ಕುಡಿದ ಅಮಲಿನಲ್ಲಿ ಪತ್ನಿಯ ಮೂಗು ಕಚ್ಚಿ ತುಂಡು ಮಾಡಿದ ಪತಿರಾಯ..!

ಧಾರವಾಡ: ಕುಡಿದ ಮತ್ತಿನಲ್ಲಿ ಪತಿರಾಯ ತನ್ನ ಪತ್ನಿಯ ಮೂಗಿಗೆ ಕಚ್ಚಿ ಕತ್ತರಿಸಿ ಪರಾರಿಯಾಗಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಉಮೇಶ ಎಂಬಾತನೇ ತನ್ನ ಪತ್ನಿಯ ಮೂಗಿದೆ ಕಚ್ಚಿ ತುಂಡು ಮಾಡಿ ಪರಾರಿಯಾದವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 5 ವರ್ಷಗಳ ಹಿಂದೆ ಉಮೇಶ ತನ್ನ ಪತ್ನಿಯನ್ನು ಬಿಟ್ಟು ಎಲ್ಲೋ ಹೋಗಿದ್ದ. ಈ … Continued

ಸುಮಲತಾ ಭೇಟಿ ನೀಡಿದ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ 

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಭೇಟಿ ನೀಡಿದ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ ಮಾಡಿ ಗಣಿಗಳನ್ನು ಬಂದ್ ಮಾಡಿಸಿರುವ ಘಟನೆ ಮಂಡ್ಯದಲ್ಲಿ ವರದಿಯಾಗಿದೆ. ಶ್ರೀರಂಗಪಟ್ಟಣದ ಚೆನ್ನನಕೆರೆ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಕ್ವಾರೆ ಹಾಗೂ ಶ್ರೀರಂಗಪಟ್ಟಣ ಕ್ವಾರೆಗಳ ಮೇಲೆ ತಹಶೀಲ್ದಾರ್ ರೂಪಾ ಅವರು ದಾಳಿ ಮಾಡಿದ್ದು ಗಣಿಗಾರಿಕೆಯನ್ನು ಬಂದ್ ಮಾಡಿಸಿದ್ದಾರೆ. ಚೆನ್ನನಕೆರೆ ಸಮೀಪದಲ್ಲಿ … Continued

ಪಶ್ಚಿಮ ಘಟ್ಟದ ರಮಣೀಯ ದೃಶ್ಯ ವೀಕ್ಷಣೆಗೆ ಬೆಂಗಳೂರು – ಮಂಗಳೂರು ನಡುವೆ ಗಾಜಿನ ಹೊದಿಕೆಯ ವಿಸ್ಟಾಡೋಮ್ ರೈಲು ಆರಂಭ

ಮಂಗಳೂರು: ರೈಲ್ವೇ ಇಲಾಖೆಯ ವಿನೂತನ ವಿಸ್ಡಾಡೋಮ್ ಕೋಚ್ ಗೆ ಕರ್ನಾಟಕದಲ್ಲಿ ಇಂದು (ಭಾನುವಾರ) ಚಾಲನೆ ನೀಡಲಾಗಿದೆ. ರಾಜ್ಯದ ಪ್ರವಾಸೋದ್ಯಮಕ್ಕೆ ಇನ್ನಷ್ಟು ವೇಗಕೊಡುವ ನಿಟ್ಟಿನಲ್ಲಿ ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಹಗಲಿನಲ್ಲಿ ವಿಸ್ಡಾಡೋಮ್ ಕೋಚ್ ಸಂಚಾರ ಮಾಡಲಿದೆ. ಪಶ್ಚಿಮ ಘಟ್ಟದ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಭಾನುವಾರ ಬೆಳಿಗ್ಗೆ 9 ಗಂಟೆಗೆ … Continued

ಕರ್ನಾಟಕದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ

ಬೆಂಗಳೂರು: ತಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು ಅವರು ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ತಾವರ್ ಚಂದ್ ಗೆಹ್ಲೋಟ್‌ಗೆ ಪ್ರಮಾಣವಚನ ಬೋಧಿಸಿದ್ದಾರೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, … Continued

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವ್ಯಕ್ತಿಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ವಿಡಿಯೋ ವೈರಲ್‌

ಬೆಂಗಳೂರು: ತನ್ನ ಸುತ್ತ ಕೈ ಹಾಕಲು ಯತ್ನಿಸಿದ ವ್ಯಕ್ತಿಗೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶನಿವಾರ ಕಪಾಳಮೋಕ್ಷ ಮಾಡಿದ್ದಾರೆ. ಘಟನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಈಗ ಟೀಕೆಗೆ ಗುರಿಯಾಗಿದೆ. ಇಬ್ಬರೂ ನಡೆದುಕೊಂಡು ಹೋಗುತ್ತಿರುವಾಗ ಆ ವ್ಯಕ್ತಿ ಶಿವಕುಮಾರ್ ಸುತ್ತಲೂ ತೋಳು ಹಾಕಲು ಪ್ರಯತ್ನಿಸಿದಾಗ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ ಕೆನ್ನೆಗೆ ಹೊಡೆದಿದ್ದನ್ನು ವೀಡಿಯೊದಲ್ಲಿ ಕಾಣಬಹುದು. ಆ ವ್ಯಕ್ತಿ … Continued

ಕರ್ನಾಟಕದಲ್ಲಿ ಶನಿವಾರ ಮತ್ತಷ್ಟು ಇಳಿಕೆಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ರಾಜ್ಯದಲ್ಲಿ ಶನಿವಾರ ಹೊಸದಾಗಿ 2,162 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು 48 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 2,879 ಜನರು ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಬಾಗಲಕೋಟೆ, ವಿಜಯಪುರ, ರಾಯಚೂರು ಬೀದರ್, ಗದಗ ,ಹಾವೇರಿ, ಕಲಬುರಗಿ, ಯಾದಗಿರಿ, ಜಿಲ್ಲೆಗಳಲ್ಲಿ 10ಕ್ಕಿಂತಲೂ ಕಡಿಮೆ ಹೊಸ ಸೋಂಕು ದಾಖಲಾಗಿದೆ. … Continued

ಜುಲೈ 14ರ ವರೆಗೆ ಭಾರೀ ಮಳೆ: 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಜುಲೈ 14ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ಅತಿ ಹೆಚ್ಚು ಮಳೆ ಬೀಳಲಿರುವ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕಳೆದ ಮೂರು ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆ ಅಬ್ಬರ ಹೆಚ್ಚಿದ್ದು, ಶನಿವಾರದಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ವ್ಯಾಪಕವಾಗಲಿದೆ ಎಂದು … Continued

ಕೆಆರ್‌ಎಸ್ ಅಣೆಕಟ್ಟು ಸುತ್ತಮುತ್ತ ಅಕ್ರಮ ಗಣಿಗಾರಿಕೆ ದಾಖಲೆ ನೀಡಿದರೆ ಸಮಗ್ರ ತನಿಖೆ:ಸಚಿವ ನಿರಾಣಿ

ಕಲಬುರಗಿ:ಮಂಡ್ಯ ಜಿಲ್ಲೆ ಬೇಬಿಬೆಟ್ಟದ ಸುತ್ತಮುತ್ತಲೂ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅವರ ಬಳಿ ದಾಖಲೆಗಳಿದ್ದರೆ ಸರ್ಕಾರಕ್ಕೆ ನೀಡಿದರೆ ನಾವು ಸಮಗ್ರ ತನಿಖೆಗೆ ಆದೇಶ ಮಾಡುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಿರುವ ಮಾಹಿತಿಯಂತೆ ಕಳೆದ ನಾಲ್ಕು ತಿಂಗಳಿನಿಂದ ಕೆಆರ್‍ಎಸ್ … Continued

ಕೊರೊನಾ 3ನೇ ಅಲೆ ಬರುವುದು ಅನುಮಾನ, ಬಂದ್ರೂ ಮಕ್ಕಳಿಗೆ ಗಂಭೀರ ವ್ಯಾಧಿ ಬರಲ್ಲ

ದಾವಣಗೆರೆ: ಕೊರೊನಾ 3ನೇ ಅಲೆ ಬರುತ್ತದೆ, ಮಕ್ಕಳಿಗೆ ಹೆಚ್ಚಾಗಿ ಕಾಡುತ್ತದೆ ಎಂಬುದೇ ಅವೈಜ್ಞಾನಿಕ. ಸೋಂಕು ಬಂದರೂ ಮಕ್ಕಳಿಗೆ ಗಂಭೀರವಾದ ವ್ಯಾಧಿ ಬರುವುದಿಲ್ಲವೆಂದು ಪರಿಣಿತರು ಹಾಗೂ ತಜ್ಞರು ನೀಡಿರುವ ವರದಿಯಲ್ಲಿ ಹೇಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಮೂರನೇ ಅಲೆಯಲ್ಲಿ ಪಾಸಿಟಿವ್ ಬಂದರೂ ಗಂಭೀರ … Continued

ರಾಜಭವನಕ್ಕೆ ಆಗಮಿಸಿದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂ: ನಾಳೆ (ಭಾನುವಾರ) ಕರ್ನಾಟಕ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿರುವ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು (ಶನಿವಾರ) ಬೆಂಗಳೂರಿಗೆ ಆಗಮಿಸಿದರು. ಗೆಹ್ಲೋಟ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್. ಅಶೋಕ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗೆಹ್ಲೋಟ್ ಅವರನ್ನು ಕಂದಾಯ … Continued