ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಎಸ್ ಎಸ್ ಎಲ್ ಸಿ ಮತ್ತು ಪ್ರಥಮ ಪಿಯುಸಿಯಲ್ಲಿ ಪಡೆದಿರುವ ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳು ಫ‌ಲಿತಾಂಶ ಪಡೆದಿದ್ದಾರೆ. ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಪಿಯುಸಿ ಫಲಿತಾಂಶ ಪ್ರಕಟ ಮಾಡಿದರು. ಎಸ್‌ಎಸ್ ಎಲ್ ಸಿ, ಪ್ರಥಮ ಪಿಯುಸಿ ಮತ್ತು ಕೃಪಾಂಕ ಅಂಕ ಸೇರಿಸಿ … Continued

ಕೊಲೆ ಆರೋಪಿ ಮದುವೆಯಲ್ಲಿ ಪೊಲೀಸರ ಉಪಸ್ಥಿತಿ: ಮೂವರಿಗೆ ಕಡ್ಡಾಯ ರಜೆಯಲ್ಲಿ ತೆರಳಲು ಆದೇಶಿಸಿದ ಎಸ್ಪಿ

ಕೊಪ್ಪಳ:ರಾಜ್ಯದಲ್ಲಿ ಅತಿ ಹೆಚ್ಚು ಸದ್ದು‌ ಮಾಡಿದ್ದ ಕನಕಾಪುರದ ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿಯ ಮದುವೆಗೆ ಗಂಗಾವತಿಯ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು, ಅಧಿಕಾರಿಗಳು ಮದುವೆಯಲ್ಲಿ ಪೊಲೀಸ್‌ ಡ್ರೆಸ್ ನೊಂದಿಗೆ ಭಾಗಿಯಾಗಿರುವ ಕುರಿತು ಸಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿತ್ತು. ಮಾಧ್ಯಮಗಳಲ್ಲಿಯೂ ಭಾರೀ ಸುದ್ದಿಯಾಗಿತ್ತು. ಇದು ಪೊಲೀಸ್ ಇಲಾಖೆಗೆ ಮುಜುಗರ ತಂದಿದ್ದರಿಂದ ಮದುವೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ತಕ್ಷಣದಿಂದ ಕಡ್ಡಾಯ … Continued

ದೆಹಲಿಗೆ ಹೊರಟಿದ್ದ ಸಿಎಂ ಆಪ್ತ ಶಾಸಕರ ನಿಯೋಗಕ್ಕೆ ಬ್ರೇಕ್‌ ಹಾಕಿದ ಸಿಎಂ ಬಿಎಸ್‌ವೈ..!

ಬೆಂಗಳೂರು: ದೆಹಲಿ ಬಿಜೆಪಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದ ತಮ್ಮ ಆಪ್ತ ಶಾಸಕರ ಬಣದ ನಿಯೋಗಕ್ಕೆ ದೆಹಲಿ ಪ್ರವಾಸ ಕೈಗೊಳ್ಳದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ನೇತೃತ್ವದ ಶಾಸಕರ ನಿಯೋಗ ಪ್ರವಾಸ ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ. ಇಂದು (ಮಂಗಳವಾರ) ರಾತ್ರಿ ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದ … Continued

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಕ್ಕೆ ದಿನಾಂಕ ನಿಗದಿ

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎರಡು ದಿನ ಮಾತ್ರ ಎಸ್‌ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಆಗಸ್ಟ್ 10ಕ್ಕೆ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಕೇವಲ ಬಹು ಆಯ್ಕೆ … Continued

ಮನೆ ಮೇಲೆ ಪಕ್ಕದ ಕಂಪೌಂಡ್‌ ಗೋಡೆ ಕುಸಿದು ಅಣ್ಣ-ತಂಗಿ ಸಾವು

posted in: ರಾಜ್ಯ | 0

ಬೆಂಗಳೂರು: ತಗ್ಗು ಪ್ರದೇಶದಲ್ಲಿದ್ದ ಮನೆಯೊಂದರ ಮೇಲೆ, ಪಕ್ಕದ ಕಂಪೌಂಡ್ ಗೋಡೆ ಕುಸಿದು ಮನೆಯಲ್ಲಿದ್ದ ಅಣ್ಣ-ತಂಗಿಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸಂಭವಿಸಿದೆ. ನೆಲಮಂಗಲ ಹೊರವಲಯದಲ್ಲಿ ಬಿನ್ನಮಂಗಲದಲ್ಲಿ ಭಾರೀ ಮಳೆಯಿಂದಾಗಿ ಖಾಲಿ ನೀವೇಶನದ ಗೋಡೆ, ಮನೆಯ ಮೇಲೆ ಕುಸಿದಿದ್ದರಿಂದ ತುಮಕೂರು ಮೂಲದ ಕಾವ್ಯ, ಮತ್ತು ವೇಣುಗೋಪಾಲ್   ಅಣ್ಣ-ತಂಗಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಬಿನ್ನಮಂಗಲದ ಕೃಷ್ಣಪ್ಪ … Continued

ಟ್ಯಾಂಕರ್-ಕಾರು ನಡುವೆ ಡಿಕ್ಕಿ ; ನಾಲ್ವರು ಸಾವು

ಕಲಬುರ್ಗಿ : ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ನಗರದ ಹೊರವಲಯದಲ್ಲಿ ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ, ಸ್ಥಳದಲ್ಲೇ ನಾಲ್ವರು ಯುವಕರು ಮೃತಪಟ್ಟ ಘಟನೆ ಕೋಟನೂರು ಗ್ರಾಮದ ಬಳಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಹೊರವಲಯದ ಕೋಟನೂರು (ಡಿ) ಗ್ರಾಮದ ಬಳಿ ರಾತ್ರಿ ಜೇವರ್ಗಿಯಿಂದ … Continued

ಮದ್ಯಪಾನ ಸಂಯಮ ಮಂಡಳಿಗೆ ನಟಿ ಶ್ರುತಿ, ಒಕ್ಕಲಿಗರ ನಿಗಮಕ್ಕೆ ಕೃಷ್ಣಪ್ಪ ನೇಮಕ

ಬೆಂಗಳೂರು: ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾಗಿ ನಟಿ ಶ್ರುತಿ ಅವರನ್ನು ನೇಮಿಸಲಾಗಿದೆ. ಇದಕ್ಕೂ ಮೊದಲು ಶ್ರುತಿ ಅವರು ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು. ಈ ನೇಮಕ ರದ್ದುಗೊಳಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತ ಕಾ.ಪು.ಸಿದ್ದಲಿಂಗಸ್ವಾಮಿ ಅವರನ್ನು ಆ ಹುದ್ದೆಗೆ ನಿಯೋಜಿಸಲಾಗಿತ್ತು. ಹೊಸದಾಗಿ ಸ್ತಾಪಿಸಲಾಗಿರುವ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ … Continued

ನಾಯಕತ್ವ ಬದಲಾವಣೆ ಸುದ್ದಿ ಮಧ್ಯೆ ಯಡಿಯೂರಪ್ಪ ಬೆಂಬಲಕ್ಕೆ ನಿಂತ ಮಠಾಧೀಶರು, ಕಾಂಗ್ರೆಸ್ಸಿನ ಲಿಂಗಾಯತ ನಾಯಕರು..!

ಬೆಂಗಳೂರು: ಕಾಂಗ್ರೆಸ್ಸಿನ ಪ್ರಮುಖ ಲಿಂಗಾಯತ ನಾಯಕರು ಮತ್ತು ಮಠಾಧೀಶರು ಮುಖ್ಯಮಂತ್ರಿ ಬಿ. ಎಸ್ .ಯಡಿಯುರಪ್ಪ ಅವರಿಗೆ ಬೆಂಬಲ ಸೂಚಿಸಿದ್ದು ನೋಡಿದರೆ ಅವರ ನಿರ್ಗಮನ ಸನ್ನಿಹಿತವಾದಂತೆ ಕಾಣುತ್ತಿದೆ. ವೀರಶೈವ-ಲಿಂಗಾಯತ ಸಮುದಾಯವು ರಾಜ್ಯದ ಜನಸಂಖ್ಯೆಯ ಸುಮಾರು 16% ರಷ್ಟಿದೆ ಎಂದು ಅಂದಾಜಿಸಲಾಗಿದೆ ಮತ್ತು ಸಮುದಾಯವು ಬಿಜೆಪಿಯ ಪ್ರಮುಖ ಬೆಂಬಲದ ನೆಲೆ ಎಂದು ಪರಿಗಣಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ಸಮುದಾಯಕ್ಕೆ … Continued

ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ಬಂದ್ರೂ ಕಾಂಗ್ರೆಸ್ ಸಿದ್ಧ, ಆದ್ರೆ ಅವಧಿಪೂರ್ವ ಚುನಾವಣೆ ಸಾಧ್ಯತೆ ಕಡಿಮೆ

ಬೆಂಗಳೂರು: ಯಾವುದೇ ಸಮಯದಲ್ಲಿ ರಾಜ್ಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಕಾಂಗ್ರೆಸ್ ಸಿದ್ಧವಿದೆ. ಆದರೆ ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಭ್ರಷ್ಟ ಮುಖ್ಯಮಂತ್ರಿಯಿಂದ ರಾಜೀನಾಮೆ ಪಡೆಯುತ್ತಿರುವುದು ಒಳ್ಳೆಯದು” ಎಂದು ಹೇಳಿದ್ದಾರೆ. ಬಿಜೆಪಿ ಆಂತರಿಕ ಬಿಕ್ಕಟ್ಟನ್ನು … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ..ಶೇ. 1ಕ್ಕಿಂತ ಕಡಿಮೆಯಾದ ಸಕಾರಾತ್ಮಕ ದರ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಮಾಣ ದಿನಕ್ಕೆ ಇಳಿಕೆಯಾಗುತ್ತಿದೆ. ಸೋಮವಾರ 1,291 ಹೊಸ ಕೊರೊನಾ ಪ್ರಕರಣಗಳು ರಾಜ್ಯಾದ್ಯಂತ ದಾಖಲಾಗಿದೆ. ಇದೇ ಸಮಯದಲ್ಲಿ 40 ಸೋಂಕಿತರು ಮೃತಪಟ್ಟಿದ್ದಾರೆ. 3,015 ಸೋಂಕಿತರು ಗುಣುಮುಖರಾಗಿದ್ದಾರೆ. ರಾಜ್ಯದ ಕೊರೊನಾ ಸಕಾರಾತ್ಮಕ ದರ ಶೇ. 0.94ಕ್ಕೆ ಕುಸಿದಿದೆ. ಒಟ್ಟಾರೆ ಪ್ರಕರಣಗಳ ಸಂಖ್ಯೆ 28,85,238ಕ್ಕೆ ಏರಿಕೆಯಾಗಿದೆ.ಇದುವರೆಗೆ ಗುಣಮುಖರಾದವರ ಸಂಖ್ಯೆ 28,21,491ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ … Continued