ಉತ್ತರ ಕರ್ನಾಟಕ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಹುಬ್ಬಳ್ಳಿ: ಮಹಾರಾಷ್ಟ್ರದಲ್ಲಿ ಬಾರೀ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ 1 ಲಕ್ಷ 10 ಸಾವಿರ ಕ್ಯೂಸೆಕ್ ಒಳಹರಿವು ಬಂದಿದೆ. ಗೋಕಾಕ ತಾಲೂಕಿನ ಕೊಣ್ಣೂರು ಮಾರುಕಟ್ಟೆ ಸಂಪೂರ್ಣ ಜಲಾವೃತವಾಗಿದೆ. ಗೋಕಾಕ​, ಮೂಡಲಗಿ ತಾಲೂಕಿನ ನದಿಪಾತ್ರದಲ್ಲಿ ನೆರೆ ಭೀತಿ ಉಂಟಾಗಿದ್ದು, ಗೋಕಾಕ ನಗರದ ಲೋಳಸೂರು ಸೇತುವೆ ಜಲಾವೃತಗೊಂಡಿದೆ. ವೇದಗಂಗಾ ನದಿ ನೀರಿನ ಹರಿವಿನ … Continued

ಶಿವಮೊಗ್ಗ ಕೃಷಿ ವಿವಿಗೆ ‘ಶಿವಪ್ಪ ನಾಯಕ ಕೃಷಿ ವಿವಿ’ ಎಂದು ನಾಮಕರಣ: ಬಿಎಸ್‌ವೈ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ಲೋಕಾರ್ಪಣೆ ಮಾಡಿದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ 1,074 ಕೋಟಿ ವೆಚ್ಚದ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಉದ್ಘಾಟಿಸಿ ಮತ್ತು 560 ಕೋಟಿ ರೂ. … Continued

ಬೆಳಗಾವಿ ಜಿಲ್ಲೆಯಲ್ಲಿ ಮಳೆ ಹಾನಿ: ನಾಳೆ ಸಿಎಂ ಯಡಿಯೂರಪ್ಪ ಪರಿಶೀಲನೆ

ಬೆಂಗಳೂರು: ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆ ತತ್ತರಿಸಿದೆ, ಮಹಾರಾಷ್ಟ್ರದಲ್ಲಿ ಬಿದ್ದ ಮಳೆ ಜೊತೆಗೆ ಇಲ್ಲಿಯೂ ಮಳೆ ಸುರಿಯುತಿರುವುದರಿಂದ ಉತ್ತರ ಕರ್ನಾಟಕ್ಕೆ ಮಳೆಯ ಪ್ರವಾಹ ತೀವ್ರವಾಗಿ ಹಾನಿ ಮಾಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನಾಳೆ‌ (ಜುಲೈ 25ರಂದು) ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ. ಅತಿವೃಷ್ಟಿಯಿಂದ ತೊಂದರೆಗೊಳಗಾದ ಜಿಲ್ಲೆಗಳ … Continued

ಕರ್ನಾಟಕದಲ್ಲಿ ನಾಳೆಯಿಂದ ಧಾರ್ಮಿಕ ಕೇಂದ್ರಗಳು, ಅಮ್ಯೂಸ್‌ಮೆಂಟ್‌ ಪಾರ್ಕ್ಸ್‌ ತೆರೆಯಲು ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಪ್ರಮಾಣ ತಗ್ಗಿದ ಹಿನ್ನೆಲೆಯಲ್ಲಿ ನಿರ್ಬಂಧ ಹೇರಿದ್ದ ಹಲವು ಚಟುವಟಿಕೆಗಳಿಗೆ ಹಂತ-ಹಂತವಾಗಿ ಅನುಮತಿ ನೀಡಲಾಗುತ್ತಿದೆ. ನಾಳೆಯಿಂದ (ಜು.25ರಿಂದ) ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಹಾಗೂ ಅಮ್ಯೂಸ್​ಮೆಂಟ್​ ಪಾರ್ಕ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.  ಕೋವಿಡ್​ ನಿಯಮಗಳ ಕಡ್ಡಾಯ ಪಾಲನೆ ಜೊತೆಗೆ ದೇವಾಲಯ, ಚರ್ಚ್​, ಮಸೀದಿಗಳಿಗೆ ಹೋಗಬಹುದು. … Continued

ರಾಜ್ಯದಲ್ಲಿಯೂ ಆರ್ಥಿಕ ದುರ್ಬಲರಿಗೆ ಶೇ.೧೦ ಮೀಸಲಾತಿ: ಸರ್ಕಾರದಿಂದ ಶೀಘ್ರ ಅಧಿಸೂಚನೆ

ಬೆಂಗಳೂರು: ರಾಜ್ಯದ ನಾಗರಿಕ ಸೇವೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳ  ಅಥವಾ ಮೇಲ್ಜಾತಿಗಳ ಜನರಿಗೆ ಶೇ.೧೦ರಷ್ಟು ಮೀಸಲಾತಿಯನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆರ್ಥಿಕವಾಗಿ ದುರ್ಬಲವಾಗಿರುವ ಮೇಲ್ವರ್ಜಗದ ಜನರಿಗೆ ಶೇ.೧೦ರಷ್ಟು ಮೀಸಲಾತಿ ನೀಡುವ ಸಂಬಂಧ ಶೀಘ್ರದಲ್ಲೇ … Continued

ಟ್ವಿಟರ್ ಇಂಡಿಯಾ ಎಂಡಿಗೆ ಉತ್ತರ ಪ್ರದೇಶ ಪೊಲೀಸರು ನೀಡಿದ್ದ ನೋಟಿಸ್‌ ರದ್ದು ಪಡಿಸಿದ ಕರ್ನಾಟಕ ಹೈಕೋರ್ಟ್‌

ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ಉತ್ತರ ಪ್ರದೇಶ ಪೊಲೀಸರು ನೀಡಿರುವ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಪಡಿಸಿದೆ. ಟ್ವಿಟರ್ ಪ್ಲಾಟ್‌ಫಾರ್ಮ್‌ನಲ್ಲಿ ಬಳಕೆದಾರರು ಅಪ್‌ಲೋಡ್ ಮಾಡಿದ ಕೋಮು ಸೂಕ್ಷ್ಮ ವೀಡಿಯೊದ ತನಿಖೆಯ ಭಾಗವಾಗಿ ಉತ್ತರ ಪ್ರದೇಶ ಪೊಲೀಸರು ಟ್ವಿಟರ್ ಇಂಡಿಯಾ ಎಂಡಿ ಅವರ ವೈಯಕ್ತಿಕ ಅಭಿಪ್ರಾಯ ಕೋರಿದ್ದರು ಮಾಲಾಫೈಡ್‌ನಿಂದ ನೋಟಿಸ್ ನೀಡಲಾಗಿದೆ … Continued

ಜುಲೈ 25ರಂದು ಯಡಿಯೂರಪ್ಪ ಪರ ಸ್ವಾಮೀಜಿಗಳ ಬೃಹತ್‌ ಸಮಾವೇಶ..!

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಜುಲೈ 25 ಮತ್ತು 26ರಂದು ರಾಜ್ಯ ರಾಜಕೀಯದಲ್ಲಿ ಹಲವಾರು ವಿದ್ಯಮಾನಗಳು ನಡೆಯಲಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇನ್ನು ಮೂರು ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಲವಾರು ಮಠಾಧೀಶರು ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಬಾರದು ಎಂದು … Continued

ಬಿಎಸ್‌ವೈಗೆ ಬದಲಿ ನಾಯಕ: ಬಿಜೆಪಿ ವರಿಷ್ಠರಿಗೆ ಆಯ್ಕೆಯೇ ಸವಾಲು

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ `ರಾಜೀನಾಮೆ ನೀಡಲು ಸಿದ್ಧ. ಜುಲೈ 25ರಂದು ಬಿಜೆಪಿ ವರಿಷ್ಠರಿಂದ ಸೂಚನೆ ಬರಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಸಮರ್ಥ ಹಾಗೂ ಮುಂದಿನ ಚುನಾವಣೆಯಲ್ಲಿ ಮತತಂದು ಕೊಡುವ ನಾಯಕನ ಹುಡುಕಾಟ ಬಿಜೆಪಿ ವರಿಷ್ಠರಿಗೆ ಈಗ ಸವಾಲಾಗಿದೆ. ಮುಖ್ಯಮಂತ್ರಿ ಹುದ್ದೆಗೆ ಹಲವರ ಹೆಸರು ಚಾಲ್ತಿಗೆ ಬಂದಿದ್ದು, ಯಾರನ್ನೂ ಆಯ್ಕೆ ಮಾಡುವುದು ಎಂಬ ಧರ್ಮಸಂಕಟಕ್ಕೆ … Continued

ರಾಜ್ಯದಲ್ಲಿ ಪ್ರವಾಹ ಭೀತಿ : ಜಿಲ್ಲಾಧಿಕಾರಿಗಳೊಂದಿಗೆ ಪರಿಸ್ಥಿತಿ ಅವಲೋಕಿಸಿದ ಸಿಎಂ ಬಿಎಸ್‌ವೈ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಶುಕ್ರವಾರ) ಹೆಚ್ಚು ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಪ್ರವಾಹ ಪೀಡಿತ ಗ್ರಾಮಗಳ ಜನರನ್ನು ಶೀಘ್ರವೇ ಸುರಕ್ಷಿತ ಸ್ಥಳಗಳಿಗೆ ತೆರುವುಗೊಳಿಸಲು ಸೂಚಿಸಿದರು. ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳ ಜನರನ್ನು ಸಹ ಮುನ್ನೆಚ್ಚರಿಕೆ ದೃಷ್ಟಿಯಿಂದ ಸ್ಥಳಾಂತರಿಸಲು … Continued

ಕರ್ನಾಟಕದಲ್ಲಿ ಜು.27ರ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ನೈರುತ್ಯ ಮಾನ್ಸೂನ್ ಈಗಾಗಲೇ ರಾಜ್ಯವನ್ನು ಆವರಿಸಿದೆ. ಈ ನಡುವೆ ಬಂಗಾಳ ಉಪಸಾಗರದಲ್ಲಿ ವಾಯು ಭಾರ ಕುಸಿತ ಈ ಹಿನ್ನೆಲೆ ಜುಲೈ 27ರ ವರೆಗೆ ರಾಜ್ಯದಲ್ಲಿ ಭರ್ಜರಿ ಮಳೆ ಆಗಲಿದೆ . ಅದರಲ್ಲಿಯೂ ರಾಜ್ಯದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಎಂದು ಐಎಂಡಿ ತಿಳಿಸಿದೆ. ಕರ್ನಾಟಕದ ಕರಾವಳಿ, … Continued