾಡಿದೆ.ಆದರೆ ಈಗ ಈಗ ಬೊಮ್ಮಾಯಿ ಅವರ ವಿನಂತಿ ಮೇರೆಗೆ ಮಾಜಿ ಮುಖ್ಯಮಂತ್ರಿ … Continued

ಖಾತೆಗಾಗಿ ಸಚಿವರ ಕ್ಯಾತೆ: ಅಸಮಾಧಾನ ಶಮನಕ್ಕೆ ಸಿಎಂ ಬೊಮ್ಮಾಯಿ ಹೈಕಮಾಂಡ್‌ ಮೊರೆ..?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮತ್ತು ವಿಸ್ತರಣೆಯ ನಂತರ ಖಾತೆ ಹಂಚಿಕೆಯಲ್ಲಿನ ಅಸಮಾಧಾನ ಹತ್ತಿಕ್ಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದ ಅಸಮಾಧಾನ ಕೆಲವರಿಗಾದರೆ ಮತ್ತೊಂದೆಡೆ ಬಯಸಿದ ಖಾತೆ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಹಲವು ಸಚಿವರು ತಮ್ಮ ಅತೃಪ್ತಿ ಹೊರಹಾಕಿರುವುದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆನೋವಿಗೆ … Continued

ತಣ್ಣಗಾಗದ ಖಾತೆಗಾಗಿ ಕ್ಯಾತೆ: ಈಗ ಶಾಸಕ ಕಚೇರಿ ಬೋರ್ಡ್‌ ತೆರವಿಗೆ ಮುಂದಾದ ಆನಂದ ಸಿಂಗ್‌..!

ಬಳ್ಳಾರಿ: ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ತಮ್ಮ ಶಾಸಕರ ಕಚೇರಿಯ ಬೋರ್ಡ್ ತೆರವುಗೊಳಿಸುತ್ತಿದ್ದು, ಇದನ್ನು ಅಸಮಾದಾನದ ಕಾರಣಕ್ಕೆ ತೆಗೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರವಾಸೋದ್ಯಮ ಖಾತೆ ನೀಡಿದ ಕಾರಣಕ್ಕೆ ಅಸಮಾದಾನಗೊಂಡಿರುವ ಆನಂದ್ ಸಿಂಗ್, ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯನ್ನೂ ಆಗಿದ್ದರು. ಆದರೆ ಮುಖ್ಯಮಂತ್ರಿಗಳಿಂದ … Continued